Connect with us

ಮಂಗಳೂರು

Tulu Study Centre ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆರಂಭಿಸುವಂತೆ  ಉನ್ನತ ಶಿಕ್ಷಣ ಸಚಿವರನ್ನು ಒತ್ತಾಯಿಸಿದ ಎನ್ಎಸ್ ಯುಐ  

Published

on

Ad Widget

Ad Widget

Ad Widget

Ad Widget

ಮಂಗಳೂರು, ಡಿ.16 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರತ್ಯೇಕ ತುಳು ವಿಭಾಗ (Independent Tulu Study Centre) ಆರಂಭಿಸುವಂತೆ  ಎನ್ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ನೀಡಿದ್ದಾರೆ.

Ad Widget

Ad Widget

Ad Widget

Ad Widget

ತುಳು ಭಾಷೆಯನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸಿ 2018-19ರ ಸಾಲಿನಲ್ಲಿ ಮಂಗಳೂರು ವಿವಿಯ ಹಂಪನಕಟ್ಟೆ ಸಂಧ್ಯಾ ಕಾಲೇಜಿನಲ್ಲಿ ಎಂಎ ತರಗತಿ ಆರಂಭಿಸಲಾಗಿತ್ತು. ಆದರೆ, ಎಂಎ ತರಗತಿ ಆರಂಭಗೊಂಡು ಐದು ವರ್ಷ ಕಳೆದರೂ ಕನ್ನಡ ಅಧ್ಯಯನ ವಿಭಾಗದಡಿ ನಡೆಸಲ್ಪಡುತ್ತಿದೆ. ಇದರಿಂದ ತುಳು ಭಾಷೆಯ (tulu Language) ಬಗ್ಗೆ ಉನ್ನತ ಅಧ್ಯಯನ ಕೈಗೊಳ್ಳಲು ತೊಂದರೆಯಾಗಿದ್ದು, ಸ್ವತಂತ್ರ ವಿಭಾಗದ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಮಂಗಳೂರು ವಿವಿಯ ಸಿಂಡಿಕೇಟ್ ನಲ್ಲಿ ನಿರ್ಣಯ ಆಗಿದ್ದು, ವಿವಿಯ ಕಡೆಯಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಬರೆಯಲಾಗಿದೆ. ವಿವಿಯ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಅನುಮತಿಸಿ, ಪ್ರತ್ಯೇಕ ಅಧ್ಯಯನ ವಿಭಾಗ ರಚಿಸಲು ಮುತುವರ್ಜಿ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ತುಳು ಅಧ್ಯಯನ ವಿಭಾಗ ಆರಂಭಗೊಂಡಲ್ಲಿ ಪಿಎಚ್ ಡಿ ಅಧ್ಯಯನಕ್ಕೆ ಅವಕಾಶ ಸಿಗುತ್ತದೆ. ಅಲ್ಲದೆ, ತುಳು ಸಂಸ್ಕೃತಿ, ಭಾಷೆ, ಜನಪದ ಬಗ್ಗೆ ಅಧ್ಯಯನ ಕೈಗೊಳ್ಳಲು ಶೈಕ್ಷಣಿಕವಾಗಿ ಸ್ವತಂತ್ರ ಅಸ್ತಿತ್ವ ಸಿಗುತ್ತದೆ. ಪ್ರಸ್ತುತ ಕಳೆದ ಐದು ವರ್ಷಗಳಲ್ಲಿ ತುಳು ಭಾಷೆಯಲ್ಲಿ ಹಲವಾರು ಮಂದಿ ಎಂಎ ಪೂರೈಸಿದರೂ, ಆಸಕ್ತರಿಗೆ ಉನ್ನತ ಮಟ್ಟದ ಸಂಶೋಧನೆ ಕೈಗೊಳ್ಳಲು ಅವಕಾಶ ಇಲ್ಲ. ಸ್ವತಂತ್ರ ಅಸ್ತಿತ್ವ ಇಲ್ಲದ ಕಾರಣ, ಕನ್ನಡ ಅಧ್ಯಯನ ಕೇಂದ್ರದ ಅಡಿಯಲ್ಲಿ ತುಳು ವಿಭಾಗ ಇರುವುದರಿಂದ ಉನ್ನತ ಅಧ್ಯಯನಕ್ಕೆ ಅಡ್ಡಿಯಾಗಿದೆ. ಇದಲ್ಲದೆ, ಸದ್ಯಕ್ಕೆ ಕನ್ನಡ ವಿಭಾಗದವರೇ ತುಳು ಪಠ್ಯ ರಚನೆ, ಪ್ರಶ್ನೆಪತ್ರಿಕೆ ರಚನೆ, ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವ ಬಗ್ಗೆ ಗಮನಕ್ಕೆ ತಂದಿದ್ದಾರೆ.

Ad Widget

Ad Widget <> Ad Widget

ಇದಲ್ಲದೆ, 2019ರಲ್ಲೇ ಮಂಗಳೂರು ವಿವಿಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ತುಳುವನ್ನು ಭಾಷಾ ಪತ್ರಿಕೆಯಾಗಿ ಅಧ್ಯಯನಕ್ಕೆ ಅವಕಾಶ ನೀಡಿದ್ದರೂ, ಮೂಡುಬಿದ್ರೆಯ ಆಳ್ವಾಸ್ ಮತ್ತು ರಥಬೀದಿಯ ಸರಕಾರಿ ಕಾಲೇಜು ಹೊರತುಪಡಿಸಿ ಉಳಿದ ಕಡೆ ಆರಂಭಗೊಂಡಿಲ್ಲ. ಈ ಬಗ್ಗೆ ಮುತುವರ್ಜಿ ವಹಿಸಬೇಕಾಗಿದ್ದು, ಇದಕ್ಕೆಲ್ಲ ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆಗಬೇಕಾಗಿದೆ ಎಂದು ಸುಹಾನ್ ಆಳ್ವ ಮನವಿಯಲ್ಲಿ ಒತ್ತಾಯ ಮಾಡಿದ್ದಾರೆ.

Ad Widget

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!