Uncategorized
Abhishek – Aishwarya separation rumours ಐಶ್ – ಅಭಿ ವಿಚ್ಛೇದನ ವದಂತಿ ಬೆನ್ನಲ್ಲೇ ಇನ್ಸ್ಟಾಗ್ರಾಮ್ ನಲ್ಲಿ ಬಿಗ್ ಬಿ ಮಾಡಿದ್ರು ನಿಗೂಢ ಪೋಸ್ಟ್ – ಅಂದ್ರೆ ಅನುಮಾನ ನಿಜಾನ?
ಮುಂಬೈ: ತಾರಾ ಜೋಡಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಎಲ್ಲವು ಸರಿ ಇಲ್ಲ ಎನ್ನುವ ಗಾಸಿಪ್ ಗಳು ಕಳೆದ ಕೆಲ ವಾರದಿಂದ ಚಾಲ್ತಿಯಲ್ಲಿದೆ. 16 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲಿದ್ದಾರೆ, ಅವರಿಬ್ಬರು ವಿಚ್ಛೇದನ ಪಡೆಯಲಿದ್ದಾರೆ ಎಂದು ವದಂತಿ ಎಲ್ಲೆಡೆ ಹಬ್ಬಿದೆ. ಈ ಕುರಿತು ಬಚ್ಚನ್ ಕುಟುಂಬದ ಸದಸ್ಯರು ಈವರೆಗೂ ಸ್ಪಷ್ಟನೆ ನೀಡಿಲ್ಲ. ಆದರೇ ಬಚ್ಚನ್ ಕುಟಂಬದ ಯಜಮಾನ ಬೆಂಕಿ ಆರಿಸುವ ಬದಲು ಇನ್ನಷ್ಟು ತುಪ್ಪ ಸುರಿಯುವ ಕಾರ್ಯ ಮಾಡುತ್ತಿರುವುದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ಇದೆಲ್ಲವು ಆರಂಭವಾದದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಒಂದು ಫೋಟೊದಿಂದ. ಶುಭ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅಭಿಷೇಕ್ ತಮ್ಮ ಮದುವೆ ಉಂಗುರವನ್ನು ಧರಿಸಿರಲಿಲ್ಲ. 2007ರಲ್ಲಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ರು. ಆದಾದ ಬಳಿಕ ಯಾವತ್ತೂ ಅಭಿ ಕೈಯಲ್ಲಿ ಮದುವೆ ಉಂಗುರ ತಪ್ಪಿರಲಿಲ್ಲ. ಆದರೇ ಇದೆ ಮೊದಲ ಬಾರಿಗೆ ಅಭಿ ಕೈಯಲ್ಲಿ ಉಂಗುರವಿರಲಿಲ್ಲ. ಆದಾದ ಕೆಲ ದಿನಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಐಶ್ವರ್ಯಾ ಕೂಡ ವೆಡ್ಡಿಂಗ್ ರಿಂಗ್ ಧರಿಸಿರಲಿಲ್ಲ. ಈ ಎರಡು ಘಟನೆಗಳು ಇವರಿಬ್ಬರ ಮಧ್ಯೆ ಎಲ್ಲವು ಸರಿ ಇಲ್ಲ ಎಂಬ ಸಂದೇಶ ನೀಡಿತ್ತು.
ಅನ್ ಫಾಲೋ
ಆದರೇ ಈ ಇಬ್ಬರ ಸಂಸಾರವನ್ನು ಸರಿ ಮಾಡಬೇಕಿದ್ದ ಬಿಗ್ ಬಿ ಅನುಮಾನಗಳು ಇನ್ನಷ್ಟು ದಟ್ಟವಾಗುವಂತೆ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಸೊಸೆ ಐಶ್ವರ್ಯ ರೈ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅನ್ಫಾಲೋ ಮಾಡಿದ್ದಾರೆ. ಬಿಗ್ ಬಿ ಯವರು ಇನ್ಸ್ಟಾಗ್ರಾಮ್ನಲ್ಲಿ 74 ಜನರನ್ನು ಫಾಲೋ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ವಿರಾಟ್ ಕೊಹ್ಲಿ, ಶ್ವೇತಾ ಬಚ್ಚನ್ ನಂದ, ನವ್ಯಾ ನವೇಲಿ ನಂದ ಮೊದಲಾದವರು ಅಮಿತಾಭ್ ಫಾಲೋ ಮಾಡುತ್ತಿದ್ದಾರೆ. ಆದರೆ, ಈ ಲಿಸ್ಟ್ನಲ್ಲಿ ಐಶ್ವರ್ಯಾ ರೈ ಇಲ್ಲ.
ನಿಗೂಢ ಪೋಸ್ಟ್ : ಮಾಡುವುದನ್ನೂ ಮಾಡಿಯಾಗಿದೆ
ಕುಟುಂಬದ ಇತರ ಸದಸ್ಯರನ್ನು ಫಾಲೋ ಮಾಡುವ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಅವರನ್ನು ಲಿಸ್ಟ್ನಿಂದ ಹೊರಗೆ ಇಟ್ಟಿದ್ದು ಏಕೆ ಎಂಬುದು ಅನೇಕರ ಪ್ರಶ್ನೆ. ಇನ್ನು, ಐಶ್ವರ್ಯಾ ರೈ ಅವರು ಇನ್ಸ್ಟಾಗ್ರಾಮ್ನಲ್ಲಿ ಪತಿ ಅಭಿಷೇಕ್ ಅವರನ್ನು ಬಿಟ್ಟು ಬೇರೆ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದರ ಬೆನ್ನಲ್ಲೇ ಪೋಸ್ಟ್ ಒಂದನ್ನು ಶೇರ್ ಮಾಡಿರುವ ಬಿಗ್ ಬಿ “ ಎಲ್ಲವೂ ಹೇಳಿದೆ ಎಲ್ಲವನ್ನೂ ಮಾಡಿದೆ. ಮಾಡುವುದನ್ನೂ ಮಾಡಿಯಾಗಿದೆ” ಎಂದು ಬರೆದುಕೊಳ್ಳುವ ಮೂಲಕ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.
ಬಾಂಡಿಂಗ್ ಇರಲಿಲ್ಲ
ಶ್ವೇತಾ ನಂದ ಪುತ್ರ ಅಭಿನಯಿಸಿರುವ ‘ದಿ ಆರ್ಚೀಸ್’ ಫಸ್ಟ್ ಶೋಗೆ ಇಡೀ ಬಚ್ಚನ್ ಕುಟುಂಬವು ರೆಡ್ ಕಾರ್ಪೆಟ್ಗೆ ಬಂದಿತ್ತು. ಈ ವೇಳೆ ಎಲ್ಲರ ಕಣ್ಣು ಐಶ್ವರ್ಯಾ ಮತ್ತು ಅಭಿಷೇಕ್ ಮೇಲೆ ನೆಟ್ಟಿತ್ತು. ಎಂದಿನಂತೆ ಅಭಿಷೇಕ್ ಮತ್ತು ಐಶ್ವರ್ಯಾ ನಡುವೆ ಇದ್ದ ಬಾಂಡಿಂಗ್ ಈ ಬಾರಿ ಕಾಣಲಿಲ್ಲ ಎಂದು ಅಭಿಮಾನಿಗಳು ಭಾವಿಸಿದ್ದಾರೆ.
Uncategorized
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು

ಪುತ್ತೂರು, ಅ.5: ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್., ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೆ ಗುರಿಯಾದ ಆರೋಪಿ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 120/2008ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 450, 302 ಮತ್ತು 201ರ ಅಡಿಯಲ್ಲಿ ಆರೋಪಿಯಾಗಿದ್ದ ಶಾಕಿರ್‌ನನ್ನು 2016ರ ಏಪ್ರಿಲ್ 5ರಂದು ಮಂಗಳೂರು ಕಾರಾಗೃಹದಿಂದ ವಿಚಾರಣೆಗಾಗಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕರೆತರಲಾಗಿತ್ತು.
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಆತ ಯತ್ನಿಸಿದ್ದ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 224ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಅ.5ರಂದು ಆರೋಪಿಗೆ ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದರು.
Uncategorized
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ

ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅ.5ರಂದು ಬೆಳಗಿನ ಜಾವ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ದೊರೆತಿತ್ತು. ಅದರಂತೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದರು.
ಈ ವೇಳೆ ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ. ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(d) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆ ಮುಂದುವರಿಸಿದ ಪೊಲೀಸರು, ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪದ ಮೇರೆಗೆ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ವಾಹನ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Uncategorized
Mangalore-ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ; ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ
ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.
ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
-
ನಿಧನ ವಾರ್ತೆ17 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್22 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ21 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ22 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ20 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ16 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















