ರಾಷ್ಟ್ರೀಯ
ayodhya ram temple construction Status ಭವ್ಯ ರಾಮನ ವಿಗ್ರಹ ಅಲಂಕರಿಸುವ ಗರ್ಭಗುಡಿ ಸಿದ್ದ – ಸಾಮಾಜಿಕ ಮಾಧ್ಯಮದಲ್ಲಿ ಫೋಟೊ ಹಂಚಿಕೊಂಡ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ ನ ಚಂಪತ್ ರೈ – ಪ್ರಾಣ ಪ್ರತಿಷ್ಟೆ ಕಾರ್ಯಕ್ಕೆ ಆಯೊಧ್ಯೆಯಲ್ಲಿ ಹೇಗೆ ನಡೆಯುತ್ತಿದೆ ಸಿದ್ದತೆ
ಭವ್ಯ ರಾಮನ ವಿಗ್ರಹ ಅಲಂಕರಿಸುವ ಗರ್ಭಗುಡಿ ಸಿದ್ದ – ಸಾಮಾಜಿಕ ಮಾಧ್ಯಮದಲ್ಲಿ ಫೋಟೊ ಹಂಚಿಕೊಂಡ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ ನ ಚಂಪತ್ ರೈ – ಪ್ರಾಣ ಪ್ರತಿಷ್ಟೆ ಕಾರ್ಯಕ್ಕೆ ಆಯೊಧ್ಯೆಯಲ್ಲಿ ಹೇಗೆ ನಡೆಯುತ್ತಿದೆ ಸಿದ್ದತೆ
ನವದೆಹಲಿ: ಹಿಂದೂ ಶ್ರದ್ದಾಳುಗಳ ಶತಮಾನದ ನಿರೀಕ್ಷೆ ಕೊನೆಗೂ ನೆರವೇರುವ ಕಾಲ ಸನ್ನಿಹಿತವಾಗಿದೆ. ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಾರ್ಯಾದ ಪುರುಷೋತ್ತಮ ರಾಮನ ಜನ್ಮಭೂಮಿಯಲ್ಲಿ ಭವ್ಯ ಮಂದಿರದ ಕಾಮಗಾರಿ ಭರದಿಂದ ಸಾಗುತ್ತಿದೆ. ಮುಂದಿನ ಜನವರಿ ತಿಂಗಳ 22 ರಂದು ರಾಮ ಲಲ್ಲಾನ ಪ್ರಾಣ ಪ್ರತಿಷ್ಟೆ ನಡೆಯಲಿದೆ. ರಾಮನ ದಿವ್ಯ ವಿಗ್ರಹವನ್ನಿರಿಸುವ ಗರ್ಭಗುಡಿಯ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು , ಗರ್ಭಗುಡಿಯ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಫೊಟೊಗಳ ಜತೆಗೆ ಶ್ರೀರಾಮನ ಭವ್ಯ ಮಂದಿರದ ಮೊದಲ ಮಹಡಿಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ದೇವಾಲಯದ ಗರ್ಭಗುಡಿಯೂ ಬಹುತೇಕ ಸಿದ್ಧವಾಗಿದೆ. ರಾಮಲಾಲ್ಲಾ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ದೀಪಾಲಂಕಾರ ಕಾಮಗಾರಿಯೂ ಪೂರ್ಣಗೊಂಡಿದೆ. ಮುಂದಿನ ಜನವರಿ 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಇದರ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಹೇಳಿದ್ದಾರೆ.

ರಾಮನಗರಿ ಅಯೋಧ್ಯೆಯನ್ನು ಅದ್ಧೂರಿಯಾಗಿ ಅಲಂಕರಿಸಲು ಸರ್ಕಾರ ನಿರ್ಧರಿಸಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ ಮುನ್ನ ಇಡೀ ಪ್ರದೇಶದ ಪುನರುಜ್ಜೀವನದ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಪ್ರಮುಖ ಮಾರ್ಗಗಳಲ್ಲಿ ರಾಮಾಯಣ ಕಾಲದ ಪ್ರಮುಖ ಘಟನೆಗಳ ಸುಂದರ ಚಿತ್ರಗಳನ್ನು ರಚಿಸಲು ಸಿದ್ಧತೆ ನಡೆಯುತ್ತಿದೆ.

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ವತಿಯಿಂದ ಪ್ರಮುಖ ರಸ್ತೆಗಳ ಗೋಡೆಗಳ ಮೇಲೆ ಮ್ಯೂರಲ್ ಕಲಾಕೃತಿ ರಚನೆ ಮಾಡಲಾಗುತ್ತಿದೆ. ಟೆರಾಕೋಟಾ ಕಲಾಕೃತಿಗಳು ಒಂಬತ್ತು ಅಡಿ ಎತ್ತರ ಮತ್ತು 20 ಅಡಿ ಅಗಲ ಇರಲಿದೆ. 50ಕ್ಕೂ ಹೆಚ್ಚು ಮ್ಯೂರಲ್ ಶಿಲ್ಪಗಳು ಮತ್ತು ಮ್ಯೂರಲ್ಗಳು ಇರಲಿವೆ. ರಾಮಾಯಣ ಆಧರಿಸಿ ಕಲಾಕೃತಿ ನಿರ್ಮಾಣ ಮಾಡಲಾಗುತ್ತಿದೆ.

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಶ್ರೀರಾಮಮಂದಿರ ನಿರ್ಮಾಣ ಕಾರ್ಮಗರಿಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಮಂದಿರದ 3 ಕಡೆ ಶ್ರೀರಾಮನ ಮಗುವಿನ ರೂಪದ 4.3 ಅಡಿಯ ಮೂರು ಮೂರ್ತಿಗಳ ಕೆತ್ತನೆ ನಡೆಯುತ್ತಿದೆ. ಮೂವರು ಕಲಾವಿದರು ಮೂರು ಬೇರೆಬೇರೆ ಶಿಲ್ಪದಲ್ಲಿ ಅವುಗಳನ್ನು ತಯಾರುಮಾಡುತ್ತಿದ್ದಾರೆ. ಆ ಪೈಕಿ ಒಂದನ್ನು ದೇವರ ಮೂರ್ತಿಯಾಗಿ ಪ್ರತಿಷ್ಠಾಪಿಸಲಾಗುವುದು. ಆ ಮೂರ್ತಿಗಳ ಕೆತ್ತನೆ ಕಾರ್ಯ ಶೇ. 90 ಪೂರ್ಣಗೊಂಡಿದೆ, ಇನ್ನೊಂದು ವಾರದಲ್ಲಿ ಮೂರ್ತಿಗಳು ಸಿದ್ಧವಾಗಲಿವೆ ಎಂದು ರೈ ತಿಳಿಸಿದ್ದಾರೆ.

ಮೂರ್ತಿಯನ್ನು ನೆಲಮಹಡಿಯ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ನೆಲಮಹಡಿ ಬಹುತೇಕ ಪೂರ್ಣಗೊಂಡಿರುವುದರಿಂದ ಪ್ರತಿಷ್ಠಾಪನೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಪ್ರತಿಷ್ಠಾಪನೆಗೆ ಕನಿಷ್ಠ 4 ಸಾವಿರ ಸಾಧುಗಳನ್ನು ಆಹ್ವಾನಿಸಲಾಗುವುದು. ಅಲ್ಲದೆ ಐವತ್ತು ದೇಶಗಳಿಂದ ಕನಿಷ್ಠ ಒಬ್ಬರನ್ನು ಪ್ರತಿನಿಧಿಯಾಗಿ ಆಹ್ವಾನಿಸುವ ಯೋಜನೆಯೂ ಇದೆ ಎಂದು ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ನಿರ್ವಣವಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರದಲ್ಲಿನ ಪ್ರತಿಷ್ಠಾಪನೆ ನೇತೃತ್ವವನ್ನು ಶಿವಾಜಿ ಪುರೋಹಿತರ ವಂಶಸ್ಥ, ವಾರಾಣಸಿಯ ವೈದಿಕ ಸಂಪ್ರದಾಯದ ವಿದ್ವಾಂಸ, 86 ವರ್ಷದ ಹಿರಿಯ ಪಂಡಿತ್ ಲಕ್ಷ್ಮೀಕಾಂತ ಮಥುರನಾಥ ದೀಕ್ಷಿತ್ ವಹಿಸಲಿದ್ದಾರೆ. ಇವರು ಹದಿನೇಳನೇ ಶತಮಾನದಲ್ಲಿ ಕಾಶಿಯ ಪ್ರಸಿದ್ಧ ವಿದ್ವಾಂಸ, ಛತ್ರಪತಿ ಶಿವಾಜಿಯ ಪಟ್ಟಾಭಿಷೇಕದ ನೇತೃತ್ವ ವಹಿಸಿದ್ದ ಗಂಗಾಭಟ್ಟ ಅವರ ವಂಶಸ್ಥರು.

ಅಯೋಧ್ಯೆಯ ರಾಮಮಂದಿರದಲ್ಲಿ 2024ರ ಜ. 22ರಂದು ನೆರವೇರಲಿರುವ ರಾಮ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಕಾರ್ಯದ ಮುಂದಾಳತ್ವವನ್ನು ಲಕ್ಷ್ಮೀಕಾಂತ ದೀಕ್ಷಿತ್ ವಹಿಸಲಿದ್ದಾರೆ. ಈ ಪ್ರತಿಷ್ಠಾಪನೆಯಲ್ಲಿ ದೇಶಾದ್ಯಂತದ ವಿವಿಧ ಭಾಗಗಳ ವೇದಪರಿಣತ 121 ವಿದ್ವಾಂಸರು ಭಾಗಿಯಾಗಲಿದ್ದು, ಆ ಪೈಕಿ ವಾರಾಣಸಿಯ 40ಕ್ಕೂ ಅಧಿಕ ವಿದ್ವಾಂಸರು ಇರಲಿದ್ದಾರೆ.

ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಜ. 16ರಂದೇ ಕೆಲವೊಂದು ಪೂಜೆ ಆಚರಣೆಗಳು ಆರಂಭವಾಗಲಿವೆ. ಜ. 17ರಂದು ಜಲಯಾತ್ರೆ, ತೀರ್ಥ, ಕಲಶ ಪೂಜೆ, ಕಲಶಯಾತ್ರೆಗಳು ನಡೆಯಲಿವೆ. ಜ. 22ರ ಧಾರ್ವಿುಕ ವಿಧಿ-ವಿಧಾನಗಳಲ್ಲಿ ಲಕ್ಷ್ಮೀಕಾಂತ ಮಥುರನಾಥ ದೀಕ್ಷಿತ್ ಪ್ರಮುಖ ಪಾತ್ರ ವಹಿಸಲಿದ್ದಾರೆ.


ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized23 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
Uncategorized22 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized10 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ11 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ4 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ದಕ್ಷಿಣ ಕನ್ನಡ12 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ11 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್10 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು


















