ಬಿಗ್ ನ್ಯೂಸ್
Arecanut Smuggling | ಮ್ಯಾನ್ಮಾರ್‌ನಿಂದ ಕಳ್ಳಸಾಗಣಿಕೆಯ ಮೂಲಕ 11500 ಕೆ.ಜಿ ಅಡಿಕೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ವಶಕ್ಕೆ – ಕೆ.ಜಿ ರೇಟ್ ಕೇಳಿದರೆ ಅಚ್ಚರಿ..!
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ವಿಜಿಲೆನ್ಸ್ ವಿಭಾಗವು 11,500 ಕೆಜಿ ತೂಕದ 460 ಚೀಲ ಅಡಿಕೆಯನ್ನು (Arecanut Smuggling) ವಶಪಡಿಸಿಕೊಂಡಿದೆ. ಅಗತ್ಯ ಸಾರಿಗೆ ದಾಖಲೆಗಳನ್ನು ನೀಡದ ಹಿನ್ನಲೆಯಲ್ಲಿ ಸರಕು ಮೂಲದ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕಿದ್ದು, ಪರಿಶೀಲನೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ.
ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ಈಶಾನ್ಯ ಪ್ರದೇಶಗಳಿಂದ ಮಧ್ಯಪ್ರದೇಶ ಮತ್ತು ಬೆಂಗಳೂರಿನ ನೋಂದಣಿಯಾಗದ ವ್ಯಾಪಾರಿಗಳಿಗೆ ಕಡಿಮೆ ಗುಣಮಟ್ಟದ ಅಡಿಕೆಯನ್ನು ಸರಬರಾಜು ಮಾಡುವ ಜಾಲವನ್ನು ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ.
ಸಂಬಂಧಿತ ರಾಜ್ಯಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಧಿಕಾರಿಗಳೊಂದಿಗೆ ಸಹಕರಿಸಿ, ನಡೆಸಿದ ವಿಚಾರಣೆಯು ಏರ್‌ವೇ ಬಿಲ್‌ಗಳಲ್ಲಿ ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳ ಬಳಕೆಯನ್ನು ಬಹಿರಂಗಪಡಿಸಿದೆ, ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಆಗಿರಬಹುದು ಎನ್ನುವ ಸುಳಿವು ನೀಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆಯ ಬೆಲೆ ಕೆಜಿಗೆ 25 ರಿಂದ 30 ರೂಪಾಯಿ ಎಂದು ಹೇಳಲಾಗಿದೆ. ಇದನ್ನು ಒಣಗಿಸಿ ದಕ್ಷಿಣಕನ್ನಡದ ಅಡಿಕೆ ಜೊತೆ ಬೆರಕೆ ಮಾಡಿ ಮಾಡಲಾಗುತ್ತಿದೆ. ಈ ದಂಧೆ ವ್ಯಾಪಕವಾಗಿ ನಡೆಯುತ್ತಿದೆ.
ಈಗಾಗಲೇ ಈ ಬಾರಿ ಅಡಿಕೆ ಬೆಲೆ ಕುಸಿತ ಕಂಡಿದ್ದು ಬೆಳೆಗಾರರಲ್ಲಿ ಆತಂಕ ಮೂಡಿಸಿದೆ, ಈ ನಡುವೆಯೇ ಅಕ್ರಮವಾಗಿ ಮಾರುಕಟ್ಟೆಗೆ ಅಡಿಕೆ ಪೂರೈಕೆಯಾಗುತ್ತಿರುವುದು ಮಾರುಕಟ್ಟೆ ಮೇಲೆ ಮತ್ತಷ್ಟು ಪರಿಣಾಮ ಬೀರಲಿದ್ದು, ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಭಾರತದಲ್ಲಿ ಅಡಿಕೆ ಬೆಳೆಯುವ ಪ್ರಮುಖ ರಾಜ್ಯ ಕರ್ನಾಟಕ, ಭೂತಾನ್‌ನಿಂದ ಹಸಿ ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದ ಬೆನ್ನಲ್ಲೇ ರಾಶಿ ಕೆಂಪಡಕೆ ದರ ಅಲ್ಪ ಕುಸಿತ ಕಂಡಿತ್ತು. ಅದರ ಜೊತೆಗೆ ಹೀಗೆ ಭೂತಾನ್, ಮ್ಯಾನ್ಮಾರ್ ನಿಂದ ಅಡಿಕೆ ಅಕ್ರಮವಾಗಿ ಭಾರತಕ್ಕೆ ಬರುತ್ತಿದ್ದು, ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದೆ.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ
ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು20 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ




















