ಪುತ್ತೂರು
ಉಚಿತ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾದ ಎಲ್ಲರೂ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ನೀಡಬೇಕು – ಪುತ್ತೂರು ವಾರ್ಡ್ 1 ರ ಬೈಎಲೆಕ್ಷನ್ ಪ್ರಚಾರದಲ್ಲಿ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಸೇವೆ, ಪ್ರತೀ ಮಹಿಳೆಯರಿಗೆ ತಿಂಗಳಿಗೆ 2000 ,ಯುವನಿಧಿ ಮತ್ತು ಪಡಿತರ ಹಣವನ್ನು ಪ್ರತೀ ಬಿಪಿಎಲ್ ಕುಟುಂಬಕ್ಕೆ ನೀಡಿದೆ,ಇದುವರೆಗೆ ಬಂದ ಸರಕಾರ ಯಾವ ಕೊಡುಗೆಯನ್ನೂ ನೀಡಿಲ್ಲ, ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ, ನಗರಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮತದಾರರಲ್ಲಿ ಶಾಸಕರಾದ ಅಶೋಕ್ ರೈ ಮನವಿ ಮಾಡಿದರು.
ಒಂದನೇ ವಾರ್ಡು ವ್ಯಾಪ್ತಿಯ ನೆಹರೂ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಪುತ್ತೂರು ನಗರಸಭೆಯ ಪ್ರತೀ ವಾರ್ಡುಗಳಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡುತ್ತೇವೆ, ನಗರಸಭಾ ವ್ಯಾಪ್ತಿಯಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕುರಿತು ಈಗಾಗಲೇ 1000 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದ ಶಾಸಕರು ನಗರಸಭಾ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.
ಬಡವರ ಪರ ಇರುವ ಕಾಂಗ್ರೆಸ್ ಎಂದಿಗೂ ಅಭಿವೃದ್ದಿಯ ಪರವೇ ಆಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿದಂತೆ ನಡೆಯುವ ಸೀಎಂ. ಕಾಂಗ್ರೆಸ್ ವಿರುದ್ದ ಅಪಪ್ರಚಾರ ಮಾಡುವವರಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಬಗ್ಗೆ ತಿಳಿಸಿ. ಪ್ರತೀ ಕುಟುಂಬಕ್ಕೂ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತಿರುವುದು ದೇಶದಲ್ಲೇ ಮೊದಲ ಯೋಜನೆಯಾಗಿದೆ. ಮಹಿಳೆಯರು ಇಡೀರಾಜ್ಯಾದ್ಯಂತ ಸರಕಾರಿ ಬಸ್ ನಲ್ಲಿ ಉಚಿತ ಸಂಚಾರ ಮಾಡಬಹುದಾಗಿದೆ.
ಪುತ್ತೂರಿಗೆ ಕೆಎಂಎಫ್ ಯೋಜನೆಯನ್ನು ತರುವ ಮೂಲಕ ಪುತ್ತೂರಿನ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಲಿದೆ. 94 ಸಿ ಮತ್ತು ಸಿ ಸಿ ಯಾವುದೇ ಭೃಷ್ಡಾಚಾರವಿಲ್ಲದೆ ನೀಡಲಾಗುತ್ತಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ.ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೊಡುಗೆ ಅನುದಾನವನ್ನು ನೀಡುವ ಮೂಲಕ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.
ಸರಕಾರದ ಉಚಿತ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾದ ಎಲ್ಲರೂ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ನೀಡಬೇಕು. ಮತದಾರ ಶಕ್ತಿ ನೀಡಿದರೆ ಇನ್ನೂ ಹೆಚ್ಚಿನ ಅಭಿವೃದ್ದಿ ಕೆಲಸ ಮಾಡಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು, ಚಂದ್ರಹಾಸ ಶೆಟ್ಟಿ, ಕೃಷ್ಣಪ್ರಸಾದ್ ಳ್ವ, ರೋಶನ್ ರೈ ಬನ್ನೂರು,ರಾಧಾಕೃಷ್ಣ ನಾಯ್ಕ್, ಜಯಪ್ರಕಾಶ್ ಬದಿನಾರ್, ರಂಜಿತ್ ಬಂಗೇರ,ಈಶ್ವರ ಭಟ್ ಪಂಜಿಗುಡ್ಡೆ, ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ರಾಮಣ್ಣ ಪಿಲಿಂಜ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದಾಲಿ ಸ್ವಾಗತಿಸಿದರು.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
-
Uncategorized15 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್9 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ13 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ14 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ13 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್14 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















