ಕೊಡಗು
Blackmail ಕೊಡಗು : 64ರ ಮಾಜಿ ಯೋಧನಿಗೆ ಮದುವೆಗೆ ಯುವತಿ ತೋರಿಸಿ, ಹೋಂಸ್ಟೇಯಲ್ಲಿ ತಂಗಲು ಅವಕಾಶ ಕಲ್ಪಿಸಿ ಬ್ಲ್ಯಾಕ್‌ಮೇಲ್ – 10 ಲಕ್ಷ ರು. ಪಡೆದು ಪರಾರಿಯಾದ ಕಡಬ ಹಾಗೂ ಬಂಟ್ವಾಳದ ಯುವಕರ ಸಹಿತ ಮೂವರ ಬಂಧನ
ಕೇರಳದ (Kerala) ಮಾಜಿ ಯೋಧರೊಬ್ಬರಿಗೆ (Soldier) ಮದುವೆ ಮಾಡಿಸುವುದಾಗಿ ನಂಬಿಸಿ ಹೋಮ್ ಸ್ಟೇ ಗೆ ಕರೆದುಕೊಂಡು ಹೋಗಿ ಮಹಿಳೆಯನ್ನು ತೋರಿಸಿ ಮದುವೆಯ ನಾಟಕವಾಡಿ ಬಳಿಕ ಅದೇ ಫೋಟೊ ಇಟ್ಕೊಂಡು ಹಣ ಲಪಟಾಯಿಸಿದ ಪ್ರಕರಣವೊಂದು ಕೊಡಗು ಜಿಲ್ಲೆಯಿಂದ ವರದಿಯಾಗಿದೆ. 64ರ ಹರೆಯದ ಮಾಜಿ ಯೊಧನಿಗೆ ವಂಚಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದು, ಇನ್ನೊರ್ವ ತಪ್ಪಿಸಿಕೊಂಡಿದ್ದಾನೆ.
ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29,) ಕಡಬದ ನಿವಾಸಿ ಸಾಧಿಕ್, (30) ಮತ್ತೊಬ್ಬ ಆರೋಪಿ ಫೈಸುಲ್ ಬಂಧಿತರು.ಈತ ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ. . ಇನ್ನೋರ್ವ ಆರೋಪಿ ಅಮೀರ್‌ತಲೆಮರೆಸಿಕೊಂಡಿದ್ದಾನೆ.
ಬಂಧಿತರಿಂದ ಮಾಜಿ ಯೋಧನ ಬಳಿಯಿಂದ ಪೀಕಿಸಿದ 8 ಲಕ್ಷ ರೂ. ನಗದು ಹಾಗೂ 2,00,000 ರೂ. ಚೆಕ್ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮಾಜಿ ಯೋಧನನ್ನು ವಂಚಿಸಲು ಬಳಸಿದ ಮಹಿಳೆಯನ್ನು ಬಂಧಿಸಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ.
ಕೇರಳದ ಎರ್ನಾಕುಲಂ ಜಿಲ್ಲೆಯ ನಿವಾಸಿ 64 ವಯಸ್ಸಿನ ಮಾಜಿ ಯೋಧ ಜಾನ್ ಮ್ಯಾಥ್ಯು ಮೋಸ ಹೋದವರು. ಮೊದಲಿಗೆ ಆರೋಪಿಗಳು ಇವರನ್ನು ಮದುವೆಯಾಗುವಂತೆ ಪುಸಲಾಯಿಸಿದ್ದಾರೆ. ಮದುವೆಯಾಗಲು ಒಳ್ಳೆಯ ಒಂದು ಹುಡುಗಿ ಇದ್ದಾಳೆ ಎಂದು ಹೇಳಿ ಅವರನ್ನು ನಂಬಿಸಿದ ವಂಚಕರು ನವೆಂಬರ್ 26ರಂದು ಮಡಿಕೇರಿಯ ಹೋಂಸ್ಟೇಯೊಂದಕ್ಕೆ ಕರೆಸಿದ್ದಾರೆ. ಅಲ್ಲಿ ಮಹಿಳೆಯೊಬ್ಬರನ್ನು ತೋರಿಸಿದ್ದಾರೆ. ಬಳಿಕ ಅಲ್ಲಿಯೇ ಜಾನ್ ಮ್ಯಾಥ್ಯು ಹಾಗೂ ಆ ಮಹಿಳೆಗೆ ಮದುವೆ ಮಾಡಿಸಿ, ಇಬ್ಬರಿಗೂ ಹೋಂಸ್ಟೇನಲ್ಲೇ ಅಂದು ತಂಗಲು ಅವಕಾಶ ನೀಡಿದ್ದಾರೆ.
ನಂತರ ಅದೇ ದಿನ ಸಂಜೆ ಆರೋಪಿಗಳು ಮದುವೆಯ ಫೋಟೋವನ್ನು ಜಾನ್ ಅವರಿಗೆ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ 10 ಲಕ್ಷ ರು.ಗೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ದರೆ ಫೋಟೋವನ್ನು ಕುಟುಂಬದವರಿಗೆ ತೋರಿಸುವುದಾಗಿ ಬೆದರಿಸಿದ್ದಾರೆ. ಜಾನ್ ಅವರಿಂದ 8 ಲಕ್ಷನಗದು ಹಾಗೂ 2 ಲಕ್ಷ ರೂಪಾಯಿ ಚೆಕ್ ಪಡೆದು ಆರೋಪಿಗಳು ಪರಾರಿಯಾಗಿದ್ದರು.
ವಂಚನೆಗೊಳಗಾದ ಜಾನ್ ಮ್ಯಾಥ್ಯು ಅವರು, ಮಡಿಕೇರಿ ಪೊಲೀಸರಿಗೆ ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಂದ ನಗದು, 3 ಮೊಬೈಲ್ ಹಾಗೂ ಚೆಕ್ ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಮಡಿಕೇರಿ ಡಿವೈಎಸ್‌ಪಿ ಜಗದೀಶ್ ಎಂ., ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ, ಡಿಸಿಆರ್‌ಬಿ ಇನ್ಸ್‌ಪೆಕ್ಟರ್ ಐ.ಪಿ. ಮೇದಪ್ಪ, ನಗರ ಠಾಣಾಧಿಕಾರಿ ಲೋಕೇಶ್, ಪೊಲೀಸ್ ಸಿಬ್ಬಂದಿ, ಮಹಿಳಾ ಸಿಬ್ಬಂದಿ ಭಾಗವಹಿಸಿದ್ದರು.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್‌ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು
Kodagu-ಕೊಡಗಿನಲ್ಲಿ ವರುಣನ ಅಬ್ಬರ: ಮರಳಿ ಮೈದುಂಬಿದ ಭಾಗಮಂಡಲದ ತ್ರಿವೇಣಿ ಸಂಗಮ..!
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಜಲಾವೃತಗೊಂಡ ತಟದ ಪ್ರದೇಶಗಳು:
ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ತಟದಲ್ಲಿರುವ ಪ್ರವಾಸಿ ಉದ್ಯಾನವನ ಹಾಗೂ ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ನಿವಾಸಿಗಳು ಮತ್ತು ರೈತರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.
-
ಮಂಗಳೂರು16 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized11 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!


















