Connect with us

ಬಿಗ್ ನ್ಯೂಸ್

Pratap Simha | ಸಂಸದ ಪ್ರತಾಪ್ ಸಿಂಹ ಸಹೋದರನಿಂದ ಹಾಸನ ಜಿಲ್ಲೆಯಲ್ಲಿ ಬೃಹತ್ ಮರಕಳ್ಳತನ : ವಿಡಿಯೋ ಸಹಿತ ಗಂಭೀರ ಆರೋಪ ಮಾಡಿದ ಕಾಂಗ್ರೇಸ್‍

Published

on



Ad Widget

Ad Widget

Ad Widget

Ad Widget

ಹಾಸನ : ಮೈಸೂರು ಸಂಸದ ಪ್ರತಾಪ್ ಸಿಂಹರ (Pratap Simha) ಸಹೋದರ ವಿಕ್ರಮ್ ಸಿಂಹರಿಂದ ಕೋಟ್ಯಾಂತರ ರೂಪಾಯಿಯ ಅಕ್ರಮ ಮರ ಕಡಿಯಲಾಗಿದೆ ಎಂಬ ಗಂಭೀರ ಆರೋಪವನ್ನು ವಿಡಿಯೊ ಸಹಿತ ರಾಜ್ಯ ಕಾಂಗ್ರೇಸ್‍ ಆರೋಪಿಸಿದೆ.

Ad Widget

Ad Widget

Ad Widget

Ad Widget

ಈಗಾಗಲೇ ಸಂಸತ್ ದಾಳಿಕೋರರಿಗೆ ಪಾಸ್ ಒದಗಿಸಿದ ಗಂಭೀರ ಆರೋಪ ಹೊತ್ತಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಮತ್ತೊಂದು ಆರೋಪ ಎದುರಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೇಸ್‍ ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲೇ ವಿಡಿಯೋ ಸಹಿತ ಆರೋಪಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆರೋಪ ಹೀಗಿದೆ: ಅಣ್ಣ ಪ್ರತಾಪ್ ಸಿಂಹ, ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ.ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ.

Ad Widget

Ad Widget <> Ad Widget

ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ Eshwar Khandre ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ.



Ad Widget

Dear BJP Karnataka,ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ?

Ad Widget

Ad Widget

ಎಂದು ಕಾಂಗ್ರೇಸ್ ನ ಅಧಿಕೃತ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ . ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.

Ad Widget

Ad Widget <> Ad Widget

ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.



Ad Widget

ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

Ad Widget

Ad Widget

ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.

ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.

ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

Ad Widget
Continue Reading

ಅಂತರ ರಾಜ್ಯ

CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget <> Ad Widget

ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

Continue Reading

ಬಿಗ್ ನ್ಯೂಸ್

SDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್‌ಡಿಪಿಐ ಅಸಮಾಧಾನ

Published

on



Ad Widget

Ad Widget

Ad Widget

Ad Widget

ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲವನದ ಹಲವು ಆಟೋಟದ ಉಪಕರಣಗಳು ದುರಸ್ತಿಗೊಳಗಾಗದೆ ಬಳಕೆಗೆ ಅಯೋಗ್ಯವಾಗಿವೆ. ಆವರಣದ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಹಲವು ವರ್ಷಗಳಿಂದ ಇದೇ ಸ್ಥಿತಿ ಮುಂದುವರಿದಿದ್ದರೂ, ಬಾಲವನದ ಅಭಿವೃದ್ಧಿಗೆ ಸಂಬಂಧಪಟ್ಟವರು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ದೂರಿದೆ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯ ತಂಡವು ಬಾಲವನಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿತು. ಬಾಲವನದ ದುರಸ್ತಿ ಮತ್ತು ಅಭಿವೃದ್ಧಿಗೆ ಜನಪ್ರತಿನಿಧಿಗಳು ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರೂ, ನಿರೀಕ್ಷಿತ ಮಟ್ಟದ ಕಾಮಗಾರಿಗಳು ನಡೆದಿಲ್ಲ ಎಂದು ಸಮಿತಿ ತಿಳಿಸಿದೆ.



Ad Widget

ಬಾಲವನವು ಪುತ್ತೂರಿನ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮಕ್ಕಳಿಗೆ ಮನರಂಜನೆ ಹಾಗೂ ಪ್ರಕೃತಿಯ ನಡುವೆ ಸಮಯ ಕಳೆಯಲು ಅನುಕೂಲವಾಗುವ ಸ್ಥಳವಾಗಿದೆ. ಹೀಗಾಗಿ, ಹದಗೆಟ್ಟಿರುವ ಆಟೋಟದ ಉಪಕರಣಗಳನ್ನು ತಕ್ಷಣ ದುರಸ್ತಿಗೊಳಿಸಿ, ಬಾಲವನದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

Ad Widget

Ad Widget

ಡಾ. ಶಿವರಾಮ ಕಾರಂತರ ನಿವಾಸ ಹಾಗೂ ಬಾಲವನದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಅದರ ಸಂರಕ್ಷಣೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.

ನಿಯೋಗದಲ್ಲಿ ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕ್, ಕಾರ್ಯದರ್ಶಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿ ಹರ್ಷದ್ ಹುಸೇನ್, ಸಮಿತಿ ಸದಸ್ಯ ಅಶ್ರಫ್ ಪರ್ಲಡ್ಕ, ಗೋಳಿಕಟ್ಟೆ ಬ್ರಾಂಚ್ ಅಧ್ಯಕ್ಷ ಇಶಾನ್, ಆರೀಫ್ ಮತ್ತಿತ್ತರರು ಇದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading