ಚಿನ್ನ-ಬೆಳ್ಳಿ ದರ
Gold Rate Today: ಬಾರೀ ಏರಿಕೆ ಕಂಡ ಚಿನ್ನದ ದರ – ಇಲ್ಲಿದೆ ಗೋಲ್ಡ್ ರೇಟ್
ಬೆಂಗಳೂರು : ಭಾರತೀಯರು ಚಿನ್ನ (Gold) ಪ್ರಿಯರು.ವಿ ಶ್ವದಲ್ಲೆ ಅತಿ ಹೆಚ್ಚು ಬಂಗಾರ ಖರೀದಿ ನಡೆಯುವುದು ಭಾರತೀಯ ಮಾರುಕಟ್ಟೆಯಲ್ಲಿ. ಭಾರತೀಯ ಮಹಿಳೆಯರು ಹೇರಳವಾಗಿ ಈ ಹಳದಿ ಲೋಹವನ್ನು ಧರಿಸಲು ಇಷ್ಟ ಪಡುತ್ತಾರೆ. ಇನ್ನು ಮದುವೆ ಸೀಸನ್ ಬಂದರಂತೂ ಚಿನ್ನಕ್ಕೆ ಎಲ್ಲಿಲ್ಲದ ಡಿಮ್ಯಾಂಡ್ . ಚಿನ್ನ ಧರಿಸುವಲ್ಲಿ ಭಾರತೀಯ ಪುರುಷರು ಏನೂ ಕಡಿಮೆಯಿಲ್ಲ . ಚಿನ್ನದ ಧರಿಸಿದ ಪುರುಷರು ಬಂಗಾರಕ್ಕೆ ಹೂಡಿಕೆ ಮಾಡುವುದು ಲಾಭದಾಯಕ ಎಂಬ ಕಾರಣಕ್ಕೆ ಗೋಲ್ಡ್ ಖರೀದಿ ಮಾಡುತ್ತಾರೆ.
ಚಿನ್ನದ ದರ (gold Rate) ಅಂತರಾಷ್ಟ್ರೀಯ ಮಾರುಕಟ್ಟೆ, ಡಾಲರ್ ವಿರುದ್ದ ರೂಪಾಯಿ ದರ, ಜಾಗತಿಕ ವಿದ್ಯಮಾನಗಳ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಪ್ರತಿದಿನ ಚೀನಿವಾರ ಪೇಟೆಯಲ್ಲಿ ಹಳದಿ ಲೋಹದ ದರ (gold Price) ಏರುಪೇರು ಆಗುತ್ತಲೇ ಇರುತ್ತದೆ. ಪ್ರತಿ ದಿನದ ಚಿನ್ನದ ಚಿನ್ಬನದ ದರವನ್ನು ಇಲ್ಲಿ ನೀಡಲು ನಾವು ಪ್ರಯತ್ನಿಸುತ್ತೇವೆ.
ಕಳೆದ ಕೆಲ ದಿನಗಳಿಂದ ಇಳಿಮುಖದತ್ತ ಸಾಗಿದ ಚಿನ್ನದ ದರ ಇಂದು ದಿಡೀರ್ ಏರಿಕೆಯಾಗಿದೆ . ಅದು ಎಷ್ಟು ಅಂತೀರಾ 10 ಗ್ರಾಮ್ ಗೆ 1 ಸಾವಿರ ರೂಪಾಯಿಯಷ್ಟು ಏರಿಕೆಯಾಗಿದೆ. ಇಲ್ಲಿದೆ ದೇಶದ ಪ್ರಮುಖ ನಗರ ಗೋಲ್ಡ್ ರೇಟ್
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : (Bangalore gold Rate Today)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,650 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,890ರೂ.
ಬೆಳ್ಳಿ ಬೆಲೆ 1 ಕೆಜಿ: 72,750 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 56,650ರೂಪಾಯಿ ಇತ್ತು. ಆದರೆ ಇಂದು57,650 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 1000 ರೂಪಾಯಿ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 61,800ರೂಪಾಯಿ ಇತ್ತು. ಆದರೆ ಇಂದು 62,890 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 1090 ರೂಪಾಯಿ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ ಗೆ): (Gold Rate at India)
ಬೆಂಗಳೂರು: 57,650 ರೂ.
ಮುಂಬೈ: 57,650ರೂ.
ದೆಹಲಿ: 57,800 ರೂ.
ಕೇರಳ: 57,650 ರೂ.
ಅಹ್ಮದಾಬಾದ್: 57,700 ರೂ.
ಜೈಪುರ್: 57,800 ರೂ.
ಇಂದಿನ ಬೆಳ್ಳಿ ದರ ( Silver)
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ (Silver Rate)
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 727.50, ರೂ. 7,275 ಹಾಗೂ ರೂ. 72,750 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 77,500 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 77,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 77,500 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ಪುತ್ತೂರು17 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್20 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು20 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ23 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್19 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ20 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ22 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ18 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















