ಚಿನ್ನ-ಬೆಳ್ಳಿ ದರ
Gold rate Today : ಬಂಗಾರ ಖರೀದಿಸ ಬಯಸುವವರಿಗೆ ಖುಷಿಯ ವಿಷಯ – ಇಳಿದ ಚಿನ್ನದ ಚಿನ್ನದ ದರ
ಬೆಂಗಳೂರು: ವಾರಾಂತ್ಯದಲ್ಲಿ ದೇಶದಲ್ಲಿ ಚಿನ್ನದ ಬೆಲೆ (Gold Rate Today) ಕುಸಿದಿದೆ. ಗುರುವಾರ ದಿಡೀರ್ 10 ಗ್ರಾಮ್ ಗೆ 1000 ರೂಪಾಯಿ ಏರಿಕೆಯಾಗಿದ್ದ ಚಿನ್ನದ ದರ (Gold price) ಚಿನ್ನ ಖರೀದಿಸಲು ಪ್ಲ್ಯಾನ್ ಮಾಡಿದ್ದವರ ಎದೆ ಬಡಿತ ಹೆಚ್ಚಿಸಿತ್ತು . ಆದರೆ ಶನಿವಾರ ಹಳದಿ ಲೋಹದ ರೇಟ್ (India Gold rate) ಒಂದಷ್ಟು ಕುಸಿದು ಅವರಲ್ಲಿ ನೆಮ್ಮದಿ ಮೂಡಿಸಿತು.
ಚಿನ್ನದ ಬೆಲೆಯ ಹಾಗೇ ಪ್ರತಿದಿನ ಹಾವು ಏಣಿಯಾಟ ಆಡುತ್ತಿರುತ್ತದೆ. ಡಾಲರ್ ಎದುರು ರೂಪಾಯಿ ಮೌಲ್ಯ , ಜಾಗತಿಕ ವಿದ್ಯಮಾನ, ಅಂತರಾಷ್ಟ್ರೀಯ ಮಾರು ಕಟ್ಟೆ, ರೆಪೋ ದರ , ರಾಜಕೀಯ ಸ್ಥಿತ್ಯಂತರ, ಶೇರು ಮಾರುಕಟ್ಟೆ ಹಲವು ವಿಷಯಗಳು ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತದೆ.
ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಸ್ವಲ್ಪ ಇಳಿದಿದೆ. 22 ಕ್ಯಾರೆಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹45 ಮತ್ತು ₹49 ಕುಸಿತವಾಗಿದೆ.
ಬೆಂಗಳೂರಿನಲ್ಲಿ ಚಿನ್ನದ ದರ( Bangalore Gold rate)
ಇಂದು ಬೆಂಗಳೂರಿನಲ್ಲಿ ನೀವು ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5730ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹45,840 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹57,300 ಮತ್ತು ₹5,73,000 ದರದಲ್ಲಿ ಖರೀದಿಸಬಹುದು.
ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹6,251 ಆಗಿದ್ದರೆ, ಎಂಟು ಗ್ರಾಂ ಬೆಲೆ ₹50,008 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹62,510 ಮತ್ತು ₹6,25,100 ವೆಚ್ಚವಾಗಲಿದೆ.
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,730
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,251
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,840
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,008
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,510
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,73,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,25,100
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,300 ಆಗಿದ್ದು ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,900, ರೂ. 57,300 ಹಾಗೂ 57,300 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 57,450 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ.
ಇಂದಿನ ಬೆಳ್ಳಿ ದರ (Silver)
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ ( Silver Rate)
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 76.25, ರೂ. 7,625 ಹಾಗೂ ರೂ. 76,250 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,700 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 77,700 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 77,700 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 77,700 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ.
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ಅಪರಾಧ17 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ24 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ22 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ22 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ23 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















