ನಾಲ್ಕು ವರ್ಷಗಳ ಹಿಂದೆ ನಿರ್ದೇಶಕ ಮಧ್ಯೆ ಒಡಕಿನಿಂದ ಎರಡು […]" /> ನಾಲ್ಕು ವರ್ಷಗಳ ಹಿಂದೆ ನಿರ್ದೇಶಕ ಮಧ್ಯೆ ಒಡಕಿನಿಂದ ಎರಡು […]"> Sexual Harassment: ಉಡುಪಿ : ಸಹಕಾರಿ ಸಂಸ್ಥೆಯ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ನಿರ್ದೇಶಕರಿಂದ ಲೈಂಗಿಕ ಕಿರುಕುಳ ಮತ್ತು ಜೀವ ಬೆದರಿಕೆ -ಪ್ರಕರಣ ದಾಖಲು - Nikhara News | Kannada News Website
Connect with us

ಉಡುಪಿ

Sexual Harassment: ಉಡುಪಿ : ಸಹಕಾರಿ ಸಂಸ್ಥೆಯ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ನಿರ್ದೇಶಕರಿಂದ ಲೈಂಗಿಕ ಕಿರುಕುಳ ಮತ್ತು ಜೀವ ಬೆದರಿಕೆ -ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಉಡುಪಿಯ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ 5 ಮಂದಿ ಲೈಂಗಿಕ ಕಿರುಕುಳ ಮತ್ತು ಜೀವ ಬೆದರಿಕೆ ಒಡ್ಡಿದ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆಯರು ತಾವು ಈ ಸಹಕಾರಿ ಸಂಸ್ಥೆಯ 25 ವರ್ಷಗಳಿಂದ ಉದ್ಯೋಗ ನಡೆಸುತ್ತಿದ್ದು, ಕಳೆದೆರಡು ವರ್ಷಗಳಿಂದ ಸಂಸ್ಥೆಯ ನಿರ್ದೇಶಕರ ಬಣವೊಂದು ತಮಗೆ ಕಿರುಕುಳ ನೀಡುತ್ತಿದೆ ಎಂದು ದೂರಿದ್ದಾರೆ.

Ad Widget

Ad Widget alt="Ad Widget"/>

Ad Widget

ನಾಲ್ಕು ವರ್ಷಗಳ ಹಿಂದೆ ನಿರ್ದೇಶಕ ಮಧ್ಯೆ ಒಡಕಿನಿಂದ ಎರಡು ಬಣಗಳಾಗಿದ್ದು, ಆರೋಪಿಗಳ ಬಣವು 2022 ರ ಮೇ 4 ರಂದು ನಡೆದ ಸಿಬ್ಬಂದಿ ಸಭೆಯಲ್ಲಿ ಸಂತ್ರಸ್ತ ಮಹಿಳೆಯರಿಬ್ಬರಿಗೆ ರಾಜಿನಾಮೆ ನೀಡವಂತೆ ಗದರಿಸಿದ್ದರು. ಅಲ್ಲದೆ ಕಚೇರಿಯ ಬಾಗಿಲು ಹಾಕಿ, ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದು, ಅವಾಚ್ಯ ಶಬ್ದಗಳಿಂದ ಬೈದಿರುವುದು, ಸೀರೆ ಎಳೆದಿರುವುದಾಗಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

ಅಲ್ಲದೆ, ಮೆಮೋ ನೀಡಿ, ಸಂಬಳದಲ್ಲಿ 2,000 ರೂ ಕಡಿತಗೊಳಿಸಿದ್ದು, ಠೇವಣಿ ವಿಭಾಗದಿಂದ ಸಾಲ ವಿಭಾಗಕ್ಕೆ ವರ್ಗಾಯಿಸಿರುವುದು, ತಮ್ಮ ಕಂಪ್ಯೂಟರ್‌ಪಾಸ್ ವರ್ಡ್ ಕದ್ದಿದ್ದು, ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದು, ಕೈಯನ್ನು ಎಳೆದಾಡಿದ್ದು ಕಚೇರಿಯಲ್ಲಿ ಹರಿತವಾದ ಆಯುಧವನ್ನು ತಂದಿಟ್ಟು ಹೆದರಿಸಿರುವುದು ಇತ್ಯಾದಿ ಕೃತ್ರಗಳನ್ನು ಎಸಗಿದ್ದಾರೆ ಎಂದು ದೂರುದಾರರು ದೂರಿನಲ್ಲಿ ತಿಳಿಸಿದ್ದಾರೆ.

ಠಾಣೆಯಲ್ಲಿ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದವರು ಆರೋಪಿಸಿದ್ದಾರೆ

Click to comment

Leave a Reply

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!