ಸುಳ್ಯ
Kukke Subrahmanya | ಕುಮಾರಪರ್ವತದಲ್ಲಿ ಜ.2ಕ್ಕೆ ಕುಮಾರಪಾದ ಪೂಜೆ : ದೇವಸ್ಥಾನದ ವತಿಯಿಂದ ಜರಗುವ ಅದ್ಭುತ ಸಾಹಸಮಯ ಹಾಗೂ ಭಕ್ತಿಮಯ ಯಾತ್ರೆಗೆ ಹೋಗುವವರು ನೊಂದಾಯಿಸಿಕೊಳ್ಳಿ
ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ಚಂಪಾಷಷ್ಠಿ ಮಹೋತ್ಸವ ಡಿ.20 ಮಾರ್ಗಶಿರ ಶುದ್ಧ ದ್ವಾದಶಿಯಂದು ಕೊಪ್ಪರಿಗೆ ಇಳಿದು ರಾತ್ರಿ ಶ್ರೀ ದೇವರ ನೀರುಬಂಡಿ ಉತ್ಸವದೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.
ಪ್ರತಿ ವರ್ಷವು ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಮುಗಿದ ಬಳಿಕ ದೇವಸ್ಥಾನದ ವತಿಯಿಂದ ಕುಮಾರ ಪರ್ವತಕ್ಕೆ ಯಾತ್ರೆಯನ್ನು ಕೈಗೊಳ್ಳಲಾಗುತ್ತದೆ.
ಕುಮಾರ ಪರ್ವತಕ್ಕೆ ಹಾಗು ದೇವಸ್ಥಾನಕ್ಕೆ ಒಂದು ಸಂಬಂಧವಿದೆ.
ಪುರಾಣದಲ್ಲಿ ಉಲ್ಲೇಖಗೊಂಡಿರುವ ಪ್ರಕಾರ ಸುಬ್ರಹ್ಮಣ್ಯ ದೇವರು ತಾರಕಾಸುರನ ವಧೆಯನ್ನು ಇದೇ ಪರ್ವತ ಶ್ರೇಣಿಯಲ್ಲಿ ಮಾಡಿ ಕುಮಾರ ಪರ್ವತದಲ್ಲಿ ತ್ರಿಮೂರ್ತಿಗಳು, ದೇವಾನು ದೇವತೆಗಳ ಸಮ್ಮುಖದಲ್ಲಿ ಮಾರ್ಗಶಿರ ಶುದ್ಧ ಷಷ್ಠಿಯಂದು ದೇವತೆಗಳ ರಾಜ ದೇವೇಂದ್ರನ ಮಗಳಾದ ದೇವರಮನೆಯನ್ನು ಸುಬ್ರಹ್ಮಣ್ಯ ದೇವರಿಗೆ ವಿವಾಹ ಮಾಡಿಸಿ ಪಟ್ಟಾಭಿಷೇಕ ಮಾಡಿದರು. ಈ ಅಭಿಷೇಕದ ನೀರು ಮುಂದೆ ಹರಿದು ಕುಮಾರಧಾರ ನದಿಯಾಯಿತು ಎಂದು ಪುರಾಣವು ಹೇಳುತ್ತದೆ.
ಕುಮಾರಪರ್ವತದ ಶಿಖರದಲ್ಲಿ ಈಗಲೂ ಸುಬ್ರಹ್ಮಣ್ಯ ದೇವರ ಪಾದ ಚಿಹ್ನೆಯ ಗುರುತು ಇದೆ. ಇದನ್ನು “ಕುಮಾರ ಪಾದ” ಕರೆಯಲಾಗುತ್ತದೆ. ಪ್ರತಿ ವರ್ಷವು ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯ ಬಳಿಕ ದೇವಸ್ಥಾನದ ವತಿಯಿಂದ ಕುಮಾರ ಪರ್ವತಕ್ಕೆ ಯಾತ್ರೆಯನ್ನು ಕೈಗೊಂಡು ಅದರಲ್ಲಿ ಸುಬ್ರಹ್ಮಣ್ಯದಿಂದ ಕಾಲ್ನಡಿಗೆಯಲ್ಲಿ ಚಾರಣ ಮಾಡಲು ಇಚ್ಛಿಸುವವರು ಒಂದು ದಿನ ಮೊದಲೇ ಹೊರಟು ಗಿರಿಗದ್ದೆಯಾಗಿ ಹೋದರೆ, ದೇವಸ್ಥಾನದ ಅರ್ಚಕರು ಸೇರಿ ಭಕ್ತಾದಿಗಳ ಇನ್ನೊಂದು ತಂಡ ಕುಮಾರ ಪಾದ ಪೂಜೆಯ ದಿನದಂದು ವಾಹನ ವ್ಯವಸ್ಥೆಯ ಮೂಲಕ ಬಿಸಿಲೆಯಾಗಿ ಹೆಗಡೆ ಮನೆಗೆ ಹೋಗಿ ಅಲ್ಲಿಂದ ಕುಮಾರ ಪರ್ವತಕ್ಕೆ ಹೋಗುತ್ತಾರೆ.
ಕುಮಾರ ಪರ್ವತದ ಶಿಖರದಲ್ಲಿ ಕುಮಾರ ಪಾದಕ್ಕೆ ಪೂಜೆಯನ್ನು ಸುಬ್ರಹ್ಮಣ್ಯಕ್ಕೆ ಹಿಂದಿರುಗುವುದರೊಂದಿಗೆ ಕುಮಾರ ಪಾದ ಯಾತ್ರೆ ಸಂಪನ್ನಗೊಳ್ಳುತ್ತದೆ.
ಯಾತ್ರೆಗೆ ಹೋಗುವವರಿಗೆ ಬೇಕಾದ ಉಟೋಪಚಾರದ ವ್ಯವಸ್ಥೆ, ಸುಬ್ರಹ್ಮಣ್ಯದಿಂದ ಹೆಗಡೆ ಮನೆಗೆ ವಾಹನ ವ್ಯವಸ್ಥೆಯನ್ನು ದೇವಸ್ಥಾನದ ವತಿಯಿಂದ ಮಾಡಲಾಗುತ್ತದೆ. ಆದರೆ ಮುಂಚಿತವಾಗಿಯೇ ದೇವಸ್ಥಾನಕ್ಕೆ ತಿಳಿಸಬೇಕು. ಕುಮಾರ ಪರ್ವತ ಚಾರಣದ ಅನುಭವವೇ ಒಂದು ಅದ್ಭುತ! ಅದನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ.
ಬೇರೆ ಯಾವುದೇ ಪರ್ವತದ ಚಾರಣ ಒಂದು ಸಾಹಸಮಯ,ಸವಾಲನ್ನು ಒಡ್ಡುವ ಚಾರಣವಾದರೂ ಕುಮಾರ ಪರ್ವತದ ಚಾರಣ ಕೇವಲ ಸಾಹಸಮಯ ಚಾರಣವಲ್ಲದೆ ಅದು ಒಂದು ಭಾವನೆ..! ಅದರಲ್ಲಿಯೂ ದೇವಸ್ಥಾನದ ವತಿಯಿಂದ ಯಾತ್ರೆಯನ್ನು ಕೈಗೊಳ್ಳುವಾಗ ಅದರಲ್ಲಿ ಭಾಗಿಯಾಗುವುದು ಎಂದರೆ ಅದು ಪುಣ್ಯದ ಕೆಲಸವೇ ಸರಿ. ಅವಕಾಶ ಇರುವವರು ಯಾತ್ರೆಯನ್ನು ಕೈಗೊಳ್ಳಿ
ಕುಮಾರ ಪರ್ವತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತ ಶ್ರೀ ದೇವರ ಪಾದದ ದರ್ಶನ ಪಡೆದು ಪೂಜೆಯಲ್ಲಿ ಭಾಗಿಯಾಗಿ ಬನ್ನಿ
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಶಿಕ್ಷಣ11 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ4 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ10 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ10 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ9 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ10 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ10 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ರಾಜಕೀಯ4 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ















