ಕ್ರೈಂ
barbaric act: ರಾಜ್ಯದಲ್ಲಿ ಬೆಳಗಾವಿ ಮಾದರಿ ಮತ್ತೊಂದು ಅನಾಗರಿಕ ಕೃತ್ಯ : ಹುಡುಗಿ ಪ್ರಿಯಕರನ ಜತೆ ಓಡಿ ಹೋದಳೆಂದು ಯುವಕನ ಮಾವನ ವಿವಸ್ತ್ರಗೊಳಿಸಿ ಹಲ್ಲೆ
ಹಾವೇರಿ: ಬೆಳಗಾವಿ ಪ್ರಕರಣ (Belagavi Case) ಮಾಸುವ ಮುನ್ನವೇ ಮತ್ತೊಂದು ಅನಾಗರಿಕ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿತ್ತು. ಹಾವೇರಿಯ ಮುದೇನೂರ ಗ್ರಾಮದ ಪ್ರಕಾಶನ ಜೊತೆಗೆ ಚಳಗೇರಿಯ ಯುವತಿ ಓಡಿ ಹೋಗಿದ್ದಳು. ಈ ವಿಚಾರಕ್ಕೆ ಸಿಟ್ಟಾದ ಯುವತಿಯ ಕಡೆಯುವರು ಪ್ರಕಾಶ್ ಸೋದರ ಮಾವ ಗ್ರಾಮ ಪಂಚಾಯ್ತಿ ಸದಸ್ಯನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿ ಪೊಲೀಸ್ ಠಾಣೆಯ (Police Station) ಮುಂದೆ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ (Chalageri, Ranebennur) ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ದೂರು ದಾಖಲಿಸಿದ್ದಾರೆ. ಮುದೇನೂರ ಗ್ರಾಮದ ಪ್ರಕಾಶ್ (28) ಮತ್ತು ಚಳಗೇರಿಯ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಮದುವೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದ್ದರಿಂದ ಅವರು ಊರು ಬಿಟ್ಟು ಪರಾರಿಯಾಗಿದ್ದಾರೆ
20 ಜನರ ತಂಡದಿಂದ ಹಲ್ಲೆ
ಇದರಿಂದ ಕೋಪಗೊಂಡ ಯುವತಿ ಕುಟುಂಬಸ್ಥರು ಪ್ರಕಾಶ್ ಮಾವನನ್ನು ಅರೆಬೆತ್ತಲೆಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರನ್ನು ಕೇವಲ ಒಳ ಉಡುಪಿನಲ್ಲಿಯೇ ಕರೆ ತಂದು ಪೊಲೀಸ್ ಠಾಣೆ ಮುಂದೆ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಹಲ್ಲೆ ನಡೆಸುವ ವೇಳೆ ಅವರ ಪತ್ನಿಯನ್ನು ಸಹ ಗುಂಪು ಠಾಣೆಗೆ ಕರೆದುಕೊಂಡು ಬಂದಿತ್ತು.
ScholorShip : ವಿದ್ಯಾರ್ಥಿಗಳೇ ರೂ 20 ಸಾವಿರ ಅಥಾವ ಮೇಲ್ಪಟ್ಟ ವಿದ್ಯಾರ್ಥಿ ವೇತನ ಪಡೆಯಲು ತಕ್ಷಣ ಅರ್ಜಿ ಸಲ್ಲಿಸಿ
ದೂರು ದಾಖಲು
ಯುವತಿಯ ಕುಟುಂಬಸ್ಥರಾದ ಶಿವಾಜಿ ಕಮದೋಡು, ಬಸಣ್ಣ ಸೇರಿದಂತೆ 20 ಜನರಿಂದ ಹಲ್ಲೆ ನಡೆದಿದೆ ಎಂದು ಹಲ್ಲೆಗೆ ಒಳಗಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ದಿನಗಳ ಹಿಂದೆ ಪ್ರಕಾಶ್ ಜೊತೆ ಯುವತಿ ಓಡಿ ಹೋಗಿದ್ದಾಳೆ. ಇದರ ಹಿಂದೆ ಸೋದರ ಮಾವನ ಕೈವಾಡ ಇದೆ ಎಂದು ತಿಳಿದು ಈ ಕೃತ್ಯವನ್ನ ಎಸಗಿದ್ದಾರೆ ಎನ್ನಲಾಗಿದೆ. ಆದರೇ ಇದಕ್ಕೆ ಪ್ರತಿಕ್ರಿಯಿಸಿರುವ ದೂರುದಾರರು, “ ಅವರಿಬ್ಬರು ಮನೆಬಿಟ್ಟು ಹೋಗಿದ್ದು ನನಗೆ ಗೊತ್ತಿಲ್ಲ. ತಪ್ಪಾಗಿ ತಿಳಿದು ಮೂರು ದಿನದಿಂದ ನನಗೆ ಕಿರುಕುಳ ನೀಡಿ ಈಗ ಏಕಾಏಕಿ 25 ಜನರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕ್ರೈಂ
Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್ಶೀಟ್ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿರಾಡಿಘಾಟ್ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.
ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.
ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.
ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
ಕ್ರೈಂ
Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.
ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.
ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.
ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















