ಸಾಮಾಜಿಕ ಮಾಧ್ಯಮ
Hardik Pandya: ಸಾಮಾಜಿಕ ಜಾಲತಾಣದಲ್ಲಿ ಮುಂಬೈ ಇಂಡಿಯನ್ಸನ್ನು ಅನ್ ಫಾಲೋ ಮಾಡುತ್ತಿರುವ ಅಭಿಮಾನಿಗಳು – ತಂಡಕ್ಕೆ ಮುಳುವಾಗಲಿದೆಯೇ ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ ಆಯ್ಕೆ ?
ಹೊಸದಿಲ್ಲಿ: ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ನಿಮಿತ್ತ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ತಂಡಕ್ಕೆ ನೂತನ ನಾಯಕನಾಗಿ ನೇಮಕಗೊಂಡಿದ್ದಾರೆ. ಈ ವಿಷಯವನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪ್ರಕಟಿಸಿದೆ. ಆದರೆ ಹಾರ್ದಿಕ್ ಪಾಂಡ್ಯ ಎಂಟ್ರಿ ಸುದ್ದಿ ಬೆನ್ನಲ್ಲೇ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಅನ್ ಫಾಲೋ ಮಾಡಿದ್ದರು. ಇನ್ನು ರೋಹಿತ್ ಶರ್ಮಾ ಅವರನ್ನು ಮುಂಬೈ ತಂಡದ ನಾಯಕತ್ವದಿಂದ ಕೆಳಗಿಳಿಸಿದ ನಂತರ, ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ ಕೂಡ ಹಾರ್ಟ್ ಬ್ರೇಕ್ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ.
ತಂಡದ ನೂತನ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ಆಯ್ಕೆಯಾಗಿ ದಿನಗಳು ಕಳೆದಿವೆ. ಆದರೆ ಈ ಅಚ್ಚರಿಯ ಆಯ್ಕೆಯ ಬಿಸಿ ತಣ್ಣಗಾಗುವಂತೆ ಕಾಣುತ್ತಿಲ್ಲ. ಏಕೆಂದರೆ ಇಲ್ಲಿ ಹಾರ್ದಿಕ್ ಪಾಂಡ್ಯಗಾಗಿ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಪದಚ್ಯುತಿಗೊಳಿಸಿದ್ದಾರೆ. ಇದನ್ನು ಅರಗಿಸಿಕೊಳ್ಳಲು ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಈಗಾಗಲೇ ಅನೇಕ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ತಂಡದ ಸೋಷಿಯಲ್ ಮೀಡಿಯಾ ಖಾತೆಗಳಿಂದ ವಿಮುಖರಾಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಕೆಲ ಅಭಿಮಾನಿಗಳು ಮುಂಬೈ ತಂಡದ ಜೆರ್ಸಿ-ಕ್ಯಾಪ್ಗಳನ್ನು ಸುಡುವ ಮೂಲಕ ತಮ್ಮ ಸಿಟ್ಟನ್ನು ತೋರ್ಪಡಿಸಿದ್ದಾರೆ.
ಮೇಲ್ನೋಟಕ್ಕೆ ಇದ್ಯಾವುದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎನ್ನಬಹುದು. ಆದರೆ ಹೊಸದಾಗಿ ಆಯ್ಕೆಯಾಗಿರುವ ನಾಯಕ ಮಾಡಿದ ಹಾರ್ದಿಕ್ ಪಾಂಡ್ಯನೇ ಮುಂಬೈ ಪಾಲಿಗೆ ಅಪಯವಾಗಬಹುದು ಏಕೆಂದರೆ…
ಹಾರ್ದಿಕ್ ಪಾಂಡ್ಯ ಬಿಗ್ ಮ್ಯಾಚ್ ವಿನ್ನರ್ ಎಂಬುದರಲ್ಲಿ ಸಂಶಯವೇ ಬೇಡ. ಆದರೆ ಅವರು ಗಾಯ ಪೀಡಿತ ಆಟಗಾರ ಎಂಬುದು ನೆನಪಿರಲಿ. ಹಾರ್ದಿಕ್ ಪಾಂಡ್ಯ ಅವರ ವೃತ್ತಿಜೀವನದಲ್ಲಿ ಅರ್ಧ ಭಾಗವು ಗಾಯಗಳಿಗೆ ಬಲಿಯಾಗಿದೆ. 2023ರ ವಿಶ್ವಕಪ್‌ನಲ್ಲೂ ಇದು ಪುನರಾವರ್ತನೆಯಾಗಿತ್ತು. ಮಹತ್ವದ ಟೂರ್ನಿಯಲ್ಲಿ ಅವರು ಆಡಿದ್ದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಅಂತಹ ಆಟಗಾರನನ್ನು ನಾಯಕನನ್ನಾಗಿ ಮಾಡುವುದು ಕತ್ತಿಯಂತೆ. ಇದರಿಂದ ಮುಂಬೈ ಇಂಡಿಯನ್ಸ್ ಮುಂದೆ ಪರಿಣಾಮ ಎದುರಿಸಬೇಕಾದೀತು.
ಹಾರ್ದಿಕ್ ಪಾಂಡ್ಯ ಸದಾ ಫಿಟ್ನೆಸ್ ಸಮಸ್ಯೆಯಿಂದ ಬಳಲುವ ಆಟಗಾರ. ಹೀಗಾಗಿ ಮುಂಬೈ ಹಂಗಾಮಿ ನಾಯಕನನ್ನು ಕೂಡ ಆಯ್ಕೆ ಮಾಡಿಕೊಂಡಿರಬೇಕಾಗುತ್ತದೆ. ಪಾಂಡ್ಯ ಅನುಪಸ್ಥಿತಿಯಲ್ಲಿ ತಂಡವನ್ನು ಯಾರು ನಿಭಾಯಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಿದೆ. ಅದರಲ್ಲೂ ಹಂಗಾಮಿ ನಾಯಕರುಗಳು ತಂಡವನ್ನು ಮುನ್ನಡೆಸಿ ಯಶಸ್ಸು ಸಾಧಿಸಿದ ನಿದರ್ಶನಗಳು ತುಂಬಾ ವಿರಳ. ಹೀಗಾಗಿ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಕೂಡ ಮುಂಬೈ ಇಂಡಿಯನ್ಸ್ ಮೇಲೆ ಪರಿಣಾಮ ಬೀರಬಹುದು.
ಆಲ್ರೌಂಡರ್ ಆಗಿ ಕಣಕ್ಕಿಳಿಯುತ್ತಾರಾ?: ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಅನ್ನು ಪರಿಗಣಿಸಿ, ಮುಂಬೈ ಇಂಡಿಯನ್ಸ್ ಅವರನ್ನು ಆಲ್ ರೌಂಡರ್ ಆಗಿ ಕಣಕ್ಕಿಳಿಸಲಿದೆಯಾ ಎಂಬುದೇ ಮೊದಲ ಪ್ರಶ್ನೆ. ಏಕೆಂದರೆ ಗಾಯದ ಕಾರಣ ಬೌಲಿಂಗ್ ಮಾಡಲು ಸಾಧ್ಯವಾಗದ ಕಾರಣ ಪಾಂಡ್ಯ ಅವರನ್ನು 2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡವೇ ಬಿಡುಗಡೆ ಮಾಡಿತ್ತು.
ಇದೀಗ ಗಾಯದ ಕಾರಣ ವಿಶ್ವಕಪ್ನಿಂದ ಹೊರಗುಳಿದಿದ್ದರು. ಇದಾದ ಬಳಿಕ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಮುಂಬರುವ ಐಪಿಎಲ್ನಲ್ಲಿ ಅವರು ಆಲ್ರೌಂಡರ್ ಆಗಿ ಕಣಕ್ಕಿಳಿಯುತ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಅವರು ಬೌಲಿಂಗ್ ಮಾಡದಿದ್ದರೆ ಅದು ಕೂಡ ಮುಂಬೈ ಪ್ಲೇಯಿಂಗ್ ಇಲೆವೆನ್ನ ಸಮತೋಲನದ ಮೇಲೆ ಪರಿಣಾಮ ಬೀರಲಿದೆ.
ಹಾರ್ದಿಕ್ ಪಾಂಡ್ಯ ನಾಯಕನಾಗುವುದು ಮುಂಬೈ ಇಂಡಿಯನ್ಸ್ ಏಕತೆಗೆ ಅಪಾಯವನ್ನುಂಟು ಮಾಡಬಹುದು. ರೋಹಿತ್ ಶರ್ಮಾ ಲೆಜೆಂಡ್ ಆಟಗಾರ. ಹೀಗಾಗಿ ಅವರ ಮಾತುಗಳನ್ನು ಪ್ರತಿಯೊಬ್ಬ ಆಟಗಾರರು ಗೌರವಿಸುತ್ತಾರೆ. ಹೀಗಾಗಿಯೇ ಮುಂಬೈ ಇಂಡಿಯನ್ಸ್ ತಂಡದಲ್ಲೂ ಒಗ್ಗಟ್ಟು ಕಾಣಿಸುತ್ತಿತ್ತು. ಆದರೆ ಪಾಂಡ್ಯ ವಿಷಯದಲ್ಲಿ ಇದು ಸಾಧ್ಯವೇ?
ಏಕೆಂದರೆ ತಂಡಕ್ಕೆ ಹಾರ್ದಿಕ್ ಪಾಂಡ್ಯ ಎಂಟ್ರಿ ಸುದ್ದಿ ಬೆನ್ನಲ್ಲೇ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಅನ್‌ಫಾಲೋ ಮಾಡಿದ್ದರು. ಇನ್ನು ರೋಹಿತ್ ಶರ್ಮಾ ಅವರನ್ನು ಮುಂಬೈ ತಂಡದ ನಾಯಕತ್ವದಿಂದ ಕೆಳಗಿಳಿಸಿದ ನಂತರ, ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ ಕೂಡ ಹಾರ್ಟ್ ಬ್ರೇಕ್ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಅಂದರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ನಿರ್ಧಾರದಿಂದ ಆಟಗಾರರೂ ತೀವ್ರ ನಿರಾಶೆಗೊಂಡಿದ್ದಾರೆ. ಹೀಗಾಗಿಯೇ ಮುಂಬೈ ತಂಡದ ಇತರೆ ಸ್ಟಾರ್ ಆಟಗಾರರು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಒಪ್ಪಿಕೊಳ್ಳುತ್ತಾರೆಯೇ ಎಂಬುದೇ ದೊಡ್ಡ ಪ್ರಶ್ನೆ.
ಮುಂಬೈ ಇಂಡಿಯನ್ಸ್ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದು. ಆದರೆ ಈ ಜನಪ್ರಿಯತೆಗೆ ರೋಹಿತ್ ಶರ್ಮಾ ಅವರ ಕೊಡುಗೆ ಕೂಡ ಇದೆ. ಏಕೆಂದರೆ ಹಿಟ್ಮ್ಯಾನ್ ಅವರನ್ನು ಇಷ್ಟಪಟ್ಟು ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುವ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಇದರ ಬೆನ್ನಲ್ಲೇ ಲಕ್ಷಾಂತರ ಅಭಿಮಾನಿಗಳು ಮುಂಬೈ ಇಂಡಿಯನ್ಸ್ನ ಸೋಷಿಯಲ್ ಮೀಡಿಯಾ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಈ ಆಕ್ರೋಶದ ಮತ್ತೊಂದು ಮಜಲು ಮುಂಬೈ ಇಂಡಿಯನ್ಸ್ ತಂಡದ ಪಂದ್ಯಗಳ ವೇಳೆ ಸ್ಡೇಡಿಯಂನಲ್ಲಿ ಕಂಡು ಬರುವ ಸಾಧ್ಯತೆಯಿದೆ. ಈ ಎಲ್ಲಾ ಕಾರಣಗಳಿಂದಾಗಿ ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಮುಂಬೈ ಇಂಡಿಯನ್ಸ್ ಪಾಲಿಗೆ ಆಪಾಯವಾಗಬಹುದು
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
















