ಬಿಗ್ ನ್ಯೂಸ್
Google search 2023: 2023ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಹುಡುಕಿದ್ದೇನು? ಸಕತ್ ಇಂಟ್ರೆಸ್ಟಿಂಗ್ ಪಟ್ಟಿ – ಟಾಪ್ 1 ನಲ್ಲಿದೆ ಭಾರತದ ಕೀರ್ತಿ ಪತಾಕೆ ಹಾರಿದ ವಿಷಯ
Google News : ಮುಂಬಯಿ: 2023 ರಲ್ಲಿ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚು ಯಾವ ವಿಷಯಗಳ ಬಗ್ಗೆ ಹುಡುಕಿದ್ದಾರೆ(google search) ಎಂಬುದರ ಬಗ್ಗೆ ಪಟ್ಟಿ ಹೊರಬಿದ್ದಿದೆ. ಭಾರತದ ಕೆಲ ಸಿನಿಮಾಗಳು ಹಾಗೂ ಸೆಲೆಬ್ರಿಟಿಗಳ ಹೆಸರುಗಳ ಜೊತೆಗೆ ಅನೇಕ ವಿಚಾರಗಳು ಪಟ್ಟಿಯಲ್ಲಿವೆ.
ಭಾರತೀಯರು ಈ ವರ್ಷ ಗೂಗಲ್ ನಲ್ಲಿ (google news India)ಅತೀ ಹೆಚ್ಚು ಯಾವೆಲ್ಲಾ ವಿಷಯಗಳ ಬಗ್ಗೆ ಹುಡುಕಿದ್ದಾರೆ ಹಾಗೂ ಯಾವ ಪ್ರಶ್ನೆಗಳನ್ನು ಕೇಳಿದ್ದಾರೆ,ಯಾವ ಸಿನಿಮಾಗಳನ್ನು ಹುಡುಕಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ..
ಇಯರ್ ಇನ್ ಸರ್ಚ್ 2023ʼ ರಲ್ಲಿ ಭಾರತೀಯರು ಗೂಗಲ್ ನಲ್ಲಿ ಹುಡುಕಾಟ ನಡೆಸಿದ ಪ್ರಮುಖ ಟಾಪ್ 110 ಈವೆಂಟ್‌ಗಳು ಇಲ್ಲಿವೆ:
1.ಚಂದ್ರಯಾನ -3
2.ಕರ್ನಾಟಕ ಚುನಾವಣೆ 3.ಫಲಿತಾಂಶ
4.ಇಸ್ರೇಲ್ ಸುದ್ದಿ
5.ಸತೀಶ್ ಕೌಶಿಕ್
6.ಬಜೆಟ್ 2023
7.ಟರ್ಕಿ ಭೂಕಂಪ
8.ಅತೀಕ್ ಅಹ್ಮದ್
9.ಮ್ಯಾಥ್ಯೂ ಪೆರ್ರಿ
10.ಮಣಿಪುರ ಸುದ್ದಿ
11.ಒಡಿಶಾ ರೈಲು ದುರಂತ
ಇಸ್ರೇಲ್ – ಹಮಾಸ್ ನಡುವಿನ ಸಂಘರ್ಘ ಈ ದಿನದವರೆಗೂ ನಡೆಯುತ್ತಿದೆ. ಬಾಲಿವುಡ್ ನಟ ಸತೀಶ್ ಕೌಶಿಕ್ ನಿಧನ ಹಾಗೂ ಹಾಲಿವುಡ್ ʼಫ್ರೆಂಡ್ಸ್ʼ ನಟನ ನಿಧನದ ಬಗ್ಗೆ ಭಾರತೀಯರು ಹೆಚ್ಚು ಹುಡುಕಾಡಿದ್ದರು.
ಗೂಗಲ್ ‘ಇಯರ್ ಇನ್ ಸರ್ಚ್ 2023’ನಲ್ಲಿ ಗೂಗಲ್ ನಲ್ಲಿ ಭಾರತೀಯರು ಈ ಕೆಳಗಿನ ವಿಚಾರಗಳ ಬಗ್ಗೆ ಹೆಚ್ಚು ಪ್ರಶ್ನೆ ಮಾಡಿ ಉತ್ತರವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ
1G20 ಎಂದರೇನು
2.UCC ಎಂದರೇನು
3.ChatGPT ಎಂದರೇನು
4.ಹಮಾಸ್ ಎಂದರೇನು
- 28 ಸೆಪ್ಟೆಂಬರ್ 2023 ರಂದು ಏನಾಗಿದೆ
6.ಚಂದ್ರಯಾನ ಎಂದರೇನು
- ಇನ್ಸ್ಟ್ರಾಗ್ರಾಮ್ ನಲ್ಲಿ ನಲ್ಲಿ ಥ್ರೆಡ್ಸ್ ಎಂದರೇನು
- ಕ್ರಿಕೆಟ್ ನಲ್ಲಿ ಟೈಮ್ಡ್ ಔಟ್ ಎಂದರೇನು
- ಐಪಿಎಲ್ ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಎಂದರೇನು
10.ಸೆಂಗೋಲ್ ಎಂದರೇನು

ಇದಲ್ಲದೆ ಗೂಗಲ್ ಇಯರ್ ಇನ್ ಸರ್ಚ್ ನಲ್ಲಿ ಹೇಗೆ ಎನ್ನುವುದರ ಬಗ್ಗೆ ಹಾಗೂ ಮನೆ ಮದ್ದು ಮುಂತಾದ ವಿಚಾರಗಳ ಬಗ್ಗೆಯೂ ಭಾರತೀಯರು ಈ ವರ್ಷ ಹೆಚ್ಚಾಗಿ ಹುಡುಕಾಡಿದ್ದಾರೆ. ಅದರ ಪ್ರಮುಖ ಪಟ್ಟಿ ಇಲ್ಲಿದೆ:
1.ಮನೆಮದ್ದುಗಳೊಂದಿಗೆ ಚರ್ಮ ಮತ್ತು ಕೂದಲಿಗೆ ಸೂರ್ಯನ ಹಾನಿಯನ್ನು ತಡೆಯುವುದು ಹೇಗೆ
2.YouTube ನಲ್ಲಿ ಶೀಘ್ರವಾಗಿ 5 ಸಾವಿರ ಫಾಲೋವರ್ಸ್ ಗಳನ್ನು ಪಡೆಯುವುದು ಹೇಗೆ
3.ಕಬಡ್ಡಿಯಲ್ಲಿ ಉತ್ತಮ ಸಾಧನೆ ಮಾಡುವುದು ಹೇಗೆ
4.ಕಾರಿನ ಮೈಲೇಜ್ ಅನ್ನು ಹೇಗೆ ಸುಧಾರಿಸುವುದು
5.ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗುವುದು ಹೇಗೆ
6.ರಕ್ಷಾಬಂಧನದಂದು ನನ್ನ ಸಹೋದರಿಗೆ ಹೇಗೆ ಸರ್ಪೈಸ್ ನೀಡುವುದು
7.ಶುದ್ಧ ಕಾಂಜೀವರಂ ರೇಷ್ಮೆ ಸೀರೆಯನ್ನು ಹೇಗೆ ಗುರುತಿಸುವುದು
8.ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಅನ್ನು ಹೇಗೆ ಪರಿಶೀಲಿಸುವುದು
9.WhatsApp ಚಾನಲ್ ಅನ್ನು ಹೇಗೆ ರಚಿಸುವುದು
10.Instagram ನಲ್ಲಿ ನೀಲಿ ಟಿಕ್ ಅನ್ನು ಹೇಗೆ ಪಡೆಯುವುದು
ಇನ್ನು ಈ ವರ್ಷ ಭಾರತೀಯರಯ ಗೂಗಲ್ ನಲ್ಲಿ ಕ್ರೀಡೆ ಬಗ್ಗೆ ಅತೀ ಹೆಚ್ಚು ಹುಡುಕಿದ ಪಟ್ಟಿ ಇಲ್ಲಿದೆ..
1.ಇಂಡಿಯನ್ ಪ್ರೀಮಿಯರ್ ಲೀಗ್
2.ಕ್ರಿಕೆಟ್ ವಿಶ್ವಕಪ್
3.ಏಷ್ಯಾ ಕಪ್
4.ಮಹಿಳಾ ಪ್ರೀಮಿಯರ್ ಲೀಗ್
5.ಏಷ್ಯನ್ ಗೇಮ್ಸ್
6.ಇಂಡಿಯನ್ ಸೂಪರ್ ಲೀಗ್
7.ಪಾಕಿಸ್ಥಾನ ಸೂಪರ್ ಲೀಗ್
8.ದಿ ಆಶಸ್
9ಮಹಿಳಾ ಕ್ರಿಕೆಟ್ ವಿಶ್ವಕಪ್
10.SA20
ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚು ಬಾರಿ ಹುಡುಕಿದ ಸಿನಿಮಾಗಳ ಪಟ್ಟಿ..

1.ಜವಾನ್
2.ಗದರ್ -2
3.ಓಪನ್ ಹೈಮರ್
4.ಆದಿಪುರುಷ್
5.ಪಠಾಣ್
6.ದಿ ಕೇರಳ ಸ್ಟೋರಿ
7.ಜೈಲರ್
8.ಲಿಯೋ
9.ಟೈಗರ್ -3
10.ವಾರಿಸು
ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚು ಹುಡುಕಿದ ವ್ಯಕ್ತಿಗಳು:
1.ಕಿಯಾರಾ ಅಡ್ವಾಣಿ
2.ಶುಭಮನ್ ಗಿಲ್
- ರಚಿನ್ ರವೀಂದ್ರ
- ಮೊಹಮ್ಮದ್ ಶಮಿ
- ಎಲ್ವಿಶ್ ಯಾದವ್
- ಸಿದ್ಧಾರ್ಥ್ ಮಲ್ಹೋತ್ರಾ
- ಗ್ಲೆನ್ ಮ್ಯಾಕ್ಸ್‌ವೆಲ್
- ಡೇವಿಡ್ ಬೆಕ್ಹ್ಯಾಮ್
- ಸೂರ್ಯಕುಮಾರ್ ಯಾದವ್
- ಟ್ರಾವಿಸ್ ಹೆಡ್
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ22 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್6 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು22 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















