ಆರೋಗ್ಯ
Foot care tips:ಒಡೆದ ಹಿಮ್ಮಡಿಗಳಿಗೆ ಇವು ಅತ್ಯುತ್ತಮ ಮನೆಮದ್ದುಗಳು!
ಬೆಂಗಳೂರು: ಚಳಿಗಾಲದಲ್ಲಿ ಅನೇಕರಿಗೆ ಪಾದಗಳು ಬಿರುಕು ಬಿಡುತ್ತವೆ. ಒಡೆದ ಹಿಮ್ಮಡಿಗಳಿಗೆ ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್ಗಳನ್ನು ಬಳಸುವ ಬದಲು ನಾವೇ ಮನೆಯಲ್ಲಿ ಹೇಗೆ ನಮ್ಮ ಪಾದಗಳ ಆರೈಕೆ ಮಾಡಬಹುದು, ಇದಕ್ಕಾಗಿ ಮನೆಯಲ್ಲಿ ನೈಸರ್ಗಿಕವಾಗಿ ಮನೆ ಮದ್ದುಗಳನ್ನು ತಯಾರಿಸಿಕೊಳ್ಳಬಹುದು.
ಒಡೆದ ಹಿಮ್ಮಡಿಗಳಿಗೆ ಅತ್ಯುತ್ತಮ ಮನೆಮದ್ದುಗಳು ಇಲ್ಲಿವೆ
*ಜೇನು ತುಪ್ಪ:
ಜೇನುತುಪ್ಪವು ಆಂಟಿ ಬ್ಯಾಕ್ಟೀರಿಯಲ್ ಮತ್ತು ಆಂಟಿ ಮೈಕ್ರೋಬಿಯಲ್ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದರ ಜೊತೆಗೆ ಜೇನುತುಪ್ಪವನ್ನು ವಿಶ್ವದಾದ್ಯಂತ ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳಲ್ಲಿ ಬಳಸಲಾಗುತ್ತದೆ. ಜೇನುತುಪ್ಪವು ಗುಣಪಡಿಸುವಿಕೆ ಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಮತ್ತು ಗಾಯಗಳನ್ನು ಶುದ್ಧೀಕರಿಸುತ್ತದೆ. ಇದು ಶಕ್ತಿಯುತ ಚರ್ಮದ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ.
ನಿಮ್ಮ ಒಡೆದ ಹಿಮ್ಮಡಿ ಗಳಿಗೆ ಜೇನುತುಪ್ಪವನ್ನು ರಾತ್ರಿಯ ಸಮಯದಲ್ಲಿ ನಿಮ್ಮ ಕಾಲುಗಳಿಗೆ ಹಚ್ಚಬಹುದು. ಜೇನುತುಪ್ಪದಲ್ಲಿರುವ ಉತ್ತಮ ಗುಣಗಳು ನಿಮ್ಮ ಕಾಲುಗಳಲ್ಲಿ ಇರುವ ಒಡಕುಗಳನ್ನು ಸುಲಭವಾಗಿ ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
*ಬಿರುಕುಬಿಟ್ಟ ಚರ್ಮವನ್ನು ಹೋಗಲಾಡಿಸಲು ತೆಂಗಿನ ಎಣ್ಣೆಯನ್ನು ನೀವು ಬಳಸಿದರೆ ಇದರಿಂದ ಉತ್ತಮ ಪರಿಹಾರ ನಿಮಗೆ ದೊರೆಯುವುದರಲ್ಲಿ ಆಶ್ಚರ್ಯವೇನಿಲ್ಲ.
*ಬಾಳೆಯ ಹಣ್ಣಿನ ಪೇಸ್ಟ್ ತಯಾರಿಸಿಕೊಳ್ಳಿ. ಈ ಪೇಸ್ಟನ್ನು ನಿಮ್ಮ ಕಾಲುಗಳಲ್ಲಿರುವ ಬಾಧಿತ ಸ್ಥಳಗಳಿಗೆ ಚೆನ್ನಾಗಿ ಉಜ್ಜಿಕೊಳ್ಳಿ. ತದನಂತರದಲ್ಲಿ ನೀರಿನಿಂದ ನಿಮ್ಮ ಕಾಲುಗಳನ್ನು ತೊಳೆಯಿರಿ.
*ಪಾದಗಳನ್ನು ಆಗಾಗ ನೀರಿನಿಂದ ತೊಳೆಯುತ್ತಿರಬೇಕು. ಹೊರಗೆ ಓಡಾಡುವಾಗ ಸಾಕ್ಸ್ ಧರಿಸಿ ಹೋಗಬೇಕು.
*ಉಗುರು ಬೆಚ್ಚಗಿನ ನೀರಿನಲ್ಲಿ ನಿಮ್ಮ ಕಾಲುಗಳನ್ನು 20 ನಿಮಿಷಗಳ ಕಾಲ ನೆನೆಸಿ. ಈ ಪ್ರಕ್ರಿಯೆ ಆದ ನಂತರದಲ್ಲಿ ನಿಮ್ಮ ಕಾಲುಗಳನ್ನು ಚೆನ್ನಾಗಿ ಒಣಗಿಸಿ ಮಾಯಿಶ್ಚರೈಸರ್ ಹಚ್ಚಿ. ಈ ಸಂದರ್ಭದಲ್ಲಿ ನೀವು ಪೆಟ್ರೋಲಿಯಂ ಜೆಲ್ಲಿಯನ್ನು ಸಹ ಅನ್ವಯಿಸಬಹುದು.
*ತೆಂಗಿನ ಎಣ್ಣೆ, ಆಲಿವ್ ಎಣ್ಣೆಗಳಂತಹ ತೈಲಗಳಿಂದ ಒಡೆದ ಹಿಮ್ಮಡಿಗಳಿಗೆ ಮಸಾಜ್ ಮಾಡಿದರೆ ಹಿಮ್ಮಡಿಗಳು ಕೋಮಲವಾಗುತ್ತವೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ನಿಧನ ವಾರ್ತೆ17 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್11 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ16 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ17 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ17 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್12 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ17 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ15 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















