ಉಡುಪಿ
Udupi News: ಮಾವ, ಪತಿಯ ಚಿನ್ನ ಕದ್ದ ಆರೋಪ ಸತ್ಯಕ್ಕೆ ದೂರ: ಮಹಿಳೆ ಸ್ಪಷ್ಟನೆ
ಉಡುಪಿ : ‘ಮಾವ ಮತ್ತು ಪತಿಯ ಚಿನ್ನದ ಪದಕ ಕದ್ದ ಮಹಿಳೆ, ನ್ಯಾಯಾಲಯಕ್ಕೆ ದೂರು ದಾಖಲು’ ಎಂದು ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿ ಸತ್ಯಕ್ಕೆ ದೂರವಾದುದು ಎಂದು ಆರೋಪಿತ ಮಹಿಳೆ ಸ್ಪಷ್ಟಿಕರಣ ನೀಡಿದ್ದಾರೆ.
ಸಯ್ಯದ್ ಸಲೀಂ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದು, ಅದರಲ್ಲಿ ತನ್ನ ಪತ್ನಿ ತಬುಸ್ಸಮ್ ಎಂಬವರ ಮೇಲೆ 7.50 ಲಕ್ಷ ರು.ಗಳ ಚಿನ್ನ ಕದ್ದ ಬಗ್ಗೆ ಆರೋಪ ಹೊರಿಸಿದ್ದು, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವೆಬ್ ಸೈಟ್ ನಲ್ಲಿದ್ದ ದೂರಿನ ಪ್ರತಿಯಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈ ವರದಿಯಲ್ಲಿ ಸತ್ಯಾಂಶ ಇಲ್ಲ. ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಬುಸ್ಸಮ್ ತಿಳಿಸಿದ್ದಾರೆ.
ಸಯ್ಯದ್ ಸಲೀಂ ಹಿಂದೆಯೂ ಮದುವೆಯಾಗಿದ್ದು, ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ತನ್ನೊಂದಿಗೆ ಮದುವೆಯಾದ ಮೇಲೆ 2 ಬಾರಿ ಕೌಟುಂಬಿಕಾ ದೌರ್ಜನ್ಯಕ್ಕಾಗಿ ಪಡುಬಿದ್ರಿ ಠಾಣೆಯ ಮೇಲೆ ಆತನ ಮೇಲೆ ದೂರು ದಾಖಲಾಗಿದೆ. ತನ್ನ ಮದುವೆಯ ಸಂದರ್ಭದಲ್ಲಿ ನೀಡಿದ್ದ 98 ಪವನ್ ಚಿನ್ನಾಭರಣಗಳನ್ನು ಸಲೀಂ ಸಹಕಾರಿ ಸಂಘಗಳಲ್ಲಿ ಅಡವಿಟ್ಟಿದ್ದು, ಹಿಂದಕ್ಕೆ ಕೇಳಿದಾಗ ಕೊಡದೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಬುಸ್ಸಮ್ ಅವರು ಮೇ ತಿಂಗಳಲ್ಲಿ ಉಡುಪಿ ಜಿಲ್ಲಾ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದು, ಅದರಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಪ್ರಕರಣ ವಿಚಾರಣೆಯಲ್ಲಿದೆ ಎಂದು ತಬುಸ್ಸಮ್ ತಿಳಿಸಿದ್ದಾರೆ
ಅಪರಾಧ
Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.
ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.
ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್‌ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್‌ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
-
ಅಂತರ ರಾಜ್ಯ18 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು12 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಸುಳ್ಯ15 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್13 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ15 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ19 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ15 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















