ರಾಜಕೀಯ
ಮಧ್ಯಪ್ರದೇಶದ ನೂತನ ಸಿಎಂ ಆಗಿ ಹೆಸರಾಂತ ಉದ್ಯಮಿ ಮೋಹನ್ ಯಾದವ್ ಆಯ್ಕೆ
ದೆಹಲಿ ಡಿ.11: ಒಂದು ವಾರದ ಕುತೂಹಲಕ್ಕೆ ತೆರೆ ಎಳೆದು ಬಿಜೆಪಿ (BJP) ಇಂದು ಮೋಹನ್ ಯಾದವ್ (Mohan Yadav) ಅವರನ್ನು ಮಧ್ಯಪ್ರದೇಶದ (Madhya Pradesh)ಹೊಸ ಮುಖ್ಯಮಂತ್ರಿ ಎಂದು ಘೋಷಿಸಿತು. ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನವೆಂಬರ್ 17 ರಂದು ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆದುಕೊಂಡಿದೆ. ಡಿಸೆಂಬರ್ 3 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಯಿತು.
ಮೂವರು ಕೇಂದ್ರ ವೀಕ್ಷಕರು ಭಾಗವಹಿಸಿದ್ದ ರಾಜ್ಯದ ರಾಜಧಾನಿ ಭೋಪಾಲ್ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ 58 ವರ್ಷದ ಮೋಹನ್ ಯಾದವ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಹೊಸ ಸಿಎಂ ಮುಖ ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮೋಹನ್ ಯಾದವ್ ಉಜ್ಜಯಿನಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಅವರು ಮೊದಲು 2013 ರಲ್ಲಿ ಶಾಸಕರಾಗಿ ಆಯ್ಕೆಯಾದರೆ. ಆನಂತರ 2018 ರಲ್ಲಿ ಎರಡನೇ ಬಾರಿಗೆ ಅದೇ ಸ್ಥಾನವನ್ನು ಗೆದ್ದರು. ಹೆಸರಾಂತ ಉದ್ಯಮಿಯೂ ಆಗಿರುವ ಇವರು ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.
ವಿಕ್ರಮ್ ವಿಶ್ವವಿದ್ಯಾಲಯದಿಂದ ಪಿಎಚ್ಡಿ
ಮಾರ್ಚ್ 1965 ರಲ್ಲಿ ಉಜ್ಜಯಿನಿಯಲ್ಲಿ ಜನಿಸಿದ ಮೋಹನ್ ಯಾದವ್ ಅವರು ವಿದ್ಯಾರ್ಥಿಯಾಗಿದ್ದಾಗ ರಾಜಕೀಯ ಪ್ರವೇಶಿಸಿದರು. ತನ್ನ ವ್ಯಾಪಾರ ಮತ್ತು ರಾಜಕೀಯ ವೃತ್ತಿಜೀವನವನ್ನು ಏಕಕಾಲದಲ್ಲಿ ಮುಂದುವರಿಸಿದ ಅವರು ವಿಕ್ರಮ್ ವಿಶ್ವವಿದ್ಯಾಲಯದಿಂದ ತಮ್ಮ ಪಿಎಚ್ಡಿಯನ್ನು ಪೂರ್ಣಗೊಳಿಸಿದರು.
2020 ರಲ್ಲಿ, ಅಗರ್ನಲ್ಲಿ ನಡೆದ ಉಪಚುನಾವಣೆಯಲ್ಲಿ ಚುನಾವಣಾ ಆಯೋಗವು ‘ಅನುಚಿತ ಭಾಷೆ’ಯನ್ನು ಬಳಸುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಚಾರ ಮಾಡದಂತೆ ಚುನಾವಣಾ ಆಯೋಗವು ನಿಷೇಧಿಸಿತು.
ವಿದ್ಯಾರ್ಥಿ ರಾಜಕೀಯ
1982 ರಲ್ಲಿ, ಅವರು ಮಾಧವ್ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಮತ್ತು 1984 ರಲ್ಲಿ ಅದರ ಅಧ್ಯಕ್ಷರಾಗಿ ಆಯ್ಕೆಯಾದರು. 1997 ರಲ್ಲಿ, ಅವರು BJYM ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇರಿದರು. 1998 ರಲ್ಲಿ, ಅವರು ಪಶ್ಚಿಮ ರೈಲ್ವೆ ಮಂಡಳಿಯ ಸಲಹಾ ಸಮಿತಿಯ ಸದಸ್ಯರಾಗಿದ್ದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
Uncategorized22 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ9 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ9 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು8 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್9 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ7 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ8 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಅಪರಾಧ4 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ















