ರಾಷ್ಟ್ರೀಯ
Sajjan Jindal: Big news: ಭಾರತದ ಸ್ಟೀಲ್ ದೈತ್ಯ ದೈತ್ಯ ಜೆಎಸ್ಡಬ್ಲ್ಯೂಸಮೂಹದ ಎಂಡಿ ಸಜ್ಜನ್ ಜಿಂದಾಲ್ ನಿಂದ ಖ್ಯಾತ ನಟಿಯ ಅತ್ಯಾಚಾರ – ಮುಂಬಾಯಿಯಲ್ಲಿ ಪ್ರಕರಣ ದಾಖಲು
ಮುಂಬೈ: ಸ್ಟೀಲ್ ದೈತ್ಯ ಜೆಎಸ್ ಡಬ್ಲ್ಯೂ ಸಮೂಹದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಸಜ್ಜನ್ ಜಿಂದಾಲ್ (Sajjan Jindal) ವಿರುದ್ಧ ಮುಂಬಾಯಿಯ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟಿಯೊಬ್ಬರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶದ ಮೇರೆಗೆ ಬಿಕೆಸಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದರು.
2022 ರ ಜನವರಿಯಲ್ಲಿ ಆರೋಪಿ ಸಜ್ಜನ್ ಜಿಂದಾಲ್ ಬಾಂದ್ರಾ–ಕುರ್ಲಾ ಕಾಂಪ್ಲೆಕ್ನಲ್ಲಿರುವ ಕಂಪನಿಯ ಮುಖ್ಯ ಕಚೇರಿಯ ಮೇಲಿನ ಪೆಂಟಾ ಹೌಸ್ ನಲ್ಲಿ ನನ್ನ ವಿರೋಧದ ನಡುವೆಯೇ ಅತ್ಯಾಚಾರ ಎಸಗಿರುವುದಾಗಿ ನಟಿ ಆರೋಪಿಸಿದ್ದಾರೆ.
ಈ ಬಗ್ಗೆ ಈ ವರ್ಷದ ಆರಂಭದಲ್ಲಿ (2023ರ ಜನವರಿಯಲ್ಲಿ ) ನಟಿ ಬಿಕೆಸಿ ಪೊಲೀಸರಿಗೆ ದೂರು ನೀಡಿದ್ದು ಅವರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದರು. ಹೀಗಾಗಿ ಸಂತ್ರಸ್ತೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನ್ಯಾಯಾಲಯವು ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ಸೂಚಿಸಿದ್ದು ಇದೀಗ FIR ದಾಖಲಾಗಿದೆ
ಅಕ್ಟೋಬರ್ 2021 ರಲ್ಲಿ ದುಬೈನ ಕ್ರೀಡಾಂಗಣವೊಂದರ ವಿಐಪಿ ಬಾಕ್ಸ್ ನಲ್ಲಿ ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದಾಗ ನಟಿ ಜಿಂದಾಲ್ ಅವರನ್ನು ಮೊದಲ ಬಾರಿಗೆ ಭೇಟಿಯಾದರು. ನಂತರ ಜೈಪುರದಲ್ಲಿ ಸಂಸದ ಪ್ರಫುಲ್ ಪಟೇಲ್ ಅವರ ಪುತ್ರನ ಮದುವೆಯಲ್ಲಿ ಭೇಟಿಯಾದರು. ಈ ವೇಳೆ ಜಿಂದಾಲ್ ನನ್ನೊಂದಿಗೆ ಸ್ನೇಹ ಬೆಳೆಸಿದರು ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.
ದುಬೈನಲ್ಲಿ ರಿಯಲ್ ಎಸ್ಟೇಟ್ ಸಲಹೆಗಾರರಾಗಿರುವ ನನ್ನ ಸಹೋದರನಿಂದ ಅಸ್ತಿ ಖರೀದಿಸಲು ಜಿಂದಾಲ್ ಆಸಕ್ತಿ ವ್ಯಕ್ತಪಡಿಸಿದ್ದರಿಂದ ನಾವು ಮೊಬೈಲ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡೆವು ಹಾಗು ಮುಂಬೈನಲ್ಲಿ ಭೇಟಿಯಾಗಿದ್ದೆವು” ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕದ ದಿನಗಳಲ್ಲಿ ನಮ್ಮ ನಡುವೆ ಮೊಬೈಲ್ ಚ್ಯಾಟಿಂಗ್ ನಡೆದಿದ್ದು, ಈ ವೇಳೆ ಜಿಂದಾಲ್ ಮದುವೆಯಾಗಿದ್ದರೂ ನನ್ನಲ್ಲಿ ಪ್ರೇಮ ನಿವೇದನೆ ಮಾಡಿಕೊಂಡರು. ಅಲ್ಲದೇ ನನ್ನನ್ನು ಚುಂಬಿಸಲು ಪ್ರಯತ್ನಿಸಿದರು ಮತ್ತು ದೈಹಿಕವಾಗಿ ನಿಕಟವಾಗುವ ಬಗ್ಗೆ ಮಾತನಾಡಿದರು. ಆದರೇ ನಾನು ಇದನ್ನು ತಿರಸ್ಕರಿಸಿದ್ದು, ಇದು ಎಲ್ಲವು ಮದುವೆಯ ಬಳಿಕವಷ್ಟೆ ಸಾದ್ಯ ಎಂದು ತಿಳಿಸಿದ್ದೆ, ಎಂದು ದೂರಿನಲ್ಲಿ ತಿಳಿಸಿದೆ.
ಜನವರಿ 2022 ರಲ್ಲಿ, ಸಂತ್ರಸ್ತೆಯು ಜಿಂದಾಲ್ ಕಂಪನಿಯ ಪ್ರಧಾನ ಕಚೇರಿಯಲ್ಲಿ ಸಭೆಯೊಂದರಲ್ಲಿ ಭಾಗವಹಿಸಲು ಹೋಗಿದ್ದು, ಈ ವೇಳೆ ಜಿಂದಾಲ್ ಅವಳನ್ನು ಪೆಂಟಾ ಹೌಸ್ ಗೆ ಕರೆದು ಕೊಂಡು ಹೋಗಿದ್ದಾರೆ. ಈ ವೇಳೆ ನನ್ನ ನಿರಂತರ ಪ್ರತಿಭಟನೆಗಳು ಮತ್ತು ನಿರಾಕರಣೆಗಳ ಹೊರತಾಗಿಯೂ, ಜಿಂದಾಲ್ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ನಟಿ ಗಂಭೀರ ಆರೋಪ ಮಾಡಿದಾರೆ.
ಘಟನೆಯ ನಂತರವೂ ತಾನು ಅವನೊಂದಿಗೆ ಸ್ನೇಹವನ್ನು ಮುಂದುವರಿಸಲು ಬಯಸಿದೆ. ಆದರೆ ಅವರು ರಿಪ್ಲೈ ಕೊಡುವುದನ್ನು ನಿಲ್ಲಿಸಿದ್ದು, ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದರು ಎಂದು ದೂರುದಾರರು ಹೇಳಿದ್ದಾರೆ. ಜೂನ್ 2022 ರಲ್ಲಿ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡುವ ಮೊದಲು ಪೊಲೀಸರನ್ನು ಸಂಪರ್ಕಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿಂದಾಲ್ ನಟಿಗೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿ
ರಾಷ್ಟ್ರೀಯ
Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.
ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
ನಿಧನ ವಾರ್ತೆ9 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized22 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ7 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಸ್ಥಳೀಯ8 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಮಂಗಳೂರು6 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ನಿಧನ ವಾರ್ತೆ3 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ರಾಜಕೀಯ7 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಬಿಗ್ ನ್ಯೂಸ್3 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















