Connect with us

ವಿಟ್ಲ

ಪಾರ್ಲಿಮೆಂಟ್ ನಲ್ಲಿ  ಸದಸ್ಯರು ಆಮಾನತುಗೊಳ್ಳುವುದರಿಂದ ಪ್ರಮುಖ ಬಿಲ್‌ ಗಳು ಚರ್ಚೆಯಿಲ್ಲದೇ ಅಂಗೀಕಾರವಾಗುತ್ತಿದೆ: ವಿಟ್ಲ ಜೇಸೀಸ್ ಆಂಗ್ಲ ಶಾಲೆಯ ಜೇಸೀ ಯೂಥ್ ಪಾರ್ಲಿಮೆಂಟ್ ಉದ್ಘಾಟಿಸಿ ನಿವೃತ್ತ ಜಡ್ಜ್‌ ಡಿ. ವಿಶ್ವೇಶ್ವರ ಭಟ್

Published

on

Ad Widget

Ad Widget

Ad Widget

Ad Widget

ಸಂಸತ್ತಿನ ಪ್ರಾತ್ಯಕ್ಷಿಕೆಯಲ್ಲಿ ಕಲಾಪದಲ್ಲಿ ಅನುಸರಿಸಬೇಕಾದ ನಿಯಮಗಳ ಬಗೆಗಿನ ಸೂಕ್ತ ಜ್ಞಾನ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬೇಕಾಗಿದೆ. ಪಾರ್ಲಿಮೆಂಟ್ ಕಲಾಪಗಳನ್ನು ನಡೆಸುವಾಗ ಎರಡು ಪಕ್ಷದ ಸದಸ್ಯರು ಆಮಾನತುಗೊಳಿಸುವುದನ್ನು ತಪ್ಪಿಸಿಕೊಳ್ಳಬೇಕು. ಎರಡು ತಂಡಗಳು ಸ್ಪೀಕರ್‌ ಚೇಂಬರ್ ನಲ್ಲಿ ಮಾತುಕತೆಯನ್ನು ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳುವ ಕಾರ್ಯ ಮಾಡಬೇಕು. ಅಧಿಕಾರ ಪಡೆದ ಬಳಿಕ ಜನ ಪ್ರತಿನಿಧಿಗಳು ಪ್ರಾಥಮಿಕ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲವಾಗುತ್ತಿದ್ದಾರೆ ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶ  ಹೇಳಿದರು.

Ad Widget

Ad Widget

Ad Widget

Ad Widget

ವಿಟ್ಲ ಜೇಸೀಸ್ ಆಂಗ್ಲ ಶಾಲೆ ಜೇಸಿ ಪೆವಿಲಿಯನ್ ನಲ್ಲಿ ಶನಿವಾರ ನಡೆದ ಜೇಸೀ ಯೂಥ್ ಪಾರ್ಲಿಮೆಂಟ್  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

Ad Widget

Ad Widget alt="Ad Widget"/>

Ad Widget

ಪ್ರಮುಖ ಬಿಲ್‌ ಗಳು ಪಾರ್ಲಿಮೆಂಟ್‌ ನಲ್ಲಿ ಚರ್ಚೆಗಳಿಲ್ಲದೇ ಪಾಸ್‌ ಆಗುತ್ತಿರುವುದು ಖೇದಕರ ವಿಚಾರ. ಎರಡು ಪಕ್ಷಗಳ ಸದಸ್ಯರು ಈ ರೀತಿಯ ನಡವಳಿಕೆಯನ್ನು ತಪ್ಪಿಸಬೇಕು. ಸಂಸತ್ತಿನ ನಿಯಮಗಳ ಬಗ್ಗೆ ಅರಿತು ಕಾರ್ಯನಿರ್ವಹಿಸಬೇಕು ಎಂದರು.

Ad Widget

Ad Widget <> Ad Widget

ಪ್ರಧಾನ ಮಂತ್ರಿಯಾಗಿ ಭಾಗವಹಿಸಿದ ನವ್ಯ ಭಟ್ ಉತ್ತಮ ಭಾಗವಹಿಸುವಿಕೆ ಪುರಸ್ಕಾರ ಪಡೆದುಕೊಂಡರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಕ್ರೀಡಾಪಟು ವಿದ್ಯಾರ್ಥಿ ಇಶಾನ್ ಕಾರ್ಯಪ್ಪ ಅವರನ್ನು ಗೌರವಿಸಲಾಯಿತು.

ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜು ನಿವೃತ್ತ ಇತಿಹಾಸ ಉಪನ್ಯಾಸಕ ಪದ್ಮನಾಭ ಸಿ. ಎಚ್., ವಿಠಲ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ವಿಟ್ಲ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣ, ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲಾ ಆಡಳಿಯ ಮಂಡಳಿ ಕಾರ್ಯದರ್ಶಿ ಮೋಹನ ಎ., ಜತೆ ಕಾರ್ಯದರ್ಶಿ ಶ್ರೀಪ್ರಕಾಶ ಕುಕ್ಕಿಲ, ನಿರ್ದೇಶಕ ಹಸನ್ ವಿಟ್ಲ, ಆಡಳಿತಾಧಿಕಾರಿ ರಾಧಾಕೃಷ್ಣ ಎ. ಮತ್ತಿತರರು ಉಪಸ್ಥಿತರಿದ್ದರು.

Ad Widget

Ad Widget

ಶಿಕ್ಷಕಿ ಜ್ಯೋತಿ ಶೆಣೈ ಸ್ವಾಗತಿಸಿದರು. ಪ್ರಾಂಶುಪಾಲ ಜಯರಾಮ ರೈ ವಂದಿಸಿದರು. ಶಿಕ್ಷಕಿ ರೇಖಾ ಪಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಗುರುವಪ್ಪ ಸಂಯೋಜಿಸಿದರು.

Ad Widget
Click to comment

Leave a Reply

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಅಪರಾಧ

Vitla-ವಿಟ್ಲ: ಅಕ್ರಮ ಜಾನುವಾರು ಸಾಗಾಟ: ಪಿಕಪ್ ವಾಹನ ವಶಕ್ಕೆ, ನಾಲ್ವರ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ವಿಟ್ಲ ಪೊಲೀಸರು ಪಾದೆಕಲ್ಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆ ಮಾರ್ಗವಾಗಿ ಬಂದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

Ad Widget

Ad Widget <> Ad Widget

ವಾಹನದ ಚಾಲಕ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಒ.ಪಿ. ಅಬ್ದುಲ್ಲಾ ಹಾಗೂ ವಾಹನದಲ್ಲಿದ್ದ ಸುಬ್ರಹ್ಮಣ್ಯ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಗಿ ಪಡೆದಿರಲಿಲ್ಲ ಎಂಬುದು ತಿಳಿದುಬಂದಿದೆ.

ಇದೇ ವೇಳೆ ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಅವರ ಸೂಚನೆಯ ಮೇರೆಗೆ ಜಾನುವಾರುಗಳನ್ನು ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಪೊಲೀಸರು ಜಾನುವಾರು ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಒ.ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!