ಪುತ್ತೂರು
Puttur By Election | ಎಲ್ಲರ ಚಿತ್ತ ಇಂದಿನ ಪುತ್ತೂರು ನಗರಸಭೆ ಉಪಚುನಾವಣೆಯ ಫಲಿತಾಂಶದತ್ತ- ನಡೆಯುತ್ತಿದೆ ಕೋಟಿ ಕೋಟಿ ಬೆಟ್ಟಿಂಗ್..!
ಪುತ್ತೂರು: ತೆರವಾಗಿರುವ ಪುತ್ತೂರು ನಗರಸಭೆಯ ಎರಡು ವಾರ್ಡ್ ಗೆ ನಡೆದ ಉಪಚುನಾವಣೆ (Puttur By Election) ನಡೆದಿದ್ದು ಫಲಿತಾಂಶ ಇಂದು (ಡಿ.30) ಪ್ರಕಟಗೊಳ್ಳಲಿದೆ.
2018ರಲ್ಲಿ ನಡೆದ ವಾರ್ಡ್-1ರ ಕಬಕ ‘ಸಾಮಾನ್ಯ’ ಸ್ಥಾನದಲ್ಲಿ 370 ಮತ ಪಡೆದ ಕಾಂಗ್ರೆಸ್‌ನ ನೆಹರೂನಗರದ ಶೇವಿರೆಯ ದಿನೇಶ್ ಕೆ ವಿರುದ್ದ 548 ಮತ ಪಡೆದ ಬಿಜೆಪಿ ಅಭ್ಯರ್ಥಿ ನೆಹರುನಗರದ ‘ಅಶ್ವಿತ ನಿಲಯ’ದ ಶಿವರಾಮ ಎಸ್‌ರವರು 178 ಮತಗಳ ಅಂತರದಿಂದ ಜಯಗಳಿಸಿದ್ದಾರೆ. 11 ಮತಗಳು ನೋಟಾ ಪಾಲಾಗಿದೆ. ಒಟ್ಟು 929 ಮತದಾನವಾಗಿತ್ತು
ವಾರ್ಡ್ 11ರಲ್ಲಿ ಕಾಂಗ್ರೆಸ್‌ನ ಶಕ್ತಿಸಿನ್ಹಾ; ವಾರ್ಡ್ 11ರ ಕಸಬಾ-2ರಲ್ಲಿ ಮೀಸಲಿರಿಸಿದ ‘ಸಾಮಾನ್ಯ ಸ್ಥಾಾನ’ದಲ್ಲಿ 455 ಮತ ಪಡೆದ ಹಾಲಿ ಸದಸ್ಯ ಬಿಜೆಪಿಯ ರಮೇಶ್ ರೈಯವರ ವಿರುದ್ಧ 665 ಮತ ಪಡೆದ ಹಾಲಿ ಸದಸ್ಯ ಕಾಂಗ್ರೆಸ್‌ನ ನೆಲ್ಲಿಕಟ್ಟೆ ಶಕ್ತಿಸಿನ್ಹಾರವರು 210 ಮತಗಳ ಅಂತರದಿಂದ ಜಯಗಳಿಸಿದ್ದಾಾರೆ. 8 ಮತಗಳು ‘ನೋಟಾ’ಗೆ ಬಿದ್ದಿದೆ. ಒಟ್ಟು 1128 ಮತದಾನವಾಗಿತ್ತು.
ಈ ಬಾರಿ ವಾರ್ಡ್ 1 ರಲ್ಲಿ 958 ಮತದಾನವಾಗಿದ್ದು, ಶೇ.73.46 ಮತದಾನವಾಗಿದೆ.
ವಾರ್ಡ್ 11ರಲ್ಲಿ 1053 ಮತದಾನವಾಗಿದ್ದು, ಶೇ.61.07 ಮತದಾನವಾಗಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


















