ಬಿಗ್ ನ್ಯೂಸ್
Parliment Attack | ಸಂಸತ್ ದಾಳಿಗೆ 22ನೇ ವರ್ಷಾಚರಣೆಯ ದಿನವೇ ದಾಳಿ – ಜೀವದ ಹಂಗು ತೊರೆದು ದಾಳಿಕೋರರ ತಡೆದ ಕಾಂಗ್ರೇಸ್ ಸಂಸದ ಯಾರು ಗೊತ್ತೇ..? ದಾಳಿಕೋರರನ್ನು ಹಿಗ್ಗಮುಗ್ಗ ಥಳಿಸಿದ ಸಂಸದರು: ಪಾಸ್ ನೀಡಿದ ಪ್ರತಾಪ್ ಸಿಂಹನ ವಜಾಕ್ಕೆ ಒತ್ತಾಯ
ನವದೆಹಲಿ: ಖಲಿಸ್ತಾನಿ ಉಗ್ರರ ದಾಳಿ ಎಚ್ಚರಿಕೆ ಬೆನ್ನಲ್ಲೇ ಲೋಕಸಭೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ದೆಹಲಿ ಸಂಸತ್ ಭವನದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ನಡುವೆ ಭಾರಿ ಭದ್ರತಾ ವೈಫಲ್ಯ ನಡೆದಿದೆ. ಇಬ್ಬರು ಅಪರಿಚಿತರು ಸಂಸತ್ ಭವನಕ್ಕೆ ನುಗ್ಗಿ ದಾಳಿ ಮಾಡಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ನುಗ್ಗಿದ ಇಬ್ಬರು ಅಪರಿಚಿತರು ಸದನದ ಒಳಗ್ಗೆ ನುಗ್ಗಿ ಟಿಯರ್ ಗ್ಯಾಸ್ ದಾಳಿ ನಡೆಸಿದ್ದರೆ (Parliment Attack). ಈ ಘಟನೆ ಸಂಬಂಧ ಒಟ್ಟು ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ದಾಳಿಕೋರರನ್ನು ಪಂಜಾಬ್ ನ ಕಾಂಗ್ರೇಸ್ ಸಂಸದ ಗುರ್ಜಿತ್ ಸಿಂಗ್ ಔಜಲ ತನ್ನ ಜೀವದ ಹಂಗು ತೊರೆದು ತಡೆಹಿಡಿದಿದ್ದಾರೆ. ಆಗ ವಿಪಕ್ಷ ಸ್ಥಾನದಲ್ಲಿದ್ದ ಸಂಸದರು ದಾಳಿಕೋರರ ಮೇಲೆ ದಾಳಿ ನಡೆಸಿದ ವಿಡಿಯೋ ವೈರಲ್ ಆಗಿದೆ.
2001ರ ಡಿ.13ರಂದು ಸಂಸತ್ ಭವನದ ಮೇಲೆ ಉಗ್ರರ ದಾಳಿ ನಡೆದಿತ್ತು. 22ನೇ ವರ್ಷಾಚಣೆ ದಿನವೇ ಈ ದಾಳಿ ನಡೆದಿದೆ. ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದು ಪ್ರೇಕ್ಷಕರಾಗಿ ಸದನದ ಒಳಗೆ ಪ್ರವೇಶಿಸಿದ್ದರು. ಮೈಸೂರಿನವರು ಎಂದು ಪಾಸ್ ಪಡೆದುಕೊಂಡಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಂಸದ ಪ್ರತಾಪ್ ಸಿಂಹರನ್ನು ತನಿಖೆ ನಡೆಸಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೀಗ ಈ ದಾಳಿ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಸಂಸತ್ ಭವನದ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದರು. ಡಿಸೆಂಬರ್ 13 ರಂದು ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಡಿಸೆಂಬರ್ 13ರಂದೇ ಟಿಯರ್ ಗ್ಯಾಸ್ ದಾಳಿ ನಡೆಸಿದ್ದಾರೆ.
2001 ಡಿಸೆಂಬರ್ 13 ರಂದು ಸಂಸತ್ ಭವನದ ಮೇಲೆ ಭೀಕರ ಭಯೋತ್ಪಾದಕರ ದಾಳಿ ನಡೆದಿತ್ತು. ಐವರು ಉಗ್ರರು ಗುಂಡಿನ ದಾಳಿ ನಡೆಸುತ್ತಾ ಸಂಸತ್ ಭವನದ ಮೇಲೆ ದಾಳಿ ನಡೆಸಿದ್ದರು. ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆ ಭಯೋತ್ಪಾದರು ದಾಳಿ ನಡೆಸಿದ್ದರು. ಲೋಕಸಭೆ ಹಾಗೂ ರಾಜ್ಯಸಭೆ ಕಲಾಪ 40 ನಿಮಿಷ ಮುಂದೂಡಲಾಗಿತ್ತು.
ಕಾರಿನ ಮೂಲಕ ಸಂಸತ್ ಭವನ ಪ್ರವೇಶಿಸಿದ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರು. ಸಂಸತ್ ಭವನದ ಭದ್ರತಾ ಸಿಬ್ಬಂದಿ ಈ ದಾಳಿಯನ್ನು ಎದುರಿಸಿದ್ದರು. ಭೀಕರ ಗುಂಡಿನ ಕಾಳಗ ನಡೆದಿತ್ತು. ಈ ದಾಳಿಯಲ್ಲಿ 7 ಪೊಲೀಸರು, ಇಬ್ಬರು ಸಂಸತ್ ಭದ್ರತಾ ಸಿಬ್ಬಂದಿ ಹಾಗೂ ಓರ್ವ ಕಾರ್ಮಿಕ ಮೃತಪಟ್ಟಿದ್ದರು. ಭದ್ರತಾ ಸಿಬ್ಬಂದಿಗಳು, ಪೊಲೀಸರ ಪ್ರತಿದಾಳಿಯಲ್ಲಿ ಐವರು ಭಯೋತ್ಪಾದಕರು ಹತ್ಯೆಯಾಗಿದ್ದರು.
ಇಂದು ನುಗ್ಗಿದವರು ಯಾರೂ?
ಸಂಸತ್ ನೊಳಕ್ಕೆ ನುಗ್ಗಿದ ಇಬ್ಬರು ಯುವಕರಲ್ಲಿ ಒಬ್ಬಾತ ಮೈಸೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ನೀಲಮ್ ಮತ್ತು ಅಮೋಲ್ ಶಿಂದೆ ಹೊರಗಡೆ ಪ್ರತಿಭಟನೆ ನಡೆಸಿದವರಾಗಿದ್ದಾರೆ.
ಮನೋರಂಜನ್ ತಂದೆ ಹೇಳೋದೇನು?
ಸಂಸತ್ ಭವನಕ್ಕೆ ನುಗ್ಗಿ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿರುವ ಮನೋರಂಜನ್ ಮನೆಗೆ ಎಸಿಪಿ ಗಜೇಂದ್ರ ಪ್ರಸಾದ್, ವಿಜಯ್ ನಗರ ಇನ್ಸ್ ಪೆಕ್ಟರ್ ಸುರೇಶ್ ಭೇಟಿ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದಿದ್ದಾರೆ.
“ನನ್ನ ಮಗ ಬಿಇ ಓದಿದ್ದು, ದೆಹಲಿ-ಬೆಂಗಳೂರು ಅಂತ ಓಡಾಡುತ್ತಿರುತ್ತಾನೆ. ಆದರೆ ಆತ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎಂಬುದು ಗೊತ್ತಿಲ್ಲ. ಮನೋರಂಜನ್ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ 2014ರಲ್ಲಿ ಬಿಇ ಮುಗಿಸಿದ್ದ. ನಾನೊಬ್ಬ ರೈತ, ಆತ ಯಾಕಾಗಿ ಈ ರೀತಿ ಮಾಡಿದ್ದಾನೆ ಎಂಬುದು ಗೊತ್ತಿಲ್ಲ. ಆತ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ತಂದೆ ಪ್ರತಿಕ್ರಿಯೆ ನೀಡಿದ್ದಾರೆ.
ಭದ್ರತಾ ಲೋಪದ ಪ್ರಕರಣದಲ್ಲಿ ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಸಂಸತ್ ಗೆ ನುಗ್ಗಿದ ಇಬ್ಬರು ಮೈಸೂರು ಮೂಲದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ. ಇಬ್ಬರೂ ಸಂಸದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಸಂಸತ್ ವೀಕ್ಷಕರ ಗ್ಯಾಲರಿ ಪಾಸ್ ಪಡೆದಿದ್ದಾರೆನ್ನಲಾಗಿದೆ.
ಈ ನಡುವೆ ವಿಪಕ್ಷಗಳು ದಾಳಿಕೋರರಿಗೆ ಪಾಸ್ ನೀಡಿದ ಮೈಸೂರು ಸಂಸದ ಪ್ರತಾಪ್ ಸಿಂಹನ ವಜಾಕ್ಕೆ ಒತ್ತಾಯಿಸಿದೆ.
ಪ್ರತಾಪ್ ಸಿಂಹರನ್ನು ತನಿಖೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ:
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷ ಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.
ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ22 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ21 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ20 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್15 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ20 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ19 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ21 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















