ಚಿನ್ನ-ಬೆಳ್ಳಿ ದರ
Gold Price Hike ಚಿನ್ನದ ಬೆಲೆ ಭಾರೀ ದುಬಾರಿ ಇದ್ದರೂ ಚಿನ್ನ ಖರೀದಿಗೆ ಮುಗಿಬಿದ್ದ ಜನ..
ದುಬೈ: ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಮುಖಿಯಾಗುತ್ತಿದೆ. ಮಧ್ಯಮ ವರ್ಗದವರಿಗೆ ಚಿನ್ನ ಗಗನ ಕುಸುಮವಾಗುತ್ತಿದೆ. ಚಿನ್ನದ ಮೇಲಿನ ಬೇಡಿಕೆಯು ಹೆಚ್ಚಿದ್ದು ಬೆಲೆ ಕೂಡ ಹೆಚ್ಚಾಗುತ್ತಿದೆ ಆದರೂ ಚಿನ್ನ ಖರೀದಿ ಮಾಡುವವರ ಸಂಖ್ಯೆ ಕಡಿಮೆಯಾಗುವುದಿಲ್ಲ.
ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಚಿನ್ನದ ರೆಟ್ ಏರಿಕೆಯಾದ ಬಳಿಕವು ಹಳದಿ ಲೋಹದ ಮೇಲಿನ ಮೋಹ ಜನರಿಗೆ ಕಡಿಮೆಯಾಗಿಲ್ಲ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಚಿನ್ನ ಖರೀದಿಗೆ ಜನರು ಮುಗಿಬೀಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ದೇಶದಾದ್ಯಂತ ಚಿನ್ನದ ವ್ಯಾಪಾರದಲ್ಲಿ ದಿಢೀರ್ ಏರಿಕೆ ಕಂಡಿದೆ
ನಿಸಿಕಾ ಜ್ಯುವೆಲ್ಲರಿ ಮಾಲೀಕ ನಿಶಿನ್ ತಸ್ಲೀಮ್ ಪ್ರತಿಕ್ರಿಯೆ: ಮುಂಬರುವ ದಿನಗಳಲ್ಲಿ ಬೆಲೆ ಇನ್ನೂ ಏರಿಕೆಯಾಗಬಹುದು ಎಂಬ ಆತಂಕ ಮತ್ತು ಅಂದಾಜಿನ ಅಡಿಯಲ್ಲಿ ಈಗಲೇ ಚಿನ್ನ ಖರೀದಿಸಿ ಇಟ್ಟುಕೊಳ್ಳುವುದು ಸೂಕ್ತ ಎಂಬ ತೀರ್ಮಾನಕ್ಕೆ ಬಂದಿರುವ ಜನರು ಹಳದಿ ಲೋಹ ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಈ ಪ್ರವೃತ್ತಿಯೂ ಕೂಡ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ವಿದೇಶಿಯರು ಸೇರಿದಂತೆ ಯುಎಇ ನಿವಾಸಿಗಳು ಚಿನ್ನದ ಬೆಲೆ ಹೆಚ್ಚಿದ್ದರೂ ಕೂಡ ಚಿನ್ನವನ್ನು ಖರೀದಿಸಲು ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಖರೀದಿಸಿದ ಚಿನ್ನದ ಪ್ರಮಾಣ ತುಲನಾತ್ಮಕವಾಗಿ ಕಡಿಮೆಯಾದರೂ, ಅಂಗಡಿಗಳಿಗೆ ಭೇಟಿ ನೀಡುವ ಗ್ರಾಹಕರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ನಿಶಿನ್ ಹೇಳಿದ್ದಾರೆ.
ದುಬೈನಲ್ಲಿ ಚಿನ್ನದ ಬೆಲೆ ಎಷ್ಟು ?
ದುಬೈನಲ್ಲಿ ಶುಕ್ರವಾರ ಪ್ರತಿ ಔನ್ಸ್ ಚಿನ್ನ 2,075 ಡಾಲರ್ (Rs 1,73,028 ರೂಪಾಯಿ)ಗೆ ಮಾರಾಟವಾಗಿದೆ. ದುಬೈನ ಎಲ್ಲ ಚಿನ್ನದ ಮಳಿಗೆಗಳಲ್ಲಿ ಮಾರಾಟ ಪ್ರಮಾಣ ಹೆಚ್ಚಳವಾಗಿದೆ, ಮತ್ತಷ್ಟು ಬೆಲೆ ಏರಿಕೆ ಆಗಬಹುದೆಂಬ ನಿರೀಕ್ಷೆಯು ಚಿನ್ನದ ಬೆಲೆಯ ದಿಢೀರ್ ಏರಿಕೆಗೆ ಪ್ರಾಥಮಿಕ ಕಾರಣ ಎಂದು ತಿಳಿಸಿದ್ದಾರೆ. ಅಲ್ಲದೆ, ಡಿಸೆಂಬರ್ ಅಂತ್ಯದವರೆಗೂ 2400 ಡಾಲರ್ವರೆಗೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸೈಬಾ ಜ್ಯುವೆಲರ್ಸ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ವಲಸಿಗ ಸುರೇಶ್ ಬಾಬು ಹೇಳಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನ ವ್ಯವಸ್ಥಾಪಕ ನಿರ್ದೇಶಕ ಶಾಮಲಾಲ್ ಅವರ ಅಭಿಪ್ರಾಯ:ಚಿನ್ನದ ಬೆಲೆಯಲ್ಲಿ ಇದೇ ರೀತಿ ಮತ್ತಷ್ಟು ಏರಿಕೆಯಾಗಲಿದೆ ಎಂದಿದ್ದಾರೆ. ಚಿನ್ನದ ಬೆಲೆಗಳು ಸಾರ್ವಕಾಲಿಕ ದಾಖಲೆ ತಲುಪಿದೆ. ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ನೋಡುವ ಹೂಡಿಕೆದಾರರನ್ನು ಚಿನ್ನ ಹೆಚ್ಚು ಆಕರ್ಷಿಸುತ್ತಿದೆ ಎಂದಿದ್ದಾರೆ.
ದುಬೈ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ನೀಡುವ ಕಾರಣ, ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ದುಬೈಗೆ ಆಗಮಿಸುತ್ತಿರುವುದು ಕೂಡ ಚಿನ್ನದ ಬೇಡಿಕೆಗೆ ಕಾರಣವಾಗಿದೆ. ಇನ್ನುಷ್ಟು ಬೇಡಿಕೆ ಹೆಚ್ಚಾಗುವ ನಿರೀಕ್ಷೆಯೂ ಇದೆ.
ಒಟ್ಟಾರೆ, ಚಿನ್ನದ ಬೆಲೆ ದುಬಾರಿ ಇದ್ದರೂ ಕೂಡ ಯುಎಇ ಚಿನ್ನದ ಮಳಿಗೆಗಳಲ್ಲಿ ಮಾರಾಟದ ಪ್ರಮಾಣ ಹೆಚ್ಚಾಗಿರುವುದು ಆಭರಣ ಪ್ರಿಯರಿಗೆ ಇರುವ ಆಸಕ್ತಿಯನ್ನು ಸೂಚಿಸುತ್ತದೆ. ಮುಂಬರುವ ವಾರಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಾಗಲಿದೆ ಎಂಬುದನ್ನು ತಜ್ಞರು ತಿಳಿಸಿದ್ದಾರೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ಬಿಗ್ ನ್ಯೂಸ್20 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್12 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ17 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು20 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized19 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್20 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ18 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















