Connect with us

Uncategorized

Namo App ‘ಜನ ಮನ ಸರ್ವೇ :  ಬಿಜೆಪಿ ಸಂಸದರ ಕಾರ್ಯ ವೈಖರಿ ಬಗ್ಗೆ ತೃಪ್ತಿ ಇದೆಯೇ ?  ʼನಮೋʼ ಆ್ಯಪ್‌ ನಿಂದ ಜನ ಅಭಿಪ್ರಾಯ ಸಂಗ್ರಹ

Published

on



Ad Widget

Ad Widget

Ad Widget

Ad Widget

ಹೊಸದಿಲ್ಲಿ:  ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ಸರಕಾರವು ಜನರ ಅಭಿಪ್ರಾಯಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ.  ಇದಕ್ಕಾಗಿ ನಮೋ  ಆ್ಯಪ್‌ ನಿಂದ ವಿಶೇಷ ಸಮೀಕ್ಷೆಯನ್ನು ಪ್ರಾರಂಭಿಸಿದೆ. ‘ಜನ ಮನ ಸರ್ವೇ ” ಹೆಸರಿನಲ್ಲಿ ಆರಂಭಿಸಲಾಗಿರುವ ಸಮೀಕ್ಷೆಯಲ್ಲಿ ಮೋದಿ ಸರಕಾರದ ಆಡಳಿತ ವೈಖರಿಯ ಬಗ್ಗೆ ಜನಾಭಿಪ್ರಾಯ ಗಳನ್ನು ಸಂಗ್ರಹಿಸುವ ಉದ್ದೇಶ ಹೊಂದಿದೆ.

Ad Widget

Ad Widget

Ad Widget

Ad Widget

ಇದರ  ಜತೆಗೆ ಜನರು ಅವರವರ ಸ್ಥಳೀಯ ಸಂಸದರ ಬಗ್ಗೆ ಹೊಂದಿರುವ ಅಭಿಪ್ರಾಯ ಗಳನ್ನೂ ಗ್ರಹಿಸಲು ಉದ್ದೇಶಿಸಲಾಗಿದೆ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯ ದೃಷ್ಟಿಕೋನಕ್ಕೂ ಮಾನ್ಯತೆ ಇದ್ದು, ಮೋದಿ ಸರಕಾರ ಅದನ್ನು ಗೌರವಿಸುತ್ತದೆ. ಈ ನಿಟ್ಟಿನಲ್ಲಿ ಆ್ಯಪ್ ಮೂಲಕ ನಡೆಸುವ ಸಮೀಕ್ಷೆಗಳಲ್ಲಿ ಜನರು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಆಡಳಿತದಲ್ಲಾಗಬೇಕಿದ್ದ ಬದಲಾವಣೆ, ತಮ್ಮ ಕ್ಷೇತ್ರದಲ್ಲಾದ ಅಭಿವೃದ್ಧಿ ಹೊಸ ನಾಯಕರ ಅಗತ್ಯವಿದೆಯೇ? ತಮ್ಮ ನಾಯಕರ ಕಾರ್ಯವೈಖರಿ ಹೇಗಿದೆ ಎನ್ನುವ ಅಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಇದಲ್ಲದೆ  ಇತ್ತೀಚೆಗಷ್ಟೇ ಸಂಸದರ ಕಾರ್ಯನಿರ್ವಹಣೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಈಗ ತಮ್ಮ ಸರ್ಕಾರದ ಕಾರ್ಯಕ್ರಮಗಳು ನೆಲ ಮಟ್ಟದಲ್ಲಿ ಹೇಗೆ ಅನುಷ್ಠಾನಗೊಂಡಿವೆ ಹಾಗೂ ಅವುಗಳ ಬಗ್ಗೆ ಜನರ ಪ್ರತಿಕ್ರಿಯೆ ಏನು ಎಂದು ಬಯಸಿ ‘ನಮೋ ಆ್ಯಪ್’ ಮೂಲಕ ಬಿಜೆಪಿ ಸಂಸದರಿಗೆ 6 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಿಗೆ ಜನವರಿ 11  ರೊಳಗೆ ಉತ್ತರಿಸಬೇಕು ಎಂದು ಸೂಚಿಸಿದ್ದಾರೆ.

Ad Widget

Ad Widget <> Ad Widget

ಸಂಸದರ ಉತ್ತರಗಳನ್ನು ಆಧರಿಸಿ ಯೋಜನೆ ಅನುಷ್ಠಾನದಲ್ಲಿ ಲೋಪಗಳಾಗಿವೆಯೇ ಎಂದು ತಿಳಿಯಲು ಹಾಗೂ ಲೋಪಗಳಾಗಿದ್ದರೆ ಅವುಗಳನ್ನು ತಿದ್ದಿಕೊಳ್ಳುವುದು ಮೋದಿ ಉದ್ದೇಶವಾಗಿದೆ. ಅಲ್ಲದೆ, ಸಂಸದರ ಕಾರ್ಯನಿರ್ವಹಣೆಯನ್ನೂ ಈ ಮೂಲಕ ಅಳೆಯಲು ಮೋದಿ ಉದ್ದೇಶ ಇರಿಸಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಯೊಂದು ಹೇಳಿದೆ.



Ad Widget

*ನಿಮ್ಮ ಪ್ರದೇಶದಲ್ಲಿ ಯಾವ ಸರ್ಕಾರಿ ಯೋಜನೆಗಳು ಹೆಚ್ಚು ಪ್ರಭಾವ ಬೀರಿವೆ?

Ad Widget

Ad Widget

* ನಿಮ್ಮ ಪ್ರದೇಶದಲ್ಲಿ ಜಾರಿಯಾಗಿರುವ ಸರ್ಕಾರಿ ಯೋಜನೆಗಳನ್ನು ನೀವು ಹೇಗೆ ವಿಶ್ಲೇಷಿಸುವಿರಿ?

* ಫಲಾನುಭವಿಗಳೊಂದಿಗೆ ನೀವು ಸಂಪರ್ಕದಲ್ಲಿದ್ದೀರಾ? ಖುದ್ದಾಗಿ, ಇ-ಮೇಲ್ ಮೂಲಕ ಅಥವಾ ಎಸ್ಸೆಮ್ಮೆಸ್ ಮೂಲಕ?

* ಜನರ ಪ್ರತಿಕ್ರಿಯೆ ಅರಿಯಲು ಯಾವ ವಿಧಾನ ಸೃಷ್ಟಿಸಿದ್ದೀರಿ? ಪಕ್ಷಕ್ಕೆ ಪ್ರತಿಕ್ರಿಯೆ ಸಲ್ಲಿಸಿರುವಿರಾ?

* ನರೇಂದ್ರ ಮೋದಿ ಆ್ಯಪ್‌ನಲ್ಲಿ ಸರ್ಕಾರದ ಯೋಜನೆಗಳ ಎಲ್ಲ ಮಾಹಿತಿ ಇದೆಯೇ?

* ನೀವು ಏನಾದರೂ ಸಲಹೆ ನೀಡಬಯಸುವಿರಾ?

With the Lok Sabha elections just around the corner, prime minister Narendra Modi’s government is trying to gather people’s opinions.  For this, a special survey has been launched from the NaMo app. The survey, titled ‘Jan Mana Sarve’, aims to gather public opinion on the governance style of the Modi government.

Ad Widget
Click to comment

Leave a Reply

Uncategorized

ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿಯಾಗಿದ್ದ ಶೋಭಿತ್, ಶನಿವಾರ ಸಂಜೆ ಸ್ನೇಹಿತರೊಂದಿಗೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ನೀರುಪಾಲಾಗಿದ್ದರು.

Ad Widget

Ad Widget <> Ad Widget

ಉಜಿರೆ ಎಸ್‌ಡಿಎಂ ಕಾಲೇಜಿನ ಒಂಬತ್ತು ಮಂದಿ ವಿದ್ಯಾರ್ಥಿಗಳು ಶನಿವಾರ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರಕ್ಕಿಳಿದಿದ್ದು, ಇಬ್ಬರೂ ಅಲೆಗಳ ಸೆಳೆತಕ್ಕೆ ಸಿಲುಕಿದ್ದರು. ಈಜು ತಿಳಿದಿದ್ದ ಆಕಾಶ್ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಶೋಭಿತ್ ನಾಪತ್ತೆಯಾಗಿದ್ದರು.



Ad Widget

ವಿದ್ಯಾರ್ಥಿಗಾಗಿ ಶನಿವಾರ ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಎಸ್‌ಡಿಆರ್‌ಎಫ್, ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ad Widget

Ad Widget

ಭಾನುವಾರ ಮಧ್ಯಾಹ್ನ ಉಳ್ಳಾಲ ವಲಯದ ನಾಡದೋಣಿ ಹಾಗೂ ಗಿಲ್ನೆಟ್ ಮೀನುಗಾರರ ಸಂಘದ ಪ್ರಮುಖರಾದ ಆಸಿಫ್ ಎಂ.ಬಿ., ನಿಝಾಮ್ ಕೋಟೆಪುರ, ನಝೀರ್ ಕೋಡಿ, ರಝಾಕ್ ಕೋಟೆಪುರ, ಮುಸ್ತಾಫ ಕೋಟೆಪುರ ಮತ್ತು ಇರ್ಫಾನ್ ಕೋಟೆಪುರ ಅವರು ನಾಡದೋಣಿಯಲ್ಲಿ ಶೋಧ ನಡೆಸಿದರು. ಈ ವೇಳೆ ಉಚ್ಚಿಲ ಪೆರಿಬೈಲ್ ಸಮೀಪ ಸಮುದ್ರದಲ್ಲಿ ತೇಲುತ್ತಿದ್ದ ಶೋಭಿತ್ ಅವರ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ನಾಡದೋಣಿಯ ಮೂಲಕ ಕೋಟೆಪುರ ಸಮುದ್ರ ತೀರಕ್ಕೆ ತರಲಾಗಿದ್ದು, ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೋಭಿತ್ ತನ್ನ ಪೋಷಕರ ಏಕೈಕ ಪುತ್ರನಾಗಿದ್ದ ಎಂದು ತಿಳಿದುಬಂದಿದೆ.

Ad Widget
Continue Reading

Uncategorized

ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್‌ಫುಲ್ |

Published

on



Ad Widget

Ad Widget

Ad Widget

Ad Widget

ಅ. 23ರಂದು ಚಿತ್ರ ಬಿಡುಗಡೆ

Ad Widget

Ad Widget

Ad Widget

Ad Widget

ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಮುಂಬೈನಲ್ಲಿ ನಡೆದ ಮೊದಲ ಎರಡು ಪ್ರೀಮಿಯರ್ ಪ್ರದರ್ಶನಗಳಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂಬೈನ ಮುಲುಂದ್ ಮತ್ತು ಕಲ್ಯಾಣ್‌ನಲ್ಲಿ ಶನಿವಾರ ನಡೆದ ಪ್ರದರ್ಶನಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎರಡೂ ಕಡೆ ಚಿತ್ರ ಹೌಸ್‌ಫುಲ್ ಪ್ರದರ್ಶನ ಕಂಡಿದೆ ಎಂದು ಚಿತ್ರತಂಡ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನಾಗನ ಹಿನ್ನೆಲೆಯನ್ನು ಆಧರಿಸಿದ ಮೊದಲ ತುಳು ಚಿತ್ರ ಎಂಬ ವಿಶೇಷತೆಯೊಂದಿಗೆ ಗಮನ ಸೆಳೆದಿರುವ ‘ಬನ’, ತನ್ನ ಕಥೆ ಮತ್ತು ಕಲಾವಿದರ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರದ ಕಥಾಹಂದರ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದು, ಯುವ ಕಲಾವಿದರ ಅಭಿನಯದ ಜತೆಗೆ ಹಿರಿಯ ಕಲಾವಿದರೂ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ ಎಂಬ ಮೆಚ್ಚುಗೆಯ ಮಾತುಗಳು ಪ್ರದರ್ಶನದ ಬಳಿಕ ಕೇಳಿಬಂದಿವೆ.

Ad Widget

Ad Widget <> Ad Widget

ಚಿತ್ರದಲ್ಲಿ ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು, ಕಥೆಯ ನಿರೂಪಣೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಭಿನ್ನ ಕಥಾವಸ್ತು ಹಾಗೂ ಕಲಾವಿದರ ಸಹಜ ಅಭಿನಯ ಚಿತ್ರಕ್ಕೆ ಮೆರುಗು ನೀಡಿದೆ. ತುಳು ಚಿತ್ರರಂಗದಲ್ಲಿ ನಾಗನ ಹಿನ್ನೆಲೆಯನ್ನು ಆಧರಿಸಿದ ಕಥಾವಸ್ತುವಿನೊಂದಿಗೆ ಮೂಡಿಬಂದಿರುವ ‘ಬನ’, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಮುಂಬೈ ತುಳು ಪ್ರೇಕ್ಷಕರಿಂದ ದೊರೆತ ಪ್ರತಿಕ್ರಿಯೆ ಚಿತ್ರತಂಡದ ಉತ್ಸಾಹವನ್ನು ಹೆಚ್ಚಿಸಿದೆ.



Ad Widget

ಮುಂಬೈನಲ್ಲಿ ಚಿತ್ರದ ಪ್ರೀಮಿಯರ್ ಪ್ರದರ್ಶನಗಳ ಆಯೋಜನೆಯನ್ನು ಬಾಬಪ್ರಸಾದ್ ಅರಸ ಮತ್ತು ನಾಗಕಿರಣ್ ಶೆಟ್ಟಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಶನಿವಾರ ನಡೆದ ಎರಡೂ ಪ್ರದರ್ಶನಗಳಿಗೆ ಪ್ರೇಕ್ಷಕರ ಉತ್ತಮ ಸ್ಪಂದನೆ ದೊರೆತಿದ್ದು, ಹೌಸ್‌ಫುಲ್ ಪ್ರದರ್ಶನ ಚಿತ್ರತಂಡಕ್ಕೆ ಸಂತಸ ತಂದಿದೆ.

Ad Widget

Ad Widget

ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ತುಳುವರು ತುಳು ಭಾಷೆ ಮತ್ತು ಚಿತ್ರರಂಗದ ಬೆಳವಣಿಗೆಗೆ ನಿರಂತರ ಬೆಂಬಲ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ‘ಬನ’ ಚಿತ್ರಕ್ಕೆ ಮುಂಬೈನಲ್ಲಿ ದೊರೆತಿರುವ ಪ್ರತಿಕ್ರಿಯೆ ಚಿತ್ರ ಬಿಡುಗಡೆಗೂ ಮುನ್ನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಅ. 23ರಂದು ಚಿತ್ರ ಬಿಡುಗಡೆ

‘ಬನ’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮುಂಬೈನ ಪ್ರೀಮಿಯರ್ ಪ್ರದರ್ಶನಗಳಲ್ಲಿ ದೊರೆತಿರುವ ಮೆಚ್ಚುಗೆ, ಚಿತ್ರದ ಅಧಿಕೃತ ಬಿಡುಗಡೆಗೆ ಮುನ್ನ ಸಕಾರಾತ್ಮಕ ವಾತಾವರಣ ನಿರ್ಮಿಸಿದೆ. ವಿಭಿನ್ನ ಕಥಾಹಂದರ ಮತ್ತು ಕಲಾವಿದರ ಅಭಿನಯದ ಮೂಲಕ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿರುವ ‘ಬನ’ ಚಿತ್ರಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿಯ ಪ್ರತಿಕ್ರಿಯೆ ದೊರೆಯಲಿದೆ ಎಂಬ ಕುತೂಹಲ ತುಳು ಚಿತ್ರಪ್ರೇಮಿಗಳಲ್ಲಿದೆ.

Ad Widget
Continue Reading

Uncategorized

ರಬ್ಬರ್‌ ಗೆ ಭರ್ಜರಿ  ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ

Published

on



Ad Widget

Ad Widget

Ad Widget

Ad Widget

 

Ad Widget

Ad Widget

Ad Widget

Ad Widget

ದೇಶೀಯ ಮಾರುಕಟ್ಟೆಯಲ್ಲಿ ರಬ್ಬರ್ ಹಾಲು (ಲ್ಯಾಟೆಕ್ಸ್) ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ರಬ್ಬರ್ ಶೀಟ್ ದರದಲ್ಲೂ ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪೂರೈಕೆ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಕೈಗಾರಿಕಾ ವಲಯದ ಹೆಚ್ಚಿದ ಬೇಡಿಕೆಯಿಂದ ರಬ್ಬರ್ ಬೆಲೆ ಚೇತರಿಕೆ ಕಂಡಿದ್ದು, ಬೆಳೆಗಾರರಲ್ಲಿ ಆಶಾಭಾವನೆ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇಶೀಯ ಮಾರುಕಟ್ಟೆಯಲ್ಲಿ ಆರ್‌ಎಸ್‌ಎಸ್-4 ದರ್ಜೆಯ ರಬ್ಬರ್ ಶೀಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು ₹281ಕ್ಕೆ ಏರಿಕೆಯಾಗಿದೆ. ಕಳೆದ ತಿಂಗಳ ಮೊದಲ ವಾರದಲ್ಲಿ ₹272ಕ್ಕೆ ಇಳಿದಿದ್ದ ದರ, ಬಳಿಕ ಹಂತಹಂತವಾಗಿ ಚೇತರಿಸಿಕೊಂಡಿದೆ. ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹295ರ ಅಧಿಕೃತ ದರ ದಾಖಲಾಗಿದ್ದು, ಕೆಲವು ವಹಿವಾಟುಗಳು ₹300ರ ಮಟ್ಟದಲ್ಲೂ ನಡೆದಿವೆ ಎಂದು ರಬ್ಬರ್ ಉತ್ಪಾದಕರ ಸಂಘಗಳು ತಿಳಿಸಿವೆ. ಇದಕ್ಕೂ ಮೊದಲು ಆಗಸ್ಟ್ 4ರಂದು ದಾಖಲಾಗಿದ್ದ ₹298ರ ಗರಿಷ್ಠ ದರವನ್ನು ಪ್ರಸ್ತುತ ಬೆಲೆ ಮೀರಿದೆ.

Ad Widget

Ad Widget <> Ad Widget

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ರಬ್ಬರ್ ಬೆಲೆ ಏರಿಕೆಯ ಹಾದಿಯಲ್ಲಿದೆ. ಕಳೆದ ತಿಂಗಳ ಮೊದಲ ವಾರದಲ್ಲಿ ಕೆ.ಜಿ.ಗೆ ₹261ಕ್ಕೆ ಇಳಿದಿದ್ದ ಆರ್‌ಎಸ್‌ಎಸ್ ಶೀಟ್ ದರ, ಇದೀಗ ₹275ಕ್ಕೆ ಏರಿಕೆಯಾಗಿದೆ.



Ad Widget

ಪೂರೈಕೆ ಕೊರತೆ, ರೋಗಬಾಧೆ ಪರಿಣಾಮ

Ad Widget

Ad Widget

ಭಾರತ ಸೇರಿದಂತೆ ಪ್ರಮುಖ ರಬ್ಬರ್ ಉತ್ಪಾದಕ ರಾಷ್ಟ್ರಗಳಲ್ಲಿ ಹವಾಮಾನ ವೈಪರೀತ್ಯ ಮತ್ತು ರಬ್ಬರ್ ಎಲೆ ಉದುರುವ ರೋಗದ ಬಾಧೆಯಿಂದ ಉತ್ಪಾದನೆ ಕುಸಿದಿದೆ. ಇದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಮುಂದುವರಿದಿದ್ದರೂ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಉತ್ಪಾದನೆ ಮತ್ತು ಬೇಡಿಕೆಯ ನಡುವಿನ ಅಂತರವೂ ಬೆಲೆ ಏರಿಕೆಗೆ ಕಾರಣವಾಗಿದೆ.

ಕೃತಕ ರಬ್ಬರ್ ಉತ್ಪಾದನಾ ವೆಚ್ಚ ಹೆಚ್ಚಳ

ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಹಾಗೂ ಕಚ್ಚಾ ತೈಲದ ಬೆಲೆಯಲ್ಲಿನ ಏರಿಳಿತಗಳು ಕೃತಕ ರಬ್ಬರ್ ಉತ್ಪಾದನಾ ವೆಚ್ಚದ ಮೇಲೆ ಪರಿಣಾಮ ಬೀರಿವೆ. ಕೃತಕ ರಬ್ಬರ್ ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆಗಳು ನೈಸರ್ಗಿಕ ರಬ್ಬರ್ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿವೆ. ವಾಹನ ಮತ್ತು ಟಯರ್ ತಯಾರಿಕಾ ವಲಯದಿಂದಲೂ ಬೇಡಿಕೆ ಹೆಚ್ಚಿರುವುದು ಬೆಲೆ ಏರಿಕೆಗೆ ಮತ್ತಷ್ಟು ಬಲ ನೀಡಿದೆ.

ಆದರೆ ಕಚ್ಚಾ ರಬ್ಬರ್ ಬೆಲೆ ಏರಿಕೆಯಿಂದ ರಬ್ಬರ್ ಆಧಾರಿತ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪಾದನಾ ವೆಚ್ಚವೂ ಹೆಚ್ಚುತ್ತಿದೆ. ಇದರ ಪರಿಣಾಮವಾಗಿ ಟಯರ್, ವೈದ್ಯಕೀಯ ಕೈಗವಸು ಹಾಗೂ ಕ್ರೀಡಾ ಪರಿಕರಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಉದ್ಯಮ ವಲಯದ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ವಿವಿಧ ದರ್ಜೆಯ ರಬ್ಬರ್ ದರ (ಪ್ರತಿ ಕೆ.ಜಿ.ಗೆ)

ರಬ್ಬರ್ ದರ್ಜೆದೇಶೀಯ ಮಾರುಕಟ್ಟೆಅಂತರರಾಷ್ಟ್ರೀಯ ಮಾರುಕಟ್ಟೆ
ಆರ್‌ಎಸ್‌ಎಸ್-4₹282₹275
ಆರ್‌ಎಸ್‌ಎಸ್-5₹277₹271
ಲ್ಯಾಟೆಕ್ಸ್ (ಶೇ. 60 ಒಣ ರಬ್ಬರ್)₹203₹184
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading