ಆರೋಗ್ಯ
Two COVID-19 deaths in kerala : ಕೇರಳದಲ್ಲಿ ಮತ್ತೆ ಕೊರೊನಾ ಆರ್ಭಟ – ಹೊಸ ರೂಪಾಂತರಿ ವೈರಸ್ ಗೆ 2 ಬಲಿ : ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ
ಕಳೆದ ಕೆಲ ದಿನಗಳ ಅಂತರದಲ್ಲಿ ಉತ್ತರ ಕೇರಳದ ಜಿಲ್ಲೆಗಳಲ್ಲಿ ಇಬ್ಬರು ಕೋವಿಡ್ -19 ರ ಹೊಸ ರೂಪಾಂತಾರಿ ವೈರಸ್ ಗೆ (JN.1 Covid subvariant) ಸಾವನ್ನಪ್ಪಿದ್ದಾರೆ. ಈ ಬಳಿಕ ರಾಜ್ಯಾದ್ಯಂತ ಸೋಂಕಿನ ವಿರುದ್ಧ ಕೇರಳದ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಕಳೆದ ಕೆಲ ದಿನಗಳಿಂದ ಕೇರಳದಲ್ಲಿ ಕೋರೊನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಾಣಿಸಿದೆ.
ಕೋಯಿಕ್ಕೋಡ್ ಜಿಲ್ಲೆಯ ವಟ್ಟೋಲಿಯ ಕಲಿಯಟ್ಟುಪರಂಬತ್ ಕುಮಾರನ್ (77) ಮತ್ತು ಕಣ್ಣೂರು ಜಿಲ್ಲೆಯ ಪಾನೂರಿನ ಪಾಲಕಂಡಿ ಅಬ್ದುಲ್ಲಾ (82) ಈ ನವ ರೂಪಾಂತರಿ ಸೋಂಕಿಗೆ ಬಲಿಯಾದವರು. ಕುಮಾರನ್ ಅವರ ನಿಧನದ ಬಳಿಕ ನಡೆಸಿದ ಲ್ಯಾಬ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ -19 ದೃಢಪಟ್ಟಿತ್ತು. ಕೆಮ್ಮು ಮತ್ತು ಉಸಿರಾಟದ ತೊಂದರೆಗೆ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್ಲಾ ಕೂಡ ಇದೆ ಸೋಂಕಿಗೆ ಬಲಿಯಾಗಿದ್ದಾರೆ . ತಿಂಗಳ ಬಳಿಕ ಕೇರಳದಲ್ಲಿ ಕೋವಿಡ್ ನಿಂದ ಸಾವು ಸಂಭವಿಸಿದೆ.
2020, 2021 ಜಗತ್ತನ್ನೆ ತಲ್ಲಣಿಸುವಂತೆ ಮಾಡಿದ ಕೋವಿಡ್ ಕಳೆದೊಂದು ವರ್ಷದಿಂದ ಕಡಿಮೆಯಾಗಿತ್ತು. 2019ರ ಡಿಸೆಂಬರ್ ತಿಂಗಳಿನಲ್ಲಿ ಚೀನಾದಲ್ಲಿ ಕೊರೊನಾ ಮೊದಲ ಬಾರಿ ಅಟ್ಟಹಾಸ ಮೆರೆದಿತ್ತು. ಇದೀಗ ಸರಿಯಾಗಿ 4 ವರ್ಷ ಬಳಿಕ ಮತ್ತೆ ಡಿಸೆಂಬರ್ ತಿಂಗಳಿನಲ್ಲಿ ಕೊರೊನಾ ತನ್ನ ಪ್ರತಾಪ ತೋರಿಸಲು ಆರಂಭಿಸಿದೆ.
ಕಳೆದ ಒಂದು ವಾರದಲ್ಲಿ ಕೇರಳದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇದರೊಂದಿಗೆ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,296 ಕ್ಕೇರಿದೆ. ಶುಕ್ರವಾರ ದೇಶದಲ್ಲಿ 17,605 ಮಂದಿಯ ತಪಾಸಣೆ ನಡೆಸಲಾಗಿದ್ದು, 312 ಮಂದಿಗೆ ರೋಗ ದೃಢಪಟ್ಟಿದೆ. ಈ ಪೈಕಿ 280 ರೋಗಿಗಳು ಕೇರಳದಲ್ಲಿದ್ದಾರೆ. ಪರೀಕ್ಷಾ ಧನಾತ್ಮಕತೆಯ ದರ ಶೇ.1.7ಕ್ಕೇರಿದೆ.
ಓಮಿಕ್ರಾನ್‌ನ ಉಪ ರೂಪವಾದ ಜೆಎನ್- 1 ಕೇರಳದಲ್ಲಿ ಇರುವುದನ್ನು ಕೇಂದ್ರ ಸರಕಾರ ಶನಿವಾರ ಖಚಿತಪಡಿಸಿದೆ. ಈ ರೂಪಾಂತರಿ ಮೊದಲು ಆಗಸ್ಟ್‌ನಲ್ಲಿ ಲಕ್ಸೆಂಬರ್ಗ್‌ನಲ್ಲಿ ವರದಿಯಾಗಿತ್ತು. ಇದು ಬಳಿಕ ಇತರ ದೇಶಗಳಿಗೆ ಹರಡಿದೆ. ಬಿಎ .2.86 ರೂಪಾಂತರವನ್ನು ಪಿರೋಲಾ ಎಂದೂ ಕರೆಯಲಾಗುತ್ತದೆ, ಇದು ಇತ್ತೀಚೆಗೆ ಯುಎಸ್ ಮತ್ತು ಚೀನಾದಲ್ಲಿ ಪತ್ತೆಯಾಗಿದೆ.
ScholorShip : ವಿದ್ಯಾರ್ಥಿಗಳೇ ರೂ 20 ಸಾವಿರ ಅಥಾವ ಮೇಲ್ಪಟ್ಟ ವಿದ್ಯಾರ್ಥಿ ವೇತನ ಪಡೆಯಲು ತಕ್ಷಣ ಅರ್ಜಿ ಸಲ್ಲಿಸಿ
ಜೆಎನ್ ೧ ರೂಪಾಂತರಿ ವೈರಸ್ ಆಗ್ನೇಯ ಏಷ್ಯಾದ ದೇಶಗಳಾದ ಸಿಂಗಾಪುರ ಮತ್ತು ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ.ಜೆ ಎನ್- 1 ಕೋವಿಡ್‌ನ ಅದೇ ಸಾಮಾನ್ಯ ಲಕ್ಷಣಗಳನ್ನು ಹೊಂದಿದೆ. ಇದೇ ವೇಳೆ ಚೀನಾದಲ್ಲಿ ಹೊಸ ಕೋವಿಡ್ ರೂಪಾಂತರವೂ ದೃಢಪಟ್ಟಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ನಿಧನ ವಾರ್ತೆ7 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized20 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ7 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಸ್ಥಳೀಯ6 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು4 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ರಾಜಕೀಯ6 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
Uncategorized23 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ
-
ಶಿಕ್ಷಣ24 hours agoSahyadri College-ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ಹದಿನಾರನೇ ಎಂಜಿನಿಯರಿಂಗ್ ಪದವಿ ಪ್ರದಾನ ಸಮಾರಂಭ


















