ಬೆಂಗಳೂರು
New Year Celebration | ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : ಹೊಸ ವರ್ಷಾಚರಣೆ ಮಾರಲು ಸಂಗ್ರಹಿಸಿಟ್ಟ 21 ಕೋಟಿ ರೂ. ಮೌಲ್ಯದ ಕೊಕೇನ್, ಎಂಡಿಎಂ ಡ್ರಗ್ಸ್ ಜಪ್ತಿ
ಬೆಂಗಳೂರು: ಹೊಸ ವರ್ಷಾಚರಣೆ (New Year Celebration) ಸಂದರ್ಭದಲ್ಲಿ ಮಾರಲು ಸಂಗ್ರಹಿಸಿಟ್ಟಿದ್ದ ₹ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ.
ನಗರದ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
‘2023 ಮುಗಿದು 2024 ಆರಂಭವಾಗಲಿದೆ. ಡಿ. 31ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ಆರೋಪಿ ಸಜ್ಜಾಗಿದ್ದ’ ಎಂದು ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಬಂಧಿತ ಆರೋಪಿ, ಪೆಡ್ಲರ್ ಆಗಿದ್ದಾನೆ. ತನ್ನದೇ ತಂಡ ಕಟ್ಟಿಕೊಂಡು ಡ್ರಗ್ಸ್ ಮಾರುತ್ತಿದ್ದ. ಈತನಿಂದ 16 ಕೆ.ಜಿ ಎಂಡಿಂಎ, ಮೂರು ತೂಕದ ಯಂತ್ರ , 500 ಗ್ರಾಂ ಕೋಕೆನ್, ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಅವರು ಹೇಳಿದರು.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ14 hours agoRaid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್16 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ8 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಅಪರಾಧ11 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















