Connect with us

ಪುತ್ತೂರು

Money double mafia ಬಂಟ್ವಾಳ : ಹಣ ದ್ವಿಗುಣ ಮಾಫಿಯಾಕ್ಕೆ ಮಹಿಳೆ ಬಲಿ – ಕೆಲ ಸಮಯದ ಹಿಂದೆ 21 ಲಕ್ಷ ರೂ ಹಣ ಕಳಕೊಂಡಿದ್ದ ಮಹಿಳೆ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಯೊಬ್ಬರು ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಣ ದ್ವಿಗುಣಗೊಳಿಸುವ ಆಯಪ್ ನಲ್ಲಿ ₹ 21 ಲಕ್ಷ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು.

Ad Widget

Ad Widget

Ad Widget

Ad Widget

ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತ ಮಹಿಳೆ. ದಂಪತಿಗೆ ವಿವಾಹವಾಗಿ ಹಲವು ವರ್ಷವಾಗಿದ್ದರೂ ಮಕ್ಕಳಿರಲಿಲ್ಲ. ಈ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಈ ಕೃತ್ಯ ಎಸಗಿರಬಹುದೆಂದು ಕುಟುಂಬದ ಮೂಲಗಳು ಶಂಕೆ ವ್ಯಕ್ತಪಡಿಸಿವೆ.

Ad Widget

Ad Widget alt="Ad Widget"/>

Ad Widget

ವೀಟಾ ಅವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆಯಲ್ಲಿ ಇವರ ದ್ವಿಚಕ್ರ ವಾಹನ ಮಾತ್ರ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದ್ದರು. ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

Ad Widget

Ad Widget <> Ad Widget

ಇತ್ತೀಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಯಪ್ ವೊಂದರಲ್ಲಿ 21 ಲಕ್ಷ ರೂ. ಮೊತ್ತದ ಹಣ ಹೂಡಿದ್ದು ಅದರಲ್ಲಿ ವಂಚನೆಯಾಗಿರುವ  ಬಗ್ಗೆ ಇತ್ತೀಚೆಗೆ  ಬಂಟ್ವಾಳ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದ ಹಿನ್ನಲೆಯಲ್ಲಿ ಮನ ನೊಂದಿದ್ದರು.

ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ವೀಟಾ ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಅವರು ತೆಗೆದು ಕೊಂಡ  ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.

Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!