ಕ್ರೈಂ
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಐವರು ಆರೋಪಿಗಳ ಬಗ್ಗೆ ರಾಷ್ಟೀಯ ತನಿಖಾ ತಂಡದಿಂದ ಮಹತ್ವದ ಪ್ರಕಟನೆ
ಸುಳ್ಯ, ಡಿ. 15: 2022ರ ಜುಲೈ ತಿಂಗಳಿನಲ್ಲಿ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿ ಮಾಡಿದೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಇಂಡಿಯಾ ಸಂಘಟನೆಗೆ ಸೇರಿದವರಾದ ಬೆಳ್ಳಾರೆಯ ಬೂಡು ನಿವಾಸಿ ಎಂ.ಡಿ.ಮುಸ್ತಫ, ನೆಕ್ಕಿಲಾಡಿ ಅಗ್ನಾಡಿ ನಿವಾಸಿ ಮಸೂದ್ ಅಗ್ನಾಡಿ, ಮಸೂದ್ ಕೆ.ಎ., ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಕೊಡಾಜೆ, ಸುಳ್ಯದ ಕಲ್ಲುಮುಟ್ಟು ನಿವಾಸಿ ಉಮ್ಮರ್ ಆರ್. ಉಮ್ಮರ್ ಫಾರೂಕ್, ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್ ಲಿಸ್ಟ್ ನಲ್ಲಿರುವವರು.
ಈ ಆರೋಪಿಗಳು ಕಂಡುಬಂದಲ್ಲಿ ಅಥಾವ ಅವರ ಇರುವಿಕೆಯ ಕುರಿತಾಗಿ ಮಾಹಿತಿ (ವಾಟ್ಸ್ಆ್ಯಪ್ 9497715294) ಇದ್ದಲ್ಲಿ ನೀಡುವಂತೆ ಸಾರ್ವಜನಿಕರನ್ನು ಎನ್ ಐಎ ವಿನಂತಿಸಿದೆ. ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುವುದಾಗಿಯು ಅದು ತಿಳಿಸಿದೆ.

ಜನರಲ್ಲಿ ಹಾಗೂ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ 2022ರ ಜು. 26ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈಗಾಗಲೇ ಹಲವರನ್ನು ಬಂಧಿಸಿದ್ದು, ಇನ್ನೂ ಪ್ರಕರಣಕ್ಕೆ ಸಂಬಂಧಿಸಿ ಹಲವಾರು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎನ್‌ಐಎ ನಿರಂತರ ತನಿಖೆ, ಕಾರ್ಯಚರಣೆ ಮುಂದುವರಿಸಿದೆ. ಹಲವು ಆರೋಪಿಗಳ ಹೆಸರಿನಲ್ಲಿ ಲುಕ್ ವಟ್ ನೋಟಿಸ್ ಜಾರಿ ಮಾಡಿ ಬಹುಮಾನ ಘೋಷಿಸಿದೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಮಂಗಳೂರು14 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized12 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ19 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು21 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ19 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ13 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ15 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ20 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















