ಕ್ರೀಡೆ
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
Jay Shah: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ 2023ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಮಾಹಿತಿಯನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು‘2023 ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾದ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಅವರಿಗೆ ಅಭಿನಂದನೆಗಳು. ಕ್ರೀಡಾ ಆಡಳಿತದಲ್ಲಿ ಈ ವಿಶೇಷ ಗೌರವವನ್ನು ಪಡೆದ ಮೊದಲ ವ್ಯಕ್ತಿ ಜಯ್ ಶಾ. ಅವರು ನಿಜವಾಗಿಯೂ ಈ ಗೌರವಕ್ಕೆ ಅರ್ಹರು ಎಂದು ಬರೆದುಕೊಂಡಿದೆ.
ಬಿಸಿಸಿಐನಲ್ಲಿ ಕಾರ್ಯದರ್ಶಿ ಹುದ್ದೆಯ ಹೊರತಾಗಿ, ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರೂ ಆಗಿದ್ದಾರೆ. ಈ ಹುದ್ದೆಗೇರುವ ಮೊದಲು ಅವರು ಗುಜರಾತ್ ಕ್ರಿಕೆಟ್ ಸಂಸ್ಥೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು
2019 ರಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಆಯ್ಕೆಯಾದರು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ ನಡೆದ ಏಷ್ಯಾಕಪ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಶಾ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ಒಲಿದಿದೆ.ಮತ್ತು ವರ್ಷದ ಆರಂಭದಲ್ಲಿ ಎಸಿಸಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.
ಜಯ್ ಶಾ ಅವರು ಒಲಿಂಪಿಕ್ಸ್ಗೆ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ.ಕ್ರಿಕೆಟ್ಗೆ ಅವರ ಕೊಡುಗೆಯನ್ನು ಗುರುತಿಸಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಅವರನ್ನು ಅತ್ಯುತ್ತಮ ಕ್ರೀಡಾ ಉದ್ಯಮ ನಾಯಕ ಎಂದು ಗುರುತಿಸಿದೆ.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
-
ದಕ್ಷಿಣ ಕನ್ನಡ20 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು21 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















