ಬೆಂಗಳೂರು
Husband Used Wife For Honey Trap ಬೆಂಗಳೂರು : ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಲು ಪತ್ನಿಯನ್ನೆ ಬಳಸಿದ ಪತಿ – ರೆಡ್ ಹ್ಯಾಂಡಾಗಿ ಸಿಕ್ಕಿ ಹಾಕಿಕೊಂಡರು
ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್‌ಗೆ ಕೆಡವಲು ಪತಿ ತನ್ನ ಬಳಸಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡ ಘಟನೆ ರಾಜ್ಯ ರಾಜದಾನಿ ಬೆಂಗಳುರಿನಲ್ಲಿ ನಡೆದಿದೆ. ಮಹಿಳೆ ಸಹಿತ ಒಟ್ಟು ಐವರ ತಂಡ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡುತ್ತಿದ್ದಾಗಲೇ ಪೊಲೀಸರ ಕೈಕೆ ಸಿಕ್ಕಿ ಹಾಕಿಕೊಂಡು ಈಗ ಕಂಬಿ ಎಣಿಸುತ್ತಿದ್ದಾರೆ.
ಖಲೀಮ್, ಸಭಾ, ಓಬೆದ್, ರಕೀಮ್, ಅತೀಕ್ ಬಂಧಿತರು. ಈ ಪೈಕಿ ಖಲೀಮ್ ಹಾಗೂ ಸಬಾ ದಂಪತಿಗಳು. ಇತರ ಮೂವರು ಇವರ ಸಹಚರರು. ಖಲೀಮ್ ಹನಿಟ್ರ್ಯಾಪ್ ಹನಿ ಟ್ರ್ಯಾಪ್ ನಲ್ಲಿ ಪಳಗಿದ ವ್ಯಕ್ತಿಯಾಗಿದ್ದು , ತನ್ನ ಕುಕೃತ್ಯಕ್ಕೆ ದಾಳವಾಗಿ ಆತನ ತನ್ನ ಪತ್ನಿಯನ್ನು ಬಳಸುತ್ತಿದ್ದ. ಈ ಪ್ರಕರಣದಲ್ಲೂ ಹಾಗೆಯೇ ಆಗಿದೆ.
ಅತೀವುಲ್ಲಾ ಹನಿಟ್ರ್ಯಾಪ್ ಒಳಗಾದ ಉದ್ಯಮಿ ಹಾಗೂ ಈ ಪ್ರಕರಣದ ದೂರುದಾರ. ಅತೀವುಲ್ಲಾ ಬಳಿ ಬಃಳಷ್ಟು ದುಡ್ಡು ಇರಬಹುದೆಂದು ಶಂಕಿಸಿದ್ದ ಖಲೀಮ್ ಆತನಿಗೆ ಪತ್ನಿ ಸಭಾಳನ್ನು ಪರಿಚಯಿಸಿದ. ಆಕೆ ವಿಧವೆ ಜತೆಗಿರಲಿ ಎಂದು ಅತೀವುಲ್ಲಾಗೆ ಸಲಹೆ ಬೇರೆ ಕೊಟ್ಟಿದ್ದ.

ಈ ವಿಚಾರದಲ್ಲಿ ಜಾಣೆಯಾಗಿದ್ದ ಸಭಾ ಸುಲಭದಲ್ಲಿ ಬಲೆಗೆ ಕೆಡವಿದ್ದಾಳೆ. ಬಳಿಕ ಅವರಿಬ್ಬರು ದೈಹಿಕ ಸಂಪರ್ಕ ಬೆಳೆಸಿಕೊಂಡಿದ್ದಾರೆ . ಇದು ಹಲವು ಬಾರಿ ನಡೆದಿದೆ. ಅತೀವುಲ್ಲಾ ತನ್ನ ತಾಳಕ್ಕೆ ತಕ್ಕಂತೆ ಕುಣಿಯುತ್ತಾನೆಂದು ಖಚಿತವಾಗುತ್ತಲೇ ಟ್ರ್ಯಾಪ್ ಮಾಡಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ.
ಯೋಜನೆಯಂತೆ ಸಭಾ ಆರ್‌ಆರ್ ನಗರದಲ್ಲಿ ರೂಮ್ ಬುಕ್ ಮಾಡಿ ಉದ್ಯಮಿಯನ್ನು ಕರೆದಿದ್ದಳು.ಬರುವಾಗ ಆಧಾರ್ ಕಾರ್ಡ್ ಜತೆಗೆ ಬಾ ಎಂದು ಉದ್ಯಮಿ ಅತೀವುಲ್ಲಾಗೆ ಕರೆದಿದ್ದಳು. ಇತ್ತ ಖುಷಿ ಖುಷಿಯಾಗಿ ಅತೀವುಲ್ಲಾ ರೂಮ್‌ಗೆ ಬಂದ ಕೆಲ ಹೊತ್ತಲ್ಲೇ ಇತರೆ ಆರೋಪಿಗಳು ನುಗ್ಗಿದ್ದರು. ಏಕಾಏಕಿ ಎಂಟ್ರಿ ಕೊಟ್ಟು ಸೀನ್ ಕ್ರಿಯೇಟ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.
ಆರು ಲಕ್ಷ ಹಣ ಕೊಡು, ಇಲ್ಲದಿದ್ದರೆ ಮನೆಯವರಿಗೆ ಹೇಳಿ, ನಿನ್ನ ಫೋಟೊ- ವಿಡಿಯೋವನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇತ್ತ ಹಣ ಕೊಡುವುದಾಗಿ ಹೇಳಿ ಉದ್ಯಮಿ ಅತೀವುಲ್ಲಾ ಕೂಡಲೇ ಪೊಲೀಸರಿಗೆ ಕಾಲ್ ಮಾಡಿದ್ದ. ಈ ವೇಳೆ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದಾಗ, ಹನಿಟ್ರ್ಯಾಪ್ ಮಾಡುತ್ತಿದ್ದಾಗಲೇ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಸದ್ಯ ಈ ಆರೋಪಿಗಳ ಕುರಿತು ತನಿಖೆಯನ್ನು ಸಿಸಿಬಿ ಪೊಲೀಸರು ಮುಂದುವರೆಸಿದ್ದಾರೆ. ಆರ್‌ಆರ್ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ..
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ರಾಜಕೀಯ
Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.
ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.
ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.
ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.
ರಾಜಕೀಯ
Siddaramaiah-ವಿಡಿಯೋ ಮೂಲಕ ತೇಜೋವಧೆ ಆರೋಪ; ಸೈಬರ್ ಕ್ರೈಂ ಪೊಲೀಸರಿಗೆ ಸಿದ್ದರಾಮಯ್ಯ ದೂರು
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೂಲಕ ದೂರು ಸಲ್ಲಿಸಿದ್ದು, ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ತಮ್ಮ ಕುರಿತ ವಿಡಿಯೋವನ್ನು ಸೃಷ್ಟಿಸಿ ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸಿದ್ಧಪಡಿಸಿ, ಅವುಗಳನ್ನು ಹರಡುವ ಮೂಲಕ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಸ್ಪಿಂಗ್ ಆಪರೇಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಸಿಎಚ್-18ನೇ ನ್ಯಾಯಾಲಯದಲ್ಲಿ ‘ಸ್ಪಿಂಗ್ ಆಪರೇಷನ್’ಗೆ ಸಂಬಂಧಿಸಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ನ್ಯಾಯಾಲಯ ನಾಳೆ ಆದೇಶ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ11 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ10 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು8 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ10 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ನಿಧನ ವಾರ್ತೆ5 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಬಿಗ್ ನ್ಯೂಸ್5 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ10 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಶಿಕ್ಷಣ5 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















