ಉಡುಪಿ
ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಕಾರಣವಾದಲೇ ಮುದ್ದಿನಿಂದ ಸಾಕಿದ ದತ್ತುಪುತ್ರಿ..? ಡೆತ್ ನೋಟ್ ಪತ್ತೆ : ಸಾಕುಪುತ್ರಿ ಪತ್ತೆಗಾಗಿ ತಂಡ ರಚಿಸಿದ ಪೊಲೀಸರು
ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್. ಶೆಟ್ಟಿ (59) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಾಕುಪುತ್ರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸಾಕುಪುತ್ರಿ ಮನೆ ಬಿಟ್ಟು ಹೋದ ವಿಷಯಕ್ಕೆ ನೊಂದು ಈ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಲೀಲಾಧರ ಶೆಟ್ಟಿ ದಂಪತಿಯ ಸಾಕು ಮಗಳು ಈ ಹಿಂದೆ ಮನೆ ಕೆಲಸಕ್ಕೆಂದು ಬಂದಿದ್ದಾತನೊಂದಿಗೆ ತೆರಳಿರುವ ಶಂಕೆ ವ್ಯಕ್ತ ಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಅದರಂತೆ ಆಕೆಯ ಪತ್ತೆಗಾಗಿ ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದು, ಎರಡು ತಂಡಗಳನ್ನು ರಚಿಸಿದ್ದಾರೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲೂ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡೆತ್ ನೋಟ್ನಲ್ಲಿ ಏನೇನಿತ್ತು.. ? ಲೀಲಾಧರ ಶೆಟ್ಟಿ ಅವರು ಸಾವಿಗೆ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು ಅದರ ವಿವರ ಅಧಿಕೃತವಾಗಿ ಬಹಿರಂಗವಾಗಿಲ್ಲ. “ನನ್ನನ್ನು ಕ್ಷಮಿಸಿ, ಪ್ರಾಣಕ್ಕಿಂತ ಮಾನ ಮುಖ್ಯ. ಯಾರ್ಯಾರಿಗೆ ಎಷ್ಟು ಸಾಲ ಕೊಡಬೇಕಿದೆ ಮತ್ತು ಅವರ ದೂರವಾಣಿ ಸಂಖ್ಯೆ ಇಲ್ಲಿದೆ. ಎಲ್ಐಸಿ ಕಮೀಷನ್ನಿಂದ ಬರುವ ಹಣದಲ್ಲಿ ಸಂದಾಯ ಮಾಡಿ. ತಾನು ಕಲಿತ ಕರಂದಾಡಿ ಶಾಲೆಯನ್ನು ಅಭಿವೃದ್ಧಿ ಪಡಿಸಿ, ಅಲ್ಲಿನ ಮಕ್ಕಳ ಬಗ್ಗೆ ಪ್ರೀತಿ ತೋರಿ. ಬಾಕಿ ಇರುವ ಊರಿನ ವಿವಿಧ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಮುಗಿಸಿ’ ಎಂದು ಪತ್ರದಲ್ಲಿ ಬರೆದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಸಾಕು ಮಗಳೂ ಪತ್ರ ಬರೆದಿದ್ದಳೇ.? ಇದೇ ವೇಳೆ ಸಾಕು ಮಗಳು ಕೂಡ ಮನೆ ಬಿಟ್ಟು ತೆರಳುವ ವೇಳೆ ಪತ್ರ ಬರೆದಿಟ್ಟಿದ್ದಾಳೆಂದು ಮೂಲಗಳಿಂದ ತಿಳಿದು ಬಂದಿದ್ದು ಆ ಪತ್ರದಲ್ಲೇನಿತ್ತು?, ಆ ಪತ್ರ ನೋಡಿದ ಬಳಿಕ ಲೀಲಾಧರ ಶೆಟ್ಟಿ ದಂಪತಿ ಸಾಯುವ ನಿರ್ಧಾರಕ್ಕೆ ಬಂದರೇ.? ಅಥವಾ ಮೊದಲೇ ಈ ನಿರ್ಧಾರ ತೆಗೆದು ಕೊಂಡಿದ್ದರೇ ಇತ್ಯಾದಿ ಪ್ರಶ್ನೆಗಳಿಗೆ ತನಿಖೆಯ ಬಳಿಕವೇ ಉತ್ತರ ದೊರಕಬೇಕಿದೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.















