ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ , […]" /> ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ , […]"> Puthila Parivara | ಪುತ್ತೂರಿನಲ್ಲಿ ಡಿ.24-25 ಶ್ರೀನಿವಾಸ ಕಲ್ಯಾಣೋತ್ಸವ - 1.25 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ : ತಯಾರಾಗುತ್ತಿದೆ ಐವತ್ತು ಸಾವಿರ ಲಡ್ಡು - ಕೇಸರಿಮಯಗೊಂಡ ಪೇಟೆ : ದೇವರ ಸ್ವಾಗತ ಹೇಗಿರಲಿದೆ ಗೊತ್ತೇ..? - Nikhara News | Kannada News Website
Connect with us

ಪುತ್ತೂರು

Puthila Parivara | ಪುತ್ತೂರಿನಲ್ಲಿ ಡಿ.24-25 ಶ್ರೀನಿವಾಸ ಕಲ್ಯಾಣೋತ್ಸವ – 1.25 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ : ತಯಾರಾಗುತ್ತಿದೆ ಐವತ್ತು ಸಾವಿರ ಲಡ್ಡು – ಕೇಸರಿಮಯಗೊಂಡ ಪೇಟೆ : ದೇವರ ಸ್ವಾಗತ ಹೇಗಿರಲಿದೆ ಗೊತ್ತೇ..?

Published

on

Ad Widget

Ad Widget

Ad Widget

Ad Widget

ಪುತ್ತಿಲ ಪರಿವಾರ (Puthila Parivara) ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ವಿಶೇಷತೆ ಹೀಗಿದೆ.

Ad Widget

Ad Widget

Ad Widget

Ad Widget

50 ಸಾವಿರ ಶ್ರೀನಿವಾಸ ಕಲ್ಯಾಣ ಲಡ್ಡು ಪ್ರಸಾದ ಸೇವೆ ಸೇರಿದಂತೆ ಅನ್ನದಾನ ಸೇವೆ, ಸರ್ವ ಸೇವೆ, ಫಲಪಂಚಾಮೃತ ಅಭಿಷೇಕ ಸೇವೆ , ಮಹಾನಿವೇದನಾ ಸೇವೆ , ಸುಪ್ರಭಾತ ಸೇವೆ ಹಾಗೂ ಈಗಾಗಲೇ ನೋಂದಾಣಿಯಾಗಿದೆ.

Ad Widget

Ad Widget alt="Ad Widget"/>

Ad Widget

ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ , ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ಇರಲಿದೆ.

Ad Widget

Ad Widget <> Ad Widget

ಅದಕ್ಕಾಗಿ ವಿಶೇಷ ಅನ್ನಛತ್ರ ಪೆಂಡಲ್ ನಿರ್ಮಿಸಲಾಗಿದೆ. ವಿಶೇಷ ಅತ್ಯಾಕರ್ಷಕ ಹೂವಿನ ಆಲಂಕಾರವಿರಲಿದೆ.

ಮೆರವಣಿಗೆ ಹೇಗಿರಲಿದೆ ಗೊತ್ತೇ ..? ಉಪ್ಪಿನಂಗಡಿಯಿಂದ ದೇವರನ್ನು ಬರಮಾಡಿಕೊಂಡು ಬೊಳುವಾರಿನಿಂದ ಪೂರ್ಣಕುಂಭ ಸ್ವಾಗತವಿರಲಿದೆ.

Ad Widget

Ad Widget

ದೇವರ ಸ್ವಾಗತ ಹೇಗಿರಲಿದೆ :
ಎದುರಿಗೆ ಪೂರ್ಣಕುಂಭ ಸ್ವಾಗತ ತಂಡ ಅದರ ಹಿಂದೆ ರುದ್ರಪಾರಾಯಣ ತಂಡ ನಂತರ ವಿಷ್ಣು ಸಹಸ್ರನಾಮ ತಂಡ ಆ ನಂತರ ಭಜನಾ ತಂಡ ಅದರ ಹಿಂದೆ ಶಂಖನಾದ ತಂಡ ಅದರ ಹಿಂದೆ ತೆರೆದ ವಾಹನದಲ್ಲಿ ಶ್ರೀನಿವಾಸ ದೇವರ ಮೂರ್ತಿ ಇರಲಿದೆ.

ಆ ನಂತರ ಚೆಂಡೆ ಅದರ ಹಿಂದೆ ಭಗವಧ್ಬಕ್ತರು ದೇವರ ನಾಮಸ್ಮರಣೆಯೊಂದಿಗೆ ಸಾಗಲಿದ್ದಾರೆ.

ದೇವರ ಮೆರವಣಿಗೆ ಆಗಮಿಸುತ್ತಿದ್ದಂತೆ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಬೃಹತ್ ವೇದಿಕೆಯಲ್ಲಿ ಸಂತರ ಕೂಡುವಿಕೆಯಲ್ಲಿ ಬೃಹತ್ ಸನಾತನ ಸಮಾಗಮ ನಡೆಯಲಿದೆ

ಪುತ್ತೂರು ಪೇಟೆ ಕೇಸರಿಮಯ : ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಪ್ರಯುಕ್ತ ಪುತ್ತೂರು ಪೇಟೆ ಸಂಪೂರ್ಣ ಕೇಸರಿಮಯವಾಗಿರಲಿದೆ. ಇದಕ್ಕಾಗಿ ಕಾರ್ಯಕರ್ತರ ತಂಡ ರಾತ್ರಿ ಕೆಲಸ ಮಾಡುತ್ತಿದೆ.

ಸಾವಿರಕ್ಕೂ ಮಿಕ್ಕಿ ಬ್ಯಾನರ್ :
ಶ್ರೀನಿವಾಸ ದೇವರ ಅತ್ಯಾಕರ್ಷಕ ಪೋಟೋವಿರುವ ಬ್ಯಾನರ್ ಹಾಗೂ ದೊಡ್ಡ ಹೋಲ್ಡಿಂಗ್ಸ್ ಪುತ್ತೂರು ಪೇಟೆಯ ಡಿವೈಡರ್ ನಲ್ಲಿ ಹಾಗೂ ಪೇಟೆಯೆಲ್ಲೆಡೆ ಈಗಾಗಲೇ ಹಾಕಲಾಗಿದೆ.

ಉಪ್ಪಿನಂಗಡಿ, ಕಡಬ, ಸವಣೂರು, ಬೆಳ್ಳಾರೆ, ಸುಳ್ಯ, ವಿಟ್ಲ, ಬಂಟ್ವಾಳದಲ್ಲಿ ಈಗಾಗಲೇ ಭಕ್ತಾದಿಗಳು ಬ್ಯಾನರ್ ಹಾಕಲಾಗಿದೆ.

Ad Widget
Click to comment

Leave a Reply

ದಕ್ಷಿಣ ಕನ್ನಡ

ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.

Ad Widget

Ad Widget

Ad Widget

Ad Widget

ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್‌ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!