Connect with us

Uncategorized

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ದಶಾಂಬಿಕೋತ್ಸವ ಕಾರ್ಯಕ್ರಮಭಾರತೀಯ ಆಚರಣೆ, ಸಂಪ್ರದಾಯಗಳಲ್ಲಿ ವೈಜ್ಞಾನಿಕತೆಯಿದೆ : ಡಾ.ರಾಮಚಂದ್ರ ಗುರೂಜಿ

Published

on



Ad Widget

Ad Widget

Ad Widget

Ad Widget

ಪುತ್ತೂರು: ಪ್ರಪಂಚಕ್ಕೆ ನಮಸ್ಕಾರ ಮಾಡುವ ಕ್ರಮವನ್ನು ಕಲಿಸಿಕೊಟ್ಟವರು ಭಾರತೀಯರು. ಅಂತೆಯೇ ಚಪ್ಪಾಳೆಯನ್ನು ತಟ್ಟುವ ವಿಧಾನ ತೋರಿಕೊಟ್ಟವರೂ ನಾವೇ. ನಮ್ಮ ಪ್ರತಿಯೊಂದು ಆಚರಣೆ, ಸಂಪ್ರದಾಯಗಳಲ್ಲಿ ವೈಜ್ಞಾನಿಕತೆ ಅಡಗಿದೆ. ಹಾಗಾಗಿ ನಮ್ಮ ದೇಸೀಯವಾದ ಉತ್ಕೃಷ್ಟ ವಿಚಾರ ಧಾರೆಗಳನ್ನು ಅಳವಡಿಸಿಕೊಂಡು ಮುಂದುವರೆಯಬೇಕಾದ್ದು ನಮ್ಮ ಕರ್ತವ್ಯ ಎಂದು ಕುಂಡಲಿನಿ ಯೋಗ ಗುರು, ಸಂಮೋಹಿನಿ ತಜ್ಞ ಬೆಂಗಳೂರಿನ ಡಾ.ರಾಮಚಂದ್ರ ಗುರೂಜಿ ಹೇಳಿದರು.

Ad Widget

Ad Widget

Ad Widget

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾ;ಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷ – ದಶಾಂಬಿಕೋತ್ಸವದ ನಿಮಿತ್ತ ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳು’ ವಿಷಯದ ಬಗೆಗೆ ಆಯೋಜಿಸಲಾದ ವಿಶೇಷ ಕಾರ್ಯಕ್ರಮದ ಉದಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ನಾವು ಎಲ್ಲೇ ಇದ್ದರೂ ಮಾನಸಪೂಜೆಯಲ್ಲಿ ತೊಡಗಬಹುದು. ಮಾನಸ ಪೂಜೆ ಎಂದರೆ ಮನಸ್ಸಿನಲ್ಲಿಯೇ ನಾವು ಆರಾಧಿಸಬೇಕಾದವರನ್ನು ಕಲ್ಪಿಸಿಕೊಂಡು ಅವರಿಗೆ ಸಲ್ಲಿಸುವ ಪೂಜೆ. ಮುಖ್ಯವಾಗಿ ಹೆತ್ತವರಿಗೆ, ಬದುಕಿನ ಮೇಲೆ ಪರಿಣಾಮ ಬೀರಿದ ಗುರುಗಳಿಗೆ ಹಾಗೂ ನಾವು ಇಷ್ಟಪಡುವ ದೇವರಿಗೆ ಈ ಪೂಜೆಯನ್ನು ಸಲ್ಲಿಸಬೇಕು. ಮನಸ್ಸನ್ನು ಪ್ರಶಾಂತ ಸ್ಥಿತಿಯಲ್ಲಿಟ್ಟು ಕಾಲ್ಪನಿಕ ಪುಷ್ಪಗಳ ಅರ್ಚನೆ, ಆಶೀರ್ವಾದ ಯಾಚನೆ ಹಾಗೂ ಬೆಳಕಿನೋಪಾದಿಯಲ್ಲಿ ಆಶೀರ್ವಾದವನ್ನು ಪಡೆಯುವ ಚಿತ್ರಣವನ್ನು ಮನಸ್ಸಿನಲ್ಲಿ ತಂದುಕೊಳ್ಳಬೇಕು. ಅದು ನಮ್ಮೊಳಗೆ ಹೊಸ ಶಕ್ತಿಯನ್ನು ರೂಪಿಸಿಕೊಡುತ್ತದೆ ಎಂದು ಪ್ರಾಯೋಗಿಕವಾಗಿ ಮಾಡಿಸಿ ತೋರಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ಉದ್ಘಾಟಿಸಿದ ಧಾರ್ಮಿಕ ಮುಖಂಡ, ಕಾಸರಗೋಡಿನ ರವೀಶ ತಂತ್ರಿ ಮಾತನಾಡಿ ಸಮಾಜದ ಸಂಪ್ರೀತಿ ಪಡೆಯಲು, ಬದುಕಿನ ಸವಾಲುಗಳನ್ನು ಎದುರಿಸಲು ವಿದ್ಯೆಯೊಂದೇ ಸಹಾಯ ಮಾಡದು. ಆದರೆ ವಿದ್ಯೆಯೊಂದಿಗೆ ಸಂಸ್ಕಾರವೂ ಅಡಕವಾದಾಗ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಹಾಗೂ ಹೊಸ ಶಕ್ತಿ ಒಡಮೂಡುತ್ತದೆ. ಭಗವಂತನಲ್ಲಿ ಸಂಪತ್ತಿಗಾಗಿ ಬೇಡುವ ಮೂಲಕ ಸ್ವಾರ್ಥಪರರಾಗಿ ಬದುಕುತ್ತಿದ್ದೇವೆ. ಮನುಷ್ಯತ್ವಕ್ಕಾಗಿ ಪ್ರಾರ್ಥನೆ ಮಾಡುವುದನ್ನು, ಮನುಕುಲಕ್ಕಾಗಿ ಹಂಬಲಿಸುವುದನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.



Ad Widget

ಇಂದು ಸಣ್ಣ ಪುಟ್ಟ ವಿಷಯಗಳಿಗೂ ಆತ್ಮಹತ್ಯೆಯಂತಹ ಪ್ರಕರಣಗಳು ಘಟಿಸುತ್ತಿವೆ. ಅಂಕ ಕಡಿಮೆಯಾಯಿತೆಂದು ವಿದ್ಯಾರ್ಥಿಗಳು, ಒತ್ತಡ ಜಾಸ್ತಿಯಾಯಿತೆಂದು ವಿದ್ಯಾವಂತರು ಬದುಕನ್ನು ಕೊನೆಗೊಳಿಸುತ್ತಿದ್ದಾರೆ. ಆದರೆ ನಮ್ಮ ಜೀವನ ವಿಶೇಷವಾದದ್ದು ಹಾಗೂ ನಾವೆಲ್ಲರೂ ಈ ಮಣ್ಣಿಗಾಗಿ ಸೇವೆ ಮಾಡುವ ಯೋಗ್ಯತೆ ಉಳ್ಳವರು ಎಂಬ ಪರಿಕಲ್ಪನೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರೂ ತಾನು ಈ ಜಗತ್ತಿನಲ್ಲಿ ಉಪಯುಕ್ತತೆ ಹೊಂದಿದ್ದೇನೆ ಎಂಬುದನ್ನು ಮನನ ಮಾಡಿಕೊಳ್ಳಬೇಕು. ಇದು ಅರ್ಥವಾಗಲು ಆಧ್ಯಾತ್ಮಿಕ ಅನುಷ್ಠಾನದ ಅಗತ್ಯವಿದೆ ಎಂದು ನುಡಿದರು.

Ad Widget

Ad Widget

ಇಂದು ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳು ಆರ್ಥಿಕತೆಯ ಬೆಳವಣಿಗೆಯ ನೆಲೆಯಲ್ಲಿ ವಿಸ್ತರಿಸಿಕೊಳ್ಳುತ್ತಿವೆ. ಇದು ಅತ್ಯಂತ ಅಪಾಯಕಾರಿ ಸಂಗತಿ. ಹೀಗಿರುವಾಗ ಶಿಕ್ಷಣ ಸಂಸ್ಥೆಯಲ್ಲಿ ಪಾರಮಾರ್ಥಿಕ ವಿಚಾರಧಾರೆಗಳನ್ನು ಹರಿಸುವ ಕಾರ್ಯ ಆಗಬೇಕು. ಅಂಬಿಕಾ ಸಂಸ್ಥೆ ಆ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರಲ್ಲದೆ ಇಂದು ಕೇರಳದಲ್ಲಿ ಭಾರತಮಾತೆಯನ್ನು ಆರಾಧಿಸುವುದಕ್ಕೂ ಮತಾಂಧ ಶಕ್ತಿಗಳು ತಡೆಯೊಡ್ಡಟುತ್ತಿವೆ. ಅಲ್ಲಿನ ಶಿಕ್ಷಣ ಸಂಸ್ಥೆಯಲ್ಲಿ ಭಾರತೀಯತೆಯನ್ನು ತಿಳಿಸಿಕೊಡುವುದಕ್ಕೆ ಅಡ್ಡಿ ಆತಂಕಗಳಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಸ್ತಾವನೆಗೈದ ದಶಾಂಬಿಕೋತ್ಸವ ಸಮಿತಿ ಅಧ್ಯಕ್ಷ, ಹಿರಿಯ ನ್ಯಾಯವಾದಿ ಮಹೇಶ್ ಕಜೆ ಮಾತನಾಡಿ ಮೊತ್ತಮೊದಲ ಬಾರಿಗೆ ಶಿಕ್ಷಣ ಸಂಸ್ಥೆಯೊAದರ ಹತ್ತನೆಯ ವರ್ಷಾಚರಣೆ ಸಂದರ್ಭದಲ್ಲಿ ಆಧ್ಯಾತ್ಮಿಕ ಜ್ಞಾನ ಪಸರಿಸುವ ಪ್ರಯತ್ನವಾಗುತ್ತಿದೆ. ಅಂಬಿಕಾ ವಿದ್ಯಾಲಯದ ಹತ್ತನೆಯ ವರ್ಷಾಚರಣೆ ಪ್ರಯುಕ್ತ ಧಾರ್ಮಿಕ, ಕ್ರೀಡೆ, ಆರೋಗ್ಯ, ಸಾಮಾಜಿಕ, ಜ್ಞಾನಬೋಧಕವೇ ಮೊದಲಾದ ಹತ್ತು ಕ್ಷೇತ್ರಗಳನ್ನು ಗುರುತಿಸಿ ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ದೇಕ್ಕಾಗಿ ಮಿಡಿಯುವ ತುಡಿಯುವ ಮನಸ್ಥಿತಿ ವಿದ್ಯಾರ್ಥಿಗಳಲ್ಲಿ ಮೂಡಿಬರಬೇಕು. ಮನೆ-ಮನಗಳಲ್ಲಿ ರಾಷ್ಟಿಯತೆ ಉಕ್ಕಿ ಕಾಣಬೇಕು. ದೇಶ ಕಟ್ಟುವ ಕಾರ್ಯಕ್ಕೆ ನಮ್ಮನ್ನು ನಾವು ಅರ್ಪಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ನುಡಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ, ನ್ಯಾಯವಾದಿ ಸೀಮಾ ನಾಗರಾಜ್, ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರೀಕೃಷ್ಣ ನಟ್ಟೋಜ ಶಂಖನಾದಗೈದರು.

ವಿದ್ಯಾರ್ಥಿಗಳಾದ ಆತ್ರೇಯ, ಅವನೀಶ್ ಹಾಗೂ ಶೌರಿ ಉಪಾಧ್ಯಾಯ ವೇದಘೋಷ ನಡೆಸಿಕೊಟ್ಟರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿ ಶೃತಿ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯಾ ವಂದಿಸಿದರು. ಶಿಕ್ಷಕಿಯರಾದ ಮಲ್ಲಿಕಾ ಹಾಗೂ ರಮ್ಯಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

Uncategorized

CJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಪ್ರತಿಭಟನೆಗೆ ಕರೆ ನೀಡಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಲಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಉಂಟಾಗಬಹುದೆಂಬ ಕಾರಣಕ್ಕೆ 250 ಹೆಚ್ಚು ರೈಲುಗಳ ಸಂಚಾರ ರದ್ದುಪಡಿಸಲಾಗಿದ್ದು, 57 ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ, ನಿರ್ದಿಷ್ಟ ಪ್ರದೇಶದಲ್ಲಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ದಿಲ್ಲಿ ಪೊಲೀಸರು ಆದೇಶಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದೆ.

Ad Widget

Ad Widget <> Ad Widget

38 ರೈಲುಗಳ ಸಂಚಾರ ರದ್ದು
ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 10ರ ಬೆಳಿಗ್ಗೆ 4ರಿಂದ ಮಧ್ಯಾಹ್ನ 2ರ ನಡುವೆ ಹೊಸದಿಲ್ಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳನ್ನು ತಲುಪಬೇಕಿದ್ದ 38 ರೈಲುಗಳ ಸಂಚಾರವನ್ನು ಉತ್ತರ ರೈಲ್ವೆ ರದ್ದುಗೊಳಿಸಿದೆ. ಈ ಅವಧಿಯಲ್ಲಿ ಎರಡು ನಿಲ್ದಾಣಗಳಲ್ಲಿ ಪ್ರಯಾಣ ಮುಕ್ತಾಯಗೊಳಿಸಬೇಕಿದ್ದ ಒಟ್ಟು 165 ರೈಲುಗಳ ಪೈಕಿ 38 ರೈಲುಗಳನ್ನು ಮಾತ್ರ ರದ್ದುಗೊಳಿಸಲಾಗಿದೆ ಎಂದು ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಿಮಾಂಶು ಶೇಖರ್ ಉಪಾಧ್ಯಾಯ ತಿಳಿಸಿದ್ದಾರೆ.



Ad Widget

ರದ್ದುಗೊಂಡ ರೈಲುಗಳಲ್ಲಿ ಮಗಧ್ ಎಕ್ಸ್‌ಪ್ರೆಸ್, ಸಂಪೂರ್ಣ ಕ್ರಾಂತಿ ಎಕ್ಸ್‌ಪ್ರೆಸ್, ಅಮೃತ್ ಭಾರತ್ ಎಕ್ಸ್‌ಪ್ರೆಸ್, ಶತಾಬ್ದಿ ಎಕ್ಸ್‌ಪ್ರೆಸ್, ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್ ಮತ್ತು ಹಂಸಫರ್ ಎಕ್ಸ್‌ಪ್ರೆಸ್ ಸೇರಿವೆ. ಕೆಲವು ರೈಲುಗಳ ಪ್ರಯಾಣವನ್ನು ಅಂತಿಮ ನಿಲ್ದಾಣ ತಲುಪುವ ಮೊದಲೇ ಅಂತ್ಯಗೊಳಿಸುವ ನಿರ್ಧಾರವೂ ಕೈಗೊಳ್ಳಲಾಗಿದೆ.

Ad Widget

Ad Widget

ಮುಂಬೈನಿಂದ ದಿಲ್ಲಿಗೆ ಸಂಚರಿಸುವ ಹಲವು ದೂರದ ಪ್ರಯಾಣದ ರೈಲುಗಳ ಮೇಲೂ ಪರಿಣಾಮ ಬೀರಿದೆ. ಮುಂಬೈ ಸೆಂಟ್ರಲ್–ಹೊಸದಿಲ್ಲಿ ರಾಜಧಾನಿ ಎಕ್ಸ್‌ಪ್ರೆಸ್ ಮತ್ತು ಆಗಸ್ಟ್ ಕ್ರಾಂತಿ ರಾಜಧಾನಿ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ಐದು ಗಂಟೆಗಳಷ್ಟು ಬದಲಾಯಿಸಲಾಗಿದೆ. ಬಾಂದ್ರಾ ಟರ್ಮಿನಸ್–ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ರದ್ದಾದ ರೈಲುಗಳ ಟಿಕೆಟ್ ಹಣವನ್ನು ಮರುಪಾವತಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

57 ಮೆಟ್ರೋ ನಿಲ್ದಾಣಗಳ ಪ್ರವೇಶ ಬಂದ್‌
ಪ್ರತಿಭಟನಾಕಾರರು ಜಂತರ್ ಮಂತರ್ ತಲುಪುವುದನ್ನು ತಡೆಯುವ ಉದ್ದೇಶದಿಂದ ದಿಲ್ಲಿ ಮೆಟ್ರೋದ 57 ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚುವಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ರಾಜೀವ್ ಚೌಕ್, ಹೊಸದಿಲ್ಲಿ, ಸೆಂಟ್ರಲ್ ಸೆಕ್ರೆಟರಿಯೇಟ್, ಪಟೇಲ್ ಚೌಕ್ ಮತ್ತು ಕಾಶ್ಮೀರಿ ಗೇಟ್ ಸೇರಿದಂತೆ ಪ್ರಮುಖ ಮೆಟ್ರೋ ನಿಲ್ದಾಣಗಳು ಈ ನಿರ್ಬಂಧದ ವ್ಯಾಪ್ತಿಗೆ ಒಳಪಟ್ಟಿವೆ.

24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ
ಜಂತರ್ ಮಂತರ್ ಸಮೀಪದ ಜನಪಥ್–ಕರ್ತವ್ಯ ಪಥ್ ಜಂಕ್ಷನ್‌ನ ಸುತ್ತಲಿನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಕ್ಟೋಬರ್ 9ರ ರಾತ್ರಿ 10ರಿಂದ ಅಕ್ಟೋಬರ್ 10ರ ರಾತ್ರಿ 10ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ದಿಲ್ಲಿ ಪೊಲೀಸರು ಆದೇಶಿಸಿದ್ದಾರೆ.

ಏರ್‌ಟೆಲ್, ವೊಡಾಫೋನ್-ಐಡಿಯಾ, ಜಿಯೋ ಮತ್ತು ಎಂಟಿಎನ್‌ಎಲ್ ದೂರಸಂಪರ್ಕ ಕಂಪನಿಗಳಿಗೆ ಈ ಸಂಬಂಧ ಸೂಚನೆ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೂರಸಂಪರ್ಕ ಸೇವೆಗಳ ತಾತ್ಕಾಲಿಕ ಸ್ಥಗಿತಕ್ಕೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ನಿರ್ಬಂಧದಿಂದ ಕನ್ನಾಟ್ ಪ್ಲೇಸ್, ಮಂಡಿ ಹೌಸ್, ಪ್ರಗತಿ ಮೈದಾನ, ಬಾಂಗ್ಲಾ ಸಾಹಿಬ್ ಗುರುದ್ವಾರ, ಬರಾಖಂಬಾ ರಸ್ತೆ, ಖಾನ್ ಮಾರ್ಕೆಟ್, ಲೋಧಿ ರಸ್ತೆ ಮತ್ತು ಜಂಗ್‌ಪುರದ ಕೆಲವು ಭಾಗಗಳಿಗೂ ಪರಿಣಾಮ ಬೀರಲಿದೆ.

‘ಯುವಜನರ ಬಗ್ಗೆ ಭಯವಿದ್ದರೆ ದೇಶವನ್ನೇ ಮುಚ್ಚಿಬಿಡಲಿ’
ಪ್ರತಿಭಟನೆಗೆ ಮುನ್ನ ರೈಲುಗಳ ರದ್ದತಿ ಮತ್ತು ಸಾರಿಗೆ ನಿರ್ಬಂಧಗಳ ಕುರಿತು CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಹೆದರಿದ್ರಾ ಮೋದಿಜೀ..?’ ಎಂದು ಪ್ರಶ್ನಿಸಿದ್ದಾರೆ. ಯುವಜನರ ಪ್ರತಿಭಟನೆಗೆ ಸರ್ಕಾರ ಹೆದರುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರಕ್ಕೆ ಅಷ್ಟು ಭಯವಿದ್ದರೆ ಇಡೀ ದೇಶವನ್ನೇ ಮುಚ್ಚಿಬಿಡಲಿ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ಮರಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧೈರ್ಯವಿದ್ದರೆ ತಮ್ಮನ್ನು ಬಂಧಿಸಲಿ ಎಂದು ಸರ್ಕಾರಕ್ಕೆ ಸವಾಲು ಹಾಕಿದರು. ಅಧಿಕಾರಿಗಳು ಎಷ್ಟೇ ನಿರ್ಬಂಧ ವಿಧಿಸಿದರೂ ಪಕ್ಷದ ಸ್ವಯಂಸೇವಕರು ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

CJP ನಾಯಕ ಸೌರವ್ ದಾಸ್ ಕೂಡ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪಕ್ಷದ ಸ್ವಯಂಸೇವಕರನ್ನು ಬಂಧಿಸಲಾಗುತ್ತಿದೆ ಮತ್ತು ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆರೋಪಿಸಿದ್ದಾರೆ. ದಿಲ್ಲಿಯನ್ನು ಭದ್ರಕೋಟೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿರುವುದನ್ನೂ ಅಭಿಜಿತ್ ದೀಪ್ಕೆ ಪ್ರಶ್ನಿಸಿದ್ದಾರೆ. ಪ್ರತಿಭಟನೆಗೆ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅನುಮತಿಯ ಅಗತ್ಯವೇನು ಎಂದು ಅವರು ಆಕ್ಷೇಪಿಸಿದ್ದಾರೆ.

ನಿರ್ಬಂಧಗಳಿಗೆ ಸುಪ್ರೀಂ ಕೋರ್ಟ್ ಆಕ್ಷೇಪ
ರೈಲು ಮತ್ತು ಮೆಟ್ರೋ ಸಂಚಾರದ ಮೇಲಿನ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಕಾನೂನು ಸುವ್ಯವಸ್ಥೆ ಕಾಪಾಡಲು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ಕಾನೂನು ಜಾರಿ ಸಂಸ್ಥೆಗಳಿಗೆ ಇದೆ. ಆದರೆ, ಎಲ್ಲ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

‘ನೊಣವನ್ನು ಕೊಲ್ಲಲು ದೊಡ್ಡ ಸುತ್ತಿಗೆಯನ್ನು ಬಳಸಲಾಗದು’ ಎಂಬ ಮಾತಿನ ಮೂಲಕ ಅತಿಯಾದ ನಿರ್ಬಂಧಗಳ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ನಿರ್ಬಂಧ ವಿಧಿಸುವುದು ಮತ್ತು ಸಂಪೂರ್ಣವಾಗಿ ಮುಚ್ಚುವುದು ಬೇರೆಬೇರೆ ಎಂದು ಹೇಳಿದ ನ್ಯಾಯಾಲಯ, ಯುವಕರು, ವೃದ್ಧರು ಸೇರಿದಂತೆ ಎಲ್ಲ ವಯೋಮಾನದ ಜನರು ಪ್ರಯಾಣಿಸುತ್ತಾರೆ. ಅವರಿಗೆ ಮೂಲಭೂತ ಸಾರಿಗೆ ಸೌಲಭ್ಯಗಳನ್ನು ಪಡೆಯುವ ಹಕ್ಕಿದೆ ಎಂದು ತಿಳಿಸಿದೆ.

ಅನಿಯಂತ್ರಿತ ಸಂಚಾರವನ್ನು ತಡೆಯಲು ಕ್ರಮ ಕೈಗೊಳ್ಳಬಹುದು. ಆದರೆ, ಅದರ ಹೆಸರಿನಲ್ಲಿ ಜನರಿಗೆ ಯಾವುದೇ ಸಾರಿಗೆ ಸೌಲಭ್ಯವಿಲ್ಲದಂತೆ ಮಾಡುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರತಿಭಟನೆ ನಡೆಸುವ ಹಕ್ಕಿನ ಜತೆಗೆ ಸಾರ್ವಜನಿಕರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ಜವಾಬ್ದಾರಿಯೂ ಸರ್ಕಾರದ ಮೇಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರತಿಭಟನೆ, ಸಾರಿಗೆ ನಿರ್ಬಂಧ ಮತ್ತು ಇಂಟರ್ನೆಟ್ ಸ್ಥಗಿತದ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಪ್ರಯಾಣಿಸುವವರು ರೈಲುಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪರಿಶೀಲಿಸಿಕೊಂಡು ಪ್ರಯಾಣ ಯೋಜನೆ ರೂಪಿಸುವಂತೆ ರೈಲ್ವೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Ad Widget
Continue Reading

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ  ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.



Ad Widget
Ad Widget
Continue Reading

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.



Ad Widget

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.

Ad Widget

Ad Widget

ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:

ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.

ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading