Connect with us

ಉಡುಪಿ

ಡಿ. 31ರೊಳಗಡೆ ಕೆವೈಸಿ ಅಪ್ಡೇಟ್‌ ಮಾಡದಿದ್ದರೇ ಎಲ್ ಪಿಜಿ ಸಬ್ಸಿಡಿ, ಗ್ಯಾಸ್‌ ಗೆ ಸಂಪರ್ಕಕ್ಕೆ ತೊಂದರೆ ವೈರಲ್‌ ಮೆಸೇಜ್‌  –  ಏಜೆನ್ಸಿ ಮುಂದೆ ಗ್ರಾಹಕರ ಸರತಿ ಸಾಲು  – ಏನಿದರ ಹಿಂದಿನ ಸತ್ಯ?

Published

on

Ad Widget

Ad Widget

Ad Widget

Ad Widget

ಕೇಂದ್ರ ಸರ್ಕಾರ ಮತ್ತೆ ಎಲ್ ಪಿಜಿ ಬಳಕೆದಾರರಿಗೆ ಸಬ್ಸಿಡಿ ನೀಡುತ್ತಿದೆ, ಅದನ್ನು ಪಡೆಯಲು ಎಲ್ ಪಿಜಿ ಸಂಪರ್ಕಕ್ಕೆ (ಕೆವೈಸಿ)  ಆಧಾರ್‌ ಕಾರ್ಡ್‌  ಮತ್ತು ಬ್ಯಾಂಕ್  ಖಾತೆಗಳನ್ನು ಜೋಡಿಸಬೇಕು ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ  ಹರಿದ ಕಾರಣ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸಿದೆ. ಈ ತಿಂಗಳಾತ್ಯದೊಳಗೆ ಲಿಂಕ್‌ ಮಾಡದಿದ್ದಲ್ಲಿ ಸಬ್ಸಿಡಿ ಹಾಗೂ ಸಂಪರ್ಕ  ರದ್ದಾಗುತ್ತಾದೆ ಎಂಬ ಒಕ್ಕಣೆ  ಪಾರ್ವರ್ಡ್‌ ಮೆಸೇಜ್ ನಲ್ಲಿ ಇದ್ದ ಕಾರಣ   ಕಳೆದ ಮೂರು ದಿನಗಳಿಂದ ಉಡುಪಿ, ಕುಂದಾಪುರಗಳಲ್ಲಿ ಬಳಕೆದಾರರು ತಮ್ಮ ಎಲ್ ಪಿಜಿ ಪೂರೈಕೆ ಏಜೆನ್ಸಿ ಮುಂದೆ ಕೆವೈಸಿ ಮಾಡಿಸಲು ಸಾರದಿ ಸಾಲಲ್ಲಿ ನಿಲ್ಲುತ್ತಿದ್ದಾರೆ.

Ad Widget

Ad Widget

Ad Widget

Ad Widget

ಆದರೆ, ಆಹಾರ ಮತ್ತು ಪಡಿತರ ಪೂರೈಕೆ ಇಲಾಖೆಯ ಅಧಿಕಾರಿಗಳು ಸಬ್ಸಿಡಿ ನೀಡುವ ಬಗ್ಗೆ ಸರ್ಕಾರದಿಂದ ಯಾವುದೇ ಸುತ್ತೋಲೆ ಬಂದಿಲ್ಲ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಲ್ಲಿ ಎಲ್ಪಿಜಿ ಸಂಪರ್ಕ ಪಡೆದವರಿಗೆ ಕೆವೈಸಿ ಮಾಡಿಸಲು ಸೂಚಿಸಲಾಗಿದೆ. ಅವರಷ್ಟೇ ಕೆವೈಸಿ ಮಾಡಿಸಿದರೆ ಸಾಕು ಎಂದು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕೇಂದ್ರ ಸರ್ಕಾರ ಎಲ್ ಪಿಜಿ ಗೆ ಸಬ್ಸಿಡಿ ನೀಡಬಹುದು, ಆದ್ದರಿಂದ ಯಾವುದಕ್ಕೂ ಕೆವೈಸಿ ಮಾಡಿಸಿದರೆ ಒಳ್ಳೆಯದು  ఎంబ ನಿರೀಕ್ಷೆಯನ್ನು ಕೆಲವು ಬಳಕೆದಾರರು ವ್ಯಕ್ತಪಡಿಸಿದ್ದಾರೆ.

Ad Widget

Ad Widget <> Ad Widget

 ಸಬ್ಸಿಡಿ ಬಗ್ಗೆ ಗೊತ್ತಿಲ್ಲ, ಆದರೆ ಉಜ್ವಲ ಯೋಜನೆ ಫಲಾನುಭವಿಗಳಿಗೆ ಕೆವೈಸಿಗೆ ಸೂಚನೆ ಬಂದಿದೆ. ಉಳಿದವರು ಕೆವೈಸಿ ಮಾಡಿಸುವುದರಿಂದ ಯಾವುದೇ ತೊಂದರೆ ಇಲ್ಲ, ಮುಂದೆ ಬೇಕಾಗಬಹುದು ಎಂಬ ಕಾರಣಕ್ಕೆ ಬಂದವರೆಲ್ಲರ ಕೆವೈಸಿ ಮಾಡಿಸುತ್ತಿದ್ದೇವೆ ಎಂದು ಏಜೆನ್ಸಿಯ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

ಸುಳ್ಳು ಸುದ್ದಿ

Ad Widget

Ad Widget

ಡಿ.31ರೊಳಗೆ ಆಧಾರ್ ದೃಢೀಕರಣ ಮಾಡದಿದ್ದರೆ ಸಬ್ಸಿಡಿ ಬರುವುದಿಲ್ಲ. ಹಾಗೂ ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಡಿದ್ದೇ ತಡ ಜನರು ಗ್ಯಾಸ್ ಏಜೆನ್ಸಿಗಳಿಗೆ ಧಾವಿಸಲು ಆರಂಭಿಸಿದ್ದಾರೆ. ಏಜೆನ್ಸಿಯ ಸಿಬ್ಬಂದಿ ತಿಳಿಹೇಳಿದರೂ ಜನರು ಹರಿಹಾಯ್ದ ಪ್ರಕರಣಗಳೂ ಅಲ್ಲಲ್ಲಿ ನಡೆದಿವೆ. ಮಂಗಳೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಗುರುವಾರವೂ ಉದ್ದನೆಯ ಸರತಿ ಸಾಲು ಕಂಡುಬಂದಿದೆ.

ಆದರೂ ಜನರಲ್ಲಿ ಗೊಂದಲ ಕಡಿಮೆಯಾಗಿಲ್ಲ. ಉಡುಪಿಯಲ್ಲಿ ಗುರುವಾರವೂ ಬಳಕೆದಾರರು ಆಧಾರ್, ಬ್ಯಾಂಕ್ ಪಾಸ್ ಬುಕ್ ಗಳ ಝರಾಕ್ಸ್ ಪ್ರತಿಗಳನ್ನು ಹಿಡಿದು ಎಲ್ ಪಿಜಿ ಏಜೆನ್ಸಿಗಳ ಮುಂದೆ ಕೆವೈಸಿ ಮಾಡಿಸಲು ಸಾಲುಗಟ್ಟಿದ್ದು ಕಂಡುಬಂತು.

ಗೃಹ ಬಳಕೆಯ ಅಡುಗೆ ಅನಿಲ ಸಂಪರ್ಕ ಪಡೆದವರು ಆಧಾರ್ ಬಯೋಮೆಟ್ರಿಕ್ ಮಾಡಿಸುವ ವಿಚಾರ ಜನರಲ್ಲಿ ಗೊಂದಲಕ್ಕೆ ಕಾರಣವಾಗಿದ್ದು, ಗ್ಯಾಸ್ ಏಜೆನ್ಸಿಗಳ ಕಚೇರಿಗಳೆದುರು ಕ್ಯೂ ನಿಲ್ಲುತ್ತಿದ್ದಾರೆ. ಆದರೆ, ಆಧಾರ್ ಬಯೋಮೆಟ್ರಿಕ್ ದೃಢೀಕರಣ ನೀಡಲು ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲ. ಸಾರ್ವಜನಿಕರು ಅನವಶ್ಯಕ ಗೊಂದಲಕ್ಕೆ ಒಳಗಾಗಬಾರದು ಎಂದು ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಇಲಾಖೆ ಸ್ಪಷ್ಟನೆ: ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ. ಆದರೆ ಇಂತಿಷ್ಟೇ ದಿನದೊಳಗೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಯಾವುದೇ ಗಡುವು ವಿಧಿಸಿಲ್ಲ. ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ ಎಂದು ಆಹಾರ ಇಲಾಖೆ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ

Ad Widget
Click to comment

Leave a Reply

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!