Connect with us

ದಕ್ಷಿಣ ಕನ್ನಡ

St. Philomena’s Pre-University College ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು – ಅನಾವರಣಗೊಂಡ ಫಿಲೋ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ

Published

on

Ad Widget

Ad Widget

Ad Widget

Ad Widget


ಪುತ್ತೂರು : ಶಿಕ್ಷಣವು ಜಗತ್ತನ್ನು ಬದಲಾಯಿಸುವ ಪ್ರಮುಖ ಅಸ್ತ್ರವಾಗಿದೆ” ಶಿಕ್ಷಣವು ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಅವನನ್ನು ಜ್ಞಾನವುಳ್ಳ ನಾಗರಿಕನನ್ನಾಗಿ ಮಾಡುತ್ತದೆ. ಶಿಕ್ಷಣವು ವ್ಯಕ್ತಿಯನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಸಾಮಾಜಿಕ ಅನಿಷ್ಟಗಳನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ ಮತ್ತು ಇಡೀ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಗಳಾದ ಅರುಣ್ ಫುಟ್ರಾಡೋ ಅವರು ಹೇಳಿದರು.

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 22 ಹಾಗೂ 23 ರಂದು ಕಾಲೇಜು ಪ್ರಾಂಗಣದಲ್ಲಿ ನಡೆದ ‘ಫಿಲೋ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ’ದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಶಿಕ್ಷಣ ಎಲ್ಲರನ್ನೂ ಸಬಲಗೊಳಿಸುತ್ತದೆ. ಇದು ಆಧುನಿಕ ಮತ್ತು ಕೈಗಾರಿಕೀಕರಣಗೊಂಡ ಜಗತ್ತನ್ನು ರೂಪಿಸುವ ಪ್ರಮುಖ ಅಂಶವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಗತಿಯನ್ನು ನಿಭಾಯಿಸಲು ಜನರಿಗೆ ಶಿಕ್ಷಣದ ಅಗತ್ಯವಿದೆ ಎಂದು ಹೇಳಿದರು.

Ad Widget

Ad Widget alt="Ad Widget"/>

Ad Widget

ಗೌರವ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ.ಸ್ಟ್ಯಾನಿ ಪಿಂಟೋ, ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾI ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ’ ಕೋಸ್ಟಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Ad Widget

Ad Widget <> Ad Widget

ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ.ರೆ.ಫಾ.ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ಕಾಲೇಜು ಜೀವನವು ಒಬ್ಬರ ಜೀವನದ ಅತ್ಯಂತ ಸ್ಮರಣೀಯ ವರ್ಷಗಳಲ್ಲಿ ಒಂದಾಗಿದೆ. ಇದು ಶಾಲಾ ಜೀವನಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಕಾಲೇಜು ಜೀವನವು ನಮಗೆ ಮೊದಲು ಪರಿಚಯವಿಲ್ಲದ ಹೊಸ ಅನುಭವಗಳು ಮತ್ತು ವಿಷಯಗಳಿಗೆ ನಮ್ಮನ್ನು ಒಡ್ಡುತ್ತದೆ. ಕೆಲವರಿಗೆ ಕಾಲೇಜ್ ಲೈಫ್ ಎಂದರೆ ಲೈಫ್ ಫುಲ್ ಎಂಜಾಯ್ ಮಾಡೋದು, ಪಾರ್ಟಿ ಮಾಡೋದು. ಇತರರಿಗೆ, ತಮ್ಮ ವೃತ್ತಿಜೀವನದ ಬಗ್ಗೆ ಗಂಭೀರವಾಗಿರಲು ಮತ್ತು ಉಜ್ವಲ ಭವಿಷ್ಯಕ್ಕಾಗಿ ಸಂಪೂರ್ಣವಾಗಿ ಅಧ್ಯಯನ ಮಾಡುವ ಸಮಯ ಎಂದು ಹೇಳಿದರು.

ಸಾಹಿತ್ಯಕ, ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ ಮತ್ತು ರೋವರ್ಸ್ ರೇಂಜರ್ಸ್ ನ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿಯನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Ad Widget

Ad Widget

2022- 23 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ 10ನೇ ರಾಂಕ್ ಪಡೆದ ಸಮೃದ್ಧಿ ರೈ, ಕಲಾ, ವಾಣಿಜ್ಯ, ವಿಜ್ಞಾನ ಹಾಗೂ ಪ್ರತಿ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಪ್ರಸಕ್ತ ವರ್ಷದ ‘ಬಹುಮುಖ ಪ್ರತಿಭಾ’ ಪ್ರಶಸ್ತಿಯನ್ನು ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾ ಶ್ರೀ ರೈ ರವರಿಗೆ ನೀಡಿ ಸನ್ಮಾನಿಸಲಾಯಿತು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎ.ಜೆ.ರೈ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಪ್ರಶಾಂತ್ ಭಟ್ ಪಿ ಹಾಗೂ ಫಿಲೋಮಿನಾ ಮೊಂತೇರೋ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವನ್ ಪೊನ್ನಪ್ಪ ಎಮ್. ಎನ್ ಸ್ವಾಗತಿಸಿ, ಕಾರ್ಯದರ್ಶಿ ತನ್ವಿ.ಕೆ ಅತಿಥಿಗಳನ್ನು ಪರಿಚಯಿಸಿ, ಜತೆ ಕಾರ್ಯದರ್ಶಿ ಪೃಥ್ವಿ.ಕೆ ವಂದಿಸಿದರು. ಉಪನ್ಯಾಸಕರಾದ ಸಂತೋಷ್ ಕ್ಲಾರೆನ್ಸ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!