Uncategorized
Rashmika mandanna ಅನಿಮಲ್ ’ಬಿಗ್ ಸಕ್ಸಸ್ ಬೆನ್ನಲೆ ‘ಪುಷ್ಪ 2’! ಚಿತ್ರದ ಸ್ಕ್ರಿಪ್ಟ್ ನಲ್ಲಿ ಭಾರಿ ಬದಲಾವಣೆ – ಹೆಚ್ಚಾಗಲಿದ್ಯಾ ರಶ್ಮಿಕಾ ಪಾತ್ರದ ದೃಶ್ಯಗಳು? ಕಾರಣ ಏನು ಗೊತ್ತಾ ?
ಆಂಧ್ರಪ್ರದೇಶ: ಸದ್ಯ ಟಾಲಿವುಡ್, ಬಾಲಿವುಡ್ ಅಂಗಳದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ನಟಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. (Rashmika mandanna) ವಿಜಯ ದೇವರಕೊಂಡ ಜೊತೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡ್ತಾ ಸಕ್ಸಸ್ ಕಂಡ ನಟಿ ಬಳಿಕ ಹಿಂತುರುಗಿ ನೋಡಿದೆ ಇಲ್ಲ. ನಾಗಾರ್ಜುನ ಅಕ್ಕಿನೇನಿ, ನಾಣಿ, ಮಹೇಶ್ ಬಾಬು, ಕಾರ್ತಿ, ಅಲ್ಲು ಅರ್ಜುನ್ ಹೀಗೆ ಸೌತ್ ಸಿನಿಮಾ ರಂಗದ ಸ್ಟಾರ್ ನಟರ ಜೊತೆ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಟಾಪ್ ನಟಿಯರ ಲಿಸ್ಟ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು.

ಅಲ್ಲು ಅರ್ಜುನ್ ನಾಯಕನಟನಾಗಿ ಅಭಿನಯಿಸಿದ ಪುಷ್ಪ (pushpa) ಚಿತ್ರದ ಯಶಸ್ಸಿನ ನಂತರ ಅವರಿಗೆ ಬೇಡಿಕೆ ಇನ್ನೂ ಹೆಚ್ಚುತ್ತಿದೆ. ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಬಾಲಿವುಡ್ ಚಿತ್ರರಂಗವನ್ನೂ ಪ್ರವೇಶಿಸಿದ್ದಾರೆ. ಇತ್ತೀಚೆಗೆ ರಣಬೀರ್ ಕಪೂರ್ ಜತೆಗೆ ಅಭಿನಯದ ‘ಅನಿಮಲ್’ ಚಿತ್ರದ (Animal Movie) ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಅನಿಮಲ್ ರಿಲೀಸ್ ಆಗುವ ಮುನ್ನ ಹಾಗೂ ಆದ ಬಳಿಕವೂ ಟ್ರೆಂಡಿಂಗ್ನಲ್ಲಿರುವ ರಶ್ಮಿಕಾ ಇದೀಗ ತಮ್ಮ ಬಹುನಿರೀಕ್ಷಿತ ‘ಪುಷ್ಪ 2’ ಚಿತ್ರದ ಬಗ್ಗೆ ಯಾವ ಅಪ್ಡೇಟ್ ಕೊಡಲಿದ್ದಾರೆ ಎಂಬ ಕಾತರ ಅವರ ಅಭಿಮಾನಿಗಳಲ್ಲಿ ಹೆಚ್ಚಿದೆ.

ಭಾರತೀಯ ಚಿತ್ರರಂಗದಲ್ಲಿ ಸದ್ಯ ಬಹಳ ಬ್ಯುಸಿಯಿರುವ ನಟಿಯರ ಪೈಕಿ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಚಿತ್ರತಂಡ ನಿರೀಕ್ಷಿಸಿದಂತೆ ಉತ್ತಮ ಗಳಿಕೆ ಕಂಡ ‘ಅನಿಮಲ್’, ಸಿನಿಪ್ರೇಕ್ಷಕರಿಂದ ವ್ಯಾಪಕ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ. ಇದೆಲ್ಲದರ ಮಧ್ಯೆ ನಟಿಯ ಮುಂದಿನ ಸಿನಿಮಾ ‘ಪುಷ್ಪ2’ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ಬುಗಿಲೆದ್ದಿವೆ.
ವದಂತಿಗಳ ಪ್ರಕಾರ, ‘ಪುಷ್ಪ 2’ ಚಿತ್ರದ ನಿರ್ದೇಶಕರಾದ ಸುಕುಮಾರ್ ‘ಅನಿಮಲ್’ ಚಿತ್ರದಲ್ಲಿ ರಶ್ಮಿಕಾ ಅಭಿನಯವನ್ನು ಮೆಚ್ಚಿದ್ದಾರೆ,ರಶ್ಮಿಕಾ ಮಂದಣ್ಣ ಅವರು ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರ ಪತ್ನಿ ಪಾತ್ರ ಮಾಡಿದ್ದಾರೆ. ಈ ಚಿತ್ರದಿಂದ ಹಿಂದಿ ಬೆಲ್ಟ್ನಲ್ಲಿ ರಶ್ಮಿಕಾ ಖ್ಯಾತಿ ಮತ್ತಷ್ಟು ಹೆಚ್ಚಾಗಿದೆ. ಅವರ ಮುಂಬರುವ ಸಿನಿಮಾಗಳ ಮೇಲೆ ಜನರು ಕಣ್ಣಿಡಲಿದ್ದಾರೆ.
ಈ ಕಾರಣದಿಂದಲೇ ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾಗೆ ಈಗ ಇರುವುದಕ್ಕಿಂತ ಹೆಚ್ಚಿನ ಸ್ಕ್ರೀನ್ಸ್ಪೇಸ್ ನೀಡಲು ‘ಪುಷ್ಪ 2’ ನಿರ್ದೇಶಕ ಸುಕುಮಾರ್ ನಿರ್ಧರಿಸಿದ್ದಾರಂತೆ. ಈ ಕಾರಣದಿಂದಲೇ ಸ್ಕ್ರಿಪ್ಟ್ನಲ್ಲಿ ಕೆಲವು ಬದಲಾವಣೆಗೆ ಸುಕುಮಾರ್ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಇದು ಎಷ್ಟು ನಿಜ ಎಂಬುದು ಸದ್ಯದ ಮಟ್ಟಕ್ಕೆ ತಿಳಿದುಬಂದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತಂತೆ ಚಿತ್ರತಂಡ ಅಧಿಕೃತವಾಗಿ ತಿಳಿಸಲಿದೆಯಾ ಎಂಬುದನ್ನು ಕಾದು ನೋಡಬೇಕು.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ3 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ3 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ2 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ2 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ2 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized5 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















