ಶಿಕ್ಷಣ
ScholorShip : ವಿದ್ಯಾರ್ಥಿಗಳೇ ರೂ 20 ಸಾವಿರ ಅಥಾವ ಮೇಲ್ಪಟ್ಟ ವಿದ್ಯಾರ್ಥಿ ವೇತನ ಪಡೆಯಲು ತಕ್ಷಣ ಅರ್ಜಿ ಸಲ್ಲಿಸಿ
ಶಿಕ್ಷಣ ಮನುಷ್ಯ ಜೀವನದ ಅವಿಭಾಜ್ಯ ಅಂಗ . ಇದು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ಸರಕಾರದ ಪ್ರಮುಖ ಗುರಿಗಳಲ್ಲಿ ಒಂದು . ಇದನ್ನು ಸಾಧಿಸಲು ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ, ಅದರಲ್ಲಿ ಪ್ರಮುಖವಾದದ್ದು ವಿದ್ಯಾರ್ಥಿ ವೇತನ(scholorShip).
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಸ್ಕಾಲರ್‌ಶಿಪ್ ಜಾರಿಗೊಳಿಸುತ್ತಿವೆ.ಈ ಪೈಕಿ ಎಸ್‌ಸಿ / ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪ್ರೈಸ್ ಮನಿ (Prize Money). ಸಮಾಜ ಕಲ್ಯಾಣ ಇಲಾಖೆ ಈ ವಿದ್ಯಾರ್ಥಿ ವೇತನ ಒದಗಿಸುತ್ತಿದೆ. ಈ ಯೋಜನೆ ವಿವರ ಇಲ್ಲಿದೆ (Scholarship for Students).
ಆರ್ಹತೆ – Eligibility
ಎಸ್‌ಸಿ / ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್ ಪಡೆಯಲು ಅರ್ಹರು. 2023ರಲ್ಲಿ ಪಿಯುಸಿ, ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆ ಹೊಂದಿದವರು ಈ ಸ್ಕಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯ. ಗಮನಿಸಿ, ದ್ವಿತೀಯ ಪಿಯುಸಿ, ಮೂರು ವರ್ಷದ ಡಿಪ್ಲೋಮಾ, ಪದವಿ ಮತ್ತು ಯಾವುದೇ ವಿಷಯದ ಸ್ನಾತಕೋತ್ತರ ಪದವಿಯನ್ನು 2023ರಲ್ಲಿ ಪಾಸಾಗಿರಬೇಕು.
ಅರ್ಜಿ ಸಲ್ಲಿಕೆಗೆ ಕೊನೆ ದಿನ : last date
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31. ಯಾವುದೇ ಕಾರಣಕ್ಕೂ ದಿನಾಂಕ ವಿಸ್ತರಣೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ. ಒಂದುವೇಳೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ನಿಮ್ಮ ಕಾಲೇಜಿನ ಹೆಸರು ಇಲ್ಲದಿದ್ದರೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿ.
ಮೊತ್ತ
ದ್ವಿತೀಯ ಪಿಯುಸಿ, ಮೂರು ವರ್ಷದ ಡಿಪ್ಲೋಮಾ: 20,000 ರೂ.
ಪದವಿ: 25,000 ರೂ.
ಸ್ನಾತಕೋತ್ತರ ಪದವಿ: 30,000 ರೂ.
ಎಂಜಿನಿಯರಿಂಗ್, ವೈದ್ಯಕೀಯ ಪದವಿ: 35,000 ರೂ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ https://swdservices.karnataka.gov.in/swprizemoney/Home.aspx
ಬಳಿಕ ಆನ್‌ಲೈನ್ ಅರ್ಜಿ / Online Application (Passed in 2023 only) ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಬಳಿಕ ತೆರೆಯುವ ಪೇಜ್‌ನಲ್ಲಿ SSLC Details ಆಯ್ಕೆ ಮೇಲೆ ಕ್ಲಿಕ್ ಮಾಡಿ. ಇಲ್ಲಿ ಕೇಳಿರುವ ಮಾಹಿತಿ ತುಂಬಿ Submit ಬಟನ್ ಕ್ಲಿಕ್ ಮಾಡಿ
‘ನಿಮ್ಮ ಗುರುತಿನ ದೃಢೀಕರಣ ಸೇವೆ’ ಎನ್ನುವ ಆಪ್ಶನ್ ಇರುತ್ತದೆ. ಅದರಲ್ಲಿ ನಿಮ್ಮ ಆಧಾರ್ ಕಾರ್ಡ್‌ನಲ್ಲಿರುವಂತೆ ಹೆಸರನ್ನು ಭರ್ತಿ ಮಾಡಿ. ಬಳಿಕ ಆಧಾರ್ ಸಂಖ್ಯೆ ನಮೂದಿಸಿ. ಕೊನೆಗೆ I Agree ಆಯ್ಕೆಯನ್ನು ಸೆಲೆಕ್ಟ್ ಮಾಡಿ. ಕೊನೆಗೆ Submit ಬಟನ್ ಕ್ಲಿಕ್ ಮಾಡಿ.
ಬಳಿಕ ತೆರೆಯುವ ಪುಟದಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ಭರ್ತಿ ಮಾಡಿ
College & Course Detail ಎಂದಿರುತ್ತದೆ. ಅಲ್ಲಿ ನಿಮ್ಮ ಕಾಲೇಜು, ಕೋರ್ಸ್, ಎಕ್ಸಾಂ ರಿಜಿಸ್ಟರ್ ನಂಬರ್ ಮತ್ತು ಪಡೆದಿರುವ ಅಂಕಗಳನ್ನು ನಮೂದಿಸಿ.
ಈಗ ನಿಮ್ಮ ಬ್ಯಾಂಕ್ ಖಾತೆಯ ವಿವರ ನಮೂದಿಸಿ
ಬಳಿಕ ಅಗತ್ಯವಾದ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ
ಕೊನೆಗೆ ಅರ್ಜಿ ಸಲ್ಲಿಸಿ
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















