ಬೆಂಗಳೂರು
Arecanut Price: 12 ಸಾವಿರ ಟನ್ ಅಡಿಕೆ ವಿದೇಶದಿಂದ ಆಮದಾಗಿದ್ದು ರೂ 500 ಇದ್ದ ಅಡಿಕೆ ರೇಟ್ 410 ಆಗಿದೆ – ಕೇಂದ್ರ ಸರಕಾರ ತಕ್ಷಣ ಇದನ್ನು ನಿಲ್ಲಿಸಬೇಕು – ಹಳದಿ ಎಲೆ ರೋಗಕ್ಕೆ ಪರಿಹಾರ ಕೊಡಿ : ಸದನದಲ್ಲಿ ಶಾಸಕ ಅಶೋಕ್ ರೈ ಆಗ್ರಹ
ಬೆಳಗಾವಿ : ಡಿ 8: ಕಳೆದ ವರ್ಷ ರೂ 500 ಇದ್ದ ಅಡಿಕೆ ಧಾರಣೆ ಈ ವರ್ಷ ರೂ 410ಕ್ಕೆ ಇಳಿದಿದೆ . ಇದಕ್ಕೆ ಕೇಂದ್ರ ಸರಕಾರದ ಅಡಿಕೆ ಆಮದು ನೀತಿಯೇ ಕಾರಣ. ವಿದೇಶದಿಂದ ಕಡಿಮೆ ಬೆಲೆಗೆ ಆಡಿಕೆ ಆಮದಾಗುತ್ತಿದೆ. 12 ಸಾವಿರಟನ್ ಅಡಿಕೆ ವಿದೇಶದಿಂದ ಆಮದಾಗಿದ್ದು ಇದು ಪ್ರಸ್ತುತ ಅಡಿಕೆ ಬೆಲೆ ಇಳಿಯಲು ಕಾರಣವಾಗಿದೆ. ಹೀಗಾಗಿ ರಾಜ ಸರಕಾರ ಮಧ್ಯ ಪ್ರವೇಶಿಸಿ ಅಡಿಕೆ ಆಮದು ನಿಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಡ ಹೆಋಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಆಗ್ರಹಿಸಿದರು.
ಅವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡುತ್ತಾ “ಕರಾವಳಿ ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯಲಾಗುತ್ತಿದ್ದು. ಈ ಜಿಲ್ಲೆಯಲ್ಲಿ ಅಡಿಕೆಯೇ ಜನತೆಯ ಆರ್ಥಿಕತೆಗೆ ಮೂಲ ಆಧಾರವಾಗಿದೆ. ವಿದೇಶದಿಂದ ಕಡಿಮೆ ಬೆಲೆಗೆ ಆಡಿಕೆಯನ್ನು ಕೇಂದ್ರ ಸರಕಾರ ಅಮದು ಮಾಡಿಕೊಳ್ಳುತ್ತಿರುವ ಕಾರಣ ನಮ್ಮ ಭಾಗದ ಅಡಿಕೆಗೆ ಬೆಲೆ ಕಡಿಮೆಯಾಗುತ್ತಿದೆ ಎಂದರು
ರೂ 480 ರಿಂದ 500 ರೂ ಇದ್ದ ಅಡಿಕೆ ದರ ಕಳೆದ ಕೆಲವು ದಿನಗಳಿಂದ 410 ಕ್ಕೆ ಇಳಿದಿದೆ. ಹೀಗಾಗಿ ಕೇಂದ್ರ ಸರಕಾರ ಅಡಕೆಯನ್ನು ಆಮದು ಮಾಡಿಕೊಳ್ಳುವುದನ್ನು ತಕ್ಷಣ ನಿಲ್ಲಿಸಿ ಕರಾವಳಿ ಭಾಗದ ಅಡಿಕೆ ಬೆಳೆಗಾರರ ಹಿತವನ್ನು ಕಾಯುವ ಕೆಲಸವನ್ನು ಮಾಡಬೇಕು. ರಾಜ್ಯ ಸರಕಾರ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಅಥವಾ ಮನವಿ ಮಾಡುವ ಮೂಲಕ ಅಮದು ನಿಲ್ಲಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
12000 ಟನ್ ಅಡಿಕೆ ಈಗಾಗಲೆ ಆಮದು ಮಾಡಿಕೊಳ್ಳಲಾಗಿದ್ದು ಈ ವಿದೇಶಿ ಅಡಿಕೆ ಮಾರುಕಟ್ಟೆಯಲ್ಲಿ ಬಂದಿರುವ ಕಾರಣ ನಮ್ಮ ಭಾಗದ ಅಡಿಕೆಗೆ ಬೇಡಿಕೆ ಕಡಿಮೆಯಾಗಿದೆ. ಇದು ಮುಂದುವರೆದರೆ ಅಡಿಕೆ ಕೃಷಿಕರು ತೊಂದರೆಗೊಳಗಾಗುವ ಆತಂಕವಿದೆ. ಈ ಆತಂಕವನ್ನು ದೂರ ಮಾಡಿ ಅಡಿಕೆ ಕೃಷಿಕರಿಗೆ ಸೂಕ್ತ ಆರ್ಥಿಕ ಭದ್ರತೆಯನ್ನು ಒದಗಿಸಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.
ಹಳದಿ ಎಲೆ ರೋಗಕ್ಕೆ ಪರಿಹಾರ
ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಡಿಕೆಯೇ ಪ್ರಧಾನ ಬೆಳೆಯಾಗಿದ್ದು , ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಸುಮಾರು 10 ಗ್ರಾಮಗಳಲ್ಲಿ ಈ ರೋಗ ಕಾಣಿಸಿಕೊಂಡಿದ್ದು ಕೃಷಿಕರು ಆತಂಕದಲ್ಲಿದ್ದಾರೆ. ಇದುವರೆಗೂ ಇವರಿಗೆ ಯಾವುದೇ ಪರಿಹಾರವಾಗಲಿ, ರೋಗಕ್ಕೆ ಸೂಕ್ತ ಔಷಧಿಯಾಗಲಿ ದೊರೆತ್ತಿಲ್ಲ. ಇದರಿಂದ ಇಲ್ಲಿನ ಕೃಷಿಕರು ಆರ್ಥಿಕವಾಗಿ ನಷ್ಟವನ್ನು ಅನುಭವಿಸುವಂತಾಗಿದ್ದು ಇವರಿಗೆ ಪರಿಹಾರ ಕೊಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ಸುಳ್ಯ ತಾಲೂಕಿನ 37,317 ಹೆಕ್ಟೇರ್ ಭೂಮಿಯಲ್ಲಿ 11,449 ಹೆಕ್ಟೇರ್ ಭೂಮಿಯಲ್ಲಿ ಕೃಷಿ ಇದೆ. ಇದರಲ್ಲಿ 511 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಕೃಷಿಯನ್ನು ಮಾಡುತ್ತಿದ್ದಾರೆ. ಒಟ್ಟು 5588 ಅಡಿಕೆ ಕೃಷಿಕರು ಈ ಭಾಗದಲ್ಲಿದ್ದು ಹಳದಿ ಎಲೆ ರೋಗದಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದು ಇದುವರೆಗೂ ಇವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸರಕಾರ ಈ ಬಗ್ಗೆ ತಕ್ಷಣ ಕ್ರಮಕೈಗೊಂಡು ಅಡಿಕೆ ಬೆಳೆಗಾರರಿಗೆ ಪರಿಹಾರವನ್ನು ಕೊಡಬೇಕು ಎಂದು ಶಾಸಕರು ಸದನದಲ್ಲಿ ಅಗ್ರಹಿಸಿದರು.
ಅಡಿಕೆಯಲ್ಲಿ ನಿಕೊಟಿನ್
ಅಡಿಕೆಯಲ್ಲಿ ನಿಕೊಟಿನ್ ಇದೆ ಎಂಬ ವಿಚಾರಕ್ಕೆ ಸಂಬಂದಿಸಿದಂತೆ ಸುಪ್ರಿಂ ಕೋರ್ಟಿನಲ್ಲಿ ಆಫಿದವಿತ್ ಸಲ್ಲಿಸಲಾಗಿತ್ತು. ಅಡಿಕೆಯಲ್ಲಿ ನಿಕೊಟಿನ್ ಇಲ್ಲ ಎಂದು ಈಗಾಗಲೇ ಸುಪ್ರಿಂ ಕೋರ್ಟಿನಲ್ಲಿ ಸ್ಪಷ್ಟಪಡಿಸಿಲಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಆತಂಕ ಇದ್ದು ಅದನ್ನು ತಕ್ಷಣ ಸ್ಪಷ್ಟಪಡಿಸಿಬೇಕು ಎಂದು ಶಾಸಕರು ಸದನದಲ್ಲಿ ಪ್ರಸ್ತಾಪಿಸಿದರು.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
-
ಅಂತರ ರಾಜ್ಯ21 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು15 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್16 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ18 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ18 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ21 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ18 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















