ನಮ್ಮ  ಮಕ್ಕಳನ್ನು ಬೇರೆ ಮಕ್ಕಳ ಜೊತೆ ಹೋಲಿಸುವುದು ಅವರ ಸೃಜನಶೀಲ ಬೆಳವಣಿಗೆಗೆ […]" /> ನಮ್ಮ  ಮಕ್ಕಳನ್ನು ಬೇರೆ ಮಕ್ಕಳ ಜೊತೆ ಹೋಲಿಸುವುದು ಅವರ ಸೃಜನಶೀಲ ಬೆಳವಣಿಗೆಗೆ […]"> ಮಕ್ಕಳನ್ನು ಪರಸ್ಪರ ಹೋಲಿಕೆ ಮಾಡುವುದು ಮಕ್ಕಳ ಸೃಜನಶೀಲ ಬೆಳವಣಿಗೆಗೆ ಮಾರಕ‌ : ವಾಲ್ಟರ್‌ ನಂದಳಿಕೆ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ  'ವಿಕಾಸ ವೈಭವ 2023 ಸಂಪನ್ನ - Nikhara News | Kannada News Website
Connect with us

ದಕ್ಷಿಣ ಕನ್ನಡ

ಮಕ್ಕಳನ್ನು ಪರಸ್ಪರ ಹೋಲಿಕೆ ಮಾಡುವುದು ಮಕ್ಕಳ ಸೃಜನಶೀಲ ಬೆಳವಣಿಗೆಗೆ ಮಾರಕ‌ : ವಾಲ್ಟರ್‌ ನಂದಳಿಕೆ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ  ‘ವಿಕಾಸ ವೈಭವ 2023 ಸಂಪನ್ನ

Published

on

Ad Widget

Ad Widget

Ad Widget

Ad Widget

ಬಂಟ್ವಾಳ : ಹೆತ್ತವರು ಮಕ್ಕಳ ಕನಸುಗಳಿಗೆ ಪ್ರೇರಣೆಯಾಗಬೇಕೇ ವಿನಃ, ತಮ್ಮ ಚಿಂತನೆಗಳನ್ನು ಮಕ್ಕಳ ಮೇಲೆ ಹೇರುವಂತಾಗಬಾರದು,  ಹೆತ್ತವರ ಸಕಾರಾತ್ಮಕ‌ ಚಿಂತನೆಗಳು ಮಕ್ಕಳನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಪತ್ರಕರ್ತ ವಾಲ್ಟರ್ ನಂದಳಿಕೆ ಹೇಳಿದರು.

Ad Widget

Ad Widget

Ad Widget

Ad Widget

ಅವರು ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ  ‘ವಿಕಾಸ ವೈಭವ 2023 ‘ ದ ಎರಡನೇ ದಿನದ ಕಾರ್ಯಕ್ರಮದಲ್ಲಿ‌ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ನಮ್ಮ  ಮಕ್ಕಳನ್ನು ಬೇರೆ ಮಕ್ಕಳ ಜೊತೆ ಹೋಲಿಸುವುದು ಅವರ ಸೃಜನಶೀಲ ಬೆಳವಣಿಗೆಗೆ ಮಾರಕ‌ ಎಂದ‌ ಅವರು, ಅಂಕದ ಒತ್ತಡದ  ಹಿಂದೆ ಬೀಳದೆ ಉತ್ತಮ ಶಿಕ್ಷಣವನ್ನು ನೀಡಿದಾಗ ಮಕ್ಕಳು ಅತ್ಯುತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.

Ad Widget

Ad Widget <> Ad Widget

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ದೂರದೃಷ್ಟಿಯ ಚಿಂತನೆ ಇದ್ದವರಿಂದಲೇ ಈ ಮಹಾ ಸಾಧನೆ ಮಾಡಲು ಸಾಧ್ಯ ಎಂದು ಪ್ರಹ್ಲಾದ್ ಶೆಟ್ಟಿಯವರ ಸಾಧನೆಯನ್ನು ಕೊಂಡಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಬಾಲವಿಕಾಸ ಟ್ರಸ್ಟ್ ಅಧ್ಯಕ್ಷ ಪ್ರಹ್ಲಾದ್  ಶೆಟ್ಟಿ ಜೆ. ಯವರು ದೀಪಪ್ರಜ್ವಲನೆಗೈದರು. ಶಿಕ್ಷಣಾಸಕ್ತರ ಪ್ರೀತಿ ಹಾಗೂ ಪ್ರೋತ್ಸಾಹದಿಂದ ಈ ವಿದ್ಯಾಸಂಸ್ಥೆ ನಿರ್ಮಾಣಗೊಂಡಿದೆ, ಶಿಕ್ಷಣಕ್ಕೆ‌ ಇರುವ ಮೌಲ್ಯ ಇನ್ಯಾವುದಕ್ಕೂ ಇಲ್ಲ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಬಗ್ಗೆ ಹೆಚ್ಚುಗಮನ ಹರಿಸುವಂತೆ ಮನವಿ ಮಾಡಿದರು.

Ad Widget

Ad Widget

ಸೂರಜ್ ಶಿಕ್ಷಣ ಸಂಸ್ಥೆಯ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಮಂಜುನಾಥ ರೇವಣಕರ್ ಮಾತನಾಡಿ, ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆತ್ತವರು ಆದ್ಯತೆ ನೀಡಬೇಕು. ಆ ಮೂಲಕ ಮಕ್ಕಳ ಸ್ವಾಭಿಮಾನದ ಬದುಕಿಗೆ ಬೆಳಕಾಗಬೇಕು ಎಂದ ಅವರು, ಮಕ್ಕಳು  ಶಿಕ್ಷಣದಲ್ಲಿ ಏಕಾಗ್ರತೆಯನ್ನು ಹೊಂದಿ ಉತ್ತಮ ವಿದ್ಯಾರ್ಥಿಗಳಾಗಬೇಕು ಎಂದರು.

  ದೇರಳಕಟ್ಟೆಯ ರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ರವರು ಮಾತನಾಡಿ, ಶಾಲೆಗೆ ಮಕ್ಕಳನ್ನು ಸೇರ್ಪಡೆಗೊಳಿಸಿದ ಮಾತ್ರಕ್ಕೆ ಹೆತ್ತವರ ಜವಬ್ದಾರಿ ಮುಗಿಯುವುದಿಲ್ಲ, ಅವರ ಆಸಕ್ತಿಯೂ ಮಕ್ಕಳ ಕಲಿಕೆಗೆ ಪ್ರೇರಕವಾಗುತ್ತದೆ ಎಂದರು.

 ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ವಿಭಾಗದ

ಜಂಟಿನಿರ್ದೇಶಕ  ಡಾ. ಪಾಂಡುರಂಗ ಕೆಎಎಸ್, ರವರು ಮಾತನಾಡಿ, ಮಕ್ಕಳ ಹೆತ್ತವರಿಗೆ ಶಾಲಾ ಶಿಕ್ಷಕರಷ್ಟೇ ಜವಾಬ್ದಾರಿ ಇದ್ದು, ಶಿಕ್ಷಕರ ಜೊತೆ ಉತ್ತಮ ಬಾಂಧವ್ಯ ಇರಿಸಿ ಮಕ್ಕಳಿಗೆ ನಿರಂತರ ಪ್ರೇರಣೆ ನೀಡಬೇಕಿದೆ , ಮಕ್ಕಳಿಗೆ ಉತ್ತಮ ಶಿಕ್ಷಣ ದ ಜೊತೆಗೆ ಆತ್ಮಸ್ಥೈರ್ಯವನ್ನು ನೀಡಿದಾಗ ಮಕ್ಕಳು ಸತ್ಪ್ರಜೆಗಳಾಗುತ್ತಾರೆ ಎಂದವರು ಹೇಳಿದರು. 

ಸದಾಶಿವ ಶೆಟ್ಟಿ,  ವಸಂತ ರೈ, ಮೋಹನ್‌ಪೈ, ಕೇಶವ ಗೌಡ, ಮಾಧವ ಕುಲಾಲ್, ಸದಾಶಿವ ಆಚಾರ್, ಚಂದ್ರಾವತಿ ಹಾಗೂ ಕಲಿಕೆ , ವಿಜ್ಞಾನ, ಕ್ರೀಡೆ ಹಾಗೂ   ಸ್ಕೌಟ್ ನಲ್ಲಿ ಸಾಧನೆಗೈದ  ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಯ ಬೆಳವಣಿಗೆಗೆ ಸಹಕಾರವನ್ನಿತ್ತ ಹಲವರನ್ನು ಗೌರವಿಸಲಾಯಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕಸ್ತೂರಿ ಪಿ. ಶೆಟ್ಟಿ, ಮಾಣಿ ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ., ಟ್ರಸ್ಟಿಗಳಾದ ಜಯಲಕ್ಷ್ಮಿ ಪೈ, ಸುಭಾಷಿಣಿ ಶೆಟ್ಟಿ, ಉಪಾಧ್ಯಕ್ಷ ಯತಿರಾಜ್ ಕೆ. ಎನ್. ಮೊದಲಾದವರು ಉಪಸ್ಥಿತರಿದ್ದರು.

ಆಡಳಿತಾಧಿಕಾರಿ ರವೀಂದ್ರ ದರ್ಬೆ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಾರ್ಷಿಕ ವರದಿ ಮಂಡಿಸಿದರು. ಶಿಕ್ಷಕಿ  ರಶ್ಮೀ ಫೆರ್ನಾಂಡೀಸ್ ವಂದಿಸಿದರು. ಶಿಕ್ಷಕರಾದ ಸುಧಾ ಎನ್.ರಾವ್, ಶಿಕ್ಷಾ ಕಾರ್ಯಕ್ರಮ ನಿರ್ವಹಿಸಿದರು.

ಸಂಸದ  ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ , ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ,  ಮಾಜಿ ಸಚಿವ ರಮಾನಾಥ ರೈ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಈ ಎರಡು ದಿನದ ಕಾರ್ಯಕ್ರಮದಲ್ಲಿ ಶಾಲೆಯ ಆವರಣದಲ್ಲಿ  ನಡೆದ ಫುಡ್ ಪೆಸ್ಟಿವಲ್  ವಿಶೇಷ ಮೆರುಗು ನೀಡಿತ್ತು.

ಮಾಣಿಯಂತಹಾ ಗ್ರಾಮೀಣ ಪ್ರದೇಶದ ಬಾಲವಿಕಾಸ ಶಾಲೆಯಲ್ಲಿ  ಮಕ್ಕಳ ಕಲಿಕೆಗೆ  ಅತ್ಯುನ್ನತ ತಂತ್ರಜ್ಞಾನ ದ  ಬಳಕೆಯಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ

 

ಅಶೋಕ್ ಕುಮಾರ್ ರೈ,ಶಾಸಕರು, ಪುತ್ತೂರು

Ad Widget
Click to comment

Leave a Reply

ದಕ್ಷಿಣ ಕನ್ನಡ

Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್‌ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವ ಕನಸು ನನಸಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, 2027-28ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ಹಂತವಾಗಿ 50 ವಿದ್ಯಾರ್ಥಿಗಳ ಪ್ರವೇಶಕ್ಕೆ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ನಿಟ್ಟಿನಲ್ಲಿ ಕಾಲೇಜಿನ ಮೂಲಸೌಕರ್ಯ, ಬೋಧನಾ ವ್ಯವಸ್ಥೆ, ಆಸ್ಪತ್ರೆಯ ಸೌಲಭ್ಯಗಳು ಹಾಗೂ ಅಗತ್ಯ ದಾಖಲೆಗಳ ಪರಿಶೀಲನೆಗಾಗಿ ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ತಪಾಸಣಾ ಸಮಿತಿ ಶನಿವಾರ ಪುತ್ತೂರಿಗೆ ಆಗಮಿಸಿ ಪರಿಶೀಲನೆ ನಡೆಸಿತು. ಪುತ್ತೂರಿನಲ್ಲಿರುವ ಹಳೇಯ ಕೋರ್ಟ್‌ ಕಟ್ಟಡ ಹಾಗೂ ಪುತ್ತೂರು ಸರಕಾರಿ ಆಸ್ಫತ್ರೆಗೆ ತಂಡವು ತೆರಳಿ ಪರಿಶೀಲಿಸಿತ್ತು

Ad Widget

Ad Widget

Ad Widget

Ad Widget

ಶಾಸಕ ಅಶೋಕ್ ಕುಮಾರ್ ರೈ ಅವರ ನಿರಂತರ ಪ್ರಯತ್ನ ಮತ್ತು ಕಾಲೇಜು ಸ್ಥಾಪನೆಯ ನಿಟ್ಟಿನಲ್ಲಿನ ಚಟುವಟಿಕೆಗಳ ನಡುವೆ ನಡೆದಿರುವ ಈ ಪರಿಶೀಲನೆ, ಪುತ್ತೂರು ಮೆಡಿಕಲ್ ಕಾಲೇಜಿನ ಆರಂಭದ ಪ್ರಕ್ರಿಯೆಯಲ್ಲಿ ನಿರ್ಣಾಯಕ ಹಂತವೆಂದು ಪರಿಗಣಿಸಲಾಗಿದೆ. ನಿಯೋಗವು ಹಳೇಯ ಕೋರ್ಟ್‌ ಕಟ್ಟಡಕ್ಕೆ ಭೇಟಿ ನೀಡಿದ ವೇಳೆ ಶಾಸಕ ಅಶೋಕ್‌ ರೈಯವರು ಅಲ್ಲಿಗೆ ಆಗಮಿಸಿ ನಿಯೋಗಕ್ಕೆ ಅಗತ್ಯ ಮಾಹಿತಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮೂರು ಮಂದಿ ತಜ್ಞರಿಂದ ಸಮಗ್ರ ಪರಿಶೀಲನೆ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳ ಆದೇಶದಂತೆ ಆಗಮಿಸಿದ ಮೂರು ಮಂದಿ ತಜ್ಞರ ತಂಡ ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡಾ. ಸುರೇಶ್ ಎಸ್. ಕನಕಣ್ಣವರ್ ತಂಡದ ಅಧ್ಯಕ್ಷರಾಗಿದ್ದು, ಶಿವಮೊಗ್ಗದ ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಮಿಥುನ್ ಕೆ.ಎಂ. ಹಾಗೂ ಶಿವಮೊಗ್ಗದ ಎಸ್.ಐ.ಎಂ.ಎಸ್.ನ ಡಾ. ರಮೇಶ್ ಬಾಬು ಸದಸ್ಯರಾಗಿದ್ದರು.

Ad Widget

Ad Widget <> Ad Widget

ಕಾಲೇಜಿನ ಬೋಧನಾ ವಿಭಾಗಗಳಿಗೆ ಅಗತ್ಯವಿರುವ ಕೊಠಡಿಗಳು, ಪ್ರಯೋಗಾಲಯಗಳು, ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯ, ವೈದ್ಯಕೀಯ ಉಪಕರಣಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ವಸತಿ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ಶಿಕ್ಷಣ ಆರಂಭಿಸಲು ಅಗತ್ಯವಿರುವ ಮೂಲಸೌಕರ್ಯಗಳನ್ನು ತಂಡ ಪರಿಶೀಲಿಸಿತು.

ನವೆಂಬರ್ 21ರೊಳಗೆ ಪರಿಶೀಲನೆ ಪೂರ್ಣಗೊಳಿಸಿ, ಸಮಗ್ರ ವರದಿಯನ್ನು 24 ಗಂಟೆಗಳ ಒಳಗೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಸಲ್ಲಿಸುವಂತೆ ಕುಲಪತಿಗಳು ಸೂಚನೆ ನೀಡಿದ್ದಾರೆ.

Ad Widget

Ad Widget

6 ಮೃತದೇಹಗಳ ವ್ಯವಸ್ಥೆ; ಮಾನವ ಅಂಗಾಂಗಗಳ ಆಗಮನ

ಮೆಡಿಕಲ್ ಕಾಲೇಜಿನ ಆರಂಭಿಕ ಸಿದ್ಧತೆಗಳ ಭಾಗವಾಗಿ ಅಗತ್ಯ ವೈದ್ಯಕೀಯ ಪರಿಕರಗಳು ಮತ್ತು ಉಪಕರಣಗಳನ್ನು ಪುತ್ತೂರಿಗೆ ತರಿಸಲಾಗುತ್ತಿದೆ. ಶಿವಮೊಗ್ಗ, ಹಾಸನ ಹಾಗೂ ಮಡಿಕೇರಿ ವೈದ್ಯಕೀಯ ಕಾಲೇಜುಗಳಿಂದ ಒಟ್ಟು ಆರು ಮೃತದೇಹಗಳನ್ನು ವ್ಯವಸ್ಥೆ ಮಾಡಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ಅಂಗರಚನಾ ಶಾಸ್ತ್ರದ ಅಧ್ಯಯನಕ್ಕೆ ಅಗತ್ಯವಿರುವ ಮಾನವ ದೇಹದ ವಿವಿಧ ಅಂಗಾಂಗಗಳೂ ಪುತ್ತೂರಿಗೆ ಆಗಮಿಸಿದ್ದು, ಅವುಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸಿಡುವ ವ್ಯವಸ್ಥೆ ಮಾಡಲಾಗುತ್ತಿದೆ.

ವಿವಿಧ ವಿಭಾಗಗಳಿಗೆ ಕೊಠಡಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಆಸನ ವ್ಯವಸ್ಥೆಯನ್ನೂ ಸಿದ್ಧಪಡಿಸಲಾಗಿದೆ. ಈಗಾಗಲೇ ಆಗಮಿಸಿರುವ ವೈದ್ಯಕೀಯ ಉಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದ್ದು, ಇನ್ನಷ್ಟು ಉಪಕರಣಗಳು ಹಂತ ಹಂತವಾಗಿ ಬರಲಿವೆ.

92 ವೈದ್ಯರು, 175 ಸಿಬ್ಬಂದಿ ನೇಮಕಕ್ಕೆ ಪ್ರಕ್ರಿಯೆ

ಮೆಡಿಕಲ್ ಕಾಲೇಜಿನ ಜೊತೆಗೆ ಆಸ್ಪತ್ರೆಯ ಸಾಮರ್ಥ್ಯವನ್ನೂ ಹೆಚ್ಚಿಸುವ ಉದ್ದೇಶದಿಂದ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ಕಾಲೇಜು ಮತ್ತು ಆಸ್ಪತ್ರೆಯ ಕಾರ್ಯನಿರ್ವಹಣೆಗೆ 92 ವೈದ್ಯರು, 175 ಸಿಬ್ಬಂದಿ ಹಾಗೂ 80 ನರ್ಸಿಂಗ್ ಸಿಬ್ಬಂದಿ ಸೇರಿದಂತೆ ಅಗತ್ಯ ಮಾನವ ಸಂಪನ್ಮೂಲ ನೇಮಕಾತಿಗೆ ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ.

ವಿದ್ಯಾರ್ಥಿಗಳ ಹಾಸ್ಟೆಲ್ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಕಾರ್ಯವೂ ನಡೆಯುತ್ತಿದೆ. ಸೇಡಿಯಾಪು ನಿವೇಶನದಲ್ಲಿ ಕಟ್ಟಡಗಳು ಸಿದ್ಧಗೊಂಡ ಬಳಿಕ ಕಾಲೇಜಿನ ವಿವಿಧ ಚಟುವಟಿಕೆಗಳನ್ನು ಅಲ್ಲಿಗೆ ಸ್ಥಳಾಂತರಿಸುವ ಯೋಜನೆಯಿದೆ.

ಇದರಿಂದ ಪುತ್ತೂರು ಮಾತ್ರವಲ್ಲದೆ ವಿಟ್ಲ, ಕಡಬ, ಬೆಳ್ತಂಗಡಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಸುಧಾರಿತ ವೈದ್ಯಕೀಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣದ ಅವಕಾಶಗಳು ಲಭ್ಯವಾಗುವ ನಿರೀಕ್ಷೆಯಿದೆ.

ಎಲ್ಲವೂ ಸರಾಗವಾಗಿ ನಡೆದರೆ ಸೆಪ್ಟೆಂಬರ್ 2027ರಲ್ಲಿ ದಾಖಲಾತಿ

ಪರಿಶೀಲನೆ ಬಳಿಕ ಮಾತನಾಡಿದ ತಪಾಸಣಾ ತಂಡದ ಅಧ್ಯಕ್ಷ ಡಾ. ಸುರೇಶ್ ಎಸ್. ಕನಕಣ್ಣವರ್, “ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕೆಂಬ ನಿಟ್ಟಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸಾಕಷ್ಟು ಪ್ರಯತ್ನ ಮತ್ತು ಹೋರಾಟ ನಡೆಸಿದ್ದಾರೆ. ಅದರ ಫಲವಾಗಿ ಇಂದು ತಪಾಸಣಾ ಪ್ರಕ್ರಿಯೆ ನಡೆಯುತ್ತಿದೆ. ವೈದ್ಯಕೀಯ ಶಿಕ್ಷಣಕ್ಕೆ ಅಗತ್ಯವಿರುವ ಬೋಧನಾ ವ್ಯವಸ್ಥೆ, ಆಸ್ಪತ್ರೆಯ ಸೌಕರ್ಯ, ವಿದ್ಯಾರ್ಥಿಗಳ ವಸತಿ, ಬೋಧಕರ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲಾಗುತ್ತದೆ.

ಎಲ್ಲವೂ ಸರಾಗವಾಗಿ ನಡೆದರೆ 2027ರ ಸೆಪ್ಟೆಂಬರ್‌ನಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ. ಸೋಮವಾರ ಸಿಂಡಿಕೇಟ್ ಸಭೆ ನಿಗದಿಯಾಗಿದ್ದು, ಅನುಮೋದನೆಗೆ ಸಂಬಂಧಿಸಿದಂತೆ ಆಂತರಿಕ ಸಮಿತಿಯೂ ಇದೆ. ಪ್ರಸ್ತುತ 75 ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸ್ಥಳಾವಕಾಶವಿದೆ” ಎಂದು ತಿಳಿಸಿದರು.

ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

ಪುತ್ತೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿಶೇಷ ಅಧಿಕಾರಿ ಡಾ. ಲೋಹಿತ್ ಕುಮಾರ್ ಮಾತನಾಡಿ, “ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಕ್ಟೋಬರ್ 8ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಇದೀಗ ತಜ್ಞರ ತಂಡ ಮೂಲಸೌಕರ್ಯಗಳ ಪರಿಶೀಲನೆ ನಡೆಸುತ್ತಿದೆ. ತಂಡದ ವರದಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯ ಮುಂದೆ ಮಂಡನೆಯಾಗಲಿದೆ.

ಸಿಂಡಿಕೇಟ್‌ನಿಂದ ಸಮ್ಮತಿ ಪತ್ರ ದೊರೆತ ಬಳಿಕ ಕೇಂದ್ರ ಸರ್ಕಾರಕ್ಕೆ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ನವೆಂಬರ್ 30ರೊಳಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ನಂತರ ಫಾರ್ಮ್ ಬಿ ಪ್ರಕಾರ ಸಿಬ್ಬಂದಿ ಹಾಗೂ ಕ್ಲಿನಿಕಲ್ ಮೆಟೀರಿಯಲ್‌ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂತ ಹಂತವಾಗಿ ಭರ್ತಿ ಮಾಡಬೇಕಿದೆ. ಸುಮಾರು 63 ದಾಖಲೆಗಳನ್ನು ಡಿಸೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ. ಜನವರಿ ಮೊದಲ ವಾರದಿಂದ ಕೇಂದ್ರ ಸರ್ಕಾರದ ಪರಿಶೀಲನಾ ತಂಡ ಆಗಮಿಸುವ ನಿರೀಕ್ಷೆಯಿದೆ” ಎಂದು ವಿವರಿಸಿದರು.

ಪುತ್ತೂರಿನ ವೈದ್ಯಕೀಯ ಶಿಕ್ಷಣದ ಕನಸಿಗೆ ಹೊಸ ವೇಗ

ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಾದರೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೊಸ ಅವಕಾಶ ಸಿಗಲಿದೆ. ಅದೇ ರೀತಿ ಪುತ್ತೂರು ಹಾಗೂ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಸುಧಾರಿತ ವೈದ್ಯಕೀಯ ಸೇವೆ ಸ್ಥಳೀಯವಾಗಿಯೇ ಲಭ್ಯವಾಗುವ ನಿರೀಕ್ಷೆಯಿದೆ.

ಸದ್ಯ ವಿಶ್ವವಿದ್ಯಾಲಯದ ತಪಾಸಣೆ ಪೂರ್ಣಗೊಂಡು ವರದಿ ಸಲ್ಲಿಕೆ, ಸಿಂಡಿಕೇಟ್ ಅನುಮೋದನೆ, ಕೇಂದ್ರ ಸರ್ಕಾರದ ಅನುಮತಿ ಹಾಗೂ ಅಂತಿಮ ಪರಿಶೀಲನೆಗಳ ಹಂತಗಳು ಬಾಕಿಯಿವೆ. ಈ ಎಲ್ಲ ಪ್ರಕ್ರಿಯೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡರೆ 2027ರ ಶೈಕ್ಷಣಿಕ ವರ್ಷದಲ್ಲಿ ಪುತ್ತೂರು ಮೆಡಿಕಲ್ ಕಾಲೇಜಿನ ಮೊದಲ ಬ್ಯಾಚ್ ಆರಂಭವಾಗುವ ನಿರೀಕ್ಷೆ ಗರಿಗೆದರಲಿದೆ.

ಶಾಸಕ ಅಶೋಕ್ ಕುಮಾರ್ ರೈ, ವಿಶೇಷ ಅಧಿಕಾರಿ ಡಾ. ಲೋಹಿತ್ ಕುಮಾರ್, ಡಾ. ಶಶಾಂಕ್, ಪುತ್ತೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದು ರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಪ್ರದೀಪ್, ರಂಜಿತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!