Uncategorized
Aishwarya -Abhishek Separation Rumours : ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ ಡಿವೋರ್ಸ್ ಊಹಾಪೋಹಗಳ ಮಧ್ಯೆ ಜತೆಯಾಗಿ ಕಾಣಿಸಿಕೊಂಡ ತಾರಾ ಜೋಡಿ
ತಾರಾ ಜೋಡಿಗಳಾದ ಅಭಿಷೇಕ್ ಬಚ್ಚಾನ್ (Abhishek bacchan) ಹಾಗೂ ಐಶ್ವರ್ಯಾ ರೈ (Aishwarya rai) ಮಧ್ಯೆ ಎಲ್ಲವು ಸರಿ ಇಲ್ಲ . ಅವರ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎಂಬ ವದಂತಿಗಳು ಕಳೆದ ಕೆಲ ದಿನಗಳಿಂದ ಹಬ್ಬತ್ತಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಅಭಿಷೇಕ್ ತಂದೆ ಅಮಿತಾಭ್ ಬಚ್ಚಾನ್ ಅವರು ಸೋಷಿಯಲ್ ಮೀಡಿಯಾ ಪ್ಲ್ಯಾಟ್ ಫಾರ್ಮ್ Instagram ನಲ್ಲಿ ತೋರಿಸಿದ ನಡೆ ಹಾಗೂ ಪೋಸ್ಟ್ ಗಳು ಈ ಅನುಮಾವನ್ನು ಹೆಚ್ಚಿಸಿದ್ದವು ಆದರೆ ಇದೆಲ್ಲ ವದಂತಿಗೆ ಈಗ ತೆರೆ ಬಿದ್ದಿದೆ.

ಮುಂಬಾಯಿಯಲ್ಲಿ ಶುಕ್ರವಾರ ನಡೆದ ದೀರೂಭಾಯ್ ಅಂಬಾನಿ ಅಂತರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದಲ್ಲಿ ಅಭಿಷೇಕ್ ಹಾಗೂ ಐಶ್ವರ್ಯಾ ಜತೆಯಾಗಿ ಕಾಣಿಸಿಕೊಂಡರು. ಅವರಿಬ್ಬರು ಜತೆಯಾಗಿ ಮಾತನಾಡುತ್ತ ಸಾಗುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಆ ಕಾರ್ಯಕ್ರಮಕ್ಕೆ ಐಶ್ವರ್ಯಾ ರೈಯವರು ತನ್ನ ತಾಯಿ ಬೃಂದಾ ರೈ ಜತೆ ಕಾರಿನಲ್ಲಿ ಆಗಮಿಸಿದರು. ಮತ್ತೊಂದು ಕಾರಿನಲ್ಲಿ ಅಭಿಷೇಕ್, ಅವರ ತಂದೆ ಅಮಿತಾಭ್ ಹಾಗೂ ಆಗಸ್ತ್ಯ ನಂದ ಒಟ್ಟಿಗೆ ಆಗಮಿಸಿದರು. ಕಾರಿನಿಂದ ಇಳಿದ ಬಳಿಕ ಐಶ್ವರ್ಯಾ ಅಲ್ಲಿ ನೆರೆದಿದ್ದವರಿಗೆ ನಗು ನಗುತ್ತಾ ಕೈ ಬೀಸಿದರು. ಬಳಿಕ ತುಸು ದೂರು ಸಾಗಿ ಅಭಿಷೇಕ್ ,ಅಮಿತಾಭ್ ಹಾಗೂ ಅಗಸ್ತ್ಯನಿಗಾಗಿ ಕಾದರು. ಒಂದೊಮ್ಮೆ ಅವರು ಬಂದ ಬಳಿಕ ಜತೆಯಾಗಿ ಸಾಗಿದರು.

ಈ ವೇಳೆ ಐಶ್ವರ್ಯಾ ರೈಯವರು ಮಾವ ಅಮಿತಾಬ್ ಬಚ್ಚಾನ್ ಜತೆ ಮಾತುಕತೆ ನಡೆಸಿದರು. ಅಲ್ಲದೇ ಐಶ್ವರ್ಯಾ ರೈಯವರು ಅಗಸ್ತ್ಯನ ಗಲ್ಲ ಕೂಡ ಚಿವುಟಿದರು. ಇನ್ನೂ ಅಭಿಷೇಕ್ ತನ್ನ ಪತ್ನಿ ಜತೆ ಮಾತನಾಡುವ ,ತೋಳು ಹಿಡಿದು ಜತೆಯಾಗಿ ಹೋಗುವ ವಿಡಿಯೋ ಕೂಡ ವೈರಲ್ ಆಗಿದೆ
ಈ ಕಾರ್ಯಕ್ರಮಕ್ಕೆ ಐಶ್ವರ್ಯಾ ಕಪ್ಪು ಮತ್ತು ಚಿನ್ನದ ಬಣ್ಣದ ಸೂಟ್ ಮತ್ತು ಹೀಲ್ಸ್ ಧರಿಸಿದ್ದರು. ಅಅದಕ್ಕೆ ಮ್ಯಾಚಿಂಗ್ ಬ್ಯಾಗ್ ಅನ್ನು ಸಹ ಹಿಡಿದುಕೊಂಡಿದ್ದರು.. ಅಭಿಷೇಕ್ ನೇವಿ ಬ್ಲೂ ಶರ್ಟ್, ಮ್ಯಾಚಿಂಗ್ ಪ್ಯಾಂಟ್ ಮತ್ತು ಸ್ನೀಕರ್ಸ್ನಲ್ಲಿ ಕಾಣಿಸಿಕೊಂಡರು. ಅಮಿತಾಭ್ ವರ್ಣರಂಜಿತ ಜಾಕೆಟ್, ಪ್ಯಾಂಟ್ ಮತ್ತು ಬೂಟುಗಳನ್ನು ಧರಿಸಿದ್ದರು. ಅಗಸ್ತ್ಯ ನಂದಾ ಬಿಳಿ ಟೀ ಶರ್ಟ್, ಡೆನಿಮ್ ಮತ್ತು ಶೂಗಳ ಬದಲು ಬೀಜ್ ಬಣ್ಣದ ಜಾಕೆಟ್ ಅನ್ನು ಧರಿಸಿದ್ದರು.
Uncategorized
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು

ಪುತ್ತೂರು, ಅ.5: ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್., ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೆ ಗುರಿಯಾದ ಆರೋಪಿ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 120/2008ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 450, 302 ಮತ್ತು 201ರ ಅಡಿಯಲ್ಲಿ ಆರೋಪಿಯಾಗಿದ್ದ ಶಾಕಿರ್‌ನನ್ನು 2016ರ ಏಪ್ರಿಲ್ 5ರಂದು ಮಂಗಳೂರು ಕಾರಾಗೃಹದಿಂದ ವಿಚಾರಣೆಗಾಗಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕರೆತರಲಾಗಿತ್ತು.
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಆತ ಯತ್ನಿಸಿದ್ದ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 224ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಅ.5ರಂದು ಆರೋಪಿಗೆ ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದರು.
Uncategorized
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ

ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅ.5ರಂದು ಬೆಳಗಿನ ಜಾವ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ದೊರೆತಿತ್ತು. ಅದರಂತೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದರು.
ಈ ವೇಳೆ ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ. ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(d) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆ ಮುಂದುವರಿಸಿದ ಪೊಲೀಸರು, ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪದ ಮೇರೆಗೆ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ವಾಹನ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Uncategorized
Mangalore-ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ; ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ
ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.
ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
-
ನಿಧನ ವಾರ್ತೆ16 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್22 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ21 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ22 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ20 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ16 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ




















