ಜೀವನಶೈಲಿ
WhatsApp ನಿಂದ ಮಹತ್ವದ ನಿರ್ಧಾರ: ಇನ್ಮುಂದೆ ಹಣ ಪಾವತಿಸಬೇಕು..!
ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಕಂಪನಿಯು 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ. ನೀವು 15GB ಸಂಗ್ರಹದ ಮಿತಿಯನ್ನು ಮೀರಿದ ಬಳಿಕ ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು.
ಭಾರತವೂ (India) ಸೇರಿದಂತೆ ಪ್ರಪಂಚದಾದ್ಯಂತ ಹೆಚ್ಚು ಜನರು ಬಳಸುವಂತಹ ಮೆಸೇಜಿಂಗ್ ಅಪ್ಲಿಕೇಷನ್‌ಗಳಲ್ಲಿ (Application) ವಾಟ್ಸಾಪ್ ಒಂದಾಗಿದೆ. (WhatsApp) ಇಂದು ಬಳಕೆದಾರರಿಗೆ ಅಗತ್ಯ ಫೀಚರ್ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್ಆ್ಯಪ್ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.
ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್ಆ್ಯಪ್ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಪ್ರಸ್ತುತ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.
ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ.
ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್ಆ್ಯಪ್ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ. ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್ಆ್ಯಪ್ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು.
ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್ಆ್ಯಪ್ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.
ಪರಿಚಯಿಸಿದೆ ಹೂಸ ಫೀಚರ್
ಮೆಟಾ ವಾಟ್ಸ್ಆ್ಯಪ್ಗಾಗಿ ಹೊಸ ಪಿನ್ ಮೆಸೇಜ್ ವೈಶಿಷ್ಟ್ಯವನ್ನು ಘೋಷಿಸಿದೆ. ಈ ವೈಶಿಷ್ಟ್ಯವು ಬಳಕೆದಾರರಿಗೆ ಚಾಟ್‌ನ ಮೇಲ್ಭಾಗದಲ್ಲಿ ಒಂದು ಸಂದೇಶವನ್ನು ಪಿನ್ ಮಾಡಲು ಅನುಮತಿಸುತ್ತದೆ. ಆಂಡ್ರಾಯ್ಡ್, ಐಒಎಸ್ ಮತ್ತು ಪಿಸಿ ಬಳಕೆದಾರರಿಗಾಗಿ ಇದು ರೋಲ್‌ಔಟ್ ಆಗಿದೆ. ವಾಟ್ಸ್ಆ್ಯಪ್ ಪ್ರಕಾರ, ಪಿನ್ ಮಾಡಿದ ಸಂದೇಶಗಳು ಗ್ರೂಪ್ ಮತ್ತು ವೈಯಕ್ತಿಕ ಚಾಟ್‌ಗಳಲ್ಲಿ ಪ್ರಮುಖ ಸಂದೇಶಗಳನ್ನು ಹೈಲೈಟ್ ಮಾಡಲು ಬಳಕೆದಾರರಿಗೆ ಅನುಮತಿಸುತ್ತದೆ.
ಪ್ರಮುಖ ಮೆಸೇಜ್ಗಳನ್ನು ತ್ವರಿತವಾಗಿ ಹುಡುಕಲು ಹಾಗೂ ಬಳಕೆದಾರರ ಸಮಯವನ್ನು ಉಳಿಸಲು ಈ ವೈಶಿಷ್ಟ್ಯವನ್ನು ವಿನ್ಯಾಸಗೊಳಿಸಲಾಗಿದೆ. ಚಾಟ್ ಪಿನ್ ವಿಂಡೋದಲ್ಲಿ ಎಷ್ಟು ಸಮಯದವರೆಗೆ ಸಂದೇಶಗಳನ್ನು ಪಿನ್ ಮಾಡಬಹುದು ಎಂಬುದಕ್ಕೆ ಸಮಯದ ಚೌಕಟ್ಟನ್ನು ಇರಿಸಲಾಗಿದೆ. ಪಿನ್ ಮಾಡಿದ ಸಂದೇಶಗಳನ್ನು 24 ಗಂಟೆಗಳು, 7 ದಿನಗಳು (ಡೀಫಾಲ್ಟ್) ಅಥವಾ 30 ದಿನಗಳವರೆಗೆ ಇಡಬಹುದು. ಪಿನ್ ಮಾಡುವ ಸಮಯದಲ್ಲಿ ನಿಮಗೆ ಅವಧಿಯನ್ನು ಆಯ್ಕೆ ಮಾಡಲು ಬ್ಯಾನರ್ ಕಾಣಿಸುತ್ತದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಲೇಖನಗಳು
Mercury-ಬುಧನ ನಕ್ಷತ್ರ ಬದಲಾವಣೆ: ಈ 5 ರಾಶಿಯವರಿಗೆ ಇಂದಿನಿಂದ ‘ರಾಜಯೋಗ’, ಅದೃಷ್ಟದ ಬಾಗಿಲು ಓಪನ್..!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಈ ನಕ್ಷತ್ರ ಬದಲಾವಣೆಯು ಮುಂದಿನ 13 ದಿನಗಳ ಕಾಲ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, 5 ರಾಶಿಯವರಿಗೆ ಮಾತ್ರ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಉದ್ಯೋಗ, ವ್ಯವಹಾರ ಮತ್ತು ಆರ್ಥಿಕವಾಗಿ ಲಾಭ ಪಡೆಯಲಿರುವ ಆ ಅದೃಷ್ಟದ ರಾಶಿಗಳು ಇಲ್ಲಿವೆ:
ವೃಷಭ ರಾಶಿ
ವೃಷಭ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ಹೊಸ ಅವಕಾಶಗಳ ಬಾಗಿಲು ತೆರೆಯಬಹುದು. ವೃತ್ತಿಜೀವನದಲ್ಲಿ ಬಹುದಿನಗಳಿಂದ ಎದುರು ನೋಡುತ್ತಿದ್ದ ಅವಕಾಶಗಳು ಸಿಗುವ ಸಾಧ್ಯತೆಯಿದೆ. ಕೆಲಸದಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ದೊರೆಯುವುದರಿಂದ ನಿಮ್ಮ ಯೋಜನೆಗಳನ್ನು ಯಶಸ್ವಿಯಾಗಿ ಮುಂದಕ್ಕೆ ಕೊಂಡೊಯ್ಯಬಹುದು. ಇದರಿಂದ ವೃತ್ತಿಯಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗಬಹುದು. ಉದ್ಯೋಗದ ಜೊತೆಗೆ ಕುಟುಂಬದ ವಿಚಾರದಲ್ಲೂ ಈ ಅವಧಿ ಖುಷಿ ನೀಡಬಹುದು. ಕುಟುಂಬದವರೊಂದಿಗೆ ಪ್ರವಾಸ ಅಥವಾ ಮಕ್ಕಳೊಂದಿಗೆ ವಿಶೇಷ ಸಮಯ ಕಳೆಯುವ ಅವಕಾಶ ಸಿಗಬಹುದು. ಒಟ್ಟಿನಲ್ಲಿ, ಕೆಲಸದಲ್ಲಿ ಪ್ರಗತಿ ಮತ್ತು ಕುಟುಂಬದಲ್ಲಿ ಸಂತೋಷ ಎರಡೂ ಒಟ್ಟಿಗೆ ಸಿಗುವ ಆಹ್ಲಾದಕರ ದಿನಗಳು ನಿಮ್ಮದಾಗಬಹುದು.
ಮಿಥುನ ರಾಶಿ
ಬುಧನ ಬದಲಾವಣೆ ಮಿಥುನ ರಾಶಿಯವರಿಗೆ ಹಣದ ವಿಚಾರದಲ್ಲಿ ಹೊಸ ದಾರಿ ತೋರಿಸಬಹುದು. ವ್ಯಾಪಾರದಲ್ಲಿ ತೊಡಗಿರುವವರಿಗೆ ಹೊಸ ಯೋಜನೆಗಳು ಮತ್ತು ಪ್ರಮುಖ ಒಪ್ಪಂದಗಳನ್ನು ಅಂತಿಮಗೊಳಿಸುವ ಅವಕಾಶ ಸಿಗಬಹುದು. ಈಗ ಮಾಡಿಕೊಳ್ಳುವ ಕೆಲವು ವ್ಯವಹಾರ ಸಂಪರ್ಕಗಳು ಮುಂದಿನ ದಿನಗಳಲ್ಲಿ ದೊಡ್ಡ ಲಾಭ ತಂದುಕೊಡುವ ಸಾಧ್ಯತೆಯಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವ ಸಮಯ ಇದಾಗಿದ್ದು, ಆದಾಯ ಗಳಿಸಲು ಹೊಸ ಮಾರ್ಗಗಳು ತೆರೆದುಕೊಳ್ಳಬಹುದು. ಹಣಕಾಸಿನ ಪರಿಸ್ಥಿತಿಯಲ್ಲೂ ಸುಧಾರಣೆ ಕಂಡುಬರಬಹುದು. ವ್ಯವಹಾರ ವಿಸ್ತರಣೆ ಜೊತೆಗೆ ಆದಾಯ ಹೆಚ್ಚಿಸಿಕೊಳ್ಳುವ ಅವಕಾಶವೂ ಒಟ್ಟಿಗೆ ಒಲಿದುಬರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದಿನಿಂದಲೇ ಶುಭ ಸುದ್ದಿಗಳ ನಿರೀಕ್ಷೆ. ಸೂರ್ಯನ ಅಧಿಪತ್ಯದ ಸಿಂಹ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ವಿಶೇಷವಾಗಿರಬಹುದು. ವಿಶೇಷವಾಗಿ ಸೆಪ್ಟೆಂಬರ್ 13ರವರೆಗಿನ ಅವಧಿ ಹಲವು ವಿಚಾರಗಳಲ್ಲಿ ಅನುಕೂಲಕರವಾಗಿರಬಹುದು. ನೀವು ಅಂದುಕೊಂಡ ಕೆಲಸಗಳು ನಿರೀಕ್ಷೆಯಂತೆ ನಡೆಯುವ ಸಾಧ್ಯತೆಯಿದ್ದು, ಮನಸ್ಸಿನಲ್ಲೂ ಹೊಸ ಉತ್ಸಾಹ ಮೂಡಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದ್ದು, ಕುಟುಂಬದವರಿಂದ ಉತ್ತಮ ಬೆಂಬಲ ಸಿಗಬಹುದು. ಹಣಕಾಸಿನ ವಿಚಾರಗಳಲ್ಲೂ ಸ್ಥಿರತೆ ಹೆಚ್ಚಾಗುವ ಸಾಧ್ಯತೆಯಿದೆ. ಹಣದ ಚಿಂತೆ ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ, ಕೆಲಸದಲ್ಲಿ ಸ್ಪಷ್ಟತೆ ಸಿಗುವ ದಿನಗಳು ಆರಂಭವಾಗಬಹುದು.
ವೃಶ್ಚಿಕ ರಾಶಿ
ಮುಂದಿನ ದಿನಗಳು ವೃಶ್ಚಿಕ ರಾಶಿಯವರಿಗೆ ಹೊಸ ಅನುಭವಗಳ ಜೊತೆಗೆ ನೆಮ್ಮದಿಯನ್ನೂ ತರಬಹುದು. ಇಂದಿನಿಂದ ಸೆ.13ರವರೆಗಿನ ಅವಧಿ ನಿಮಗೆ ವಿಶೇಷವಾಗಿರಬಹುದು. ಹೊಸ ವಿಷಯಗಳನ್ನು ಕಲಿಯಲು ಮತ್ತು ನಿಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಉತ್ತಮ ಅವಕಾಶಗಳು ಸಿಗಬಹುದು. ಕುಟುಂಬದವರೊಂದಿಗೆ ಪ್ರವಾಸಕ್ಕೆ ಯೋಜನೆ ರೂಪಿಸುವ ಸಾಧ್ಯತೆಯಿದ್ದು, ಬಹುದಿನಗಳಿಂದ ಬಯಸುತ್ತಿದ್ದವರೊಂದಿಗೆ ಗುಣಮಟ್ಟದ ಸಮಯ ಕಳೆಯಬಹುದು. ಇದೇ ಸಮಯದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಾಗಬಹುದು. ಕುಟುಂಬದ ಸಂತೋಷ, ಹೊಸ ಕಲಿಕೆ ಮತ್ತು ಮನಸ್ಸಿನ ನೆಮ್ಮದಿ-ಮೂರೂ ಒಂದೇ ಸಮಯದಲ್ಲಿ ಸಿಗುವ ಸಾಧ್ಯತೆಯಿದೆ.
ಧನು ರಾಶಿ
ಬುಧನ ನಕ್ಷತ್ರ ಬದಲಾವಣೆ ಧನು ರಾಶಿಯವರಿಗೆ ಪ್ರಗತಿಯ ಹೊಸ ಬಾಗಿಲು ತೆರೆಯಬಹುದು. ಉದ್ಯೋಗದಲ್ಲಿರುವವರಿಗೆ ತಮ್ಮ ಕ್ಷೇತ್ರದಲ್ಲಿ ಮುನ್ನಡೆಯಲು ಉತ್ತಮ ಅವಕಾಶಗಳು ದೊರೆಯಬಹುದು. ವ್ಯವಹಾರಸ್ಥರಿಗೂ ಹೊಸ ಅವಕಾಶಗಳು ಸಿಗುವ ಸಾಧ್ಯತೆಯಿದ್ದು, ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಶಸ್ಸು ಕಾಣಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ಸಾಧ್ಯತೆಯಿದ್ದು, ಆರ್ಥಿಕ ಲಾಭವೂ ದೊರೆಯಬಹುದು. ಯಶಸ್ಸಿನ ಅನುಭವದಿಂದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ. ಕೆಲಸದಲ್ಲಿ ಯಶಸ್ಸು, ಹಣದಲ್ಲಿ ಲಾಭ ಮತ್ತು ಆತ್ಮವಿಶ್ವಾಸದ ಹೆಚ್ಚಳ-ಧನು ರಾಶಿಯವರಿಗೆ ಶುಭ ದಿನಗಳು ಆರಂಭವಾಗಬಹುದು.
-
ನಿಧನ ವಾರ್ತೆ18 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು17 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು14 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ18 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ18 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ17 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ18 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ19 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















