ರಾಜ್ಯ
ವಿವೇಕಾನಂದ ಜಯಂತಿಯಂದು ರಾಜ್ಯ ಸರಕಾರದಿಂದ ‘ನಿರುದ್ಯೋಗ ಭತ್ತೆ’ ಪಾವತಿ ಆರಂಭ – ನಿರುದ್ಯೋಗಿಗಳೆ ಯುವನಿಧಿ ಪಡೆಯುವುದು ಹೇಗೆ ?
ವಿವೇಕಾನಂದ ಜಯಂತಿಯಂದು, ಅಂದರೆ ಜ. 12ರಂದು ರಾಜ್ಯದ ಪದವೀಧರರು ಮತ್ತು ಡಿಪ್ಲೊಮಾ ಕೋರ್ಸ್ ಪೂರೈಸಿದ ಯುವಕರ ಖಾತೆಗೆ ಸರಕಾರದಿಂದ ನೇರವಾಗಿ ‘ನಿರುದ್ಯೋಗ ಭತ್ತೆ’ ಜಮೆ ಆಗಲಿದೆ.
ಉದ್ದೇಶಿತ ಯುವನಿಧಿ ಯೋಜನೆ ಅಡಿ ನೋಂದಣಿ ಪ್ರಕ್ರಿಯೆ ಡಿ.26ರಿಂದ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ. ಜ.12ರಿಂದ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳಿಗೆ ಹಣ ಜಮೆ ಆಗಲಿದ್ದು, ಈ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಇದರೊಂದಿಗೆ ಕಾಂಗ್ರೆಸ್ 2 ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ತನ್ನ ಎಲ್ಲ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದಂತಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ| ಶರಣಪ್ರಕಾಶ್ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
2022-23 ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆಯಾದ ಪದವೀಧರರು ಮತ್ತು ಡಿಪ್ಲೊಮಾ ಕೋರ್ಸ್ ಪೂರೈಸಿದ ರಾಜ್ಯದಲ್ಲಿ ಕನಿಷ್ಠ 6 ವರ್ಷ ವ್ಯಾಸಂಗದ ಅವಧಿ(ಪದವಿ/ ಡಿಪ್ಲೊಮಾ)ಯಲ್ಲಿ ವಾಸವಾಗಿರುವವರು ಈ ಯೋಜನೆಗೆ ಅರ್ಹರು. ಅದರಂತೆ ಸುಮಾರು 5.29 ಲಕ್ಷ ಯುವಕರು ಯೋಜನೆಯಡಿ ಬರಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದರಲ್ಲಿ 4.81 ಲಕ್ಷ ಪದವೀಧರರು ಹಾಗೂ 48,100 ಪದವೀಧರರಿದ್ದಾರೆ. ಈ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ ಸರಕಾರ 250 ಕೋಟಿ ರೂ. ಮೀಸಲಿಟ್ಟಿದೆ. ಇದರಲ್ಲಿ ಪದವೀಧರರು ಮತ್ತು ಸ್ನಾತಕೋತ್ತರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪೂರೈಸಿದವರಿಗೆ ಮಾಸಿಕ 1,500 ರೂ. ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ನಿರುದ್ಯೋಗ ಭತ್ತೆಯನ್ನು ಗರಿಷ್ಠ ವರ್ಷಗಳವರೆಗೆ ಅಥವಾ ಉದ್ಯೋಗ ದೊರೆಯುವವರೆಗೆ ನೀಡಲಾಗುವುದು. ಫಲಾನುಭವಿಯು ಪ್ರತಿ ತಿಂಗಳು 25ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ನಿರುದ್ಯೋಗಿ ಸ್ಥಿತಿಯ ಬಗ್ಗೆ ಆಧಾರ್ ಒಟಿಪಿ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳುವುದು ಕಡ್ಡಾಯ ಎಂದು ಸಚಿವ ಡಾ। ಶರಣಪ್ರಕಾಶ ಪಾಟೀಲ್ ಸ್ಪಷ್ಟಪಡಿಸಿದರು
ಜ. 12ಕ್ಕೆ ಖಾತೆಗೆ ಯುವ ನಿಧಿ ಹಣ ಜಮೆ; ಯಾರೆಲ್ಲಾ ಅರ್ಹರು, ಏನು ದಾಖಲೆ ಬೇಕು, ಅಪ್ಲೈ ಮಾಡುವುದು ಹೇಗೆ ಇಲ್ಲಿದೆ ವಿವರ
ಯಾರು ಫಲಾನುಭವಿಗಳು?
• ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನೀಡಲಾಗುತ್ತದೆ.
• ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
• ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.
ಯಾರು ಅನರ್ಹರು?
• ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.
• ಯಾವುದೇ ಅಪ್ರೆಂಟಿಸ್ ವೇತನ ಪಡೆಯುತ್ತಿರುವವರು.
• ಸರ್ಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
• ಸರ್ಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ.
• ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.
• ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.
ರಾಜ್ಯದಲ್ಲಿ ವಾಸ ನಿರೂಪಿಸಲು ಇವು ಅಗತ್ಯ
ಪದವೀಧರರು ವರ್ಷಕರ್ನಾಟಕದ ವಾಸಿ ಎಂದು ನಿರೂಪಿಸಲು ಎಸೆಸೆಲ್ಸಿ, ಪಿಯುಸಿ ಅಥವಾ ಸಿಇಟಿಸಂಖ್ಯೆ ಅಥವಾ ಪಡಿತರಚೀಟಿ ಸಂಖ್ಯೆ ನೀಡಬೇಕು. ಡಿಪ್ಲೊಮಾ ಪೂರೈಸಿದವರು 8 ಮತ್ತು 9ನೇ ತರಗತಿ ಅಂಕಪಟ್ಟಿ (ಎಸೆಸೆಲ್ಸಿ ಮೂಲದಿಂದ ಡಿಪ್ಲೊಮಾ ಮಾಡಿದ್ದಲ್ಲಿ), ಎಸೆಸೆಲ್ಸಿ ಅಥವಾ ಪಡಿತರಚೀಟಿ ಸಂಖ್ಯೆ ನೀಡಬೇಕು.
ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?
• ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು
• ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
• ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತೆಗೆದಿಟ್ಟುಕೊಳ್ಳಿ.
• ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟವಾಗಿರಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
• ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
• ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).
ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?
ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್ಗಳಲ್ಲಿ ಅರ್ಜಿ ಸಲ್ಲಿಸಬಹುದು.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
ರಾಜ್ಯ
Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವ ಭಾಗದಲ್ಲಿ ಎಷ್ಟು ಮಳೆ ಕೊರತೆ?
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಶೇ.24ಕ್ಕೂ ಅಧಿಕ ಕೊರತೆ ಉಂಟಾಗಿದೆ.
ದೇಶಾದ್ಯಂತ ಈ ಮುಂಗಾರು ಅವಧಿಯಲ್ಲಿ ಒಟ್ಟು 759.4 ಮಿ.ಮೀ. ಮಳೆಯಾಗಿದೆ. 2001ರ ಬಳಿಕ ಇದು ನಾಲ್ಕನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರಿಂದ ಲೆಕ್ಕ ಹಾಕಿದರೆ 13ನೇ ಅತಿ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್‌ನಿನೋ ಪ್ರಭಾವ
ದೇಶಾದ್ಯಂತ ಮಳೆ ಕೊರತೆಗೆ ಎಲ್‌ನಿನೋ ಪರಿಣಾಮವೂ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್‌ನಿನೋ ಪರಿಸ್ಥಿತಿಯಿಂದ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಭಾವ ಉಂಟಾಗಿದೆ.
ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಕರ್ನಾಟಕದಲ್ಲಿ ಎಲ್‌ನಿನೋ ಪರಿಣಾಮ ತೀವ್ರವಾಗಿ ಕಂಡುಬಂದಿದ್ದು, ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ. ಈಗಾಗಲೇ ರಾಜ್ಯದ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ದಕ್ಷಿಣ ಭಾರತದ ಇತರ ರಾಜ್ಯಗಳ ಪೈಕಿ ಕೇರಳದಲ್ಲಿ ಶೇ.28, ಆಂಧ್ರಪ್ರದೇಶದಲ್ಲಿ ಶೇ.25, ತಮಿಳುನಾಡಿನಲ್ಲಿ ಶೇ.20 ಹಾಗೂ ತೆಲಂಗಾಣದಲ್ಲಿ ಶೇ.18ರಷ್ಟು ಮಳೆ ಕೊರತೆ ದಾಖಲಾಗಿದೆ.
ಇತರ ರಾಜ್ಯಗಳಲ್ಲೂ ಮಳೆ ಅಭಾವ
ಮಣಿಪುರದಲ್ಲಿ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಅಭಾವ ಎದುರಿಸುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಅರುಣಾಚಲ ಪ್ರದೇಶದಲ್ಲಿ ಶೇ.44, ಪಂಜಾಬ್‌ನಲ್ಲಿ ಶೇ.41, ಬಿಹಾರದಲ್ಲಿ ಶೇ.32, ಅಸ್ಸಾಂನಲ್ಲಿ ಶೇ.28 ಹಾಗೂ ಹರಿಯಾಣದಲ್ಲಿ ಶೇ.23ರಷ್ಟು ಕೊರತೆ ದಾಖಲಾಗಿದೆ.
ದಶಕದಲ್ಲೇ ಒಣಹವೆಯ ಮುಂಗಾರು
ಎಲ್‌ನಿನೋ ಪರಿಣಾಮದಿಂದಾಗಿ ಈ ಬಾರಿ ದೇಶದಲ್ಲಿ ದಶಕದಲ್ಲೇ ಅತ್ಯಂತ ಒಣಹವೆಯ ಮುಂಗಾರು ದಾಖಲಾಗಿದೆ. 2015ರಲ್ಲಿ ಕೊನೆಯ ಬಾರಿಗೆ ಇದೇ ರೀತಿಯ ಮಳೆ ಕೊರತೆ ಕಂಡುಬಂದಿದ್ದು, ಆ ವರ್ಷವೂ ದೇಶಾದ್ಯಂತ ಸುಮಾರು ಶೇ.13ರಷ್ಟು ಮಳೆ ಕೊರತೆ ದಾಖಲಾಗಿತ್ತು.
ಜೂನ್‌ನಲ್ಲಿ ತೀವ್ರ ಮಳೆ ಕೊರತೆ
ಮುಂಗಾರು ಆರಂಭದ ಜೂನ್ ತಿಂಗಳಲ್ಲೇ ಮಳೆ ಕೊರತೆ ತೀವ್ರವಾಗಿತ್ತು. ಆ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.65ರಷ್ಟು ಮಾತ್ರ ಮಳೆಯಾಗಿತ್ತು. ಜುಲೈನಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದರೂ, ಆಗಸ್ಟ್‌ನಲ್ಲಿ ಮತ್ತೆ ಕೊರತೆ ಉಂಟಾಯಿತು. ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣದಲ್ಲಿ ತುಸು ಸುಧಾರಣೆ ಕಂಡುಬಂದಿದೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ15 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















