ರಾಜ್ಯ
Arecanut price ಚೇತರಿಕೆ ಕಾಣದ ಅಡಿಕೆ ಧಾರಣೆ -ದರ ಕುಸಿತದ ಹಿಂದಿದೆ ಈ ಕಾರಣಗಳು – ಡೋಲಾಯಮಾನ ಸ್ಥಿತಿಯಲ್ಲಿ ಅಡಿಕೆ ಭವಿಷ್ಯ
ಕಳೆದ ಕೆಲ ವರ್ಷಗಳಿಗೆ ಹೋಲಿಸಿದರೇ ಇತ್ತೀಚಿಗಿನ ಕೆಲ ತಿಂಗಳುಗಳಿಂದ ಅಡಿಕೆ ಧಾರಣೆಯಲ್ಲಿ ಭಾರೀ ಕುಸಿತ ಕಂಡಿದೆ ಹಾಗು ಚೇತರಿಸುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಈ ನಡುವೆ ಅಡಿಕೆಯ ಉತ್ಪಾದನ ವೆಚ್ಚ ಪ್ರತಿ ವರ್ಷ ಹೆಚ್ಚಳವಾಗುತ್ತಲೇ ಇದೆ.ಹೀಗಾಗಿ ಅಡಿಕೆಯನ್ನೆ ನಂಬಿ ಜೀವನ ನಡೆಸುವ ಸಾಂಪ್ರದಾಯಿಕ ಬೆಳೆಗಾರನ ಸ್ತಿತಿ ಅಡಕತ್ತರಿಯಲ್ಲಿ ಸಿಕ್ಕಮತಾಗಿದೆ.
ಕಳೆದ ಪೆಭ್ರವರಿ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಅಡಿಕೆಯ ಕನಿಷ್ಠ ಆಮದು ದರವನ್ನು ಪ್ರತಿ ಕೆ.ಜಿ.ಗೆ ₹ 100ರಷ್ಟು ಏರಿಸಿತ್ತು. . ಈ ಬಳಿಕ ಅಡಿಕೆ ಧಾರಣೆ ಜಾಸ್ತಿ ಆಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಅದು ಸುಳ್ಳಾಗಿದೆ ,ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಈ ವರ್ಷ ಪ್ರತಿ ಕೆ.ಜಿ. ಹಳೆ ಅಡಿಕೆ ದರ ಸುಮಾರು ₹ 100ರಷ್ಟು ಕಡಿಮೆ ಇದೆ.
ಕೇಂದ್ರೀಯ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣಾ ಸಹಕಾರಿ ಸಂಸ್ಥೆಯು (ಕ್ಯಾಂಪ್ಕೊ) ಬೆಳೆಗಾರರ ಹಿತ ಕಾಯುವ ಉದ್ದೇಶದಿಂದ ಕನಿಷ್ಠ ಆಮದು ಬೆಳೆ ಹೆಚ್ಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿತು. ಪರಿಣಾಮ ಕೇಂದ್ರ ಸರ್ಕಾರ 2023ರ ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸುವುದರ ಮೂಲಕ ಅಡಿಕೆ ಆಮದಿನ ಕನಿಷ್ಠ ದರವನ್ನು ಪ್ರತಿ ಕೆ.ಜಿ.ಗೆ ₹251ರಿಂದ ₹351ಕ್ಕೆ ಹೆಚ್ಚಳ ಮಾಡಿತ್ತು . ಆದರೆ ಇದರಿಂದ ನಿರೀಕ್ಷಿತ ಲಾಭ ದೊರೆತಂತೆ ಕಾಣುವುದಿಲ್ಲ. ಆ ಬಳಿಕವು ಅಡಿಕೆ ರೇಟ್ ಇಳಿಮುಖವಾಗುತ್ತಲೇ ಸಾಗಿದೆ.
2022ರ ನವೆಂಬರ್ ವೇಳೆಗೆ ಹಳೆ ಅಡಿಕೆ ದರವು ಪ್ರತಿ ಕೆ.ಜಿ.ಗೆ ₹540ರವರೆಗೂ ತಲುಪಿತ್ತು. ಪ್ರಸ್ತುತ ವರ್ತಕರು ಹಳೆ ಅಡಿಕೆಯನ್ನು ಪ್ರತಿ ಕೆ.ಜಿಗೆ ₹430ರಿಂದ ₹440ಕ್ಕೆ ಖರೀದಿಸುತ್ತಿದ್ದಾರೆ. ಹೊಸ ಅಡಿಕೆ ₹ 360ಕ್ಕೆ ಮಾರಾಟ ಆದರೆ ಹೆಚ್ಚು ಎಂಬ ಸ್ಥಿತಿ ಇದೆ. ಮೂರು ತಿಂಗಳಿಂದ ಹೆಚ್ಚೂ ಕಡಿಮೆ ಇದೇ ದರ ಇದೆ. ದೀಪಾವಳಿ ಬಳಿಕ ಹಾಗು ಪಂಚ ರಾಜ್ಯಗಳ ಚುನಾವಣೆಯ ಬಳಿಕ ರೇಟ್ ಹೆಚ್ಚಾಗಬಹುದು ಎಂಬ ನಿರೀಕ್ಷೆ ಎಲ್ಲಡೆ ಇತ್ತು. ಆದರೆ ಅದೆಲ್ಲವು ಹುಸಿಯಾಗಿದೆ.
ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಬೇಕಿದೆ
ಕೊವೀಡ್ ಬಳಿಕ ಅಡಿಕೆಯ ಕಳ್ಳಸಾಗಣೆಗೆ ಕಡಿವಾಣ ಬೀಳದ ಪರಿಣಾಮ ಕನಿಷ್ಟ ಆಮದು ದರ ಹೆಚ್ಚಿಸಿದ ಲಾಭ ಬೆಳೆಗಾರರಿಗೆ ಸಿಕ್ಕಿಲ್ಲ. ಬರ್ಮಾ, ನೇಪಾಳ ಇತ್ಯಾದಿ ದೇಶಗಳಿಂದ ಭಾರತದೊಳಗೆ ಅಡಿಕೆ ಅವ್ಯಾಹತವಾಗಿ ಕಳ್ಳಸಾಗಣೆ ಆಗುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮವಹಿಸಿದಲ್ಲಿ ಆಗ ಅಡಿಕೆ ಧಾರಣೆ ಹೆಚ್ಚಳವಾಗಬಹುದು ‘ ಎನ್ನುತ್ತಾರೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ ಪುಚ್ಚಪಾಡಿ.
Winter Health ಚಳಿಗಾಲದಲ್ಲಿ ಪ್ರತಿದಿನ ತುಪ್ಪ ಸೇವಿಸುವುದು ತಪ್ಪಾ ?
ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ. ಎಚ್.ಎಂ.ಕೃಷ್ಣಕುಮಾರ್ ಪ್ರಕಾರ ಮೂರು ತಿಂಗಳುಗಳಿಂದ ಅಡಿಕೆ ಧಾರಣೆ ಸ್ಥಿರವಾಗಿದೆ. ಪ್ರತಿ ಕೆ.ಜಿಗೆ ₹ 5ರಿಂದ ₹ 10ರಷ್ಟು ಮಾತ್ರ ದರ ವ್ಯತ್ಯಯವಾಗುತ್ತಿದೆ. ಸದ್ಯಕ್ಕೆ ಧಾರಣೆ ಹೆಚ್ಚಳವಾಗುವ ಲಕ್ಷಣ ಇಲ್ಲ.
ಮಾರುಕಟ್ಟೆ ತಜ್ಞರು ಏನು ಹೇಳುತ್ತಾರೆ?
ಇನ್ನು. ಮಾರುಕಟ್ಟೆ ತಜ್ಞರ ಅನುಸಾರ ಕೋವಿಡ್ ಕಾಲಘಟ್ಟದಲ್ಲಿ ಇದ್ದಕ್ಕಿದ್ದಂತ ಅಡಿಕೆ ಧಾರಣೆಯಲ್ಲಿ ಹೆಚ್ಚಳ ಕಂಡು ಬಂದಿತ್ತು. ಆ ವೇಳೆ ದೇಶದ ಗಡಿ ಭಾಗದಲ್ಲಿ ಮೈಯೆಲ್ಲ ಕಣ್ಣಾಗಿ ಕಾವಲು ಕಾಯುತ್ತಿದ್ದುದರಿಂದ ವಿದೇಶಿ ಅಡಿಕೆ ದೇಶದೊಳಗೆ ಬರುತ್ತಿರಲಿಲ್ಲ. ಇದು ಧಾರಣೆ ಏರಿಕೆ ಆಗುವಲ್ಲಿ ಮಹತ್ತರ ಪಾತ್ರ ವಹಿಸಿತ್ತು. ತತ್ಪರಿಣಾಮ ಅಡಿಕೆ ಬೆಳೆ ವಿಸ್ತರಣೆಯಾಗಿದೆ.
ಅನೇಕ ಬೆಳೆಗಾರರು ತಮ್ಮಲಿದ್ದ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ನೆಟ್ಟಿದ್ದಾರೆ. ಪಾರಂಪರಿಕವಾಗಿ ಈ ಹಿಂದೆ ಅಡಿಕೆ ಬೆಳೆಯದ ಪ್ರದೇಶದಲ್ಲೂ ಕಳೆದ 3 ವರ್ಷಗಳಿಂದ ಅಡಿಕೆ . ಮುಂದಿನ ವರ್ಷದಿಂದ ಹೊಸ ಗಿಡಗಳಲ್ಲು ಫಸಲು ಬರಲು ಆರಂಭವಾಗುತ್ತದೆ. ಆಗ ಅಡಿಕೆಯ ಬೇಡಿಕೆ ಇನ್ನಷ್ಟು ಕುಸಿದು ದರ ದರ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂಬ ಕಳವಳವನ್ನು ಮಾರುಕಟ್ಟೆ ತಜ್ಞರು ವ್ಯಕ್ತ ಪಡಿಸುತ್ತಿದ್ದಾರೆ
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
ರಾಜ್ಯ
Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವ ಭಾಗದಲ್ಲಿ ಎಷ್ಟು ಮಳೆ ಕೊರತೆ?
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಶೇ.24ಕ್ಕೂ ಅಧಿಕ ಕೊರತೆ ಉಂಟಾಗಿದೆ.
ದೇಶಾದ್ಯಂತ ಈ ಮುಂಗಾರು ಅವಧಿಯಲ್ಲಿ ಒಟ್ಟು 759.4 ಮಿ.ಮೀ. ಮಳೆಯಾಗಿದೆ. 2001ರ ಬಳಿಕ ಇದು ನಾಲ್ಕನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರಿಂದ ಲೆಕ್ಕ ಹಾಕಿದರೆ 13ನೇ ಅತಿ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್‌ನಿನೋ ಪ್ರಭಾವ
ದೇಶಾದ್ಯಂತ ಮಳೆ ಕೊರತೆಗೆ ಎಲ್‌ನಿನೋ ಪರಿಣಾಮವೂ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್‌ನಿನೋ ಪರಿಸ್ಥಿತಿಯಿಂದ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಭಾವ ಉಂಟಾಗಿದೆ.
ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಕರ್ನಾಟಕದಲ್ಲಿ ಎಲ್‌ನಿನೋ ಪರಿಣಾಮ ತೀವ್ರವಾಗಿ ಕಂಡುಬಂದಿದ್ದು, ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ. ಈಗಾಗಲೇ ರಾಜ್ಯದ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ದಕ್ಷಿಣ ಭಾರತದ ಇತರ ರಾಜ್ಯಗಳ ಪೈಕಿ ಕೇರಳದಲ್ಲಿ ಶೇ.28, ಆಂಧ್ರಪ್ರದೇಶದಲ್ಲಿ ಶೇ.25, ತಮಿಳುನಾಡಿನಲ್ಲಿ ಶೇ.20 ಹಾಗೂ ತೆಲಂಗಾಣದಲ್ಲಿ ಶೇ.18ರಷ್ಟು ಮಳೆ ಕೊರತೆ ದಾಖಲಾಗಿದೆ.
ಇತರ ರಾಜ್ಯಗಳಲ್ಲೂ ಮಳೆ ಅಭಾವ
ಮಣಿಪುರದಲ್ಲಿ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಅಭಾವ ಎದುರಿಸುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಅರುಣಾಚಲ ಪ್ರದೇಶದಲ್ಲಿ ಶೇ.44, ಪಂಜಾಬ್‌ನಲ್ಲಿ ಶೇ.41, ಬಿಹಾರದಲ್ಲಿ ಶೇ.32, ಅಸ್ಸಾಂನಲ್ಲಿ ಶೇ.28 ಹಾಗೂ ಹರಿಯಾಣದಲ್ಲಿ ಶೇ.23ರಷ್ಟು ಕೊರತೆ ದಾಖಲಾಗಿದೆ.
ದಶಕದಲ್ಲೇ ಒಣಹವೆಯ ಮುಂಗಾರು
ಎಲ್‌ನಿನೋ ಪರಿಣಾಮದಿಂದಾಗಿ ಈ ಬಾರಿ ದೇಶದಲ್ಲಿ ದಶಕದಲ್ಲೇ ಅತ್ಯಂತ ಒಣಹವೆಯ ಮುಂಗಾರು ದಾಖಲಾಗಿದೆ. 2015ರಲ್ಲಿ ಕೊನೆಯ ಬಾರಿಗೆ ಇದೇ ರೀತಿಯ ಮಳೆ ಕೊರತೆ ಕಂಡುಬಂದಿದ್ದು, ಆ ವರ್ಷವೂ ದೇಶಾದ್ಯಂತ ಸುಮಾರು ಶೇ.13ರಷ್ಟು ಮಳೆ ಕೊರತೆ ದಾಖಲಾಗಿತ್ತು.
ಜೂನ್‌ನಲ್ಲಿ ತೀವ್ರ ಮಳೆ ಕೊರತೆ
ಮುಂಗಾರು ಆರಂಭದ ಜೂನ್ ತಿಂಗಳಲ್ಲೇ ಮಳೆ ಕೊರತೆ ತೀವ್ರವಾಗಿತ್ತು. ಆ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.65ರಷ್ಟು ಮಾತ್ರ ಮಳೆಯಾಗಿತ್ತು. ಜುಲೈನಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದರೂ, ಆಗಸ್ಟ್‌ನಲ್ಲಿ ಮತ್ತೆ ಕೊರತೆ ಉಂಟಾಯಿತು. ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣದಲ್ಲಿ ತುಸು ಸುಧಾರಣೆ ಕಂಡುಬಂದಿದೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು20 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















