Connect with us

ಸುಳ್ಯ

Kukke subrahmanya Temple ಮೂರು ತಿಂಗಳ ಒಳಗಡೆ ಫಲಿಸಿದ ಪ್ರಾರ್ಥನೆ – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 1 ಕೋ ರೂ ದೇಣಿಗೆ ಸಮರ್ಪಿಸಿದ ತೆಲಂಗಾಣ ಸಚಿವ

Published

on

Ad Widget

Ad Widget

Ad Widget

Ad Widget

Kukke subrahmanya Temple: ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೊಕಿನಲ್ಲಿರುವ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕಾರಣೀಕತೆಗೆ ಹೆಸರುವಾಸಿಯಾಗಿದೆ. ಸಂಕಷ್ಟ ನಿವಾರಕ  ಷಣ್ಮುಖನು ಬೇಡಿ ಬಂದವರ ಇಷ್ಟಾರ್ಥ ಪೂರೈಸುತ್ತಾನೆ, ಸಕಲ ದೋಷಗಳನ್ನು ನಿವಾರಿಸುತ್ತಾನೆ ಎಂಬ ಪ್ರತಿತಿಯಿದೆ. ಅಂತೆಯೇ ತೆಲಂಗಾಣ ಸರಕಾರದ ಕಂದಾಯ ಸಚಿವ ಹೊಂಗಲೇಟ್ ಶ್ರೀನಿವಾಸ ರೆಡ್ಡಿ (Telangana Revenue Minister Hongalet Srinivasa Reddy)ಯವರು ಸುಬ್ರಹ್ಮಣ್ಯದ ನಾಗ ದೇವನಲ್ಲಿ ಕೋರಿಕೆಯೊಂದನ್ನು ಇಟ್ಟಿದ್ದರು. ಅದು 3 ತಿಂಗಳಲ್ಲಿ ಈಡೇರಿದ್ದು, ಅವರು ಹರಕೆ ರೂಪದಲ್ಲಿ ರೂ.1 ಕೋಟಿ ದೇಣಿಗೆಯನ್ನು (Donated 1cr Rupees) ಶ್ರೀ ದೇವಳಕ್ಕೆ ಮಂಗಳವಾರ ಸಮರ್ಪಿಸಿದ್ದಾರೆ.

Ad Widget

Ad Widget

Ad Widget

Ad Widget

ಶ್ರೀನಿವಾಸ ರೆಡ್ಡಿ ಅವರು ಕಳೆದ ವರ್ಷ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಮಗಳ ಮದುವೆಯು ಉತ್ತಮ ವರನೊಂದಿಗೆ ನೆರವೇರಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಪ್ರಾರ್ಥನೆ ಫಲಿಸಿದರೇ 1 ಕೋ ರೂ ಹಣವನ್ನು ದೇವಸ್ಥಾನದಲ್ಲಿ ನಿರಂತರ ನಡೆಯುವ ಅನ್ನದಾನ ನಿಧಿಗೆ ನೀಡುವುದಾಗಿ ಹರಕೆ ಹೊತ್ತಿದ್ದರು.  ಅದಾಗಿ ಮೂರು ತಿಂಗಳ ಒಳಗೆ  ಮಗಳ  ಮದುವೆ ನಡೆದಿದೆ. ಹೀಗಾಗಿ  ತಾನು ಹೇಳಿಕೊಂಡ ಹರಕೆಯಂತೆ ಒಂದು ಕೋಟಿ ರೂಪಾಯಿಯನ್ನು ದೇಗುಲಕ್ಕೆ ಸಮರ್ಪಿಸಿದರು

Ad Widget

Ad Widget alt="Ad Widget"/>

Ad Widget

ಕೆಲ ತಿಂಗಳುಗಳ ಹಿಂದೆ ಹೊಂಗಲೇಟ್ ಶ್ರೀನಿವಾಸ ರೆಡ್ಡಿಯಯವರು ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ್ದರು. ಆದಾದ   3 ತಿಂಗಳ ಬಳಿಕ ಅಮೇರಿಕದಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದ ವ್ಯಕ್ತಿಯೊಂದಿಗೆ ಇವರ ಮಗಳ ಮದುವೆ ನಡೆಯಿತು. ಈ ಮೂಲಕ 3 ತಿಂಗಳ ಒಳಗೆ ಪ್ರಾರ್ಥನೆಗೆ ದೇವರು ಫಲ ನೀಡಿದ ಕಾರಣ ಪ್ರಾರ್ಥಿಸಿ ವರ್ಷವಾಗುವ ಮೊದಲು ತಮ್ಮ ಹರಕೆ ತೀರಿಸಿದರು. ಅಲ್ಲದೆ ತನ್ನ ಮನಸಂಕಲ್ಪದಂತೆ ರೂ.1 ಕೋಟಿಯನ್ನು ಅನ್ನದಾನಕ್ಕೆ ನೀಡಿದರು.

Ad Widget

Ad Widget <> Ad Widget

ಅವಭ್ರತೋತ್ಸವದ ಪುಣ್ಯ ದಿನ ಶ್ರೀ ದೇವಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಶ್ರೀನಿವಾಸ ರೆಡ್ಡಿ ಅವರು ಶ್ರೀ ದೇವರ ದರುಶನ ಪಡೆದರು. ಇವರಿಗೆ ದೇವಳದ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.ನಂತರ ಶ್ರೀ ದೇವಳದಲ್ಲಿ ಬೋಜನ ಪ್ರಸಾದ ಸ್ವೀಕರಿಸಿದರು. ನಂತರ ಆಡಳಿತ ಕಚೇರಿಗೆ ಆಗಮಿಸಿದ ಸಚಿವರು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ ಸುಳ್ಳಿ ಮತ್ತು ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ರೂ. ೧ ಕೋಟಿ ಮೌಲ್ಯದ ಚೆಕ್ ಅನ್ನು ತನ್ನ ಮಗಳು ಮತ್ತು ಅಳಿಯನ ಮೂಲಕವೇ ಹಸ್ತಾಂತರಿಸಿದರು.

ಈ ಸಂದರ್ಭ ಶ್ರೀನಿವಾಸ ರೆಡ್ಡಿ ಅವರ ಸಹೋದರ ಪ್ರಸಾದ್ ರೆಡ್ಡಿ ಹಾಗೂ ತಿರುಪತಿ ನ್ಯಾಷನಲ್ ಯುನಿವರ್ಸಿಟಿಯ ಪ್ರೋಫೆಸರ್ ಗಣಪತಿ ಭಟ್ ಇದ್ದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಸನ್ನ ದರ್ಬೆ, ಶ್ರೀವತ್ಸಾ ಬೆಂಗಳೂರು, ಲೋಕೇಶ್ ಮುಂಡಕಜೆ, ಶೋಭಾ ಗಿರಿಧರ್, ವನಜಾ. ವಿ.ಭಟ್ ಉಪಸ್ಥಿತರಿದ್ದರು

Ad Widget

Ad Widget

Few months before Srinivasa Reddy had come to Kukke kshetra offered prayers in front of Lord Sri Subrahmanya. He prayed for daughter’s marriage should be solemnized with a good groom. If the prayers are fulfilled, he had vowed to donate Rs 1 crore to the annadanam fund that is held continuously at the temple.  Within three months, her daughter got married. So, as per his promise, he dedicated Rs 1 crore to the temple.

Ad Widget

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!