ಸಿನೆಮಾ
Abhishek Aishwarya Separation Rumors ಐಶ್ವರ್ಯಾಗಿಂತ ಅಭಿಷೇಕ್ ಉತ್ತಮ ನಟ ಎಂದ ಶ್ವೇತಾ ಬಚ್ಚನ್: ನಾದಿನಿ ಮಾತು ಪೈಟ್ ಗೆ ಕಾರಣವಾಯ್ತಾ?
ಕಳೆದ ಕೆಲ ವಾರದಿಂದ ತಾರಾ ಜೋಡಿಗಳಾದ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಎಲ್ಲವು ಸರಿ ಇಲ್ಲ ಎಂಬ ವದಂತಿಗಳು ಹಬ್ಬಿದ್ದವು. ಆ ಸುದ್ದಿ ಹಬ್ಬಲು ಸಮಾರಂಭವೊಂದರಲ್ಲಿ ಅಭಿಷೇಕ್ ಮದುವೆ ಉಂಗುರ ಧರಿಸದ್ದು ಪ್ರಮುಖ ಕಾರಣವಾದರೇ , ಉಳಿದ ಹಲವು ಘಟನೆಗಳು ಅದಕ್ಕೆ ಪುಷ್ಟಿ ಕೊಟ್ಟವು.
ಅಮಿತಾಭ್ – ಜಯ ಬಚ್ಚನ್ ಮಗಳಾದ ಶ್ವೇತಾ ಬಚ್ಚನ್ ಗೆ ತಂದೆ ಅಮಿತಾಭ್ ಬಂಗ್ಲೋ ಒಂದನ್ನು ಗಿಪ್ಟ್ ಆಗಿ ನೀಡಿದ್ದರು. ಸುಮಾರು 56 ಕೋ ರೂ ವೆಚ್ಚದ ಈ ಮನೆಯನ್ನು ಶ್ವೇತಾಳಿಗೆ ಕೊಟ್ಟ ಬಳಿಕ ಐಶ್ವರ್ಯಾ ರೈ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಅಲ್ಲದೇ ಹಲವು ವರ್ಷಗಳ ಹಿಂದೆಯೇ ಐಶ್ವರ್ಯಾ ತನ್ನ ಅತ್ತೆ ಜಯ ಬಚ್ಚನ್ ಜತೆ ಮಾತು ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ವೇತಾ ಬಚ್ಚನ್ ಸದ್ಯ ಗಂಡನ ಮನೆ ಬಿಟ್ಟು ತಾಯಿ ಮನೆಯಲ್ಲಿ ಇರುತ್ತಿದ್ದು ಇದು ಕೂಡ ಅಮಿತಾಭ್ ಬಚ್ಚನ್ ಮನೆಯ ವಾತವರಣವನ್ನು ಕೆಡಿಸಿದೆ ಎಂದು ಹೇಳಲಾಗುತ್ತಿದೆ. ನಾದಿನಿ ಬಂದ ಬಳಿಕ ಆ ಮನೆಯಲ್ಲಿ ಐಶ್ವರ್ಯಾ ಇರಲು ಒಪ್ಪದೆ ತಾಯಿ ಮನೆಗೆ ಹೋಗಿದ್ದಾರೆ ಎಂಬ ವದಂತಿ ಬಿ ಟೌನ್ ನಲ್ಲಿ ಜೋರಾಗಿದೆ. ಮದುವೆ ಆದ ಬಳಿಕ ಕೆಲ ವರ್ಷ ಖುಷಿಯಾಗಿದ್ದ ಬಿಗ್ ಬಿ ಫ್ಯಾಮಿಲಿಯಲ್ಲಿ ಇದೀಗ ಅಪಸ್ವರ ಕೇಳಿ ಬರ್ತಿದೆ. ಐಶ್ವರ್ಯಾ ರೈ ತನ್ನ ಅತ್ತೆ ಜಯಾ ಬಚ್ಚನ್ ಹಾಗೂ ನಾದಿನಿ ಶ್ವೇತಾ ಜೊತೆ ಜಗಳವಾಡಿದ್ದಾರೆ ಎನ್ನುವ ರೂಮರ್ಸ್ ಹಲವು ದಿನಗಳಿಂದ ಕೇಳಿ ಬರ್ತಿದೆ.

ಇದೀಗ ಶ್ವೇತಾ ಬಚ್ಚನ್ ಈ ಹಿಂದೆ ಅಭಿಷೇಕ್ ಹಾಗೂ ಐಶ್ವರ್ಯಾ ಕುರಿತಾಗಿ ಆಡಿದ ಮಾತೊಂದು ಸಾಮಜಿಕ ಜಲಾತಣದಲ್ಲಿ ಸಕ್ಕತ್ ವೈರಲ್ ಆಗುತ್ತಿದೆ. ಅಭಿಷೇಕ್ ಬಚ್ಚನ್ ಹಾಗೂ ಶ್ವೇತಾ ಬಚ್ಚನ್ ಕಾಫಿ ವಿತ್ ಕರಣ್ ಶೋಗೆ ಬಂದಿದ್ದರು. ಕರಣ್ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಶ್ವೇತಾ ಮಾತು ಹೊಸ ಚರ್ಚೆಗೆ ಕಾರಣವಾಗಿದೆ. ಈಗ ವಿಡಿಯೋ ವೈರಲ್ ಆಗಿದ್ದು, ಶ್ವೇತಾ ಬಚ್ಚನ್ ಆಡಿದ ಮಾತು ಈಗ ಚರ್ಚೆ ಹುಟ್ಟುಹಾಕಿದೆ
ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ ಈ ಮಧ್ಯೆ ಯಾರು ಉತ್ತಮ ಕಲಾವಿದರು’ ಎನ್ನುವ ಪ್ರಶ್ನೆಯನ್ನು ಶ್ವೇತಾಗೆ ಕರಣ್ ಜೋಹರ್ ಕೇಳಿದರು. ಇದಕ್ಕೆ ಶ್ವೇತಾ ಬಚ್ಚನ್ ಅವರು ಒಂದು ಕ್ಷಣವೂ ಯೋಚಿಸದೇ ಅಭಿಷೇಕ್ ಬಚ್ಚನ್ ಎಂದಿದ್ದಾರೆ.ಅಭಿಷೇಕ್ ಬಚ್ಚನ್ ಅವರ ಸಹೋದರಿ ಶ್ವೇತಾ ಬಚ್ಚನ್ ಆಡಿದ ಮಾತು ವೈರಲ್ ಆಗಿದೆ.ಅನೇಕರು ಶ್ವೇತಾ ಬಚ್ಚನ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಐಶ್ವರ್ಯಾ ರೈ ಬಚ್ಚನ್ ಅಭಿಮಾನಿಗಳು ಶ್ವೇತಾ ಬಚ್ಚನ್ ಅವರ ಮಾತುಗಳನ್ನು ಒಪ್ಪುತ್ತಿಲ್ಲ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಸಿನೆಮಾ
Bethlehem Family Unit-ಮಲಯಾಳಂ ಚಿತ್ರರಂಗದಲ್ಲಿ ದಾಖಲೆ ಬರೆದ ‘ಬೆತ್ಲೆಹೆಮ್ ಕುಟುಂಬ ಯೂನಿಟ್’: ಅ.2ಕ್ಕೆ ಒಟಿಟಿ ಎಂಟ್ರಿ
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಗಿರೀಶ್ ಎ.ಡಿ. ನಿರ್ದೇಶನದ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸುಮಾರು 326 ಕೋಟಿ ರೂ. ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ‘ಲೋಕಾ ಚಾಪ್ಟರ್ 1: ಚಂದ್ರ’ ಚಿತ್ರ 304 ಕೋಟಿ ರೂ. ಗಳಿಕೆಯೊಂದಿಗೆ ಮೊದಲ ಸ್ಥಾನದಲ್ಲಿತ್ತು. ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಈ ದಾಖಲೆಯನ್ನು ಹಿಂದಿಕ್ಕಿದೆ.
ಚಿತ್ರವು ಕೇರಳದಲ್ಲಿ ಮೊದಲ ಬಾರಿಗೆ 150 ಕೋಟಿ ರೂ. ಗಳಿಕೆ ದಾಖಲಿಸಿದ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅತಿ ವೇಗವಾಗಿ 300 ಕೋಟಿ ರೂ. ಕ್ಲಬ್ ಸೇರಿದ ಚಿತ್ರ ಎಂಬ ದಾಖಲೆಗೂ ಪಾತ್ರವಾಗಿದೆ.
ಸಿನೆಮಾ
Hanuman Ansh-₹2 ಕೋಟಿ ಬಜೆಟ್ ಸಿನಿಮಾ ₹347 ಕೋಟಿ ಗಳಿಕೆ; ‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ‘ಹನುಮಾನ್ ಅಂಶ್ʼ
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ.
ಮುಂಬಯಿ: ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ.
ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ. ಸಿನಿಮಾ ಬಿಡುಗಡೆಯಾಗಿ 45 ದಿನಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಗಳಿಕೆ ಮುಂದುವರಿದಿರುವುದು ವಿಶೇಷವಾಗಿದೆ.
‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ಸಿನಿಮಾ
ಭಾನುವಾರ (ಸೆ.20) ‘ಹನುಮಾನ್ ಅಂಶ್’ ಭಾರತದಲ್ಲಿ ₹13.75 ಕೋಟಿ ಹಾಗೂ ವಿದೇಶದಲ್ಲಿ ₹1.50 ಕೋಟಿ ಗಳಿಕೆ ಮಾಡಿದೆ. ಇದರೊಂದಿಗೆ ಚಿತ್ರದ ಒಟ್ಟು ಜಾಗತಿಕ ಗಳಿಕೆ ₹347.05 ಕೋಟಿಗೆ ತಲುಪಿದೆ ಎಂದು ಸ್ಯಾಕ್‌ನಿಲ್ಕ್ ವರದಿ ಮಾಡಿದೆ.
ಈ ಮೂಲಕ ರಾಮ್ ಚರಣ್ ಅಭಿನಯದ ‘ಪೆದ್ದಿ’ ಹಾಗೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗಳ ವಿಶ್ವದಾದ್ಯಂತದ ಗಳಿಕೆಯನ್ನು ‘ಹನುಮಾನ್ ಅಂಶ್’ ಹಿಂದಿಕ್ಕಿದೆ.
‘ಪೆದ್ದಿ’ ₹341.90 ಕೋಟಿ ಹಾಗೂ ‘ಟಾಕ್ಸಿಕ್’ ₹341.99 ಕೋಟಿ ಗಳಿಕೆ ಮಾಡಿದ್ದರೆ, ‘ಹನುಮಾನ್ ಅಂಶ್’ ₹347.05 ಕೋಟಿ ಗಳಿಕೆಯೊಂದಿಗೆ ಈ ಎರಡೂ ಸಿನಿಮಾಗಳನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲಾ’ ಸಿನಿಮಾದ ಗಳಿಕೆಯನ್ನೂ ಹಿಂದಿಕ್ಕಿರುವ ‘ಹನುಮಾನ್ ಅಂಶ್’, ಈ ವರ್ಷದ ಹಿಂದಿ ಸಿನಿಮಾಗಳ ಪೈಕಿ ಅತಿ ಹೆಚ್ಚು ಗಳಿಕೆ ಕಂಡ ಮೂರನೇ ಚಿತ್ರವಾಗಿ ಹೊರಹೊಮ್ಮಿದೆ ಎಂದು ವರದಿಯಾಗಿದೆ.
ಇತರ ಭಾಷೆಯ ಸಿನಿಮಾಗಳನ್ನೂ ಹಿಂದಿಕ್ಕಿದ ‘ಹನುಮಾನ್ ಅಂಶ್’
ಕಳೆದ ವಾರದಲ್ಲಿಯೂ ಸಿನಿಮಾ ತನ್ನ ಗಳಿಕೆಯ ಓಟ ಮುಂದುವರಿಸಿದ್ದು, ‘ಜನಾ ನಾಯಕನ್’, ‘ಬೆತ್ತೆಹೇಮ್ ಕುಟುಂಬ ಯೂನಿಟ್’, ‘ಮಾನ ಶಂಕರ ವರಪ್ರಸಾದ್ ಗಾರು’ ಹಾಗೂ ‘ಕರುಪ್ಪು’ ಸೇರಿದಂತೆ ವಿವಿಧ ಚಿತ್ರರಂಗಗಳ ಪ್ರಮುಖ ಸಿನಿಮಾಗಳ ಜಾಗತಿಕ ಗಳಿಕೆಯನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಚಿತ್ರವು ‘ಮಹಾರಾಜ್ ಜಿ’ ಎಂದೇ ಜನಪ್ರಿಯರಾಗಿದ್ದ ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದೆ.
ಸ್ವಯಂಭೂ ಮೀಡಿಯಾ ನೆಟ್‌ವರ್ಕ್, ರಾಗಿಣಿ ಎಸ್., ನಮ್ರತಾ ಜಿ.ಎಸ್. ಹಾಗೂ ಅನುಪ್ರಿಯಾ ಎ. ನಗರ್ ನಿರ್ಮಿಸಿರುವ ಚಿತ್ರದಲ್ಲಿ ಚಂದನ್ ಕೆ. ಆನಂದ್ ಮತ್ತು ಶೋಭಿನವ್ ಸತ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿಖಿಲ್ ದುಬೆ, ಉದಯಸಿಂಹ ರಜಪೂತ್, ಪೂರ್ಣಿಮಾ ತಿವಾರಿ ಹಾಗೂ ಮನೀಶ್ ಚೌಧರಿ ಸೇರಿದಂತೆ ಹಲವು ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
-
ನಿಧನ ವಾರ್ತೆ17 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್22 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಂತರ ರಾಜ್ಯ21 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಸ್ಥಳೀಯ22 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ20 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ16 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















