Uncategorized
ಪುಂಜಾಲಕಟ್ಟೆ : ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದಕ್ಕೆ ಪಾದಚಾರಿಗೆ ಕತ್ತಿಯಿಂದ ಕಡಿದ ನಾಯಿಯ ಯಜಮಾನ
ಪಾದಚಾರಿಯೊಬ್ಬರಿಗೆ ದಾರಿ ಮದ್ಯೆ ನಾಯಿ ಕಚ್ಚಿದ್ದ ಹಾಗು ಇದನ್ನು ಪ್ರಶ್ನಿನಿಸಿದಕ್ಕೆ ನಾಯಿಯ ಯಜಮಾನ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು, ಕಾವಳ ಮುಡೂರು ಗ್ರಾಮದಲ್ಲಿ ಡಿ 13 ರಮದು ನಡೆದಿದೆ. ಸ್ಥಳೀಯ ನಿವಾಸಿ ಸಂತೋಷ್ ದೇವಾಡಿಗ ಹಲ್ಲೆಗೊಳಗಾದ ಗಾಯಾಳು. ಕಾವಳ ಮುಡೂರು ಗ್ರಾಮದ ಬಾರದಬೈಲು ನಿವಾಸಿ ಶ್ರೀಧರ ಶೆಟ್ಟಿ ಹಲ್ಲೆ ಆರೋಪಿ
ಕಾವಳಕಟ್ಟೆಯಿಂದ ನೆಲ್ಲಿಗುಡ್ಡೆ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಸಂತೋಷ್ ದೇವಾಡಿಗರವರು ಡಿ 13 ರಂದು ನಡೆದು ಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಅವರು ಬಾರದಬೈಲು ಎಂಬಲ್ಲಿಗೆ ತಲುಪಿದಾಗ ಅವರಿಗೆ ಪಕ್ಕದ ಮನೆಯ ಬಲಗಾಲಿಗೆ ನಾಯಿಯೊಂದು ಕಚ್ಚಿದೆ.
ಆ ವೇಳೆ ಆರೋಪಿ ಶ್ರೀಧರ ಶೆಟ್ಟಿಯವರು ಮನೆಯಂಗಲದಲ್ಲಿ ನಿಂತಿದ್ದು, ಯಾಕೆ ಕಚ್ಚುವ ನಾಯಿಯನ್ನು ರಸ್ತೆಗೆ ಬಿಡುತ್ತಿರಿ ಎಂದು ಶ್ರೀದರ್ ಅವರು ಪ್ರಶ್ನಿಸಿದ್ದಾರೆ. ಕೋಪಗೊಂಡ ಶ್ರೀಧರ್ ಅವರು ಅವಾಚ್ಯ ಶಬ್ಧಗಲಿಂದ ಬೈದು ಕತ್ತಿಯಲ್ಲಿ ಕಡಿದು ಗಾಯಗೊಳಿಸಿರುವುದಾಗಿ ಪುಂಜಾಲಕಟ್ಟೆ ಠಾಣೆಗೆ ನೀಡಿದ ದೂರಿನಲ್ಲಿ ಸಂತೋಷ್ ಅವರು ಆರೋಪಿಸಿದ್ದಾರೆ.
Uncategorized
Kural Tulu Touch-ತುಳು ಭಾಷೆಗೆ ಡಿಜಿಟಲ್ ಬಲ; ಆಂಡ್ರಾಯ್ಡ್‌ಗೆ ಬಂತು ‘ಕುರಲ್ ತುಳು ಟಚ್’ ಕೀಬೋರ್ಡ್
ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್ ತುಳು ಟಚ್’ (Kural Tulu Touch) ನೂತನ ಕೀಬೋರ್ಡ್ ಅಧಿಕೃತವಾಗಿ ಬಿಡುಗಡೆಯಾಗಿದೆ.
ಮಂಗಳೂರು, ಅ.6: ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್ ತುಳು ಟಚ್’ (Kural Tulu Touch) ನೂತನ ಕೀಬೋರ್ಡ್ ಅಧಿಕೃತವಾಗಿ ಬಿಡುಗಡೆಯಾಗಿದೆ.
ಸಾಫ್ಟ್‌ವೇರ್ ಇಂಜಿನಿಯರ್‌ಗಳಾದ ಹರ್ಷಿತ್ ದೇವಾಡಿಗ ಹಾಗೂ ಚೈತ್ರಾ ಪೂಜಾರಿ ಅಭಿವೃದ್ಧಿಪಡಿಸಿರುವ ಈ ಕೀಬೋರ್ಡ್ ಅನ್ನು ಬೆಂಗಳೂರಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ‘ತುಳುನಾಡ ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆಗೊಳಿಸಲಾಯಿತು.
ವಾಟ್ಸಾಪ್, ಸಾಮಾಜಿಕ ಜಾಲತಾಣಗಳಲ್ಲೂ ತುಳು ಲಿಪಿ
‘ಕುರಲ್ ತುಳು ಟಚ್’ ಕೀಬೋರ್ಡ್ ಸದ್ಯ ಆಂಡ್ರಾಯ್ಡ್ ಬಳಕೆದಾರರಿಗೆ ‘ಬಾರವು ಸಾರವು’ (Baravu Saravu) ಆ್ಯಪ್ ಮೂಲಕ ಲಭ್ಯವಿದೆ. ಆ್ಯಪ್‌ನಲ್ಲಿರುವ ‘New Keyboard’ ಆಯ್ಕೆಯನ್ನು ಸಕ್ರಿಯಗೊಳಿಸಿದ ಬಳಿಕ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನೇರವಾಗಿ ತುಳು ಲಿಪಿಯಲ್ಲಿ ಸಂದೇಶಗಳನ್ನು ಟೈಪ್ ಮಾಡಬಹುದು.
ತುಳು ಕೀಬೋರ್ಡ್‌ನಿಂದ ಇತರ ಭಾಷೆಗಳ ಕೀಬೋರ್ಡ್‌ಗಳಿಗೆ ಸುಲಭವಾಗಿ ಬದಲಾಯಿಸುವ ಸೌಲಭ್ಯವೂ ಇದ್ದು, ಟೈಪ್ ಮಾಡಿದ ಪಠ್ಯವನ್ನು ಡಿಜಿಟಲ್ ಚಾಟ್‌ಗಳಲ್ಲಿ ಹಂಚಿಕೊಳ್ಳಬಹುದಾದ ಸ್ಟಿಕ್ಕರ್‌ಗಳಾಗಿ ಪರಿವರ್ತಿಸುವ ಆಯ್ಕೆಯೂ ಇದೆ.
ಅಕ್ಷರ, ಗುಣಿತಾಕ್ಷರ, ಒತ್ತಕ್ಷರಗಳಿಗೆ ಬೆಂಬಲ
ಸಾಮಾನ್ಯ ಮೊಬೈಲ್ ಕೀಬೋರ್ಡ್‌ಗಳ ಮಾದರಿಯಲ್ಲೇ ಸರಳವಾಗಿ ಬಳಸಬಹುದಾದ ವಿನ್ಯಾಸವನ್ನು ‘ಕುರಲ್ ತುಳು ಟಚ್’ ಹೊಂದಿದೆ. ತುಳು ಭಾಷೆಯ ಅಕ್ಷರಗಳು, ಸಂಖ್ಯೆಗಳು, ಗುಣಿತಾಕ್ಷರಗಳು ಹಾಗೂ ಒತ್ತಕ್ಷರಗಳನ್ನು ಇದು ಬೆಂಬಲಿಸುತ್ತದೆ. ಹೀಗಾಗಿ ತುಳು ಲಿಪಿಯಲ್ಲಿ ಪದಗಳು ಹಾಗೂ ವಿವಿಧ ಅಕ್ಷರ ಸಂಯೋಜನೆಗಳನ್ನು ನಿಖರವಾಗಿ ಟೈಪ್ ಮಾಡಲು ಸಾಧ್ಯವಾಗಲಿದೆ.
ತುಳು ಲಿಪಿಯನ್ನು ಕೇವಲ ಶೈಕ್ಷಣಿಕ ಉದ್ದೇಶಗಳು ಅಥವಾ ದಾಖಲೆಗಳಿಗೆ ಸೀಮಿತಗೊಳಿಸದೆ, ದೈನಂದಿನ ಡಿಜಿಟಲ್ ಸಂವಹನದಲ್ಲೂ ಪ್ರಾಯೋಗಿಕವಾಗಿ ಬಳಸುವಂತೆ ಮಾಡುವುದು ತಮ್ಮ ಉದ್ದೇಶ ಎಂದು ಡೆವಲಪರ್‌ಗಳು ತಿಳಿಸಿದ್ದಾರೆ.
ಆ್ಯಪ್ ಅಭಿವೃದ್ಧಿಗೆ ‘Flutter’ ಹಾಗೂ ಬ್ಯಾಕೆಂಡ್ ಬೆಂಬಲಕ್ಕೆ ‘Firebase’ ತಂತ್ರಜ್ಞಾನ ಬಳಸಲಾಗಿದ್ದು, ಕೀಬೋರ್ಡ್ ಅಭಿವೃದ್ಧಿಯನ್ನು ಕೇವಲ ಎರಡು ವಾರಗಳಲ್ಲಿ ಪೂರ್ಣಗೊಳಿಸಲಾಗಿದೆ.
ಮೂರು ವರ್ಷಗಳ ಹಿಂದಿನ ತುಳು ಕಲಿಕಾ ಆ್ಯಪ್ ನೆರವು
ಮೂರು ವರ್ಷಗಳ ಹಿಂದೆ ರೂಪಿಸಿದ್ದ ‘ತುಳು ಕಲಿಕೆ ಆ್ಯಪ್’ ಈ ಯೋಜನೆಗೆ ಬಲವಾದ ಅಡಿಪಾಯವಾಯಿತು ಎಂದು ಹರ್ಷಿತ್ ದೇವಾಡಿಗ ತಿಳಿಸಿದ್ದಾರೆ. ಸಣ್ಣ ಮೊಬೈಲ್ ಪರದೆಯಲ್ಲಿ ತುಳು ಅಕ್ಷರಗಳನ್ನು ಸುಲಭವಾಗಿ ಗುರುತಿಸಿ ಟೈಪ್ ಮಾಡಲು ಅನುಕೂಲವಾಗುವಂತೆ ತುಳು ಫಾಂಟ್ ಅನ್ನು ಕೀಬೋರ್ಡ್ ಲೇಔಟ್‌ಗೆ ನಿಖರವಾಗಿ ಮ್ಯಾಪ್ ಮಾಡುವುದು ಪ್ರಮುಖ ತಾಂತ್ರಿಕ ಸವಾಲಾಗಿತ್ತು ಎಂದು ಅವರು ವಿವರಿಸಿದ್ದಾರೆ.
ಜೈ ತುಳುನಾಡ್ ಸಂಸ್ಥಾಪಕ ಸದಸ್ಯ ಶರತ್ ಕೊಡವೂರು ಮಾತನಾಡಿ, ಕೇಂದ್ರ ಭಾರತೀಯ ಭಾಷೆಗಳ ಸಂಸ್ಥೆ (CIIL) ಮಾನ್ಯತೆ ಪಡೆದ ತುಳು ಲಿಪಿಯನ್ನು ಡಿಜಿಟಲ್ ಜಗತ್ತಿಗೆ ತರುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಬಳಕೆದಾರರಿಗೆ ಗೊಂದಲವಾಗದಂತೆ ಅಕ್ಷರಗಳ ಸರಿಯಾದ ಮ್ಯಾಪಿಂಗ್ ಅತ್ಯಂತ ಮುಖ್ಯವಾಗಿತ್ತು ಎಂದು ಹೇಳಿದ್ದಾರೆ.
‘ಬಾರವು ಸಾರವು’ನಲ್ಲಿ ತುಳು ಕಲಿಕೆಗೆ ಹಲವು ಸೌಲಭ್ಯ
‘ಬಾರವು ಸಾರವು’ ಆ್ಯಪ್ ಕೇವಲ ಕೀಬೋರ್ಡ್ ಒದಗಿಸುವುದಕ್ಕೆ ಸೀಮಿತವಾಗಿಲ್ಲ. ತುಳು ಕಲಿಯಲು ಆಸಕ್ತಿ ಹೊಂದಿರುವವರಿಗೆ ಸಮಗ್ರ ಕಲಿಕಾ ವೇದಿಕೆಯಾಗಿಯೂ ಇದು ಕಾರ್ಯನಿರ್ವಹಿಸುತ್ತದೆ.
ಆ್ಯಪ್‌ನಲ್ಲಿ ತುಳು ನಿಘಂಟು, ಮೂಲಭೂತ ವಾಕ್ಯಗಳು, ಆಡಿಯೋ ಆಧಾರಿತ ಕಲಿಕಾ ಸಾಮಗ್ರಿಗಳು ಹಾಗೂ ತುಳು ಸಂಸ್ಕೃತಿಯನ್ನು ಪರಿಚಯಿಸುವ ಪಾರಂಪರಿಕ ಛಾಯಾಚಿತ್ರಗಳು ಲಭ್ಯವಿವೆ. ಬಳಕೆದಾರರು ನಿಘಂಟಿಗೆ ಹೊಸ ತುಳು ಪದಗಳನ್ನು ಸೂಚಿಸುವ ಅವಕಾಶವೂ ಇದ್ದು, ಪರಿಶೀಲನೆಯ ಬಳಿಕ ಅವುಗಳನ್ನು ಸೇರಿಸಲಾಗುತ್ತದೆ.
ತುಳು ಲಿಪಿ ಕಲಿಕಾ ವಿಷಯಗಳು ಹಾಗೂ ವೀಡಿಯೊಗಳನ್ನು ಒದಗಿಸಿರುವ ಬನಶ್ರೀ ಅವಿನಾಶ್, ಪಾರಂಪರಿಕ ಲಿಪಿಯನ್ನು ಕಲಿಯಲು ಮತ್ತು ಅಭ್ಯಾಸ ಮಾಡಲು ಆಸಕ್ತಿ ಹೊಂದಿರುವವರಿಗೆ ಈ ವೇದಿಕೆ ಪ್ರಾಯೋಗಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.
ಯೂನಿಕೋಡ್ ಮಾನ್ಯತೆಯ ಬಳಿಕ ಮತ್ತೊಂದು ಮಹತ್ವದ ಹೆಜ್ಜೆ
ತುಳು-ತಿಗಳಾರಿ ಲಿಪಿಗೆ ಯೂನಿಕೋಡ್ ಮಾನ್ಯತೆ ದೊರೆತಿರುವುದು ಈ ತಾಂತ್ರಿಕ ಬೆಳವಣಿಗೆಗೆ ಪ್ರಮುಖ ಪ್ರೇರಣೆಯಾಗಿದೆ. 2024ರಲ್ಲಿ ಯೂನಿಕೋಡ್ ಕಾನ್ಸೋರ್ಟಿಯಂನ ‘ಯೂನಿಕೋಡ್ 16’ ಆವೃತ್ತಿಯಲ್ಲಿ 80 ತುಳು ಅಕ್ಷರಗಳನ್ನು ಸೇರ್ಪಡೆಗೊಳಿಸಲಾಗಿತ್ತು. ಇದರಿಂದ ಡಿಜಿಟಲ್ ವೇದಿಕೆಗಳಲ್ಲಿ ತುಳು ಲಿಪಿಗೆ ಬೆಂಬಲ ಕಲ್ಪಿಸಲು ಹಾಗೂ ಫಾಂಟ್ ಮತ್ತು ಕೀಬೋರ್ಡ್ ಅಭಿವೃದ್ಧಿಪಡಿಸಲು ತಾಂತ್ರಿಕ ಅಡಿಪಾಯ ಸೃಷ್ಟಿಯಾಯಿತು.
ತುಳು ವಿದ್ವಾಂಸರು ಹಾಗೂ ತುಳು ಸಾಹಿತ್ಯ ಅಕಾಡೆಮಿಯಂತಹ ಸಂಸ್ಥೆಗಳ ಹಲವು ವರ್ಷಗಳ ಪ್ರಯತ್ನದ ಫಲವಾಗಿ ಈ ತಾಂತ್ರಿಕ ಪ್ರಗತಿ ಸಾಧ್ಯವಾಗಿದೆ. ಇದೀಗ ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಿರುವ ಯುವ ಪೀಳಿಗೆಗೆ ಕನ್ನಡ ಅಥವಾ ಇಂಗ್ಲಿಷ್ ಲಿಪಿಯ ಬದಲು ತುಳು ಭಾಷೆಯನ್ನು ಅದರ ಮೂಲ ಲಿಪಿಯಲ್ಲೇ ಡಿಜಿಟಲ್ ಸಂವಹನದಲ್ಲಿ ಬಳಸಲು ಹೊಸ ಅವಕಾಶ ದೊರೆತಂತಾಗಿದೆ.
ಸದ್ಯ ‘ಕುರಲ್ ತುಳು ಟಚ್’ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಮುಂದಿನ ದಿನಗಳಲ್ಲಿ iOS ಬಳಕೆದಾರರಿಗೂ ಕೀಬೋರ್ಡ್ ಬಿಡುಗಡೆ ಮಾಡಲು ಡೆವಲಪರ್‌ಗಳು ಯೋಜಿಸಿದ್ದಾರೆ.
Uncategorized
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.
ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.
ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.
ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.
Uncategorized
Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
-
ದಕ್ಷಿಣ ಕನ್ನಡ19 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ18 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್24 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ನಿಧನ ವಾರ್ತೆ17 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಅಪರಾಧ23 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ನಿಧನ ವಾರ್ತೆ17 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಶಿಕ್ಷಣ16 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ಬಿಗ್ ನ್ಯೂಸ್13 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ


















