Connect with us

ದಕ್ಷಿಣ ಕನ್ನಡ

Demond for Action against student 6ನೇ ತರಗತಿಯ ವಿದ್ಯಾರ್ಥಿಯ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಉಳಿದ 122 ಮಕ್ಕಳ ಪೋಷಕರಿಂದ ಪ್ರತಿಭಟನೆ – ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಪುತ್ತೂರಿನ ಸರಕಾರಿ ಶಾಲೆ – ಅಷ್ಟಕ್ಕೂ ಆ ವಿದ್ಯಾರ್ಥಿ ಮಾಡಿದ್ದೇನು ?

Published

on



Ad Widget

Ad Widget

Ad Widget

Ad Widget

Demond for Action against student ಈಶ್ವರ ಮಂಗಲ: 12ರ ಹರೆಯದ ಬಾಲಕನೊಬ್ಬನನ್ನು ಶಾಲೆಯಿಂದ ಡಿಬಾರ್‌ ಮಾಡಬೇಕೆಂದು ಅಗ್ರಹಿಸಿ ಆ ಶಾಲೆಯ ಇತರ ಮಕ್ಕಳ ಪೋಷಕರು ಪ್ರತಿಭಟನೆ ನಡೆಸಿದ ಅಪರೂಪದ ವಿದ್ಯಮಾನಕ್ಕೆ ಈಶ್ವರಮಂಗಲ ಬಳಿಯ ಮೇನಾಲ ಸರಕಾರಿ ಶಾಲೆ ಸೋಮವಾರ ಸಾಕ್ಷಿಯಾಯಿತು.

Ad Widget

Ad Widget

Ad Widget

Ad Widget

ಮೇನಾಲ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಆರನೇ ತರಗತಿಯ ವಿದ್ಯಾರ್ಥಿ ದುರ್ವರ್ತನೆ ತೋರುತ್ತಿದ್ದು ಇದರಿಂದ ಇಡೀ ಶಾಲೆಗೆ ತೊಂದರೆಯಾಗುತ್ತಿದ್ದೆಯೆಂದು ಸೋಮವಾರ ತುರ್ತು ಸಭೆ ಸೇರಿದ ಆ ಶಾಲೆಯ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಳಿಕ ಅವರು ಆ ವಿದ್ಯಾರ್ಥಿಯನ್ನು ಡಿಬಾರ್‌ ಮಾಡಬೇಕು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮೇಲಾಧಿಕಾರಿಗಳು ಶಾಲೆಗೆ ಭೇಟಿ ನೀಡಬೇಕು ಎಂಬ ಆಗ್ರಹ ಈ ವೇಳೆ ಕೇಳಿ ಬಂತು. ಈ ವಿದ್ಯಾರ್ಥಿಯ ಕುರಿತಾಗಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದರೂ, ಯಾವುದೇ ಕ್ರಮಕೈಗೊಂಡಿರದ ಹಿನ್ನಲೆಯಲ್ಲಿ  ಈಪ್ರತಿಭಟನೆ  ಮಾಡುತ್ತಿದ್ದೇವೆಂದು ಪೋಷಕರು ತಿಳಿಸಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget

ಮೇನಾಲ ಸರಕಾರಿ ಶಾಲೆಯಲ್ಲಿ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 6ನೇ ತರಗತಿ ವಿದ್ಯಾರ್ಥಿಯೊಬ್ಬ  ಉಳಿದ ವಿದ್ಯಾರ್ಥಿಗಳಿಗೆ ಕೀಟಲೆ, ಉಪದ್ರ ,ಕಲ್ಲು ಬಿಸಾಡುವುದು, ನಿಷೇಧಿತ ವಸ್ತು ಸೇವನೆ ಮುಂತಾದ ದುರ್ವರ್ತನೆ  ತೋರುತ್ತಿದ್ದು, ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದೆ  ಎನ್ನುವುದು ಉಳಿದ ವಿದ್ಯಾರ್ಥಿಗಳ ಪೋಷಕರ ಅಳಲು.  ಉಳಿದ 122 ಮಕ್ಕಳ ಪೋಷಕರು ಈ ಪ್ರತಿಭಟನೆ ಹಾಗೂ ತುರ್ತು ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.  

Ad Widget

Ad Widget <> Ad Widget

Gold Rate today : ಅಭರಣ ಪ್ರಿಯರಿಗೆ ಸಂತಸದ ಸುದ್ದಿ : ಚಿನ್ನ, ಬೆಳ್ಳಿ ಮತ್ತಷ್ಟೂ ಅಗ್ಗ



Ad Widget

ನಿರಂತರ  ದುರ್ವರ್ತನೆ ತೋರುತ್ತಿರುವ  ವಿದ್ಯಾರ್ಥಿ ಶಾಲೆಗೆ ಬಂದರೆ  122 ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ.  ದುರ್ವರ್ತನೆ ತೋರಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿಯ ತಾಯಿಗೆ ಕೌನ್ಸಿಲಿಂಗ್  ಮಾಡಬೇಕು  ಎಂಬ ಆಗ್ರಹ ಪೋಷಕರಿಂದ ಬಂತು.

Ad Widget

Ad Widget

ಮಾತನಾಡಿ ಬೊಂದೆಲ್ ನಲ್ಲಿರುವ  ಬಾಲ ಮಂದಿರಕ್ಕೆ ವಿದ್ಯಾರ್ಥಿಯನ್ನು ಕಳುಹಿಸುವ ಬಗ್ಗೆ, ಇಲ್ಲವೇ  ಶಾಲಾ ಕೊಠಡಿ ಯಲ್ಲಿ ಶಿಕ್ಷಕಿಯನ್ನು ಇಟ್ಟು ತರಗತಿ ನಡೆಸುವುದಾಗಿ ಈ ವೇಳೆ  ಶಿಕ್ಷಣ ಸಂಯೋಜಕಿ ಅಮೃತಾ ಕಲಾ ತಿಳಿಸಿದರು. ಆದರೆ ಸಭೆಯಲ್ಲಿದ್ದ  ಪೋಷಕರು ಇದಕ್ಕೆ ಅಸಮ್ಮತಿ ಸೂಚಿಸಿದ್ದು,  ಇಂಥ ಘಟನೆಗಳು ಕೆಲವು ಸಲ ನಡೆದಿವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಬಳಿಕ   ಸಭೆಯಿಂದ ಹೊರ ಬಂದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.  ನಂತರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ದೌಡಾಯಿಸಿದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ

 ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ,  ನಗರ ಸಭೆಯ ಚುನಾವಣಾ ಕರ್ತವ್ಯದಲ್ಲಿ ವ್ಯಸ್ತರಾಗಿರುವ ಶಿಕ್ಷಣಾಧಿಕಾರಿಯವರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡರವರನ್ನು ಶಾಲೆಗೆ ಕಳುಹಿಸಿದರು.  ಶಾಲೆಗೆ ಆಗಮಿಸಿದ ಅವರು ವಿದ್ಯಾರ್ಥಿಗಳ  ಪೋಷಕರೊಂದಿಗೆ ಮಾತುಕತೆ ನಡೆಸಿದರು. ಬಳಿಕ  ಮಂಗಳವಾರ ಶಾಲೆಗೆ ಮಕ್ಕಳ ಹಕ್ಕು ಮತ್ತು ಕಲ್ಯಾಣಾಧಿಕಾರಿಗಳ ಸಮಿತಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಭೇಟಿ ನೀಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ ಮೇರೆಗೆ ಪೋಷಕರು ಪ್ರತಿಭಟನೆ ಹಿಂತೆಗೆದುಕೊಂಡಿದ್ದರು.

KIOCL Recruitment 2023: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿಗೆ ಅರ್ಜಿ ಆಹ್ವಾನ

  ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಅಬ್ದುಲ್ ಮೆಣಸಿನಕಾನ, ಉಪಾಧ್ಯಕ್ಷೆ  ಮನೋರಮ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೌಜಿಯ,ಉಪಾಧ್ಯಕ್ಷ ರಾಮ ಮೇನಾಲ, ಸದಸ್ಯ ರಾದ ಇಬ್ರಾಹಿಂ ,ರಮೇಶ್ ರೈ, ವೆಂಕಪ್ಪ ,ಶಶಿಕಲಾ ಮುಖ್ಯ ಶಿಕ್ಷಕಿ ಜಲಜ ಶಿಕ್ಷಕಿಯರಾದ ವಾಣಿಶ್ರೀ. ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading