ಸುಳ್ಯ
Puttur Sri Mahalingeshwara Temple ಡಿ.12: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ – ಇಲ್ಲಿದೆ ಪೂರ್ತಿ ದಿನದ ಕಾರ್ಯಕ್ರಮದ ವಿವರ
Puttur Sri Mahalingeshwara Temple ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವವು ಡಿ.12 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ನಡೆಯಲಿದೆ.
ಧಾರ್ಮಿಕ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ದೀಪ ನಮನ ಹಾಗೂ ಧಾರ್ಮಿಕ ಸತ್ಸಂಗವು ಶ್ಲೋಕ, ಭಜನೆ, ಆಚಾರ ವಿಚಾರ ಪ್ರಸ್ತುತಿಯೊಂದಿಗೆ ನಡೆಯಲಿದೆ. ಶಿಕ್ಷಣಾರ್ಥಿಗಳು ತಲಾ 48 ದೀಪಗಳನ್ನು ಹಚ್ಚಿ ದೇವರಿಗೆ ದೀಪ ನಮನ ಮಾಡಲಿದ್ದಾರೆ. ರಥಮ0ದಿರದ ಬಳಿ ಕುಂಬಾರರ ಗುಡಿ ಕೈಗಾರಿಕೆಯ ಸ್ಟಾಲ್ ಮಾಡಲಾಗುತ್ತಿದ್ದು, ರೂ. 2 ರಂತೆ ಹಣತೆಯು ಭಕ್ತರಿಗೆ ಲಭ್ಯವಾಗಲಿದೆ. ಎಣ್ಣೆ ಮತ್ತು ಬತ್ತಿಯನ್ನು ದೇವಳದ ವತಿಯಿಂದ ಒದಗಿಸಲಾಗುತ್ತದೆ.
ವಿವಿಧ ಮಮ ಪರಿವಾರದ ಸದಸ್ಯರು, ಯೋಗ ಶಿಕ್ಷಣದ ಸದಸ್ಯರು, ನಿತ್ಯ ಕರಸೇವಕರು, ಭಜನಾ ಮಂಡಳಿಗಳು, ವೇದ ಸಂವರ್ಧನ ಸಮಿತಿ, ಆರ್ಟ್ ಆಫ್ ಲಿವಿಂಗ್, ವಿವಿಧ ವಾಣಿಜ್ಯ ಸಂಘ ಸಂಸ್ಥೆಗಳು ಹಾಗೂ ಭಕ್ತಾಭಿಮಾನಿಗಳು ಒಟ್ಟು ಸೇರಿ ದೇವಳದ ಆವರಣದ 18 ಎಕರೆ ಜಾಗದಲ್ಲಿ ರಂಗೋಲಿ ಬಿಡಿಸಿ ದೀಪ ಬೆಳಗಿಸಲಿದ್ದಾರೆ.
ಡಿ.11 ರಂದು ರಾತ್ರಿ 8 ಗಂಟೆಗೆ ದೇವಸ್ಥಾನದ ವತಿಯಿಂದ ಶಿವಧೂತೆ ಗುಳಿಗೆ ತುಳು ನಾಟಕ ಪ್ರದರ್ಶನವನ್ನು ಸಂಯೋಜಿಸಲಾಗಿದೆ. ಡಿ.9 ರಂದು ಸಂಜೆ ಭಕ್ತಾದಿಗಳ ಸಭೆಯನ್ನು ದೇವಳದ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆಸಿ ಕಾರ್ಯಕ್ರಮಕ್ಕೆ ಅಂತಿಮ ರೂಪುರೇಷೆ ನೀಡುವುದು ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ತಿಳಿಸಿದ್ದಾರೆ.
Gold Rate today : ಅಭರಣ ಪ್ರಿಯರಿಗೆ ಸಂತಸದ ಸುದ್ದಿ : ಚಿನ್ನ, ಬೆಳ್ಳಿ ಮತ್ತಷ್ಟೂ ಅಗ್ಗ
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಶಿಕ್ಷಣ12 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ5 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ10 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ11 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ10 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ10 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ11 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ರಾಜಕೀಯ5 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ















