Uncategorized
ಮೋದಿ ಅಭಿಮಾನಿ POSTCARD ನ ಮಹೇಶ್ ವಿಕ್ರಂ ಹೆಗ್ಡೆಗೆ ‘ಕಾಂಗ್ರೇಸ್ ಏಜೆಂಟ್’ ಪಟ್ಟ ಕಟ್ಟಿದ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ – ಸುದರ್ಶನ್ ಸಹಿತ ಬಿಜೆಪಿ ನಾಯಕರ ಕಾಂಗ್ರೇಸ್ ಜೊತೆಗಿನ “ವ್ಯವಹಾರ”ದ ಗುಟ್ಟಿನ ಗಂಭೀರ ಆರೋಪ ಮಾಡಿದ ಸಾಮಾಜಿಕ ಜಾಲತಾಣದ ದೈತ್ಯ ಹೆಗ್ಡೆ
ಕೆಲ ದಿನಗಳಿಂದ ನಳಿನ್ ಕುಮಾರ್ ಬಣ ಹಾಗೂ post card ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ನಡುವೆ ನಡೆಯುತ್ತಿದ್ದ ಗುದ್ದಾಟ ಇದೀಗ ಬಹಿರಂಗ ಕದನವಾಗಿದೆ.
ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದ ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮಹೇಶ್ ವಿಕ್ರಮ್ ಹೆಗ್ಡೆಗೆ ಕಾಂಗ್ರೇಸ್ ಏಜೆಂಟ್ ಪಟ್ಟ ಕಟ್ಟಿದ್ದು, ಇದರಿಂದ ಕೆರಳಿದ ಹೆಗ್ಡೆ ಬಿಜೆಪಿಯವರ ವ್ಯವಹಾರದ ಗುಟ್ಟನ್ನೇ ಬಿಚ್ಚಿಟ್ಟಿದ್ದಾರೆ.
ತನ್ನ ಲಕ್ಷಾಂತರ ಫಾಲೋವರ್ ಹೊಂದಿರುವ ಫೇಸ್ಬುಕ್ ವಾಲ್ ನಲ್ಲಿ ಹೀಗೆಂದು ಬರೆದುಕೊಂಡಿದ್ದಾರೆ.
ದಿನದ 24 ಗಂಟೆಯೂ ಮೋದಿಜೀ – ಬಿಜೆಪಿ – ಹಿಂದುತ್ವದ ಪರ ಮಾತನಾಡುವ ಮಹೇಶ್ ವಿಕ್ರಮ್ ಹೆಗ್ಡೆ ಕಾಂಗ್ರೆಸ್ ಏಜೆಂಟ್ ಅಂತೆ….!
ಇದು ಕೇವಲ ಒಂದು ಪ್ರಶ್ನೆಗೆ ನನಗೆ ಸಿಕ್ಕ ಬಿರುದು. ಹೌದು, ಕಳೆದ ಎರಡು ದಿನಗಳಿಂದ “ಕೆಲವರು” ನನ್ನ ಪ್ರಶ್ನೆಗೆ ಉತ್ತರಿಸಲಾಗದೆ ನೇರವಾಗಿ ನಾನು ಕಾಂಗ್ರೆಸ್ ಏಜೆಂಟ್ ಎಂಬಂತೆ ಮಾತನಾಡುತ್ತಿದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ನಾನು ಬಿಜೆಪಿ ಪರವಾಗಿ ಬರೆದಿದ್ದೆ ಮತ್ತು ಈಗ ರಾಜ್ಯಾಧ್ಯಕ್ಷರನ್ನು ಪ್ರಶ್ನಿಸುತ್ತಿದ್ದೇನೆ ಎಂಬ ವಿಚಾರವಾಗಿ ಈ ಬಾರಿ ನಾನು ಕಾಂಗ್ರೆಸ್ ಏಜೆಂಟ್ ಆಗಿ ಕಂಡುಬರುತ್ತಿದ್ದೇನೆ (ಕೇವಲ ಬಕೆಟ್ಗಳ ಕಣ್ಣಿಗೆ ಮಾತ್ರ). ಇಂತಹ ಪೊಳ್ಳು ಪತ್ರಿಕಾಗೋಷ್ಠಿ ಅಥವಾ ಮಾತಿಗೆ ಯಾವತ್ತೂ ತಲೆಕೆಡಿಸಿಕೊಂಡವನು ನಾನಲ್ಲ. ಆದರೆ ಇದಕ್ಕೆ ಉತ್ತರ ಕೊಡದೆ ಕೂರುವವನೂ ನಾನಲ್ಲ. ಮೊನ್ನೆ ನಾನು ಕೇಳಿದ್ದ ಪ್ರಶ್ನೆಗೆ ವಿಕ್ರಮ ತ್ರಿವಿಕ್ರಮ ಎಂದು ಕೆಲವರು ನನ್ನನ್ನು ಟೀಕಿಸಿದರೆ, ಇಂದು ಕೆಲವರು ನಾನು ಬಿಜೆಪಿ ಬಿಟ್ಟು ಬೇರೆ ಪಕ್ಷದ ಸಲಹೆಗಾರನಾಗಿ ಬರೆಯುತ್ತಿದ್ದೇನೆ ಅಥವಾ ಬೇರೆ ಪಕ್ಷಕ್ಕೆ ಸೇರಿ ಅವರ ಪರವಾಗಿ ಬರೆಯಲಿದ್ದೇನೆ ಎಂಬಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಹುಶಃ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರಿಗೆ ಗೊತ್ತೋ ಗೊತ್ತಿಲ್ವೋ…. ಅವರು ಎಲ್ಲೆಲ್ಲಿ ಕಾಂಗ್ರೆಸ್ ಜೊತೆ ಸೇರಿ “ವ್ಯವಹಾರ” ನಡೆಸುತ್ತಿದ್ದಾರೆ ಎಂಬುದು ನಮ್ಮವರಿಗೂ ಗೊತ್ತಿದೆ ಎಂದು..!
ಅದಿರಲಿ, ನಾನು ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಅಂದರೆ ನಮ್ಮ ಸಂಸದರ ಪರವಾಗಿ ಬರೆದಿದ್ದೇ ಪ್ರಚಾರ ಮಾಡಿದ್ದೇ ಎಂಬುದನ್ನು ಉಲ್ಲೇಖಿಸಿದವರು, ನಾನಿಂದು ರಾಜ್ಯಾಧ್ಯಕ್ಷರನ್ನು ಪ್ರಶ್ನಿಸಿದ ಮಾತ್ರಕ್ಕೆ ನಾನು ಇನ್ಯಾವುದೋ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂಬುದನ್ನು ನೇರವಾಗಿ ಹೇಳಿದರು. ಇದಕ್ಕೂ ನಾನು ಉತ್ತರ ನೀಡುತ್ತೇನೆ…
ಕಾಂಗ್ರೆಸಿಗರ ಜನ್ಮ ಜಾಲಾಡಿದ ನನಗೆ ಬಿಜೆಪಿಯಲ್ಲಿ ಅಧಿಕೃತವಾಗಿ ಹುದ್ದೆ ನೀಡುವ ಮಾತು ಬಂದಾಗಲೇ ನಾನದನ್ನು ನಿರಾಕರಿಸಿದವನು. ಅಷ್ಟೇ ಮಾತ್ರವಲ್ಲದೆ ಪಕ್ಷದ ಕೆಲಸಕ್ಕೆ ನಾನು ಯಾವತ್ತೂ ಹಣ ಪಡೆದವನಲ್ಲ. ಆದರೆ ನನ್ನ ಪ್ರಶ್ನೆಗೆ ಉತ್ತರ ನೀಡುವ ಭರದಲ್ಲಿ ಜಿಲ್ಲಾಧ್ಯಕ್ಷರು ನಾನು ಕಾಂಗ್ರೆಸ್ ಏಜೆಂಟ್ ಎಂದು ಬಿರುದು ನೀಡಿದರು.
ನಾನು ಏಜೆಂಟ್ ಹೌದು, ಆದರೆ ಹಿಂದುತ್ವದ ಪರವಾದ ಏಜೆಂಟ್…
ಹಿಂದೂ ಕಾರ್ಯಕರ್ತರ ಪರವಾಗಿ ಕೆಲಸ ಮಾಡುವ ಏಜೆಂಟ್…
ನಮ್ಮವರಿಗೆ ಸಮಸ್ಯೆ ಆದಾಗ ಸಮಾಜದ ಮುಂದೆ ನಿಂತು “ಭಿಕ್ಷಾಂದೇಹಿ” ಅಭಿಯಾನ ನಡೆಸಿ ಕಾರ್ಯಕರ್ತರ ಬೆನ್ನಿಗೆ ನಿಂತ ಏಜೆಂಟ್…
ನೀವು ಹೇಳಿದ ಮಾತ್ರಕ್ಕೆ ನಾನು ಬಿಜೆಪಿ ಮತ್ತು ಹಿಂದುತ್ವದ ಸಿದ್ಧಾಂತ ಬಿಟ್ಟು ಬೇರೆ ಪಕ್ಷಕ್ಕೆ ಅಂಟಿಕೊಳ್ಳುವನಲ್ಲ, ಯಾಕೆಂದರೆ ಇಲ್ಲೇ ಇದ್ದು ಇಲ್ಲಿನ ಕೆಲ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗ ಕಂಡುಕೊಳ್ಳುವವ, ನೆನಪಿರಲಿ..!
ಈಗ ಮುಖ್ಯವಾದ ವಿಚಾರಕ್ಕೆ ಬರೋಣ, ಚುನಾವಣೆಯಲ್ಲಿ ಬಿಜೆಪಿ ಪರವಾಗಿ ನಾನು ಕೆಲಸ ಮಾಡಿದ ಮಾತ್ರಕ್ಕೆ ನಾನು ಯಾರಿಂದಲೂ ನಯಾ ಪೈಸೆ ಪಡೆಯದೇ ಇದ್ದಿದ್ದರಿಂದಲೇ ಇಂದು ಒಬ್ಬ #ಕಾರ್ಯಕರ್ತನಾಗಿ ನಮ್ಮವರನ್ನು ಪ್ರಶ್ನಿಸುವ ತಾಕತ್ತು ಹೊಂದಿದ್ದೇನೆ. ನಿಮ್ಮಲ್ಲಿ ಆ ಅಂಶ ಇದ್ದರೆ ನನ್ನ ಮೂರೇ ಮೂರು ಪ್ರಶ್ನೆಗೆ ಉತ್ತರ ನೀಡಲು ಪ್ರಯತ್ನಿಸಿ…!
1. ಕಾರ್ಕಳ ತಾಲೂಕಿನಲ್ಲಿರುವ ಕ್ರಷರ್ ಬ್ಯುಸಿನೆಸ್ ಬಗ್ಗೆ ಅನೇಕರಿಗೆ ಗೊತ್ತಿರಬಹುದು ಮತ್ತು ಆ ಕ್ರಷರ್ ಬ್ಯುಸಿನೆಸ್ ಕಾಂಗ್ರೆಸ್ನ ಕೆಲವರಿಗೆ ಸೇರಿದ್ದು ಎಂಬುದು ಕೂಡ ಗೊತ್ತಿರಬಹುದು, ಆದರೆ ಆ ಬ್ಯುಸಿನೆಸ್ ನಲ್ಲಿ ಪಾಲುದಾರನಾಗಿ ಯಾರ ಕಣ್ಣಿಗೂ ಕಾಣದಂತೆ ಇರುವ ವ್ಯಕ್ತಿ ಯಾರೆಂಬುದು ಗೊತ್ತಿದೆಯೇ… ಇದಕ್ಕೆ ನಿಮ್ಮಲ್ಲಿ ಉತ್ತರ ಇದೆಯೇ..? ( ಇಂದು ಪತ್ರಿಕಾ ಗೋಷ್ಟಿ ನಡೆಸಿದವರು )
ವೇಣೂರಿನಲ್ಲಿ ನಡೆಯುತ್ತಿರುವ ಮರಳುಗಾರಿಕಲ್ಲಿ ಪಾಲುದಾರಿಕೆ ಯಾರದ್ದು ಮತ್ತು ಯಾರೊಂದಿಗೆ…?
2. ಕಣಚ್ಚೂರು ಮೋನುವಿನ ಮೆಡಿಕಲ್ ಪರವಾನಿಗಾಗಿ ದೆಹಲಿಗೆ ಹೋಗಿ, ರಾಜಕೀಯ ಪ್ರಭಾವದಿಂದ ಪಡೆದುಕೊಂಡ ಮಂಗಳೂರಿನ ಪ್ರಭಾವಿ ರಾಜಕಾರಣಿ ಯಾರು…?
3. ಯುಟಿ ಖಾದರ್ ಅವರ ತಮ್ಮ ನಡೆಸುತ್ತಿರುವ ವೈದ್ಯಕೀಯ ನರ್ಸಿಂಗ್ ಕಾಲೇಜಿನ ಪಾಲುದಾರರಾಗಿ ಇರುವ ಶಾಸಕ ಯಾರು…?
ಈ ಮೂರು ಪ್ರಶ್ನೆ ಮಾತ್ರ ಅಲ್ಲ, ಇಂತಹ ನೂರು ಪ್ರಶ್ನೆ ನಮ್ಮಲ್ಲಿದೆ. ಆದರೆ ಅದರ ಸಮಯ ಇನ್ನೂ ಬಂದಿಲ್ಲ.
ನಾವು ರಾಜ್ಯಾಧ್ಯಕ್ಷರನ್ನು ಪ್ರಶ್ನಿಸಿರುವುದು ನಮ್ಮ ವೈಯಕ್ತಿಕ ಲಾಭಕ್ಕಾಗಿಯೂ ಅಲ್ಲ, ವೈಯಕ್ತಿಕ ದ್ವೇಷಕ್ಕಾಗಿಯೂ ಅಲ್ಲ, ನಮ್ಮವರ ಪರವಾಗಿ ಪ್ರಶ್ನಿಸಿದ್ದೇನೆ ಅಷ್ಟೇ. ಅಷ್ಟಕ್ಕೇ ಕಾಂಗ್ರೆಸ್ ಏಜೆಂಟ್ ಎಂಬ ಬಿರುದು ನೀಡಿದರೆ, ತಮ್ಮ ವ್ಯವಹಾರ ಎಲ್ಲವನ್ನೂ ಕಾಂಗ್ರೆಸ್ನವರ ಜೊತೆಯೇ ನಡೆಸುವ “ಕೆಲ ನಮ್ಮವರಿಗೆ” ಯಾವ ಬಿರುದು ನೀಡುತ್ತೀರಿ…?
ಪದವಿಯ ಆಸೆಯಿಂದ ಪ್ರಶ್ನಿಸುವ ಕೀಳುಮಟ್ಟದ ಯೋಚನೆ ನಮ್ಮಲ್ಲಿದ್ದರೆ, ಅದಾಗಲೇ ನಾವು ಒಂದು ಜವಾಬ್ದಾರಿ ವಹಿಸಿಕೊಂಡು ಮುಂಚೂಣಿಯಲ್ಲಿ ನಿಲ್ಲಬಹುದಿತ್ತು. ಆದರೆ ಆ ಯೋಚನೆ ನಮ್ಮಲ್ಲಿಲ್ಲ. ಅದೇ ರೀತಿ “ಸಂಘದ ಸ್ವಯಂಸೇವಕ” ಎಂಬ ತೃಪ್ತಿ ಇದೆ ಅಲ್ವಾ, ಅದಕ್ಕಿಂತ ದೊಡ್ಡ ಬಿರುದು ನನಗೆ ಬೇಕಿಲ್ಲ ಮತ್ತು ಅವಶ್ಯಕತೆ ಕೂಡ ಇಲ್ಲ…!
ಸಾಮಾಜಿಕ ಜಾಲತಾಣದಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂಬ ನಿಮ್ಮ ಮಾತಿಗೆ ಬಹುಶಃ ಸಾಮಾಜಿಕ ಜಾಲತಾಣದಲ್ಲೇ ದೊಡ್ಡ ಮಟ್ಟದ ಉತ್ತರ ನೀಡಲಿದ್ದೇನೆ, ಕಾಯ್ತಾ ಇರಿ…!
– ಸ್ವಯಂಸೇವಕ 🙏🏻
– ಮಹೇಶ್ ವಿಕ್ರಮ್ ಹೆಗ್ಡೆ
ಸುದರ್ಶನ್ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳಲು ಅದು ನೀವು ಕೊಟ್ಟ ಭಿಕ್ಷೆ ಅಲ್ಲ : ಹುದ್ದೆ ಆಸೆಯಿಂದ ಬಂದು ಸಿಗದಿದ್ದರೆ ಹೀಗೆಲ್ಲ ಬರೆಯುತ್ತಾರೆ “ಕಾಂಗ್ರೇಸ್ ಎಜೆಂಟ್” ಗಳು
ಇವೆಲ್ಲ ಪೇಮೆಂಟ್ ಕೊಟ್ಟವರಿಗೆ ಬರೆಯುವ ಸಂಸ್ಥೆಗಳು : ಬಿಜೆಪಿ ಒಡೆಯಲು ಸಂಚು ನಡೆಯುತ್ತಿದೆ
ಪೋಸ್ಟ್ ಕಾರ್ಡ್ ಹಾಗೂ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ದ ಗರಂ ಆದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್
ಕ್ಷಣ ಕ್ಷಣದ ನ್ಯೂಸ್ ಗಾಗಿ ಈ ಗ್ರೂಪ್ ಸೇರಿ
https://chat.whatsapp.com/Bcbjia9UUcZJQYSHUcazKM
ಇದಕ್ಕೆ ಸಂಬಂಧಿಸಿದ ಕೆಲವೊಂದು ನ್ಯೂಸ್ :
ಇಷ್ಟೊಂದು ದುರ್ಬಲ ಬಿಜೆಪಿ ರಾಜ್ಯಾಧ್ಯಕ್ಷರನ್ನು ರಾಜ್ಯ ಬಿಡಿ ದೇಶವೆ ಕಂಡಿಲ್ಲ, ದಯವಿಟ್ಟು ರಾಜೀನಾಮೆ ಕೊಡಿʼ : ಮಂಗಳೂರಿನಲ್ಲಿ ಭಿನ್ನ ಕೋಮಿನ ಯುವಕ
ಯುವತಿಯನ್ನು ತಡೆದವರ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿದರ ವಿರುದ್ದ ಪೋಸ್ಟ್ ಕಾರ್ಡ್ ಮಾಲಕ ಮಹೇಶ್ ವಿಕ್ರಮ್ ಹೆಗ್ಡೆ ಆಕ್ರೋಶ
ಮಂಗಳೂರು ಬಸ್ ನಲ್ಲಿ ಭಿನ್ನ ಕೋಮಿನ ಯುವಕ ಯುವತಿ ಪತ್ತೆ – ಸುಮೋಟೋ ಪ್ರಕರಣದಲ್ಲಿ ಬಂಧಿತ ನಾಲ್ವರಿಗೆ ದೇಶಪ್ರೇಮಿಗಳ ಸಂಘಟನೆಯ ಭರತ್ ಶೆಟ್ಟಿ ನೇತೃತ್ವದಲ್ಲಿ ಜಾಮೀನು ಮಂಜೂರು
ಬಂಧಿತ ಯುವಕರಿಗೆ ಸಹಾಯ ಮಾಡುವಂತೆ ಅಂಗಲಾಚುವ ಪರಿಸ್ಥಿತಿ ಬಂದಿದೆ- ಇಂತಹ ಪರಿಸ್ಥಿತಿ ಯಾರಿಗಾದರೂ ಬೇಕಾ? ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕರ ವಿರುದ್ಧ ಮತ್ತೊಮ್ಮೆ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ
Uncategorized
Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.
14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,
ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್ ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
Uncategorized
Kumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸುವುದರ ಜೊತೆಗೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ಗಳ ಹಿಂದೆ ಯಾರಿದ್ದಾರೆ, ಅವುಗಳನ್ನು ಯಾರು ನಡೆಸಿದ್ದಾರೆ ಮತ್ತು ಇದರಲ್ಲಿ ಯಾರ ಪಾತ್ರವಿದೆ ಎಂಬುದನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಮೌನವಾಗಿರಬಾರದು: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರಕ್ಕೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಹೋರಾಟದ ಮನೋಭಾವದೊಂದಿಗೆ ಮಾತನಾಡಬೇಕು. ಇಂತಹ ಬೆಳವಣಿಗೆಗಳ ಬಗ್ಗೆ ಮೌನ ವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲಾಗಿತ್ತು. ಬಳಿಕ ರಮೇಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರ ವಿಚಾರಗಳೂ ಮುನ್ನೆಲೆಗೆ ಬಂದವು. ಇದೀಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಸದಾಶಿವನಗರದಲ್ಲಿ ನಿಗಾ ವ್ಯವಸ್ಥೆ ಇದೆ ಎಂಬ ಆರೋಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು, ಅತ್ಯಾಧುನಿಕ ಉಪಕರಣಗಳ ಮೂಲಕ ಸಚಿವರು ಹಾಗೂ ಇತರರ ಮಾತುಕತೆಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ತಮಗೆ ಲಭಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ರಾಜಕೀಯ ನಾಯಕರು ಹಾಗೂ ಸಚಿವರ ಫೋನ್ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಲ್ಲೂ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಅವರು ಹೇಳಿದರು.
ಆದರೆ, ಮುಖ್ಯಮಂತ್ರಿ ಸ್ವತಃ ಇಂತಹ ಚಟುವಟಿಕೆಗಳಿಗೆ ಆದೇಶ ನೀಡಿದ್ದಾರೆ ಎಂದು ತಾನು ಹೇಳುತ್ತಿಲ್ಲ. ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪರಿಶೀಲಿಸಬೇಕು ಎಂದು ಸ್ಪಷ್ಟಪಡಿಸಿದರು.
ಪೆನ್ಡ್ರೈವ್ ಪ್ರಕರಣದ ಬಗ್ಗೆಯೂ ಪ್ರಶ್ನೆ
2024ರ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಮಂಡ್ಯ ಮತ್ತು ಹಾಸನ ಭಾಗಗಳಲ್ಲಿ ವಿಡಿಯೊಗಳನ್ನು ಪೆನ್ಡ್ರೈವ್ಗಳಲ್ಲಿ ಹಂಚಲಾಗಿದೆ ಎಂದು ಹೇಳಿದ ಕುಮಾರಸ್ವಾಮಿ ಅವರು, ವಿಡಿಯೋಗಳಲ್ಲಿ ಇದ್ದ ಮಹಿಳೆಯರ ಮುಖಗಳನ್ನು ಮರೆಮಾಚಲಿಲ್ಲ. ಲೋಕಸಭೆಯ ಇವತ್ತಿನ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಆ ನಾನೂರು ಜನ ಮಹಿಳೆಯರಲ್ಲಿ ಎಷ್ಟು ಜನ ಬಂದು ಕೇಸು ದಾಖಲು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಆ ವಿಡಿಯೊಗಳನ್ನು ಸಿದ್ಧಪಡಿಸಿದವರು ಯಾರು, ಅವುಗಳನ್ನು ಯಾವ ಸ್ಥಳದಲ್ಲಿ ಸಿದ್ಧಪಡಿಸಲಾಯಿತು ಮತ್ತು ಹಂಚಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.
ತಮ್ಮ ಕುಟುಂಬದವರ ಬಗ್ಗೆಯೂ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗಿತ್ತು. ತಮ್ಮ ತಾಯಿಯ ವಿರುದ್ಧವೂ ಆರೋಪಗಳು ಮತ್ತು ಸುದ್ದಿಗಳನ್ನು ಹರಡಲಾಗಿತ್ತು. ಇಂತಹ ಸಂದರ್ಭಗಳಲ್ಲಿಯೂ ತಮ್ಮ ಕುಟುಂಬ ನ್ಯಾಯಾಲಯದ ಮೊರೆ ಹೋಗಿರಲಿಲ್ಲ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದಕ್ಕೆ ಆಕ್ಷೇಪ
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಯಾವುದೇ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ನ್ಯಾಯಾಂಗದ ಮೂಲಕ ಹೊರಬರಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂಬುದು ತಮ್ಮ ನಿಲುವು ಎಂದು ತಿಳಿಸಿದರು.
ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ನ್ಯಾಯಾಲಯದ ತಡೆಯಾಜ್ಞೆ ಪಡೆಯುವ ಬದಲು ದಿಟ್ಟವಾಗಿ ನಿಂತು ಇಂತಹ ಬೆಳವಣಿಗೆಗಳನ್ನು ಎದುರಿಸಬೇಕು ಎಂದು ಅವರು ಮನವಿ ಮಾಡಿದರು.
ಸಿಬಿಐ ತನಿಖೆಗೆ ಮತ್ತೆ ಒತ್ತಾಯ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಿರುವುದನ್ನು ತಾವು ವಿರೋಧಿಸಿಲ್ಲ ಎಂದ ಕುಮಾರಸ್ವಾಮಿ, ಇದೇ ರೀತಿಯ ಗಂಭೀರತೆಯನ್ನು ಇತರ ಪ್ರಕರಣಗಳಲ್ಲಿಯೂ ತೋರಿಸಬೇಕು ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ಗಳ ಹಿಂದೆ ಇರುವವರನ್ನು ಪತ್ತೆಹಚ್ಚಿ, ಆರೋಪಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲು ಸಿಬಿಐ ತನಿಖೆ ಅಗತ್ಯವಿದೆ. ಈ ಕುರಿತು ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸುವುದಾಗಿ ಪುನರುಚ್ಚರಿಸಿದರು.
Uncategorized
Lawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂದು ಹೇಳಿದರು.
ಬೆಂಗಳೂರು: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದ ಮರುತನಿಖೆ, ಸಂತೋಷ್ ರಾವ್ ಪಾತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದು ತಮ್ಮ ವಾದವಾಗಿದೆ ಎಂದು ಹೇಳಿದರು. ಸಿಬಿಐ ತನಿಖೆಯ ವೇಳೆ ಫೋರೆನ್ಸಿಕ್ ವರದಿಗಳಲ್ಲಿ ಸಂತೋಷ್ ರಾವ್ ಅವರ ದೇಹದಲ್ಲಿದ್ದ ಗಾಯಗಳ ಬಗ್ಗೆ ಉಲ್ಲೇಖವಾಗಿತ್ತು ಎಂದು ತಿಳಿಸಿದರು.
ಸಿಬಿಐನ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಬಿ.ಆರ್. ಶಿವಾನಂದ ಅವರು ಪ್ರಕರಣದ ವಿಚಾರದಲ್ಲಿ ನಿರ್ದಿಷ್ಟ ಸಂಘಟನೆಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರವಾಗಿ ದೃಢೀಕರಿಸಿದ ಮಾಹಿತಿ ಲಭ್ಯವಿಲ್ಲ.
ಕ್ಷೇತ್ರದ ವಿರುದ್ಧ ಅಪಪ್ರಚಾರದ ಆರೋಪ
ಸೌಜನ್ಯಾ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಲವರು ಹಣ ಸಂಪಾದಿಸಿದ್ದಾರೆ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಪ್ರಕರಣದ ಹಿಂದೆ ಎಡಪಂಥೀಯರು ಹಾಗೂ ನಗರ ನಕ್ಸಲರ ಕೈವಾಡವಿದೆ ಎಂಬ ಆರೋಪವನ್ನೂ ಅವರು ಮಾಡಿದರು.
ಬುರುಡೆ ಪ್ರಕರಣದ ಅಂತಿಮ ವರದಿ ಬಹಿರಂಗಪಡಿಸಲು ಆಗ್ರಹ
ಸೌಜನ್ಯಾ ಪ್ರಕರಣದಲ್ಲಿ ಹಿನ್ನಡೆಯಾದ ಬಳಿಕ ಕೆಲವು ಗುಂಪುಗಳು ಬುರುಡೆ ಪ್ರಕರಣವನ್ನು ಮುನ್ನೆಲೆಗೆ ತಂದವು ಎಂದು ಅಮೃತೇಶ್ ಹೇಳಿದರು. ಸರ್ಕಾರದ ವೆಚ್ಚದಲ್ಲಿ ನಡೆದಿದ್ದ ಅನಧಿಕೃತ ಶವಗಳ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ತನಿಖೆಯ ಅಂತಿಮ ವರದಿ ಇನ್ನೂ ಬಹಿರಂಗವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.
ಚಿನ್ನಯ್ಯ ಆರೋಪಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗದಿರುವುದರ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.
ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವುದು ಕಷ್ಟ
ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಕೆಲವು ಗ್ಯಾಂಗ್ ಹಣ ಮಾಡುವ ಉದ್ದೇಶದಿಂದ ಕ್ಷೇತ್ರದ ವಿರುದ್ಧ ಕುತಂತ್ರ ನಡೆಸುತ್ತಿದೆ. ಕೆಲವು ವಿಷಯ ಮುಚ್ಚಿಟ್ಟು ಅವರು ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಸಂಪೂರ್ಣವಾಗಿ ಹೊಸದಾಗಿ ತನಿಖೆ ಮಾಡಲು ಎಸ್ಐಟಿ ರಚನೆ ಮಾಡಲು ಸೂಚಿಸಿದೆ. ಆದರೆ ಮೂರು ತಿಂಗಳಲ್ಲಿ ಪ್ರಕರಣದ ತೀರ್ಪು ಬರಲು ಸಾಧ್ಯವಿಲ್ಲ. 14 ವರ್ಷದ ಸಾಕ್ಷ್ಯಾಧಾರಗಳು ಈಗ ಸಿಗಲು ಸಾಧ್ಯವಿಲ್ಲ. ಈ ಗ್ಯಾಂಗ್ನ ನಿಜವಾದ ಟಾರ್ಗೆಟ್ ಮಲ್ಲಿಕ್ ಜೈನ್, ಧೀರಜ್ ಜೈನ್, ಉದಯ್ ಜೈನ್ ಅಲ್ಲ. ಬದಲಾಗಿ ಕ್ಷೇತ್ರವೇ ಆಗಿದೆ ಎಂದು ಅಮೃತೇಶ್ ತಿಳಿಸಿದ್ದಾರೆ.
ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ವಕೀಲ
ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ ಎಂದು ತಿಳಿಸಿದ ಅಮೃತೇಶ್, ಆರಂಭದಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಮೃತದೇಹ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು ಎಂದು ವಿವರಿಸಿದರು.
ಘಟನೆಯ ಬಳಿಕ ಸೌಜನ್ಯಾ ಅವರ ಕುಟುಂಬದವರು ಬೆಳ್ತಂಗಡಿಯಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಧರ್ಮಸ್ಥಳದಿಂದ ಯಾವುದೇ ಒತ್ತಡ ಅಥವಾ ಬೆದರಿಕೆ ಇರಲಿಲ್ಲ ಎಂದು ಹೇಳಿದ್ದರೆಂದು ಅಮೃತೇಶ್ ಉಲ್ಲೇಖಿಸಿದರು. ಬಳಿಕ ಕೆಲವು ಗುಂಪುಗಳು ಧಾರ್ಮಿಕ ಗುರುಗಳು ಹಾಗೂ ಮಠಾಧೀಶರನ್ನು ಗುರಿಯಾಗಿಸಿಕೊಂಡು ಕ್ಷೇತ್ರದ ವಿರುದ್ಧ ಆರೋಪಗಳನ್ನು ಹರಡಿವೆ ಎಂದು ದೂರಿದರು.
ಸಂತೋಷ್ ರಾವ್ ಅವರನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ಸಾಕಷ್ಟು ಹಣ ಖರ್ಚು ಮಾಡಿರುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರೇ ಹೇಳಿದ್ದಾರೆ ಎಂದೂ ಅಮೃತೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಕೀಲ ಸದಾನಂದ ಗೌಡ ಉಪಸ್ಥಿತರಿದ್ದರು.
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸ್ಥಳೀಯ6 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಕಾರ್ಯಕ್ರಮಗಳು22 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಬಿಗ್ ನ್ಯೂಸ್6 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ6 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಶಿಕ್ಷಣ22 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
Uncategorized23 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ


















