ಕ್ರೀಡೆ
Shakshi Mallik | ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಸಹಾಯಕನೇ ಆಯ್ಕೆ – ಅಸಮಾಧಾನಗೊಂಡು ಕ್ರೀಡಾಕ್ಷೇತ್ರ ತೊರೆದ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ : ಜಂಟಿ ಕಾರ್ಯದರ್ಶಿಯಾಗಿ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಆಯ್ಕೆ
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ – WFI)ದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬೆಂಬಲದ ಅಭ್ಯರ್ಥಿ, ಡಬ್ಲ್ಯುಎಫ್‌ಐನ ಉನ್ನತ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಒಲಿಂಪಿಕ್ ಪದಕ ವಿಜೇತೆ ಮತ್ತು ಕುಸ್ತಿಪಟು ಸಾಕ್ಷಿ ಮಲ್ಲಿಕ್ (Shakshi Mallik) ಅವರು ಕ್ರೀಡೆಯನ್ನು ತೊರೆಯುವುದಾಗಿ ನಿರ್ಧರಿಸಿದ್ದಾರೆ. ಈ ಚುನಾವಣೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ನಟಿ ಅನುಷ್ಕಾ ಶೆಟ್ಟಿ ಸಹೋದರ ಕೂಡ ಆಯ್ಕೆಯಾಗಿದ್ದರೆ.

ಬ್ರಿಜ್ ಭೂಷನ್ ಶರಣ್ ಸಿಂಗ್ ಅವರ ಬಹುಕಾಲ ಸಹಾಯಕ ಸಂಜಯ್ ಸಿಂಗ್ ಡಬ್ಲ್ಯುಎಫ್‌ಐನ ನೂತನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಬ್ರಿಜ್ ಭೂಷಣ್ ಅವರು 12 ವರ್ಷಗಳ ಕಾಲ ಈ ಹುದ್ದೆಯನ್ನು ಅಲಂಕರಿಸಿದ್ದರು. ಉತ್ತರ ಪ್ರದೇಶದ ಬಿಜೆಪಿ ಸಂಸದರಾಗಿರುವ ಬ್ರಿಜ್ ವಿರುದ್ಧ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ. ಸಾಕ್ಷಿ ಮಲ್ಲಿಕ್ ಸಹ ಆರೋಪ ಮಾಡಿದ್ದರು. ಅಲ್ಲದೆ, ಬ್ರಿಜ್ ವಿರುದ್ಧ ಭಾರಿ ಪ್ರತಿಭಟನೆಯೇ ನಡೆದಿತ್ತು.
ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ರಲ್ಲಿ 40 ಮತಗಳನ್ನು ಗಳಿಸಿ ವಿಜಯಶಾಲಿಯಾಗಿದ್ದಾರೆ. ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಕಾಮನ್‌ವೆಲ್ತ್ ಗೇಮ್ಸ್‌ನ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಕೇವಲ 7 ಮತಗಳನ್ನು ಮಾತ್ರ ಗಳಿಸಿದರು.
ಚುನಾವಣಾ ಫಲಿತಾಂಶದ ಮೇಲೆ ದೇಶದ ಪ್ರಮುಖ ಕುಸ್ತಿ ಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಫೋಗಟ್ ಮತ್ತು ಭಜರಂಗ್ ಪೂನಿಯಾ ಅಸಮಾಧಾನ ಹೊರಹಾಕಿದ್ದಾರೆ.
ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಮಾಧ್ಯಮಗಳ ಮುಂದೆ ಮಾತನಾಡುವಾಗ ಕಣ್ಣೀರು ಹಾಕಿದ್ದರು.
ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಇದೀಗ ಸಂಜಯ್ ಸಿಂಗ್ ಆಯ್ಕೆಯಾಗಿದ್ದು, ಮಹಿಳಾ ಕುಸ್ತಿಪಟಿಗಳ ಮೇಲಿನ ಲೈಂಗಿಕ ಕಿರುಕುಳ ಮುಂದುವರಿಲಿದೆ ಎಂದರು. ಅಲ್ಲದೆ, ದೇಶದಲ್ಲಿ ಹೇಗೆ ನ್ಯಾಯವನ್ನು ಹುಡುಕಿಕೊಳ್ಳಬೇಕು ಎಂಬುದರ ಸುಳಿವು ಇಲ್ಲ. ನಮ್ಮ ಕುಸ್ತಿ ವೃತ್ತಿಯ ಭವಿಷ್ಯದ ಕತ್ತಲಲ್ಲಿದೆ.ಅಲ್ಲದೆ ದೇಶದಲ್ಲಿ ಹೇಗೆ ನ್ಯಾಯವನ್ನು ಹುಡುಕಿಕೊಳ್ಳಬೇಕು ಎಂಬುದರ ಸುಳಿವು ಇಲ್ಲ. ನಮ್ಮ ಕುಸ್ತಿ ವೃತ್ತಿಯ ಭವಿಷ್ಯದ ಕತ್ತಲಲ್ಲಿದೆ. ನಾವು ಎಲ್ಲಿಗೆ ಹೋಗಬೇಕು ಎಂಬುದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಒಲಿಂಪಿಕ್ ಕಂಚಿನ ಪದಕ ವಿಜೇತ ಭಜರಂಗ್ ಪೂನಿಯಾ ಮಾತನಾಡಿ, ಸರಕಾರ ನಮಗೆ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರಾದೃಷ್ಟಕರ. ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ ಮತ್ತು ರಾಜಕೀಯ ಮಾಡಲು ನಾವಿಲ್ಲಿಗೆ ಬಂದಿಲ್ಲ. ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬೆಂಬಲಿಗ ಇದೀಗ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿದ್ದಾರೆ ಎಂದು ನೋವಿನಿಂದ ಹೇಳಿದರು.
ಸಾಕ್ಷಿ ಮಲ್ಲಿಕ್ ಮಾತನಾಡಿ, ಕುಸ್ತಿ ಒಕ್ಕೂಟವೂ ಮಹಿಳಾ ಮುಖ್ಯಸ್ಥರನ್ನು ಪಡೆಯಬೇಕೆಂದು ನಾವು ಬಯಸಿದ್ದೆವು. ಆದರೆ, ಅದು ಸಂಭವಿಸಲಿಲ್ಲ. ಇದಕ್ಕಾಗಿ ನಾವು ತುಂಬಾ ಹೋರಾಡಿದೆವು. ಆದರೆ, ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕರಾಗಿದ್ದಾರೆ ಮತ್ತು ವ್ಯಾಪಾರದಲ್ಲಿ ಪಾಲುದಾರರಾಗಿದ್ದರೆ. ಹೀಗಾಗಿ ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತೆ ತನ್ನ ಬೂಟುಗಳನ್ನು ಮೇಜಿನ ಮೇಲೆ ಇರಿಸಿ, ನೋವಿನ ಮಾತುಗಳನ್ನಾಡಿದರು.
ಈ ವರ್ಷದ ಜನವರಿಯಲ್ಲಿ ಈ ಮೂವರು ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಸರ್ಕಾರ ತನಿಖೆಗೆ ಆದೇಶಿಸಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.
ಆ ಬಳಿಕ ಚುನಾವಣೆಯಲ್ಲಿ ಬ್ರಿಜ್ ಕುಟುಂಬದ ಸದಸ್ಯರಿಗಾಗಲಿ, ಸಹಾಯಕರಿಗಾಗಲಿ ಅವಕಾಶ ನೀಡುವುದಿಲ್ಲ ಎಂದು ಭರವಸೆಯನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ನೀಡಿದ್ದರು ನೀಡಿದ್ದರು ಎನ್ನಲಾಗಿದೆ. ಆದರೆ, ಎಲ್ಲವು ಸುಳ್ಳಾಗಿದೆ. ಹೀಗಾಗಿ ಕುಸ್ತಿಪಟುಗಳು ಮತ್ತೊಮ್ಮೆ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಪುತ್ತೂರು ಮೂಲದ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಗುಣರಂಜನ್ ಶೆಟ್ಟಿಯವರು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರರಾಗಿದ್ದಾರೆ. ಇವರು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದರೆ.
ದಕ್ಷಿಣಕನ್ನಡ ಜಿಲ್ಲೆಯ ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲು ಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಗಳ ಸುಪುತ್ರ ಹಾಗೂ ಡಾ.ಸಾಯಿ ರಮೇಶ್ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಯವರ ಸಹೋದರ ಬಿ.ಗುಣರಂಜನ್ ಶೆಟ್ಟಿ ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದಲ್ಲಿ ಜನಿಸಿ, ಉರಮಾಲು ಗುತ್ತು ನಿವಾಸಿಯಾಗಿರುವ ಇವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುತ್ತಾರೆ. ತಮ್ಮ ವಿದ್ಯಾಭ್ಯಾಸವನ್ನು ಬೆಂಗಳೂರಿನಲ್ಲಿ ಮಾಡಿರುವ ಬಿ. ಗುಣರಂಜನ್ ಶೆಟ್ಟಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿರುತ್ತಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
ಸ್ಥಳೀಯ
Shrikrishna-ಗ್ವಾಲಿಯರ್‌ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized9 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್10 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು10 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ8 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ8 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್9 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಸುಳ್ಯ8 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ















