Connect with us

Uncategorized

Gold rate today ಚಿನ್ನದ ದರ ಮತ್ತಷ್ಟು ಕುಸಿತ –  ಗೋಲ್ಡ್‌  ಖರೀದಿಸಲು ಇದು ಪ್ರಶಸ್ತ ಸಮಯ – ಇಲ್ಲಿದೆ ಬಂಗಾರದ ದರ

Published

on

Ad Widget

Ad Widget

Ad Widget

Ad Widget

ಹೆಂಗಳೆಯರ ನೆಚ್ಚಿನ ವಸ್ತು ಚಿನ್ನ(gold). ಇನ್ನು ಹಣವನ್ನು ಹೂಡಿಕೆ ಮಾಡಲು ಬಯಸುವವರಿಗೂ ಚಿನ್ನ ಅತಿ ಪ್ರಿಯ ವಸ್ತು. ಅದರೇ ಚಿನ್ನದ ರೇಟ್ (gold Rate today) ಪ್ರತಿದಿನ ಹಾವು ಏಣಿಯಾಟ ಆಡುತ್ತಿರುತ್ತದೆ. ಜಾಗತಿಕ ಮಟ್ಟದ ಆರ್ಥಿಕತೆ, ಹಣದುಬ್ಬರದ ಅನಿಶ್ಚಿತತೆ, ನಿರುದ್ಯೋಗ, ಬಡ್ಡಿ ದರ ಏರಿಕೆ, ಡಾಲರ್ ಎದುರು ರುಪಾಯಿ ಕುಸಿತ ಮತ್ತು ಬ್ಯಾಂಕಿಂಗ್ ಬಿಕ್ಕಟ್ಟು ಎಲ್ಲವೂ ಹಳದಿ ಲೋಹದ ದರದ (gold Price) ಮೇಲೆ ಪ್ರಭಾವ ಬೀರುತ್ತದೆ.

Ad Widget

Ad Widget

Ad Widget

Ad Widget

ತಿಂಗಳ ಹಿಂದೆ ಏರಿಕೆ ಹಾದಿಯಲ್ಲಿದ್ದ ಚಿನ್ನ ತನ್ನ ಸಾರ್ವಕಾಲಿಕ ಶ್ರೇಷ್ಟ ನೀರ್ವಹಣೆಯನ್ನು ನೀಡಿದ ಬಳಿಕ ಸದ್ಯ ಇಳಿಕೆಯತ್ತ ಮುಖ ಮಾಡಿದೆ. ಕಳೆದೊಂದು ವಾರದಿಂದ ಚಿನ್ನದ ದರಲ್ಲಿ ನಿರಂತರ ಇಳಿಕೆಯಾಗುತ್ತಿದೆ. ದೇಶದಲ್ಲಿ ಇಂದಿನ ಚಿನ್ನದ ದರ (gold Price today) ಎಷ್ಟಿದೆ ನೋಡಿಕೊಂಡು ಬರೋಣ. ದೇಶದ ಪ್ರಮುಖ ನಗರದ ಆಯಾ ದಿನದ ಚಿನ್ನ ಮತ್ತು ಬೆಳ್ಳಿಗೆ ಎಷ್ಟು ಬೆಲೆ ಇದೆ ಎಂಬುದು ಇಲ್ಲಿ ಪ್ರತೀ ದಿನ ತಿಳಿದುಕೊಳ್ಳಬಹುದಾಗಿದೆ.

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ (Bangalore Gold rate today)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,650 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,800ರೂ.
ಬೆಳ್ಳಿ ಬೆಲೆ 1 ಕೆಜಿ: 74,000 ರೂ.

Ad Widget

Ad Widget <> Ad Widget

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 56,750 ರೂಪಾಯಿ ಇತ್ತು. ಆದರೆ ಇಂದು 56,650 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 100 ರೂಪಾಯಿ ಇಳಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 61,910ರೂಪಾಯಿ ಇತ್ತು. ಆದರೆ ಇಂದು 61,800 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 110 ರೂಪಾಯಿ ಇಳಿಕೆಯಾಗಿದೆ.

Ad Widget

Ad Widget

Google search 2023: 2023ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಹುಡುಕಿದ್ದೇನು? ಸಕತ್ ಇಂಟ್ರೆಸ್ಟಿಂಗ್ ಪಟ್ಟಿ – ಟಾಪ್ 1 ನಲ್ಲಿದೆ ಭಾರತದ ಕೀರ್ತಿ ಪತಾಕೆ ಹಾರಿದ ವಿಷಯ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 56,650 ರೂ.
ಮುಂಬೈ: 56,650ರೂ.
ದೆಹಲಿ: 56,800 ರೂ.
ಕೇರಳ: 56,650 ರೂ.
ಅಹ್ಮದಾಬಾದ್: 56,700 ರೂ.
ಜೈಪುರ್: 56,800 ರೂ.

ಇಂದಿನ ಬೆಳ್ಳಿ ದರ (Silver)
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ (silver rate)
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740 ರೂ. 7400 ಹಾಗೂ ರೂ. 74,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77000 ಆಗಿದ್ದರೆ, ಮುಂಬೈನಲ್ಲಿ ರೂ. 75000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 75000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 75000 ಆಗಿದೆ.

Ad Widget
Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!